ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಶುಭ ಕಾರ್ಯಕ್ಕೆ ನಿಮ್ಮದೇ ಮೇಲ್ವಿಚಾರಣೆ, ಅನಾಥರಿಗೆ ಆಹಾರದ ವ್ಯವಸ್ಥೆ ಮಾಡಲಿದ್ದೀರಿ; ಏ. 17ರ ರಾಶಿ ಭವಿಷ್ಯ

Horoscope Today: ಶುಭ ಕಾರ್ಯಕ್ಕೆ ನಿಮ್ಮದೇ ಮೇಲ್ವಿಚಾರಣೆ, ಅನಾಥರಿಗೆ ಆಹಾರದ ವ್ಯವಸ್ಥೆ ಮಾಡಲಿದ್ದೀರಿ; ಏ. 17ರ ರಾಶಿ ಭವಿಷ್ಯ

17 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (17th April 2024 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(17th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ : ನವಮಿ .05.10 ರವರೆಗೂ ಇದ್ದು ನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ : ಪುಷ್ಯ ನಕ್ಷತ್ರವು ಬೆಳಗ್ಗೆ 07.25 ರವರೆಗೂ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.06

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 12.00 ರಿಂದ 01.30

ರಾಶಿಫಲ

ಧನಸ್ಸು

ಆರೋಗ್ಯದ ಸಮಸ್ಯೆ ಇದ್ದರೂ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಕುಟುಂಬದಲ್ಲಿ ಸ್ನೇಹ ಸೌಹಾರ್ದತೆ ಸದಾ ಇರುತ್ತದೆ. ಉದ್ಯೋಗದಲ್ಲಿ ಕೇವಲ ಮುಖ್ಯವಾದ ಕೆಲಸವನ್ನು ಮಾತ್ರ ಮಾಡುವಿರಿ. ಕೆಲಸದ ಒತ್ತಡದ ನಡುವೆಯೂ ಸಂತಸದಿಂದ ಬಾಳುವಿರಿ. ವ್ಯಾಪಾರ ವ್ಯವಹಾರದಲ್ಲಿ ವಿಶೇಷ ಬದಲಾವಣೆ ಕಂಡುಬರಲಿದೆ. ವಿದ್ಯಾರ್ಥಿಗಳು ಬಾಲ್ಯದ ಸ್ನೇಹಿತರೊಂದಿಗೆ ಮನರಂಜನೆಯಲ್ಲಿ ವೇಳೆ ಕಳೆಯಲಿದ್ದಾರೆ. ಸಂಗಾತಿ ತೆಗೆದುಕೊಳ್ಳುವ ನಿರ್ಧಾರಗಳು ಕುಟುಂಬದ ತೊಂದರೆಯನ್ನು ದೂರ ಮಾಡಲಿದೆ ಹೊಸ ನಿರೀಕ್ಷೆಯೊಂದಿಗೆ ಪಾಲುದಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಶುಭಕಾರ್ಯದ ಮೇಲ್ವಿಚಾರಣೆಯ ಜವಾಬ್ದಾರಿ ದೊರೆಯುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈ ಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೆಂಪು

ಮಕರ

ಆರೋಗ್ಯದ ಕಾಳಜಿ ಇರುತ್ತದೆ. ಕೆಲಸ ಕಾರ್ಯಗಳಿಂದ ವಿಶ್ರಾಂತಿ ತೆಗೆದುಕೊಳ್ಳುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ. ಅತಿ ಮುಖ್ಯ ಕೆಲಸ ಕಾರ್ಯಗಳಿಗೆ ಮೊದಲ ಪ್ರಾಶಸ್ತ್ಯ ನೀಡುವಿರಿ. ಉದ್ಯೋಗದಲ್ಲಿ ಹೆಚ್ಚಿನ ಕೆಲಸದ ಒತ್ತಡವಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯಲಿದೆ. ವಿದ್ಯಾರ್ಥಿಗಳು ಹಿರಿಯರ ಆಸರೆ ಬಯಸುತ್ತಾರೆ. ಹಣಕಾಸಿನ ಕೊರತೆ ಕಡಿಮೆ ಆಗಲಿದೆ. ಹೊಸ ಹಣಕಾಸಿನ ಯೋಜನೆಗಳನ್ನು ರೂಪಿಸುವಿರಿ. ಸಂಗಾತಿಯ ಜೊತೆ ಉತ್ತಮ ಬಾಂಧವ್ಯ ಇರುತ್ತದೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಅನಾಥರಿಗೆ ಆಹಾರದ ವ್ಯವಸ್ಥೆ ಮಾಡಲಿದ್ದೀರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕುಂಭ

ಕುಟುಂಬದ ಕೆಲಸ ಕಾರ್ಯಗಳು ನಿಧಾನ ಗತಿಯಲ್ಲಿ ನಡೆಯಲಿವೆ. ಆತುರದ ತೀರ್ಮಾನಗಳು ಹಣಕಾಸಿನ ಕೊರತೆಯನ್ನು ಉಂಟು ಮಾಡುತ್ತದೆ. ಕುಟುಂಬದಲ್ಲಿ ನೆಮ್ಮದಿ ನೆಲೆಸುತ್ತದೆ. ಪ್ರತಿ ವಿಚಾರಗಳಲ್ಲೂ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅವಕಾಶ ದೊರೆಯುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಂಡು ಬರದು. ವ್ಯಾಪಾರ ವ್ಯವಹಾರಗಳು ನಿರೀಕ್ಷಿಸಿದಂತೆ ನಡೆಯಲಿವೆ. ವಿದ್ಯಾರ್ಥಿಗಳು ಕಲಿಕೆಯ ವಿಚಾರದಲ್ಲಿ ಯಶಸ್ಸು ಗಳಿಸುತ್ತಾರೆ. ಸ್ವಂತ ನಿರ್ಧಾರಗಳಿಗೆ ಬದ್ದರಾಗಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಿದ್ದಾರೆ. ಆರೋಗ್ಯ ಉಳಿಸಿಕೊಳ್ಳಲು ದೈಹಿಕ ವ್ಯಾಯಾಮವನ್ನು ಅವಲಂಬಿಸುವಿರಿ. ಒಳ್ಳೆಯ ಕೆಲಸ ಕಾರ್ಯಗಳನ್ನು ಪ್ರೋತ್ಸಾಹಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮೀನ

ಕುಟುಂಬದಲ್ಲಿ ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ. ಕೆಲಸ ಕಾರ್ಯಗಳಲ್ಲಿ, ತಡವಾದರೂ ಯಶಸ್ಸು ದೊರೆಯುತ್ತದೆ. ಉದ್ಯೋಗದಲ್ಲಿ ಆತ್ಮೀಯರ ಸಲಹೆಯಂತೆ ನಡೆದುಕೊಳ್ಳುವಿರಿ. ಬೇರೆಯವರಿಗೆ ಅಸಾಧ್ಯವಾದ ಕೆಲಸಗಳನ್ನು ಸುಲಭವಾಗಿ ಮಾಡಬಲ್ಲಿರಿ. ಆತ್ಮವಿಶ್ವಾಸ ಬೆಳೆಸಿಕೊಳ್ಳಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯಲಿದೆ. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಕುಟುಂಬದಲ್ಲಿ ಶುಭ ಕಾರ್ಯವೊಂದು ನಡೆಯಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕುಟುಂಬದ ಸದಸ್ಯರಿಗೆ ಉಡುಗೊರೆಯನ್ನು ನೀಡುವಿರಿ. ಸೋದರಿಯ ಜೊತೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಇರಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).