ಸಂಗಾತಿ ಜೊತೆ ಮನಸ್ತಾಪ, ಮತ್ತೊಬ್ಬರ ಒತ್ತಡಕ್ಕೆ ಮಣಿದು ಉದ್ಯೋಗ ಬದಲಿಸುವಿರಿ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ
17th ಜೂನ್ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (17th June 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17th June 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಸೋಮವಾರ
ತಿಥಿ : ಏಕಾದಶಿ ರಾತ್ರಿ12.04ರವರೆಗೂ ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.
ನಕ್ಷತ್ರ : ಚಿತ್ತೆ ನಕ್ಷತ್ರವು .12.19 ರವರೆಗೆ ಇದ್ದು ಆನಂತರ ಸ್ವಾತಿ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ05.52
ಸೂರ್ಯಾಸ್ತ: ಸಂಜೆ 06.47
ರಾಹುಕಾಲ: ಬೆಳಗ್ಗೆ07.36 ರಿಂದ 09.12
ರಾಶಿಫಲ
ಸಿಂಹ
ಸೋಲಿಗೆ ಹೆದರದೆ ಕೆಲಸದಲ್ಲಿ ಹೊಸ ಅವಕಾಶಗಳನ್ನು ಎದುರುನೋಡುವಿರಿ. ನಿರ್ದಿಷ್ಟವಾದ ಹಾದಿಯಲ್ಲಿ ದಿನದ ಕೆಲಸ ಕಾರ್ಯಗಳನ್ನು ಪರಿಪೂರ್ಣಗೊಳಿಸುವಿರಿ. ಹಟದ ಗುಣವು ಮತ್ತೊಬ್ಬರಿಗೆ ಬೇಸರ ಮೂಡಿಸುತ್ತದೆ. ಈ ದಿನ ಹೆಚ್ಚಿನ ಬದಲಾವಣೆ ಕಾಣದು. ಕುಟುಂಬದ ಒಡೆತನ ನಿಮ್ಮದಾಗಲಿದೆ. ಕುಟುಂಬದಲ್ಲಿ ಒಮ್ಮತ ಮೂಡಲು ಪ್ರಯತ್ನಿಸುವಿರಿ. ಆತ್ಮೀಯರ ಸಲಹೆಯನ್ನು ಪಾಲಿಸುವಿರಿ. ಅಪೂರ್ಣಗೊಂಡ ಕೆಲಸಗಳನ್ನು ಪೂರ್ಣಗೊಳಿಸುವಿರಿ. ವಿದ್ಯಾಭ್ಯಾಸ ಸುಸೂತ್ರವಾಗಿ ಸಾಗುತ್ತದೆ. ಹೆಣ್ಣುಮಕ್ಕಳ ಬೇಡಿಕೆಗಳನ್ನು ಪೂರೈಸಬೇಕಾಗುತ್ತದೆ. ವೃತ್ತಿಯಲ್ಲಿ ಯಾವುದೇ ಬದಲಾವಣೆಗಳು ಕಾಣದು. ವ್ಯಾಪಾರ ವ್ಯವಹಾರದಲ್ಲಿ ಬಂಡವಾಳದ ಕೊರತೆ ಕಂಡುಬರುತ್ತದೆ.
ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಕಂದು ಬಣ್ಣ
ಕನ್ಯಾ
ದೈನಂದಿನ ಆಗುಹೋಗುಗಳು ನಿಮ್ಮ ಮನದಾಸೆಯಂತೆ ನಡೆಯಲಿದೆ. ಯಾವುದೇ ಬದಲಾವಣೆ ಒಪ್ಪಿಕೊಳ್ಳುವ ಮನಸ್ಸಿರುವುದಿಲ್ಲ. ಉದ್ಯೋಗದಲ್ಲಿ ಎದುರಾಗುವ ನಿಮ್ಮ ತೀರ್ಮಾನವೇ ಅಂತಿಮವಾಗಲಿದೆ. ಕಾನೂನು ರೀತ್ಯಾ ನಿಮಗೆ ದೊರೆಯಬೇಕಿದ್ದ ಅನುಕೂಲತೆಗಳನ್ನು ಪಡೆಯುವಿರಿ. ತಂದೆಯೊಂದಿಗೆ ಹಣಕಾಸಿನ ವ್ಯವಹಾರ ಆರಂಭಿಸುವಿರಿ. ಸಾರ್ವಜನಿಕ ಸಂಘ ಸಂಸ್ಥೆಯ ಅಧಿಕಾರದ ಚುಕ್ಕಾಣಿ ಹಿಡಿಯುವಿರಿ. ನಿಮ್ಮ ಅಸಂಬದ್ದ ಟೀಕೆಗಳಿಗೆ ಆತ್ಮೀಯರ ವಿರೋಧ ಇರುತ್ತದೆ. ನಿಮ್ಮ ಮಕ್ಕಳಿಗೆ ಉಡುಗೊರೆಯೊಂದನ್ನು ನೀಡುವಿರಿ. ಸಂಗಾತಿ ಜೊತೆ ವಾದ ವಿವಾದ ಇರುತ್ತವೆ.
ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ತುಲಾ
ಅಗತ್ಯವಿರುವ ಕೆಲಸಗಳನ್ನು ಮಾತ್ರ ಮಾಡುವಿರಿ. ಕುಟುಂಬದ ಸದಸ್ಯರ ಸಹಕಾರವಿರುವುದರಿಂದ ಯಾವುದೇ ತೊಂದರೆ ಇರುವುದಿಲ್ಲ. ಆರೋಗ್ಯದ ಬಗ್ಗೆ ಆತಂಕ ಬೇಡ. ಆತ್ಮವಿಶ್ವಾಸದಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ಸಭೆ ಸಮಾರಂಭಗಳಿಂದ ದೂರ ಉಳಿಯಲು ಬಯಸುವಿರಿ. ವಿದ್ಯಾರ್ಥಿಗಳು ಎಂದಿನಂತೆ ಅಧ್ಯಯನದಲ್ಲಿ ನಿರತರಾಗುತ್ತಾರೆ. ಆತುರಕ್ಕೆ ಒಳಗಾಗದೆ ಯೋಚಿಸಿ ಹಣಕಾಸಿನ ವ್ಯವಹಾರವನ್ನು ನಿರ್ವಹಿಸುವಿರಿ. ಮನಸ್ಸಿಗೆ ಬೇಸರ ಉಂಟು ಮಾಡುವ ಘಟನೆ ನಡೆದರೂ ಗಂಭೀರವಾಗಿ ಪರಿಗಣಿಸುವುದಿಲ್ಲ. ನಿಮ್ಮಲ್ಲಿರುವ ಕ್ಷಮಾ ಗುಣವು ಸ್ನೇಹಿತರ ಗುಂಪನ್ನು ಹೆಚ್ಚಿಸುತ್ತದೆ. ಹೊಸ ರೀತಿ ನೀತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಿರಿ. ಬೇರೆಯವರ ಒತ್ತಡಕ್ಕೆ ಮಣಿದು ಉದ್ಯೋಗ ಬದಲಿಸುವ ನಿರ್ಧಾರ ಮಾಡುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ತಿಳಿ ಹಸಿರು
ವೃಶ್ಚಿಕ
ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಉಂಟಾಗುತ್ತದೆ. ಯಾರೊಬ್ಬರ ಸಲಹೆಯನ್ನು ಪರಿಗಣಿಸದೆ ಸ್ವಂತ ತೀರ್ಮಾನಗಳನ್ನು ಅನುಸರಿಸುವಿರಿ. ಅನಾವಶ್ಯಕ ಕೋಪಗೊಳ್ಳುವುದರಿಂದ ಕುಟುಂಬದಲ್ಲಿ ಗಂಭೀರತೆ ನೆಲೆಸಿರುತ್ತದೆ. ನಿಮ್ಮ ಸರಳವಾದ ಸಲಹೆಗಳನ್ನು ಹಿರಿಯ ಅಧಿಕಾರಿಗಳು ಒಪ್ಪಿಕೊಳ್ಳುತ್ತಾರೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮದೇ ಆದ ಛಾಪು ಮೂಡಿಸುವಿರಿ. ಆಕ್ಷೇಪಣೆಗಳನ್ನು ಲೆಕ್ಕಿಸದೆ ಸ್ವಂತ ಕೆಲಸ ಕಾರ್ಯಗಳಿಗೆ ಸಮಯ ಮೀಸಲಿಡುವಿರಿ. ನಿಮ್ಮ ತಪ್ಪನ್ನು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಖರ್ಚು ವೆಚ್ಚಗಳಿಗೆ ಸಂಬಂಧಪಟ್ಟಂತೆ ಸಂಗಾತಿಯನ್ನು ಅವಲಂಬಿಸುವಿರಿ. ಹಣದ ಕೊರತೆ ಉಂಟಾಗುವುದಿಲ್ಲ. ಹೊಗಳುವರಿಂದ ದೂರ ಉಳಿಯುವಿರಿ. ನಿಮ್ಮ ಕರ್ತವ್ಯವನ್ನು ಯಾವುದೇ ಲೋಪವಿಲ್ಲದೆ ನಿರ್ವಹಿಸುವಿರಿ. ಕುಟುಂಬದಲ್ಲಿ ನೀವಿಲ್ಲದೆ ಯಾವೊಂದು ಕೆಲಸ ಕಾರ್ಯಗಳು ನಡೆಯುವುದಿಲ್ಲ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ..
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).