Horoscope Today: ಉತ್ತಮ ಆದಾಯವಿದ್ದರೂ ಹಣದ ಕೊರತೆ, ಶೀತದ ತೊಂದರೆ ಇರುತ್ತೆ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ
18 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (18h June 2024 Horoscope).

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (18th June 2024 Horoscope)
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಮಂಗಳವಾರ
ತಿಥಿ: ದ್ವಾದಶಿ ಬೆ 05.19ರವರೆಗೂ ಇರುತ್ತದೆ. ಆನಂತರ ತ್ರಯೋದಶಿ ಆರಂಭವಾಗುತ್ತದೆ.
ನಕ್ಷತ್ರ: ಸ್ವಾತಿ ನಕ್ಷತ್ರವು ಮಧ್ಯಾಹ್ನ 02.25 ರವರೆಗೆ ಇದ್ದು, ಆನಂತರ ವಿಶಾಖ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ: ಬೆ.05.52
ಸೂರ್ಯಾಸ್ತ: ಸ.06.47
ರಾಹುಕಾಲ: ಮಧ್ಯಾಹ್ನ 03.37 ರಿಂದ ಸಂಜೆ 05.13
ಸಿಂಹ ರಾಶಿ
ಸುತ್ತಮುತ್ತಲಿರುವ ಪ್ರಾಣಿ ಪಕ್ಷಿಗಳಿಗೆ ಆಹಾರದ ವ್ಯವಸ್ಥೆ ಮಾಡುವಿರಿ. ನಿಮ್ಮ ಕುಟುಂಬದಲ್ಲಿ ಸ್ರೀಯರಿಗೆ ವಿಶೇಷವಾದಂತಹ ಸ್ಥಾನ ಮಾನ ದೊರೆಯುತ್ತದೆ. ನವ ವಿವಾಹಿತರಿಗೆ ವಿಶೇಷವಾದಂತಹ ಅನುಕೂಲತೆಗಳು ದೊರೆಯಲಿವೆ. ಆತುರಪಡದೆ ಉತ್ತಮ ಜೀವನಕ್ಕಾಗಿ ಹಣವನ್ನು ಉಳಿಸುವಿರಿ. ಆದರೆ ಉದ್ಯೋಗದಲ್ಲಿ ಅನಾವಶ್ಯಕವಾದ ಅಡೆ ತಡೆಗಳಿರುತ್ತವೆ. ಇದರಿಂದಾಗಿ ಕೆಲಸ ಮಾಡಲು ಆಸಕ್ತಿ ಮೂಡುವುದಿಲ್ಲ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರಮಾನ ವಿರುತ್ತದೆ. ಗುರು ಹಿರಿಯರ ಸಲಹೆ ನಿಮ್ಮನ್ನು ಸರಿ ಹಾದಿಯಲ್ಲಿ ನಡೆಸುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಆಕಾಶನೀಲಿ
ಕನ್ಯಾ ರಾಶಿ
ಶೀತದ ತೊಂದರೆ ಇರುತ್ತದೆ. ಸಮಾನ ಮನಸ್ಕರ ಸಹವಾಸ ಉಂಟಾಗುತ್ತದೆ. ನಿಮ್ಮ ಪ್ರಯತ್ನದಿಂದ ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಸಮಾಜದಲ್ಲಿ ಉನ್ನತ ಕೀರ್ತಿ ಪಡೆಯುವಿರಿ. ವಯೋವೃದ್ಧರಿಗೆ ವಿಟಮಿನ್ ಕೊರತೆಯಿಂದ ಇರುತ್ತದೆ. ತಂದೆಯವರಿಗೆ ಉದ್ಯೋಗದಲ್ಲಿ ಬಡ್ತಿ ದೊರೆಯುತ್ತದೆ. ಧಾರ್ಮಿಕ ಗುರುಗಳ ಆಶೀರ್ವಾದ ದೊರೆಯುತ್ತದೆ. ಹಣದ ಕೊರತೆ ಉಂಟಾಗುತ್ತದೆ. ಆದರೆ ನೀವು ಮಾಡಿದ ಸಹಾಯವನ್ನು ನೆನೆದು ಆತ್ಮೀಯರು ನಿಮಗೆ ನೆರವಾಗುತ್ತಾರೆ. ಕೆಲಸದ ನಡುವೆ ವಿಶ್ರಾಂತಿಯನ್ನು ಬಯಸುವಿರಿ. ಉದ್ಯೋಗದಲ್ಲಿ ಮಾನಸಿಕ ನೆಮ್ಮದಿ ಇರುವುದಿಲ್ಲ. ಹೊಂದಾಣಿಕೆಯ ಗುಣವು ನಿಮ್ಮನ್ನು ಅಪಾಯದಿಂದ ಪಾರು ಮಾಡುತ್ತದೆ.
ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 7
ಅಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ರಕ್ತದ ಬಣ್ಣ
ತುಲಾ ರಾಶಿ
ಶಾಂತಿ ನೆಮ್ಮದಿಯಿಂದ ಜೀವನ ನಡೆಸುವಿರಿ. ಉತ್ತಮ ಆದಾಯವಿದ್ದರೂ ಹಣದ ಕೊರತೆ ಕಂಡು ಬರುತ್ತದೆ. ಅಡ್ಡಿ ಆತಂಕಗಳು ಎದುರಾದರು ಬುದ್ಧಿವಂತಿಕೆಯಿಂದ ಪಾರಾಗುವಿರಿ. ದೀರ್ಘ ಕಾಲದ ಪ್ರವಾಸಕ್ಕೆ ತೆರಳುವಿರಿ. ತಾಯಿಯವರಿಗೆ ಅನಾರೋಗ್ಯವಿರುತ್ತದೆ. ಕೋಪವನ್ನು ಕಡಿಮೆ ಮಾಡಿಕೊಳ್ಳುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ. ವಿದ್ಯಾರ್ಥಿಗಳಿಗೆ ಕಲಿಕೆಯ ಅವಧಿಯಲ್ಲಿ ಉದ್ಯೋಗ ಲಭಿಸುತ್ತದೆ. ವಾಸ ಸ್ಥಳವನ್ನು ಬದಲಿಸುವಿರಿ. ಯುವತಿಯರಿಗೆ ವಿಶೇಷವಾದಂತಹ ಲಾಭವಿದೆ.
ಪರಿಹಾರ: ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ ಎಲೆಹಸಿರು ಬಣ್ಣ
ವೃಶ್ಚಿಕ ರಾಶಿ
ಉತ್ತಮ ಮಟ್ಟದಲ್ಲಿ ಜೀವನವನ್ನು ನಡೆಸಿ ಎಲ್ಲರಿಗೂ ಮಾದರಿಯಾಗುವಿರಿ. ಹೆಚ್ಚಿನ ಪರಿಶ್ರಮದಿಂದ ಮಾತ್ರ ವಿದ್ಯಾರ್ಥಿಗಳು ಯಶಸ್ಸನ್ನು ಗಳಿಸಲು ಸಾಧ್ಯ. ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ನಿರಾಸೆಯ ವೇಳೆ ಉದ್ವೇಗದಿಂದ ವರ್ತಿಸುವಿರಿ. ಸಾರ್ವಜನಿಕರ ನಡುವೆ ನಾಯಕನಾಗಿ ಬಾಳುವಿರಿ. ಶುಭಕರ ಫಲಿತಾಂಶಗಳಿದ್ದರೂ ಅನಾವಶ್ಯಕವಾಗಿ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ವಿವಾದವು ಕೊನೆಯಾಗುತ್ತದೆ. ನಿಮ್ಮ ಮನಸ್ಸಿಗೆ ಹತ್ತಿರವಾಗುವಂತಹ ದಿನದೊಂದಿಗೆ ಸ್ನೇಹವನ್ನು ಬೆಳೆಸುವಿರಿ. ಅನಿರೀಕ್ಷಿತವಾಗಿ ತೊಂದರೆಯೊಂದನ್ನು ಎದುರಿಸಬೇಕಾಗುತ್ತದೆ. ಬೇರೆಯವರ ಮೇಲೆ ಅವಲಂಬಿಸದೆ ಸ್ವತಂತ್ರವಾಗಿ ಜೀವನ ನಿರ್ವಹಿಸುವಿರಿ.
ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಕೇಸರಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
