ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಉದ್ಯೋಗದಲ್ಲಿ ಆತಂಕದ ಕ್ಷಣಗಳು ಎದುರಾಗಲಿದೆ, ತಾಳ್ಮೆಯೇ ಸಮಸ್ಯೆಗೆ ಮದ್ದು; ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

Horoscope Today: ಉದ್ಯೋಗದಲ್ಲಿ ಆತಂಕದ ಕ್ಷಣಗಳು ಎದುರಾಗಲಿದೆ, ತಾಳ್ಮೆಯೇ ಸಮಸ್ಯೆಗೆ ಮದ್ದು; ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

18th ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (18th April 2024 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(18th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ : ದಶಮಿ ಸಂಜೆ 06.37 ರವರೆಗೂ ಇದ್ದು ನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ : ಆಶ್ಲೇಷ ನಕ್ಷತ್ರವು ಬೆಳಗ್ಗೆ 09.21 ರವರೆಗೂ ಇದ್ದು ನಂತರ ಮಖೆ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.06

ಸೂರ್ಯಾಸ್ತ: ಸಂಜೆ 06.31

ರಾಹುಕಾಲ : 01.30 ರಿಂದ ಹ.03.00

ರಾಶಿಫಲ

ಧನಸ್ಸು

ಅರ್ಧಕ್ಕೆ ನಿಂತಿದ್ದ ಕೆಲಸವನ್ನು ಪೂರ್ಣಗೊಳಿಸುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಸಂತೋಷದ ಕ್ಷಣವನ್ನು ಅನುಭವಿಸುವಿರಿ. ಉದ್ಯೋಗದಲ್ಲಿ ಆತಂಕದ ಕ್ಷಣಗಳು ಎದುರಾಗಲಿದೆ. ಬುದ್ಧಿವಂತಿಕೆಯಿಂದ ಎದುರಾಗುವ ಸಮಸ್ಯೆಗಳಿಂದ ಪಾರಾಗುವಿರಿ. ಸರಳವಾದ ಜೀವನ ಇಷ್ಟ ಪಡುವುದಿಲ್ಲ. ಅನಿರೀಕ್ಷಿತವಾಗಿ ಅಧಿಕಾರ ದೊರೆಯುತ್ತದೆ. ವಂಶದ ಆಸ್ತಿಯಲ್ಲಿ ನ್ಯಾಯಯುತ ಪಾಲು ದೊರೆಯುತ್ತದೆ. ಅವಿವಾಹಿತರಿಗೆ ವಿವಾಹದ ಮಾತುಕತೆ ನಡೆಯುತ್ತದೆ. ವಿದ್ಯಾರ್ಥಿಗಳು ಆಟ ಮನರಂಜನೆಯಲ್ಲಿ ತೊಡಗುತ್ತಾರೆ. ವ್ಯಾಸಂಗದಲ್ಲಿ ನಿರೀಕ್ಷಿತ ಗುರಿ ತಲುಪುತ್ತಾರೆ. ಧಾರ್ಮಿಕ ಕೇಂದ್ರಗಳ ನಿರ್ವಹಣೆ ನಿಮ್ಮ ಪಾಲಾಗುತ್ತದೆ. ಕಂತಿನ ವ್ಯಾಪಾರದಲ್ಲಿ ಉತ್ತಮ ಲಾಭವಿದೆ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯ ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ

ಮಕರ

ವ್ಯವಸಾಯಕ್ಕೆ ಸಂಬಂಧಿಸಿದ ಉದ್ಯೋಗ ದೊರೆಯುತ್ತದೆ. ಗೃಹಿಣಿಯರಿಗೆ ವಿಶ್ರಾಂತಿ ಕನಸಿನ ಮಾತಾಗುತ್ತದೆ. ಹೋಟೆಲ್ ಮತ್ತು ಬೇಕರಿ ಉದ್ಯಮ ಆರಂಭಿಸುವ ಯೋಜನೆ ರೂಪಿಸುವಿರಿ. ಪಾಲುದಾರಿಕೆ ವ್ಯಾಪಾರದಲ್ಲಿ ಹೆಚ್ಚಿನ ಲಾಭವಿರುತ್ತದೆ. ವಿದ್ಯಾರ್ಥಿಗಳು ಮನರಂಜನೆ ಮತ್ತು ಕ್ರೀಡಾಕೂಟಗಳಲ್ಲಿ ಕಾಲ ಕಳೆಯುತ್ತಾರೆ. ಕುಟುಂಬದಲ್ಲಿನ ಜವಾಬ್ದಾರಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ಹಣಕಾಸಿನ ವಿಚಾರವಾಗಿ ಮಾನಸಿಕ ಒತ್ತಡವಿರುತ್ತದೆ. ಹೊಸ ಮನೆ ಕೊಳ್ಳಲು ಆತ್ಮೀಯರ ನೆರವು ದೊರೆಯುತ್ತದೆ . ಬೃಹತ್ ಪ್ರಮಾಣದ ಹಣಕಾಸಿನ ವ್ಯವಹಾರವನ್ನು ಆರಂಭಿಸುವಿರಿ. ಸಂತಾನ ಲಾಭವಿದೆ. ಅವಿವಾಹಿತರಿಗೆ ಸಂಬಂಧದಲ್ಲಿ ವಿವಾಹವಾಗುವ ಸಾಧ್ಯತೆ ಇದೆ.

ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಕುಂಭ

ಬಿಡುವಿನ ಕಾರಣ ಎಲ್ಲರೊಂದಿಗೆ ಸಂತಸವನ್ನು ಹಂಚಿಕೊಳ್ಳುವಿರಿ. ನಗು ನಗುತ್ತಾ ಬಾಳುವ ನೀವು ಎಲ್ಲರಿಗೂ ಸ್ಪೂರ್ತಿಯಾಗುವಿರಿ. ಸಂಗಾತಿಯೊಂದಿಗೆ ಮನರಂಜನಾ ಸ್ಥಳಕ್ಕೆ ತೆರಳುವಿರಿ. ಬರವಣಿಗೆಯಲ್ಲಿ ಆಸಕ್ತಿ ಮೂಡಲಿದೆ. ಕಣ್ಣಿನ ದೋಷ ಇರುವವರು ಎಚ್ಚರಿಕೆ ವಹಿಸಬೇಕು. ದೊರೆಯುವ ಹೊಸ ಉದ್ಯೋಗದ ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸುವಿರಿ. ಸಾಫ್ಟ್ ವೇರ್ ಕಂಪನಿಗಳಲ್ಲಿ ಕೆಲಸ ನಿರ್ವಹಿಸುವವರಿಗೆ ನೆಮ್ಮದಿ ಇರದು. ಮಕ್ಕಳು ತಮ್ಮ ಗುರಿ ತಲುಪಲು ತಾಯಿಯ ಸಹಕಾರ ಬಯಸುತ್ತಾರೆ. ಯಾವುದೆ ವಿಚಾರವನ್ನಾದರೂ ಕಡೆಗಣ್ಣಿನಿಂದ ನೋಡದಿರಿ. ವಿದ್ಯಾರ್ಥಿಗಳು ಓದಿನಲ್ಲಿ ಗಮನ ನೀಡಬೇಕು. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಆತಂಕದ ಪರಿಸ್ಥಿತಿ ಎದುರಾಗಲಿದೆ

ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಮೀನ

ಕುಟುಂಬದಲ್ಲಿ ಅದೃಷ್ಟದಿಂದ ಧನಾತ್ಮಕ ಬೆಳವಣಿಗೆ ಕಂಡುಬರುತ್ತದೆ. ರಜೆಯ ದಿನವೂ ಕೆಲಸದಲ್ಲಿ ತಲ್ಲೀನರಾಗುವಿರಿ. ದಿನನಿತ್ಯದ ಕೆಲಸದಲ್ಲಿ ಆತ್ಮೀಯರ ಸಹಾಯ ಸಹಕಾರ ದೊರೆಯುತ್ತದೆ. ಎಲ್ಲರೊಂದಿಗೆ ಸಂತಸದಿಂದ ಬಾಳುವಿರಿ. ಆತಂಕದ ಕ್ಷಣಗಳನ್ನು ಸಮರ್ಥವಾಗಿ ಎದುರಿಸುವಿರಿ. ಉದ್ಯೋಗದಲ್ಲಿ ಉನ್ನತ ಅಧಿಕಾರ ಗಳಿಸುವಿರಿ. ವಿದ್ಯಾರ್ಥಿಗಳು ಮನರಂಜನೆಯ ನಡುವೆಯೂ ಕಲಿಕೆಯಲ್ಲಿ ಮುನ್ನಡೆಯುತ್ತಾರೆ. ಸೋದರಿಯ ಕುಟುಂಬದ ಮನಸ್ತಾಪ ಕಡಿಮೆಯಾಗುತ್ತದೆ. ಸ್ವಂತ ವಾಹನವನ್ನು ಬದಲಿಸುವಿರಿ. ಸೋದರಿಗಾಗಿ ದುಬಾರಿ ಉಡುಗೊರೆ ಕೊಳ್ಳುವಿರಿ. ಮನೆ ಕೊಳ್ಳುವ ನಿರ್ಧಾರ ಮುಂದೆ ಹೋಗಲಿದೆ. ಸಾಕು ಪ್ರಾಣಿಗಳಿಂದ ತೊಂದರೆ ಉಂಟಾಗಬಹುದು.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).