ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಆಸ್ತಿಯಲ್ಲಿ ನಿಮ್ಮ ಪಾಲು ದೊರೆಯಲಿದೆ, ಭೂ ವ್ಯವಹಾರದಲ್ಲಿ ಉತ್ತಮ ಆದಾಯ; ಮೇ 16ರ ದಿನ ಭವಿಷ್ಯ

Horoscope Today: ಆಸ್ತಿಯಲ್ಲಿ ನಿಮ್ಮ ಪಾಲು ದೊರೆಯಲಿದೆ, ಭೂ ವ್ಯವಹಾರದಲ್ಲಿ ಉತ್ತಮ ಆದಾಯ; ಮೇ 16ರ ದಿನ ಭವಿಷ್ಯ

16 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (16th May 2024 Daily Horoscope).

ಮೇ 16ರ ದಿನ ಭವಿಷ್ಯ
ಮೇ 16ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (16th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ಅಷ್ಠಮಿ ಬೆಳಗ್ಗೆ 07.00 ರವರೆಗೂ ಇರುತ್ತದೆ. ಆನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಮಖೆ ನಕ್ಷತ್ರವು ಸಂಜೆ 06.52 ರವರೆಗೂ ಇರುತ್ತದೆ. ಆನಂತರ ಪುಬ್ಬ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.54

ಸೂರ್ಯಾಸ್ತ: ಸಂಜೆ 06.37

ರಾಹುಕಾಲ: 01.55 ರಿಂದ 03.30

ರಾಶಿಫಲ

ಸಿಂಹ

ನಿಮ್ಮದೇ ಆದ ರೀತಿ ನೀತಿಗೆ ಬದ್ದರಾಗುವಿರಿ. ಮಕ್ಕಳು ಹಟದಿಂದ ತನ್ನ ಬೇಡಿಕೆಯನ್ನು ಈಡೇರಿಸಿಕೊಳ್ಳುತ್ತಾರೆ. ತಂದೆಯಿಂದ ಹಣದ ಸಹಾಯ ದೊರೆಯುತ್ತದೆ. ಆತುರದಲ್ಲೆ ತಪ್ಪು ನಿರ್ಧಾರ ತೆಗೆದುಕೊಂಡು ಉತ್ತಮ ಅವಕಾಶವನ್ನು ಕಳೆದುಕೊಳ್ಳುವಿರಿ. ಉದ್ಯೋಗದಲ್ಲಿ ತೊಂದರೆ ಇರದು ಆದರೆ ಪ್ರಗತಿಯೂ ಕಂಡುಬಾರದು. ವಂಶದ ಆಸ್ತಿಯಲ್ಲಿನ ನ್ಯಾಯಯುತ ಪಾಲು ನಿಮ್ಮದಾಗುತ್ತದೆ. ಭೂ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ಸಮಾಜ ಸೇವೆ ಮಾಡುವಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ವಿದ್ಯಾರ್ಥಿಗಳು ಬುದ್ಧಿವಂತಿಕೆಯಿಂದ ದೊರೆವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುತ್ತಾರೆ. ಕುಟುಂಬದಲ್ಲಿ ನಿಶ್ಚಯವಾಗಿದ್ದ ವಿವಾಹವು ಮುಂದೂಡಲ್ಪಡುತ್ತದೆ.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ

ಕನ್ಯಾ

ಯಾವುದೇ ವಿಚಾರವಾದರೂ ಬೇರೆಯವರನ್ನು ಟೀಕಿಸುವುದರಲ್ಲಿ ನಿರತರಾಗುವಿರಿ. ನಿರ್ದಿಷ್ಟವಾದ ಹಾದಿಯಲ್ಲಿ ಸಾಗುವ ಕಾರಣ ಯಶಸ್ವೀ ಜೀವನವನ್ನು ನಡೆಸುವಿರಿ. ಹಣಕಾಸಿನ ವಿಚಾರದಲ್ಲಿ ಸೂಕ್ತವಾದ ತೀರ್ಮಾನವನ್ನು ತೆಗೆದುಕೊಳ್ಳಲಾರಿರಿ. ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಗಳಿಸುವಿರಿ. ರಾಜಕೀಯ ಕ್ಷೇತ್ರದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಬಾಳುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಗೌರವಕ್ಕೆ ಚ್ಯುತಿ ಬರುವ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ. ತಂದೆಯಿಂದ ನಿಮ್ಮ ಕೆಲಸಗಳಲ್ಲಿ ಉತ್ತಮ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಮನಸ್ಸು ಬದಲಾಯಿಸದೆ ಓದಿನಲ್ಲಿ ಮಗ್ನರಾಗುತ್ತಾರೆ. ಸಂಗಾತಿಯ ಜೊತೆಗೂಡಿ ಹೊಸ ವ್ಯಾಪಾರವನ್ನು ಆರಂಭಿಸುವಿರಿ. ಕೂಡಿಟ್ಟ ಹಣವು ಖರ್ಚಾಗುವ ಕಾಲ ಬಂದಿದೆ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹಳದಿ

ತುಲಾ

ಆತುರದ ನಿರ್ಧಾರದಿಂದ ತೊಂದರೆಗೆ ಸಿಲುಕುವಿರಿ. ಶಾಂತಿ ಸಂಯಮದಿಂದ ವರ್ತಿಸಿದಲ್ಲಿ ಕೆಲಸ ಕಾರ್ಯದಲ್ಲಿ ಯಶಸ್ಸು ದೊರೆಯುತ್ತದೆ. ಕೋಪಿಷ್ಟರಾದರೂ ತಪ್ಪನ್ನು ಒಪ್ಪಿಕೊಳ್ಳುವ ದೊಡ್ಡತನ ತೋರುವಿರಿ. ಹಣಕಾಸಿನ ವ್ಯವಹಾರದಲ್ಲಿ ದುಡುಕಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಚಿನ್ನಾಭರಣವನ್ನು ಕೊಳ್ಳಲು ಹಣ ವೆಚ್ಚವಾಗಲಿದೆ. ಕಷ್ಟವೆನಿಸಿದರೂ ವಿಶಾಲವಾದ ಮನೆಯನ್ನು ಕೊಳ್ಳುವಿರಿ. ಸಮಾಜದಲ್ಲಿ ಉನ್ನತ ಗೌರವ ಗಳಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ವಿದ್ಯಾರ್ಥಿಗಳು ಕಷ್ಟವಿಲ್ಲದ ವಿಷಯದಲ್ಲಿಆಸಕ್ತಿ ತೋರುವಿರಿ. ಸರ್ಕಾರದ ಅನುದಾನದ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಆಂತರಿಕ ವಿರೋಧಿಗಳು ಇರುತ್ತಾರೆ. ಕುಟುಂಬದ ಸದಸ್ಯರ ಜೊತೆ ಶಾಂತಿಯಿಂದ ವರ್ತಿಸಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ಪೂರ್ವ

ಅದೃಷ್ಟದ ಬಣ್ಣ: ಹಸಿರು

ವೃಶ್ಚಿಕ

ದೊಡ್ಡ ಮೊತ್ತದ ಹಣವು ನಿಮ್ಮ ಕೈಸೇರುತ್ತದೆ. ಅವಶ್ಯಕತೆಗೆ ತಕ್ಕಂತೆ ಹಣವನ್ನು ಸಂಪಾದಿಸಬಲ್ಲಿರಿ. ಮನದಲ್ಲಿ ಆತಂತಕದ ಭಾವನೆ ಇರುತ್ತದೆ. ಮುಂಗೋಪ ಒಳ್ಳೆಯದಲ್ಲ. ಕುಟುಂಬದ ಕೆಲಸ ಕಾರ್ಯದಲ್ಲಿ ಸೋದರರ ಸಹಾಯ ದೊರೆಯುತ್ತದೆ. ಸಂಗಾತಿಯ ಹಟದ ಗುಣ ಕುಟುಂಬದಲ್ಲಿ ಅಶಾಂತಿಯನ್ನು ಉಂಟುಮಾಡುತ್ತದೆ. ವಿದ್ಯಾರ್ಥಿಗಳು ಅವಿರತ ಪ್ರಯತ್ನದಿಂದ ಉನ್ನತ ಮಟ್ಟವನ್ನು ತಲುಪಲಿದ್ದಾರೆ. ಯಂತ್ರ ಸಂಬಂಧಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಬೇರೊಬ್ಬರ ಹಣಕಾಸಿನ ವ್ಯವಹಾರದಲ್ಲಿ ಮಧ್ಯವರ್ತಿಯಾದಲ್ಲಿ ತೊಂದರೆ ಖಚಿತ. ಪಾಲುಗಾರಿಕೆಯ ವ್ಯಾಪಾರದಲ್ಲಿ ಸಾಧಾರಣ ಲಾಭವಿರುತ್ತದೆ. ಉಷ್ಣದ ತೊಂದರೆ, ಅಜೀರ್ಣದ ತೊಂದರೆ ಇರುತ್ತದೆ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).