Horoscope Today: ಕೃಷಿ ಉತ್ಪನ್ನಗಳಿಂದ ಲಾಭ, ವಿದ್ಯಾರ್ಥಿಗಳಿಂದ ವಿಶೇಷ ಸಾಧನೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
17 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (17th April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಬುಧವಾರ
ತಿಥಿ : ನವಮಿ .05.10 ರವರೆಗೂ ಇದ್ದು ನಂತರ ದಶಮಿ ಆರಂಭವಾಗುತ್ತದೆ.
ನಕ್ಷತ್ರ : ಪುಷ್ಯ ನಕ್ಷತ್ರವು ಬೆಳಗ್ಗೆ 07.25 ರವರೆಗೂ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.06
ಸೂರ್ಯಾಸ್ತ: ಸಂಜೆ 06.31
ರಾಹುಕಾಲ: 12.00 ರಿಂದ 01.30
ರಾಶಿಫಲ
ಮೇಷ
ಸದಾಕಾಲ ಚಟುವಟಿಕೆಯಿಂದ ಕೆಲಸ ಕಾರ್ಯಗಳಲ್ಲಿ ನಿರತರಾಗಿರುವಿರಿ. ಕುಟುಂಬದಲ್ಲಿ ಪರಸ್ಪರ ವಿಶ್ವಾಸ ಮನೆ ಮಾಡುತ್ತದೆ. ಮನ ಒಪ್ಪುವಂತಹ ಕೆಲಸಗಳನ್ನು ಆಯ್ದುಕೊಳ್ಳುವಿರಿ. ಉದ್ಯೋಗದ ಸಲುವಾಗಿ ದೂರದ ಊರಿಗೆ ಪ್ರಯಾಣ ಮಾಡುವಿರಿ. ಮನಸ್ಸನ್ನು ಬದಲಿಸದೆ ಹೋದಲ್ಲಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬಹುದು. ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಉತ್ತಮ ಆರೋಗ್ಯ ಲಭಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆದಾಯ ಇರುತ್ತದೆ. ಬಿಡುವಿಲ್ಲದ ಕೆಲಸದಿಂದಾಗಿ ನಿಶ್ಯಕ್ತಿ ನಿಮ್ಮನ್ನು ಕಾಡುತ್ತದೆ. ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಲಿದ್ದಾರೆ. ಕೃಷಿ ಉತ್ಪನ್ನಗಳಿಂದ ಲಾಭವಿದೆ. ಹೂವಿನ ಸಸ್ಯಗಳನ್ನು ಬೆಳೆಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ವೃಷಭ
ಯಾರನ್ನೂಸುಲಭವಾಗಿ ನಂಬುವುದಿಲ್ಲ. ಮಾತಿನಿಂದಲೇ ಕೆಲಸ ಸಾಧಿಸುವಿರಿ. ಸುಲಭವಾಗಿ ಸೋಲನ್ನು ಒಪ್ಪಿಕೊಳ್ಳುವುದಿಲ್ಲ. ಕುಟುಂಬದವರ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ. ಸ್ಟಾಕ್ ಮತ್ತು ಷೇರು ವ್ಯವಹ್ಕಾರದಲ್ಲಿ ಮಧ್ಯಮಗತಿಯ ಆದಾಯ ದೊರೆಯುತ್ತದೆ. ಕುಟುಂಬದೊಂದಿಗೆ ಯಾತ್ರಾಸ್ಥಳಕ್ಕೆ ಭೇಟಿ ನೀಡಲು ನಿರ್ಧರಿಸುರಿ. ನಿರೀಕ್ಷಿತ ಮೂಲಗಳಿಂದ ಹಣ ದೊರೆಯುತ್ತದೆ. ದುಬಾರಿ ಉಡುಗೊರೆಯೊಂದು ನಿಮಗೆ ದೊರೆಯಲಿದೆ. ಧಾರ್ಮಿಕ ಕೆಲಸಗಳಿಗಾಗಿ ಹಣ ಖರ್ಚಾಗುತ್ತದೆ. ವೃತ್ತಿ ಜೀವನದಲ್ಲಿ ಅತ್ಯುನ್ನತ ಗೌರವ ದೊರೆಯುತ್ತದೆ. ಉದ್ಯೋಗಸ್ಥರಿಗೆ ಶುಭ ಸುದ್ದಿ ದೊರೆಯಲಿದೆ. ಆರೋಗ್ಯದ ಕಡೆ ಗಮನ ಇರಲಿ. ವಿಧ್ಯಾರ್ಥಿಗಳು ವಿಶೇಷವಾದ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುತ್ತಾರೆ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ 1
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಹಾಲಿನ ಬಣ್ಣ
ಮಿಥುನ
ಅನಾವಶ್ಯಕ ಖರ್ಚು ವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸುವಿರಿ. ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ಪರಸ್ಪರ ವಾದ ವಿವಾದ ಇರುತ್ತದೆ. ಉದ್ಯೋಗದಲ್ಲಿ ಉನ್ನತ ಮಟ್ಟ ತಲುಪುವಿರಿ. ಗೃಹೋಪಯೋಗಿ ಕೆಲಸಗಳಿಗೆ ಹಣ ಖರ್ಚು ಮಾಡುವಿರಿ. ವೃತ್ತಿಗೆ ಸಂಬಂಧಿಸಿದ ವಿಶೇಷ ಅಧ್ಯಯನದ ಅವಕಾಶ ಬಳಸಿಕೊಳ್ಳುವಿರಿ. ವಿದೇಶಕ್ಕೆ ತೆರಳುವ ಯೋಜನೆ ಮುಂದೂಡಲ್ಪಡುತ್ತದೆ. ವಾಸ ಸ್ಥಳ ಬದಲಾಯಿಸುವಿರಿ. ವ್ಯಾಪಾರ ವ್ಯವಹಾರದಲ್ಲಿನ ವರಮಾನ ಹೆಚ್ಚಲಿದೆ. ನಿರೀಕ್ಷಿತ ವೇಳೆಗೆ ಸರಿಯಾಗಿ ಬೇರೆಯವರಿಗೆ ನೀಡಿದ ಹಣ ಮರಳಿ ದೊರೆಯುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಹೆಚ್ಚಿನ ಲಾಭ ದೊರೆಯಲಿದೆ.
ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಬೂದು ಬಣ್ಣ
ಕಟಕ
ದೈನಂದಿನ ಕೆಲಸಗಳಲ್ಲಿ ಬೇಸರ ಉಂಟಾಗಿ ವಿಶ್ರಾಂತಿಯನ್ನು ಆಶ್ರಯಿಸುವಿರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ನೆಲೆಸಿರುತ್ತದೆ. ಉದ್ಯೋಗದಲ್ಲಿ ಎದುರಾಗುವ ಅಡ್ಡಿ ಆತಂಕಗಳಿಗೆ ಕಡಿವಾಣ ಹಾಕುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹಾಕಿದ ಬಂಡವಾಳಕ್ಕೆ ಮೋಸವಿರದು. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಪರಿಶ್ರಮ ತೋರಲಿದ್ದಾರೆ. ಶುಭ ವರ್ತಮಾನದ ಕಾರಣ ಕುಟುಂಬದಲ್ಲಿ ಸಂಭ್ರಮದ ಆಚರಣೆ ಕಂಡು ಬರುತ್ತದೆ. ಸಂಗಾತಿಯೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ. ಏಕಾಂಗಿಯಾಗಿ ಉಳಿಯಲು ಬಯಸುವಿರಿ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ ಮನೆಯಲ್ಲಿ ವಿಶೇಷವಾದ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸುವಿರಿ.
ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
