ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಭೂ ವ್ಯವಹಾರದಲ್ಲಿ ಉತ್ತಮ ಗಳಿಕೆ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಸರ್ಕಾರಿ ಉದ್ಯೋಗ ಗಳಿಸುವಿರಿ: ಮೇ 16ರ ರಾಶಿಭವಿಷ್ಯ

Horoscope Today: ಭೂ ವ್ಯವಹಾರದಲ್ಲಿ ಉತ್ತಮ ಗಳಿಕೆ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಸರ್ಕಾರಿ ಉದ್ಯೋಗ ಗಳಿಸುವಿರಿ: ಮೇ 16ರ ರಾಶಿಭವಿಷ್ಯ

16 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (16th May 2024 Daily Horoscope).

ಮೇ 16ರ ರಾಶಿಭವಿಷ್ಯ
ಮೇ 16ರ ರಾಶಿಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (16th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ಅಷ್ಠಮಿ ಬೆಳಗ್ಗೆ 07.00 ರವರೆಗೂ ಇರುತ್ತದೆ. ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಮಖೆ ನಕ್ಷತ್ರವು ಸಂಜೆ 06.52 ರವರೆಗೂ ಇರುತ್ತದೆ. ಆನಂತರ ಪುಬ್ಬ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.54

ಸೂರ್ಯಾಸ್ತ: ಸಂಜೆ 06.37

ರಾಹುಕಾಲ: 01.55 ರಿಂದ 03.30

ರಾಶಿಫಲ

ಮೇಷ

ಬೇಸರದಿಂದ ಹೊರ ಬರಲು ಆತ್ಮೀಯರ ಜೊತೆಯಲ್ಲಿ ಧಾರ್ಮಿಕ ಸ್ಥಳಕ್ಕೆ ತೆರಳುವಿರಿ. ಬಹುದಿನಗಳ ಪ್ರಯತ್ನದ ನಂತರ ಉದ್ಯೋಗ ದೊರೆಯುತ್ತದೆ. ದೈವಿಕ ಚಿಂತನೆಯಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ. ಸೋಲನ್ನು ಒಪ್ಪದೆ ಹಟದಿಂದ ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಕುಟುಂಬದ ಹಿರಿಯರ ಸಲಹೆ ಸೂಚನೆಗಳನ್ನು ಪಾಲಿಸಿದಲ್ಲಿ ತೊಂದರೆಯಿಂದ ಪಾರಾಗುವಿರಿ. ಉನ್ನತ ಮಟ್ಟ ಸ್ನೇಹ ಸಂಬಂಧ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಸಮುದ್ರ ಅಥವಾ ನದಿಸ್ನಾನದ ಯೋಗವಿದೆ. ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹ ಮುಂದೆ ಹೋಗಲಿದೆ. ಭೂ ವ್ಯವಹಾರದಲ್ಲಿ ಉತ್ತಮ ಗಳಿಕೆ ಇರುತ್ತದೆ. ವಿದ್ಯಾರ್ಥಿಗಳು ಹುಮ್ಮಸ್ಸಿನಿಂದ ಅಭ್ಯಾಸದಲ್ಲಿ ಮುಂದುವರೆಯುತ್ತಾರೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಎಲೆ ಹಸಿರು

ವೃಷಭ

ಉತ್ತಮ ಆದಾಯ ಗಳಿಸುವ ಹಾದಿ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಅಂತಿಮ ನಿರ್ಧಾರ ನಿಮ್ಮದಾಗುತ್ತದೆ. ವಿದ್ಯಾರ್ಥಿಗಳ ಆಸೆ ಆಕಾಂಕ್ಷೆಗಳು ಕೈಗೂಡಲಿದೆ. ಸಂಗಾತಿಯ ಆರೋಗ್ಯದಲ್ಲಿ ಚೇತರಿಕೆ ಕಾಣಲಿದೆ. ತಾಯಿಯವರಿಗೆ ತವರಿನಿಂದ ಆಸ್ತಿಯ ಉಡುಗೊರೆ ದೊರೆಯಲಿದೆ. ವಾದ ವಿವಾದಗಳಿಂದ ದೂರ ಉಳಿಯುವಿರಿ. ನವ ವಿವಾಹಿತರಿಗೆ ಶುಭಫಲಗಳು ದೊರೆಯಲಿದೆ. ಎಲ್ಲರನ್ನೂ ಅನುಮಾನದ ದೃಷ್ಠಿಯಿಂದ ನೋಡುವಿರಿ. ಆತ್ಮೀಯರನ್ನು ನಂಬಿದಲ್ಲಿ ವಿಶೇಷ ಅನುಕೂಲತೆ ದೊರೆಯುತ್ತದೆ. ವಿದ್ಯಾರ್ಥಿಗಳು ಒತ್ತಡವನ್ನು ಮರೆತು ಮನರಂಜನೆಯಲ್ಲಿ ದಿನ ಕಳೆಯುವರು. ಅತಿಯಾದ ಆತ್ಮವಿಶ್ವಾಸದಿಂದ ಯಾವುದೇ ಕೆಲಸ ಕಾರ್ಯಗಳನ್ನು ಆರಂಭಿಸದಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೇಸರಿ

ಮಿಥುನ

ಸಂಗಾತಿಯ ಸಹಾಯದಿಂದ ಕಷ್ಟ ಗಳು ಕಡಿಮೆ ಆಗಲಿದೆ. ಅವಶ್ಯಕತೆ ಇದ್ದವರಿಗೆ ಸಹಾಯ ಮಾಡುವಿರಿ. ಜನ ಮೆಚ್ಚುವ ಕೆಲಸವೊಂದರಲ್ಲಿ ಭಾಗಿಯಾಗುವಿರಿ. ವಂಶದ ಹಿರಿಯರ ಮನೆಗೆ ಭೇಟಿ ನೀಡುವಿರಿ. ಧಾರ್ಮಿಕ ಆಚರಣೆಗಳಿಗಾಗಿ ಹಣ ಖರ್ಚು ಮಾಡುವಿರಿ. ತಪ್ಪು ಕಲ್ಪನೆಯಿಂದ ಆತ್ಮೀಯರೊಬ್ಬರು ನಿಮ್ಮಿಂದ ದೂರವಾಗುತ್ತಾರೆ. ವಿದ್ಯಾರ್ಥಿಗಳು ನಿರೀಕ್ಷಿಸಿದ ಯಶಸ್ಸನ್ನು ಗಳಿಸುತ್ತಾರೆ. ಕುಟುಂಬದ ಹಿರಿಯರಿಗೆ ಹಣದ ವಿಚಾರವಾಗಿ ಅಶಾಂತಿ ಇರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ದೃಢವಾದ ನಿಲುವು ತೆಗೆದುಕೊಳ್ಳುವಿರಿ. ಬಡವರಿಗೆ ಆಹಾರದ ವ್ಯವಸ್ಥೆಯನ್ನು ಕಲ್ಪಿಸುವಿರಿ. ಬಿಡುವಿಲ್ಲದ ಕೆಲಸದ ಕಾರಣ ಆರೋಗ್ಯದಲ್ಲಿ ಏರಿಳಿತ ಇರಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಕಟಕ

ಪ್ರಯೋಜನವಿಲ್ಲದ ಕೆಲಸ ಕಾರ್ಯಗಳಿಗೆ ಸಮಯ ವ್ಯರ್ಥ ಮಾಡುವುದಿಲ್ಲ. ಆತುರದಿಂದ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳುವುದಿಲ್ಲ. ಯಾವುದೇ ವಿಚಾರವಾದರೂ ಸಂಪೂರ್ಣ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ತೊಂದರೆಗೆ ಸಿಲುಕುವಿರಿ. ಕುಟುಂಬದಲ್ಲಿ ಅಶಾಂತಿಯ ಸನ್ನಿವೇಶ ಇರುತ್ತದೆ. ವಿದ್ಯಾರ್ಥಿಗಳಲ್ಲಿ ಓದಿನ ಬಗ್ಗೆ ಹೊಸ ಗುರಿ ಮೂಡಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ಉದ್ಯೋಗ ಲಭಿಸುತ್ತದೆ. ಸೋಲಿನ ಭಯವಿಲ್ಲದೆ ಹೊಸ ವ್ಯಾಪಾರವನ್ನು ಆರಂಭಿಸಿ ವರಮಾನ ಹೆಚ್ಚಿಸಿಕೊಳ್ಳುವಿರಿ. ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಲಾಭವಿರುತ್ತದೆ. ಹಣಕಾಸಿನ ವಿಚಾರದಲ್ಲಿ ಹಟದ ಬುದ್ದಿ ತೋರುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).