Horoscope Today: ದಾಂಪತ್ಯದಲ್ಲಿ ಜೀವನದಲ್ಲಿ ಸಂತೋಷ, ಉದ್ಯೋಗದಲ್ಲಿ ಬಿಡುವಿಲ್ಲದ ಕೆಲಸ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ದಾಂಪತ್ಯದಲ್ಲಿ ಜೀವನದಲ್ಲಿ ಸಂತೋಷ, ಉದ್ಯೋಗದಲ್ಲಿ ಬಿಡುವಿಲ್ಲದ ಕೆಲಸ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

Horoscope Today: ದಾಂಪತ್ಯದಲ್ಲಿ ಜೀವನದಲ್ಲಿ ಸಂತೋಷ, ಉದ್ಯೋಗದಲ್ಲಿ ಬಿಡುವಿಲ್ಲದ ಕೆಲಸ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

ಮಾರ್ಚ್​ 18, ಸೋಮವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (18 March 2024 Daily Horoscope).

ಮಾರ್ಚ್​ 18ರ ದಿನಭವಿಷ್ಯ
ಮಾರ್ಚ್​ 18ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (18 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಸೋಮವಾರ

ತಿಥಿ : ನವಮಿ ರಾ.02.11 ರವರೆಗು ಇರುತ್ತದೆ. ಆನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ : ಆರ್ದ್ರೆ ನಕ್ಷತ್ರವು ರಾ.09.36 ರವರೆಗೆ ಇರುತ್ತದೆ. ಆನಂತರ ಪುನರ್ವಸು ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.24

ಸೂರ್ಯಾಸ್ತ: ಸ.06.29

ರಾಹುಕಾಲ : ಬೆ.07.30 ರಿಂದ ಬೆ.09.00

ರಾಶಿ ಫಲಗಳು

ಧನಸ್ಸು

ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಪದವಿ ಗಳಿಸುವ ಮುನ್ನ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗಾವಕಾಶ ದೊರೆಯುತ್ತದೆ. ಉದ್ಯೋಗದಲ್ಲಿನ ವಿವಾದವನ್ನು ಸುಲಭವಾಗಿ ಪರಿಹರಿಸುವಿರಿ. ಸಮಾಜ ಸೇವೆ ಮಾಡುವ ಸಲುವಾಗಿ ಸಂಘ ಸಂಸ್ಠೆಯನ್ನು ಸ್ಥಾಪಿಸುವಿರಿ. ವೃತ್ತಿಕ್ಷೇತ್ರದಲ್ಲಿ ಹಿರಿಯ ಅಧಿಕಾರಿಗಳ ಮೆಚ್ಚುಗೆ ಗಳಿಸುವಿರಿ. ಕುಟುಂಬದಲ್ಲಿ ಮಂಗಳಕಾರ್ಯವೊಂದು ನಡೆಯಲಿದೆ. ಧಾರ್ಮಿಕ ಕೇಂದ್ರವೊಂದಕ್ಕೆ ಎಲ್ಲರ ಜೊತೆ ಭೇಟಿ ನೀಡುವಿರಿ. ಅಜೀರ್ಣದ ತೊಂದರೆ ಇರಲಿದೆ. ಕಲಾವಿದರಿಗೆ ಉತ್ತಮ ಅವಕಾಶ ದೊರೆಯುತ್ತದೆ. ದಂಪತಿಗಳ ಸಮಸ್ಯೆಗೆ ಮುಕ್ತಿ ನೀಡಲು ಸಂಧಾನಕಾರ್ಯ ನಡೆಸುವಿರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಮಕರ

ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ಬಿಡುವಿಲ್ಲದ ಕೆಲಸ ವಿರುತ್ತದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ವಿದ್ಯಾರ್ಥಿಗಳು ಮೌನ ಮತ್ತು ವಿಶ್ರಾಂತಿಗೆ ಶರಣಾಗುತ್ತಾರೆ. ಕಷ್ಟಜೀವಿಗಳಾದ ಕಾರಣ ಕಾರಣ ಯಾವ ಕೆಲಸವೂ ನಿಮಗೆ ಅಸಾಧ್ಯವಲ್ಲ. ದಾಂಪತ್ಯದಲ್ಲಿ ಜೀವನದಲ್ಲಿ ಸುಖ ಸಂತೋಷ ನೆಲೆಸಿರುತ್ತದೆ. ತಾಯಿಯವರಿಂದ ಹಣದ ಸಹಾಯ ದೊರೆಯುತ್ತದೆ. ಸ್ವಂತ ಮನೆಯನ್ನು ಕೊಳ್ಳುವ ಯೋಚನೆ ಈಡೇರುತ್ತದೆ. ಕಮೀಷನ್ ವ್ಯವಹಾರದಲ್ಲಿ ಉತ್ತಮ ಆದಾಯ ಗಳಿಸುವಿರಿ. ಧಾರ್ಮಿಕ ಕೇಂದ್ರಗಳ ಆಡಳಿತ ದೊರೆಯುತದೆ. ಚಿನ್ನ ಬೆಳ್ಳಿಯ ಒಡವೆಗಳ ಸರಬರಾಜಿನಲ್ಲಿ ಹೆಚ್ಚಿನ ಆದಾಯ ಗಳಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಕುಂಭ

ನಿಮ್ಮಲ್ಲಿರುವ ಹಠದ ಗುಣ ಕುಟುಂಬದಲ್ಲಿ ಬೇಸರವನ್ನು ಉಂಟುಮಾಡಲಿದೆ. ಉದ್ಯೋಗದಲ್ಲಿನ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ನಿರೀಕ್ಷಿಸಿದ ಯಶಸ್ಸು ಗಳಿಸುತಾರೆ. ಹಣಕಾಸಿನ ವಿಚಾರದ ಬಗ್ಗೆ ಯಾರಿಗೂ ತಿಳಿಸುವುದಿಲ್ಲ. ಸೋದರನ ಜೊತೆಗಿನ ಮನಸ್ತಾಪವು ಕೊನೆಗೊಳ್ಳಲಿದೆ. ತಂದೆಯವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕಾರಣರಾಗುವಿರಿ. ಅರೆ ಮನಸ್ಸಿನಿಂದ ಕೆಲಸ ಕಾರ್ಯಗಳನ್ನು ಮಾಡುವಿರಿ. ಸಾಕುಪ್ರಾಣಿಗಳ ಸೋಂಕಿನಿಂದ ಅನಾರೋಗ್ಯ ಉಂಟಾಗಲಿದೆ. ಸಾಲದ ವ್ಯವಹಾರದಲ್ಲಿ ಸಾಕ್ಷೀದಾರರಾದಲ್ಲಿ ತೊಂದರೆಗೆ ಸಿಲುಕುವಿರಿ. ಕುಟುಂಬದಲ್ಲಿನ ವಯೋವೃದ್ದರ ಆರೋಗ್ಯದಲ್ಲಿ ತೊಂದರೆ ಇರಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಮೀನ

ಕುಟುಂಬದಲ್ಲಿ ಹೊಸ ನಿರೀಕ್ಷೆ ಇರುವ ಕಾರಣ ಸಂತಸ ತುಂಬಿರುತ್ತದೆ. ಉದ್ಯೋಗದಲ್ಲಿ ಯಾವುದೇ ವಿಚಾರವೆಂದರೂ ಹೆಚ್ಚಿನ ಪ್ರಯತ್ನದಿಂದ ಯಶಸ್ಸನ್ನು ಗಳಿಸಬಹುದು. ಹಣಕಾಸಿನ ವಿಚಾರದಲ್ಲಿ ಕುಟುಂಬದ ಸದಸ್ಯರ ಸಹಾಯ ದೊರೆಯುತ್ತದೆ. ಅದೃಷ್ಟದಿಂದ ವಿದ್ಯಾರ್ಥಿಗಳ ಆಶೋತ್ತರಗಳು ಸುಲಭವಾಗಿ ನೆರವೇರಲಿವೆ. ಹಣಕಾಸಿನ ತೊಂದರೆ ಬಾರದು. ಸ್ವಂತ ಉದ್ಧಿಮೆಯನ್ನು ಆರಂಭಿಸುವ ಮಾತುಕತೆ ನಡೆಸುವಿರಿ. ಅಶಕ್ತರ ಜೀವನಕ್ಕೆ ಆಧಾರವಾಗುವಿರಿ. ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಮಾಡುವಿರಿ. ವ್ಯಾಪಾರೋದ್ದೇಶಕ್ಕಾಗಿ ಹೊಸ ವಾಹನವನ್ನು ಕೊಳ್ಳುವಿರಿ. ತಲೆನೋವಿನ ತೊಂದರೆಯಿಂದ ಬಳಲುವಿರಿ. ದೈಹಿಕ ವ್ಯಾಯಾಮದಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಬಿಸಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ

-----------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.