ಅನಿರೀಕ್ಷಿತ ಧನಾಗಮನದಿಂದ ಸಂತೋಷ, ಪುಟ್ಟ ಮಕ್ಕಳ ಬಗ್ಗೆ ಜಾಗರೂಕರಾಗಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಅನಿರೀಕ್ಷಿತ ಧನಾಗಮನದಿಂದ ಸಂತೋಷ, ಪುಟ್ಟ ಮಕ್ಕಳ ಬಗ್ಗೆ ಜಾಗರೂಕರಾಗಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಅನಿರೀಕ್ಷಿತ ಧನಾಗಮನದಿಂದ ಸಂತೋಷ, ಪುಟ್ಟ ಮಕ್ಕಳ ಬಗ್ಗೆ ಜಾಗರೂಕರಾಗಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

17 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (17th June 2024 Daily Horoscope).

ಅನಿರೀಕ್ಷಿತ ಧನಾಗಮನದಿಂದ ಸಂತೋಷ, ಪುಟ್ಟ ಮಕ್ಕಳ ಬಗ್ಗೆ ಜಾಗರೂಕರಾಗಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಅನಿರೀಕ್ಷಿತ ಧನಾಗಮನದಿಂದ ಸಂತೋಷ, ಪುಟ್ಟ ಮಕ್ಕಳ ಬಗ್ಗೆ ಜಾಗರೂಕರಾಗಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(17th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ : ಏಕಾದಶಿ ರಾತ್ರಿ12.04ರವರೆಗೂ ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ : ಚಿತ್ತೆ ನಕ್ಷತ್ರವು .12.19 ರವರೆಗೆ ಇದ್ದು ಆನಂತರ ಸ್ವಾತಿ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ05.52

ಸೂರ್ಯಾಸ್ತ: ಸಂಜೆ 06.47

ರಾಹುಕಾಲ: ಬೆಳಗ್ಗೆ07.36 ರಿಂದ 09.12

ರಾಶಿಫಲ

ಧನಸ್ಸು

ಮನಸ್ಸು ನಿಮ್ಮ ಹಿಡಿತದಲ್ಲಿ ಇರುವುದಿಲ್ಲ. ಸದಾಕಾಲ ಒಳಿತನ್ನೇ ನಿರೀಕ್ಷಿಸುವ ಕಾರಣ ನೆಮ್ಮದಿ ಇರುತ್ತದೆ. ಮಕ್ಕಳ ಆರೋಗ್ಯದ ಬಗ್ಗೆಅನಾವಶ್ಯಕ ಚಿಂತೆ ಇರುತ್ತದೆ. ಹಣಕಾಸಿನ ಪ್ರಗತಿಗಾಗಿ ಉಪವೃತ್ತಿಯನ್ನು ಅನುಸರಿಸುವಿರಿ. ಯಾವುದೇ ಆತಂಕವಿಲ್ಲದೆ ದಿನನಿತ್ಯದ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಕುಟುಂಬದಲ್ಲಿನ ಹೊಂದಾಣಿಕೆಯ ಗುಣ ನಿಮ್ಮ ಮಾನಸಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ತಪ್ಪಿಗೆ ಶಿಕ್ಷಿಸುವ ಬದಲು ಮನ್ನಿಸಿ ಪ್ರೀತಿ ತೋರುವಿರಿ. ಇದರಿಂದ ಎಲ್ಲರೂ ನಿಮ್ಮ ಪ್ರೀತಿ ವಿಶ್ವಾಸವನ್ನು ಬಯಸುತ್ತಾರೆ. ಹಣಕಾಸಿನ ತೊಂದರೆ ಇರುವುದಿಲ್ಲ. ಅನಾವಶ್ಯಕವಾಗಿ ಹಣ ಖರ್ಚು ಮಾಡುವುದಿಲ್ಲ. ಉದ್ಯೋಗದಲ್ಲಿ ಈ ದಿನ ಆಸಕ್ತಿ ಕಳೆದುಕೊಳ್ಳುವಿರಿ. ಆತ್ಮೀಯರಿಗೆ ನೀವಾಗಿಯೇ ಹಣದ ಸಹಾಯವನ್ನು ಮಾಡುವಿರಿ. ಕೈಕಾಲುಗಳಿಗೆ ಪೆಟ್ಟಾಗಬಹುದು ಎಚ್ಚರಿಕೆ ಇರಲಿ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಮಕರ

ದೈವಾನುಗ್ರಹದಿಂದ ಕುಟುಂಬದಲ್ಲಿ ಮನೆಯಲ್ಲಿ ನೆಮ್ಮದಿಯ ವಾತಾವರಣ ಉಂಟಾಗುತ್ತದೆ. ವಿಶ್ರಾಂತಿ ಇಲ್ಲದೆ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಜೊತೆಯ ಒಡನಾಟ ಸುಧಾರಿಸುತ್ತದೆ. ಎಲ್ಲರ ಜೊತೆಗಿನ ಮಾತುಕತೆ ಕಡಿಮೆ ಮಾಡುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸುವಿರಿ. ನಿಮ್ಮ ಕಾರ್ಯದಕ್ಷತೆಗೆ ಎಲ್ಲರ ಪ್ರಶಂಸೆ ದೊರೆಯುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸುತ್ತಾರೆ. ಹಣಕಾಸಿನ ವ್ಯವಹಾರವು ನಿಧಾನಗತಿಯಲ್ಲಿ ಸಾಗಲಿದೆ. ಮಕ್ಕಳ ಸಹಯೋಗದಲ್ಲಿ ವ್ಯಾಪಾರವನ್ನು ಆರಂಭಿಸುವಿರಿ. ಆದಾಯದಲ್ಲಿ ಮಧ್ಯಮ ಪ್ರಗತಿ ಉಂಟಾಗುತ್ತದೆ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬಿಳಿ

ಕುಂಭ

ಒಬ್ಬರ ಹಂಗಿಲ್ಲದೆ ಸ್ವತಂತ್ರವಾಗಿ ಜೀವನ ನಡೆಸುವಿರಿ. ಸಾಲವಾಗಿ ಪಡೆದ ಹಣವು ಮರಳಿ ದೊರೆಯಲಿದೆ. ನಿಮ್ಮ ಮನಸ್ಸಿನ ವಿಚಾರಗಳು ಸರಿಯಾದ ಹಾದಿಯಲ್ಲಿ ಸಾಗುವ ಕಾರಣ ನೆಮ್ಮದಿ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂದರೆ ಇರುವುದಲ್ಲ. ನಿಮ್ಮ ಆತ್ಮಗೌರವವನ್ನು ಕಡಿಮೆ ಮಾಡುವ ಯಾವುದೇ ಕೆಲಸವನ್ನು ಒಪ್ಪಿಕೊಳ್ಳುವುದಿಲ್ಲ. ನಿಮ್ಮಲ್ಲಿರುವ ಪ್ರತಿಭೆಗಳಿಗೆ ತಕ್ಕ ಪುರಸ್ಕಾರ ದೊರೆಯುತ್ತದೆ. ಪೂರ್ವ ಯೋಜನೆ ಇಲ್ಲದೆ ಯಾವುದೇ ಕೆಲಸವನ್ನು ಆರಂಭಿಸುವುದಿಲ್ಲ. ನಿಮ್ಮ ಸುತ್ತಮುತ್ತಲಿನ ಜನರು ಅನಾವಶ್ಯಕವಾಗಿ ಟೀಕೆ ಮಾಡುತ್ತಾರೆ. ಯಾರ ಮಾತನ್ನು ಆಲಿಸದೆ ಸಮಾಧಾನದಿಂದ ಜೀವನದಲ್ಲಿ ಮುನ್ನಡೆಯವಿರಿ. ಅನಿರೀಕ್ಷಿತ ಧನಾಗಮದಿಂದ ಮನದ ಯೋಚನೆ ದೂರವಾಗುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು

ಮೀನ

ನಿಮ್ಮ ಸತ್ಯವಾದ ಮನಸ್ಸು ಸ್ನೇಹಿತರ ಬಳಗವನ್ನು ಹೆಚ್ಚಿಸುತ್ತದೆ. ಬಂಧು ಬಳಗದವರನ್ನು ಸುಲಭವಾಗಿ ನಂಬುವುದಿಲ್ಲ. ಹಣಗಳಿಕೆಯೇ ಜೀವನವಲ್ಲ ಎಂಬುವುದು ನಿಮ್ಮ ವಾದವಾಗುತ್ತದೆ. ಕಾರ್ಯಕ್ರಮವೊಂದರಲ್ಲಿ ನಿಮ್ಮ ಮನದ ಭಾವನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ನಿಮ್ಮ ಪ್ರಯತ್ನಕ್ಕೆ ತಕ್ಕಂತೆ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಖ್ಯ ಹಂತವನ್ನು ತಲುಪುತ್ತಾರೆ. ಪುಟ್ಟ ಮಕ್ಕಳಿದ್ದರೆ ಅವರ ಬಗ್ಗೆ ಗಮನವಿರಲಿ. ಜಾರಿ ಬೀಳುವುದರಿಂದ ನಿಮ್ಮ ಕೈಗಾಲುಗಳಿಗೆ ಪೆಟ್ಟಾಗಬಹುದು. ಯಾವುದೇ ವಿಚಾರವನ್ನು ಅಸಡ್ಡೆಯಿಂದ ನೋಡದಿರಿ. ಕುಟುಂಬದ ಹಿರಿಯರ ಸಲಹೆ ಮತ್ತು ಅನುಭವವನ್ನು ನಿಮ್ಮ ಸ್ವಂತ ಕೆಲಸಗಳಿಗೆ ಬಳಸಿಕೊಳ್ಳುವಿರಿ. ಎಲ್ಲರೊಂದಿಗೆ ನಗುನಗುತ್ತಾ ಬಾಳುವುದು ನಿಮ್ಮಲ್ಲಿರುವ ವಿಶೇಷ ಗುಣ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಆಕಾಶ ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.