Horoscope Today: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ-horoscope today astrology prediction 17th september 2024 aries taurus gemini cancer daily horoscope rmy ,ರಾಶಿ ಭವಿಷ್ಯ ಸುದ್ದಿ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

Horoscope Today: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

Horoscope Today: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (17th September 2024 Horoscope).

Horoscope Today: ಮೇಷದಿಂದ ಕಟಕದವರಿಗೆ ನಾಲ್ಕು ರಾಶಿಯವರ ದಿನ ಭವಿಷ್ಯ ಸೆಪ್ಟೆಂಬರ್ 17
Horoscope Today: ಮೇಷದಿಂದ ಕಟಕದವರಿಗೆ ನಾಲ್ಕು ರಾಶಿಯವರ ದಿನ ಭವಿಷ್ಯ ಸೆಪ್ಟೆಂಬರ್ 17

Horoscope Today: ವೈದಿಕ ಜ್ಯೋತಿಷ್ಯದಲ್ಲಿ ಒಟ್ಟು 12 ರಾಶಿಚಕ್ರ ಚಿಹ್ನೆಗಳನ್ನು ವಿವರಿಸಲಾಗಿದೆ. ಪ್ರತಿಯೊಂದು ರಾಶಿಚಕ್ರ ಚಿಹ್ನೆಯು ಗ್ರಹದಿಂದ ಆಳಲ್ಪಡುತ್ತದೆ. ಜಾತಕವನ್ನು ಗ್ರಹ ಮತ್ತು ನಕ್ಷತ್ರಗಳ ಚಲನೆಯಿಂದ ಲೆಕ್ಕಹಾಕಲಾಗುತ್ತದೆ. 2024ರ ಸೆಪ್ಟೆಂಬರ್ 17 ರ ಮಂಗಳವಾರದ ದಿನ ಭವಿಷ್ಯವನ್ನು ತಿಳಿಯೋಣ. ಮಂಗಳವಾರ ಬಜರಂಗ ಬಲಿಗೆ ಸಮರ್ಪಿತವಾಗಿದೆ. ಈ ದಿನ ಭಜರಂಗಬಲಿಯನ್ನು ಪೂಜಿಸಲಾಗುತ್ತದೆ. ಹನುಮಂತನನ್ನೂ ಪೂಜಿಸಲಾಗುತ್ತೆ. ಈ ಪೂಜೆಯಿಂದ ನಿಮ್ಮ ಜೀವನದ ಎಲ್ಲಾ ಅಡೆತಡೆಗಳಿಂದ ಮುಕ್ತಿ ಪಡೆಯುತ್ತೀರಿ. ಜೀವನದಲ್ಲಿ ಶಾಂತಿ, ಸಂತೋಷ ಹಾಗೂ ಸಮೃದ್ಧಿ ಇರುತ್ತೆ. ಜ್ಯೋತಿಷ್ಯದ ಲೆಕ್ಕಾಚಾರದ ಪ್ರಕಾರ, ಸೆಪ್ಟೆಂಬರ್ 17 ರ ದಿನವು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ತುಂಬಾ ಶುಭವಾಗಲಿದೆ, ನಂತರ ಕೆಲವು ರಾಶಿಚಕ್ರ ಚಿಹ್ನೆಗಳು ಜೀವನದಲ್ಲಿ ಸಣ್ಣ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಸೆಪ್ಟೆಂಬರ್ 17 ರ ಮಂಗಳವಾರ ಯಾವ ರಾಶಿಚಕ್ರ ಚಿಹ್ನೆಗಳು ಪ್ರಯೋಜನ ಪಡೆಯುತ್ತವೆ? ಯಾವ ರಾಶಿಚಕ್ರ ಚಿಹ್ನೆಗಳು ಜಾಗರೂಕರಾಗಿರಬೇಕು ಎಂಬುದನ್ನು ತಿಳಿಯೋಣ. ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ರಾಶಿ ಫಲ ಇಲ್ಲಿ ನೀಡಲಾಗಿದೆ.

ಮೇಷ ರಾಶಿ

ಮೇಷ ರಾಶಿಯವರಿಗೆ ಇವತ್ತು ಬಹಳ ಶುಭ ದಿನ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಜೀವನದಲ್ಲಿ ದೊಡ್ಡ ಬದಲಾವಣೆಗಳಾಗಬಹುದು. ಉದ್ಯೋಗದ ವಿಷಯದಲ್ಲಿ ನಿಮಗೆ ಆಹ್ಲಾದಕರ ಫಲಿತಾಂಶಗಳು ಇರುತ್ತವೆ. ಹೆಚ್ಚು ಶ್ರಮಿಸಬೇಕಾಗುತ್ತದೆ. ಖರ್ಚು ಹೆಚ್ಚಾಗಬಹುದು. ಆತ್ಮವಿಶ್ವಾಸ ಕಡಿಮೆಯಾಗುತ್ತೆ. ಆದಾಯದ ಮೂಲಗಳನ್ನು ಹೆಚ್ಚಿಸುವ ಬಗ್ಗೆ ಯೋಚಿಸುತ್ತೀರಿ. ಪ್ರವಾಸಕ್ಕೆ ಹೋಗಲು ಪ್ಲಾನ್ ಮಾಡುತ್ತೀರಿ. ಕುಟುಂಬ ಸದಸ್ಯರಿಂದ ಬೆಂಬಲ ಸಿಗಲಿದೆ. ಸ್ನೇಹಿತರು ಮತ್ತು ಒಡಹುಟ್ಟಿದವರಿಂದ ಬೆಂಬಲವನ್ನು ಪಡೆಯುತ್ತೀರಿ. ಶೈಕ್ಷಣಿಕ ಕಾರ್ಯಗಳಲ್ಲಿ ಯಶಸ್ಸು ಗಳಿಸುತ್ತೀರಿ.

ವೃಷಭ ರಾಶಿ

ವೃಷಭ ರಾಶಿಯವರಿಗೆ ಸಾಮಾನ್ಯ ದಿನವಾಗಲಿದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಗೆ ಅವಕಾಶಗಳಿವೆ. ಕುಟುಂಬ ಸದಸ್ಯರಿಗೆ ಬೆಂಬಲ ಸಿಗಲಿದೆ. ಪ್ರೀತಿಯ ಜೀವನವು ಉತ್ತಮವಾಗಿರುತ್ತದೆ. ಹಳೆಯ ಸ್ನೇಹಿತನನ್ನು ಭೇಟಿಯಾಗುತ್ತೀರಿ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವ ಅಗತ್ಯವಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಈ ಸಮಯದಲ್ಲಿ ಹೂಡಿಕೆ ಮಾಡುವುದು ಶುಭವಾಗಿರುತ್ತದೆ. ಕುಟುಂಬದೊಂದಿಗೆ ಧಾರ್ಮಿಕ ಸ್ಥಳಕ್ಕೆ ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ.

ಮಿಥುನ ರಾಶಿ

ಮಿಥುನ ರಾಶಿಯವರ ಮನಸ್ಸು ಸಂತೋಷವಾಗಿರುತ್ತದೆ. ವ್ಯವಹಾರದಲ್ಲಿ ಲಾಭ ಇರಲಿದೆ. ಸಂಪತ್ತಿನ ಬೆಳವಣಿಗೆಯ ಸಾಧ್ಯತೆಗಳಿವೆ. ಹೊಸ ಅವಕಾಶಗಳಿಗೆ ಸಿದ್ಧರಾಗಿರಿ. ಕಚೇರಿಯಲ್ಲಿ ಹೆಚ್ಚಿನ ಕೆಲಸದಿಂದಾಗಿ ನೂಕುನುಗ್ಗಲು ಸಹ ಹೆಚ್ಚಾಗಿರುತ್ತದೆ. ಕುಟುಂಬ ಜೀವನವು ಆನಂದಮಯವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಕುಟುಂಬ ಜೀವನವು ಆನಂದಮಯವಾಗಿರುತ್ತದೆ. ಪ್ರೀತಿಯ ಜೀವನವು ಉತ್ತಮವಾಗಿರುತ್ತದೆ. ನಿಮ್ಮ ಪ್ರೇಮಿಯೊಂದಿಗೆ ಸಮಯ ಕಳೆಯುವಿರಿ. ಅತಿಯಾದ ಸೋಮಾರಿತನ ಒಳ್ಳೆಯದಲ್ಲ. ಆದಾಯದಲ್ಲಿ ಇಳಿಕೆ ಮತ್ತು ಖರ್ಚು ಹೆಚ್ಚಾಗುತ್ತದೆ.

ಕಟಕ ರಾಶಿ

ಈ ರಾಶಿಯವರ ಮನಸ್ಸು ಶಾಂತವಾಗಿರುತ್ತೆ. ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ವ್ಯವಹಾರದಲ್ಲಿ ಲಾಭ ಇರುತ್ತೆ. ಆದಾಯ ಹೆಚ್ಚಾಗಲಿದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಒತ್ತಡ ಇರುತ್ತದೆ. ಕುಟುಂಬ ಸದಸ್ಯರಿಗೆ ಬೆಂಬಲ ಸಿಗಲಿದೆ. ಮಾನಸಿಕ ಒತ್ತಡ ಉಂಟಾಗಬಹುದು. ಒತ್ತಡದಿಂದ ದೂರವಿರಲು ನೀವು ಯೋಗ ಮಾಡಬಹುದು. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಲಾಭದ ಅವಕಾಶಗಳು ಇರುತ್ತವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ. ಅಧಿಕಾರಿಗಳೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಇರುತ್ತವೆ.

ಗಮನಿಸಿ: ಇದು ಪ್ರಚಲಿತದಲ್ಲಿರುವ ಧಾರ್ಮಿಕ ನಂಬಿಕೆಗಳನ್ನು ಆಧರಿಸಿದ ಬರಹ. ಓದುಗರಿಗೆ ಮಾಹಿತಿ ನೀಡುವ ಉದ್ದೇಶದಿಂದಷ್ಟೇ ಪ್ರಕಟಿಸಲಾಗಿದೆ.

mysore-dasara_Entry_Point
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.