Horoscope Today: ಅನಿರೀಕ್ಷಿತ ಧನ ಲಾಭ, ಕುಟುಂಬದೊಂದಿಗೆ ಪರಸ್ಥಳಕ್ಕೆ ಪ್ರಯಾಣ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭವಿಷ್ಯ
17 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (17th April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಬುಧವಾರ
ತಿಥಿ : ನವಮಿ .05.10 ರವರೆಗೂ ಇದ್ದು ನಂತರ ದಶಮಿ ಆರಂಭವಾಗುತ್ತದೆ.
ನಕ್ಷತ್ರ : ಪುಷ್ಯ ನಕ್ಷತ್ರವು ಬೆಳಗ್ಗೆ 07.25 ರವರೆಗೂ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.06
ಸೂರ್ಯಾಸ್ತ: ಸಂಜೆ 06.31
ರಾಹುಕಾಲ: 12.00 ರಿಂದ 01.30
ರಾಶಿಫಲ
ಸಿಂಹ
ಯಾವುದೇ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಹಾಸ್ಯ ಪ್ರಜ್ಞೆಯ ಕಾರಣ ಕುಟುಂಬದಲ್ಲಿ ಸಂತಸ ಮತ್ತು ನೆಮ್ಮದಿ ನೆಲೆಸುತ್ತದೆ. ಕೈಹಿಡಿದ ಕೆಲಸ ಕಾರ್ಯಗಳನ್ನು ಹಟದಿಂದ ಯಶಸ್ವಿಗೊಳಿಸುವಿರಿ. ಉದ್ಯೋಗದಲ್ಲಿ ಪ್ರತಿಷ್ಠಿತ ಸ್ಥಾನಮಾನ ದೊರೆಯಲಿದೆ. ವ್ಯಾಪಾರ ವ್ಯವಹಾರಗಳು ಪ್ರಯತ್ನಕ್ಕೆ ತಕ್ಕ ಫಲಿತಾಂಶವನ್ನು ನೀಡುತ್ತದೆ. ಅವಿವಾಹಿತರಿಗೆ ಪರಿಚಯ ಅಥವಾ ಸಂಬಂಧಿಕರ ಜೊತೆಯಲ್ಲಿ ವಿವಾಹವಾಗುತ್ತದೆ. ಧಾರ್ಮಿಕ ಕಾರ್ಯಗಳ ನೇತೃತ್ವವನ್ನು ವಹಿಸುವಿರಿ. ವಿದ್ಯಾರ್ಥಿಗಳು ನಿರೀಕ್ಷೆಯಂತೆ ಯಶಸ್ಸನ್ನು ಗಳಿಸುತ್ತಾರೆ. ಅತಿ ಆತ್ಮವಿಶ್ವಾಸದಿಂದ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿ ಪಡೆಯುವಿರಿ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು ಉತ್ತರ
ಅದೃಷ್ಟದ ಬಣ್ಣ : ಕೆಂಪು
ಕನ್ಯಾ
ನೀವು ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳು ನಡೆಯಲಿವೆ. ಕುಟುಂಬದ ಎಲ್ಲರೊಂದಿಗೆ ಸಂತಸದಿಂದ ಕಾಲ ಕಳೆಯುವಿರಿ. ಕುಟುಂಬದ ಒಟ್ಟು ಆದಾಯ ಹೆಚ್ಚುತ್ತದೆ. ಉದ್ಯೋಗದಲ್ಲಿ ಹಬ್ಬದ ವಾತಾವರಣ ಉಂಟಾಗುತ್ತದೆ. ಆತ್ಮೀಯರ ಆಗಮನದಿಂದ ಖರ್ಚು ವೆಚ್ಚಗಳು ಹೆಚ್ಚುತ್ತವೆ. ಉದ್ಯೋಗದಿಂದ ದೂರವಿದ್ದು ವಿಶ್ರಾಂತಿ ಪಡೆಯುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವನ್ನು ಗಳಿಸುವಿರಿ. ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿ ಇರುತ್ತದೆ. ಹುಟ್ಟೂರಿಗೆ ತೆರಳುವಿರಿ. ಕುಟುಂಬದ ಹಿರಿಯರ ಆಶೀರ್ವಾದ ಪಡೆದು ದಿನದ ಕೆಲಸ ಆರಂಭಿಸುವಿರಿ. ಇಷ್ಟವಿಲ್ಲದಿದ್ದರೂ ಬಲವಂತ ಮಾಡುವುದರಿಂದ ಆತ್ಮೀಯರೊಬ್ಬರಿಗೆ ಹಣದ ಸಹಾಯ ಮಾಡುವಿರಿ. ಹೊಸ ವಾಹನ ಕೊಳ್ಳುವ ಯೋಜನೆ ಕೈಬಿಡುವಿರಿ.
ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಎಲೆ ಹಸಿರು ಬಣ್ಣ
ತುಲಾ
ಎಲ್ಲರ ಜೊತೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ದಿನ ಕಳೆಯುವಿರಿ. ಉದ್ಯೋಗದಲ್ಲಿ ಎಲ್ಲರ ಸಹಾಯ ಸಹಕಾರ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳು ಅನುಕೂಲಕರ ಸ್ಥಿತಿಯಲ್ಲಿ ಸಾಗಲಿವೆ. ವಿದ್ಯಾರ್ಥಿಗಳು ಸ್ನೇಹಿತರೊಂದಿಗೆ ಕಲಿಕೆಯಲ್ಲಿ ಮಗ್ನರಾಗಲಿದ್ದಾರೆ. ಕ್ರೀಡಾ ಸ್ಪರ್ಧೆಗಳಲ್ಲಿ ಸೋಲುಂಟಾಗಲಿವೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಕುಟುಂಬದ ಸದಸ್ಯರ ಜೊತೆಯಲ್ಲಿ ದೀರ್ಘಕಾಲದ ಪ್ರವಾಸ ಮಾಡುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಸ್ವಂತ ಜಮೀನು ಅಥವಾ ಮನೆಯನ್ನು ಕೊಳ್ಳುವ ಸಾಧ್ಯತೆಗಳಿವೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರಿಳಿತ ಇರಲಿದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ವೃಶ್ಚಿಕ
ಆತ್ಮವಿಶ್ವಾಸದ ಕೊರತೆ ಕಂಡು ಬರುತ್ತದೆ. ಅತಿ ಸರಳ ವಿಚಾರಗಳಿಗೂ ಬೇರೆಯವರನ್ನು ಅವಲಂಬಿಸುವಿರಿ. ಕುಟುಂಬದಲ್ಲಿ ಸಹಕಾರದ ಭಾವನೆ ಮನೆ ಮಾಡಿರುತ್ತದೆ. ಉದ್ಯೋಗದಲ್ಲಿ ಹೊಸತನವನ್ನು ಎದುರು ನೋಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಮಿತಿಮೀರಿ ಹಣವನ್ನು ತೊಡಗಿಸದಿರಿ. ವಿದ್ಯಾರ್ಥಿಗಳು ಒತ್ತಡದಿಂದ ಕಲಿಕೆಯಲ್ಲಿ ಮುಂದುವರೆಯುವರು. ದ್ವೇಷವನ್ನು ಮರೆತು ಎಲ್ಲರ ಜೊತೆ ಸಂತಸದಿಂದ ಬಾಳುವಿರಿ. ಸಿಡುಕುತನವನ್ನು ಕಡಿಮೆ ಮಾಡಿಕೊಳ್ಳಿರಿ. ಅಪೂರ್ಣಗೊಂಡ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಸ್ನೇಹಿತರ ಜೊತೆಯಲ್ಲಿ ಚಾರಿತ್ರಿಕ ಸ್ಥಳಕ್ಕೆ ಪ್ರವಾಸ ಕೈಗೊಳ್ಳುವಿರಿ. ಮನೆಯಲ್ಲಿನ ಮಕ್ಕಳಿಗೆ ಹೊಸ ಉಡುಪು ನೀಡಿ ಸಂಭ್ರಮಿಸುವಿರಿ.
ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಡು ಬಾದಾಮಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).