Horoscope Today: ಹೊಸ ವಾಹನ ಕೊಳ್ಳುವಿರಿ, ಕೆಲಸದಲ್ಲಿ ಯಶಸ್ಸು ಸಿಗುತ್ತೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಹೊಸ ವಾಹನ ಕೊಳ್ಳುವಿರಿ, ಕೆಲಸದಲ್ಲಿ ಯಶಸ್ಸು ಸಿಗುತ್ತೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

Horoscope Today: ಹೊಸ ವಾಹನ ಕೊಳ್ಳುವಿರಿ, ಕೆಲಸದಲ್ಲಿ ಯಶಸ್ಸು ಸಿಗುತ್ತೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

18 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (18th June 2024 Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಯ ದಿನ ಭವಿಷ್ಯ ತಿಳಿಯಿರಿ
ಮೇಷ, ವೃಷಭ, ಮಿಥುನ, ಕಟಕ ರಾಶಿಯ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (18th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ದ್ವಾದಶಿ ಬೆ 05.19ರವರೆಗೂ ಇರುತ್ತದೆ. ಆನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ: ಸ್ವಾತಿ ನಕ್ಷತ್ರವು ಮಧ್ಯಾಹ್ನ 02.25 ರವರೆಗೆ ಇದ್ದು, ಆನಂತರ ವಿಶಾಖ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆ.05.52

ಸೂರ್ಯಾಸ್ತ: ಸ.06.47

ರಾಹುಕಾಲ: ಮಧ್ಯಾಹ್ನ 03.37 ರಿಂದ ಸಂಜೆ 05.13

ಮೇಷ ರಾಶಿ

ಎದುರಾಗುವವ ಅಪಾಯಗಳನ್ನು ಮೊದಲೇ ಗ್ರಹಿಸುವಿರಿ. ವಿದ್ಯಾರ್ಥಿಗಳು ಹೊಸ ನಿರೀಕ್ಷೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಕಿವಿಯ ನೋವು ನಿಮ್ಮನ್ನು ಕಾಡುತ್ತದೆ. ಚರ್ಮದ ದೋಷವು ಮರೆಯಾಗುತ್ತದೆ. ನಿಮ್ಮಲ್ಲಿ ಇರುವ ವಿಶೇಷ ಪ್ರತಿಭೆಗೆ ತಕ್ಕ ಅವಕಾಶ ದೊರೆಯುತ್ತದೆ. ವಾದ ವಿವಾದಗಳಿಗೆ ಬೇಸರ ಮಾಡಿಕೊಳ್ಳದೆ ಹಾಸ್ಯವಾಗಿ ತೆಗೆದುಕೊಳ್ಳುವಿರಿ. ಪರೋಪಕಾರದ ಗುಣವು ಹಿರಿಯರಿಂದ ಬಳುವಳಿಯಾಗಿ ಬಂದಿದೆ. ಸಂಗಾತಿಯ ಕಾರ್ಯಶ್ರದ್ದೆಯಿಂದ ನಿಮಗೆ ಉತ್ತಮ ಫಲಗಳು ದೊರೆಯಲಿವೆ. ಆದಾಯದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ಹೆಣ್ಣು ಮಕ್ಕಳಿಗೆ ವಿಶೇಷವಾದ ಶುಭಫಲಗಳು ದೊರೆಯುತ್ತವೆ. ನೋಡಲು ಚೆನ್ನಾಗಿ ಕಾಣುವ ವಸ್ತುಗಳನ್ನು ಇಷ್ಟಪಡುವಿರಿ. ಯಾವುದೇ ಕೆಲಸ ಕಾರ್ಯಗಳು ಮಾಡಿದರು ಯಶಸ್ಸು ಇರಲಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ತಿಳಿಹಸಿರು

ವೃಷಭ ರಾಶಿ

ಯೋಜಿತ ರೀತಿಯಲ್ಲಿ ಕೆಲಸ ಮಾಡುವ ಕಾರಣ ಯಶಸ್ಸು ದೊರೆಯುತ್ತದೆ. ಜೀವನದಲ್ಲಿ ಉತ್ತಮ ಪ್ರಗತಿ ಕಾಣುವಿರಿ. ನಿಮ್ಮ ಸಲಹೆ ಸೂಚನೆಯನ್ನು ಎಲ್ಲರೂ ಒಪ್ಪುತ್ತಾರೆ. ಸಮಾಜದ ನಾಯಕ ಸ್ಥಾನವನ್ನು ಅಲಂಕರಿಸುವಿರಿ. ಅಜೀರ್ಣತೆಯ ತೊಂದರೆಯಿಂದ ಬಳಲುವಿರಿ. ಜಗಳಕ್ಕೆ ಆಸ್ಪದ ನೀಡದೆ ಎದುರಾಗುವ ಸಮಸ್ಯೆಗಳನ್ನು ಮಾತಿನ ಮೂಲಕ ಬಗೆಹರಿಸುವಿರಿ. ನಿಮಗೆ ಹೆಚ್ಚಾದ ಆತ್ಮವಿಶ್ವಾಸವಿರುತ್ತದೆ. ಎಷ್ಟೇ ಕಷ್ಟವಾದರೂ ಗೌರವವನ್ನು ಕಾಪಾಡಿಕೊಳ್ಳಿ. ಕುಟುಂಬದ ಕ್ಷೇಮವನ್ನು ಕಾಪಾಡುವಿರಿ. ನಿಮ್ಮಲ್ಲಿ ಅಪರೂಪದ ಬುದ್ಧಿವಂತಿಗೆ ಇರುತ್ತದೆ. ನವಜಾತ ಶಿಶುಗಳ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಸೋದರಿಯ ಜೊತೆ ಹಣದ ವಿಚಾರವಾಗಿ ಮನಸ್ತಾಪ ಉಂಟಾಗುತ್ತದೆ.

ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ನಸುಗೆಂಪು

ಮಿಥುನ ರಾಶಿ

ಕೆಲಸದ ಸಲುವಾಗಿ ಹಲವಾರು ಸ್ಥಳಗಳಿಗೆ ಭೇಟಿ ನೀಡುವಿರಿ. ಕುಟುಂಬದ ಹಿರಿಯರ ಸಲಹೆ ಸೂಚನೆಯನ್ನು ಪಾಲಿಸುವಿರಿ. ತಂದೆ ತಾಯಿಯ ಜೊತೆ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಪ್ರತಿಯೊಂದು ವಿಚಾರದಲ್ಲಿಯೂ ನಿಮ್ಮದೇ ಆದ ಚಿಂತನೆ ಇರುತ್ತದೆ. ಬಂಧು ಬಳಗದವರಿಂದ ದೂರ ಉಳಿಯುವಿರಿ. ಗೃಹಿಣಿಯರು ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ಯೋಜನೆಯನ್ನು ರೂಪಿಸುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಕುಟುಂಬದಲ್ಲಿ ಒಮ್ಮತದ ಕೊರತೆ ಇರುತ್ತದೆ. ಸುಂದರವಾದ ಮನೆಯನ್ನು ಕೊಳ್ಳುವ ಯೋಚನೆ ಮೂಡುತ್ತದೆ. ಸೋದರಿಗೆ ಅನಾರೋಗ್ಯ ವಿರುತ್ತದೆ. ದಂಪತಿಗಳ ನಡುವೆ ಅನಾವಶ್ಯಕವಾದ ವಿವಾದಗಳು ಎದುರಾಗಲಿವೆ.

ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಕಟಕ ರಾಶಿ

ಕುಟುಂಬದ ಆಸ್ತಿಯ ವಿವಾದದಲ್ಲಿ ಜಯಗಳಿಸುವಿರಿ. ಹೊಸ ವಾಹನವನ್ನು ಕೊಳ್ಳುವಿರಿ. ಇರುವ ಮನೆಯನ್ನು ವಿಸ್ತರಿಸುವಿರಿ. ಹಣ ಸಂಗ್ರಹ ಮಾಡುವಿರಿ. ಉದ್ಯೋಗದಲ್ಲಿ ಅನಾವಶ್ಯಕವಾದ ಅಡಚಣೆಗಳು ಎದುರಾಗುತ್ತವೆ. ಕುಟುಂಬದ ಕೆಲಸ ಕಾರ್ಯಗಳಲ್ಲಿ ಆಸಕ್ತಿ ವಹಿಸುವುದಿಲ್ಲ, ಪರೋಕ್ಷವಾಗಿ ಜನೋಪಕಾರಿ ಕೆಲಸವನ್ನು ಮಾಡುವಿರಿ. ಕಷ್ಟ ಎನಿಸಿದರು ಯಾವುದೇ ಕೆಲಸವನ್ನು ಮನಸ್ಸಿಟ್ಟು ಮಾಡುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಆತ್ಮೀಯರೊಬ್ಬರ ಸಹಾಯದಿಂದ ಉದ್ಯೋಗವನ್ನು ಬದಲಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ.

ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.