ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today:ಕುಟುಂಬದಲ್ಲಿ ನೆಮ್ಮದಿ ಇರುತ್ತೆ, ಯಾರನ್ನೂ ಸುಲಭವಾಗಿ ನಂಬಲ್ಲ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

Horoscope Today:ಕುಟುಂಬದಲ್ಲಿ ನೆಮ್ಮದಿ ಇರುತ್ತೆ, ಯಾರನ್ನೂ ಸುಲಭವಾಗಿ ನಂಬಲ್ಲ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

18 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (18th June 2024 Horoscope).

 ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (18th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ದ್ವಾದಶಿ ಬೆ 05.19ರವರೆಗೂ ಇರುತ್ತದೆ. ಆನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ: ಸ್ವಾತಿ ನಕ್ಷತ್ರವು ಮಧ್ಯಾಹ್ನ 02.25 ರವರೆಗೆ ಇದ್ದು, ಆನಂತರ ವಿಶಾಖ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆ.05.52

ಸೂರ್ಯಾಸ್ತ: ಸ.06.47

ರಾಹುಕಾಲ: ಮಧ್ಯಾಹ್ನ 03.37 ರಿಂದ ಸಂಜೆ 05.13

ಧನಸ್ಸು ರಾಶಿ

ಸ್ಥಿರವಾದ ಮಾತಿನಿಂದ ಮತ್ತು ಮನಸ್ಸಿನಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಹಣಕಾಸಿನ ವಿಚಾರದಲ್ಲಿ ವಿಶೇಷ ಲಾಭವಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮತ್ತು ಆದಾಯವನ್ನು ಸರಿದೋಗಿಸಿಕೊಂಡು ಹೋಗುವಿರಿ. ದಿನನಿತ್ಯದ ವ್ಯವಹಾರದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಕುಟುಂಬದ ಜವಾಬ್ದಾರಿಗಳನ್ನು ಸುಲಭವಾಗಿ ಪೂರ್ಣಗೊಳಿಸುವಿರಿ. ಬುದ್ಧಿವಂತಿಕೆಯಿಂದ ಹಣವನ್ನು ಸಂಪಾದಿಸುವಿರಿ. ಅನಾರೋಗ್ಯವಿರುತ್ತದೆ. ಜೀವನದಲ್ಲಿದ್ದ ತೊಂದರೆಗಳು ಮರೆಯಾಗುತ್ತವೆ. ಕುಟುಂಬದಲ್ಲಿ ಅನಾವಶ್ಯಕ ಅಡೆತಡೆಗಳು ಬೇಸರವನ್ನು ಉಂಟುಮಾಡುತ್ತದೆ. ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆ ಇರುವುದಿಲ್ಲ. ಅವಿವಾಹಿತರಿಗೆ ಸಂಬಂಧದಲ್ಲಿ ವಿವಾದ ವಿವಾಹವಾಗುತ್ತದೆ. ಮಕ್ಕಳ ವಿಚಾರವಾಗಿ ದಂಪತಿಗಳ ನಡುವೆ ವಾದ ವಿವಾದವಿರುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮಕರ ರಾಶಿ

ತಪ್ಪು ಅಭಿಪ್ರಾಯದಿಂದ ಸಂಬಂಧಿಕರೊಬ್ಬರು ನಿಮ್ಮಿಂದ ದೂರವಾಗುತ್ತಾರೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ಉದ್ಯೋಗದಲ್ಲಿ ಧನಾತ್ಮಕ ರೀತಿಯಲ್ಲಿ ಆಂತರಿಕ ಬದಲಾವಣೆಗಳಾಗುತ್ತವೆ. ಹಿರಿಯ ಅಧಿಕಾರಿಗಳ ಸಂಪರ್ಕ ದೊರೆಯುತ್ತದೆ. ಶಾಂತಿ ನೆಮ್ಮದಿಯ ಜೀವನ ಇರುತ್ತದೆ. ದಂಪತಿಗಳ ನಡುವಿನ ಬೇಸರವು ಮರೆಯಾಗುತ್ತದೆ. ಮಾನಸಿಕ ನೆಮ್ಮದಿ ಇರುತ್ತದೆ. ಹಣದ ತೊಂದರೆ ಇರುವುದಿಲ್ಲ. ಬಾಳ ಸಂಗಾತಿಗೆ ಅನಾರೋಗ್ಯವಿರುತ್ತದೆ. ಸಣ್ಣ ಪುಟ್ಟ ವಿಚಾರಗಳಿಗೂ ಕೋಪದಿಂದ ವರ್ತಿಸುವಿರಿ. ಮಾಡದ ತಪ್ಪು ನಿನ್ನನ್ನು ಬಾಧಿಸುತ್ತದೆ. ಬೇರೆಯವರಿಂದ ಹಣದ ಸಹಾಯ ದೊರೆಯುತ್ತದೆ. ಕುಟುಂಬದಲ್ಲಿ ಶುಭ ಕಾರ್ಯವೊಂದು ನಡೆಯಲಿದೆ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಕುಂಭ ರಾಶಿ

ವಿದ್ಯಾರ್ಥಿಗಳು ಅಭ್ಯಾಸದ ಬಗ್ಗೆ ಹೆಚ್ಚಿನ ಶ್ರದ್ಧೆ ತೋರಬೇಕು. ಹಣದ ಕೊರತೆ ಕಂಡು ಬರುತ್ತದೆ. ಆದರೂ ಯಾವುದೇ ತೊಂದರೆಯಾಗದಂತೆ ನಿರ್ವಹಿಸುವಿರಿ. ಅನಾವಶ್ಯಕವಾದ ವಿವಾದಗಳಿರುತ್ತವೆ. ಯಾವುದೇ ಕೆಲಸ ಕಾರ್ಯಗಳಾದರೂ ಹೆಚ್ಚಿನ ಪ್ರಯತ್ನದಿಂದ ಮಾತ್ರ ಯಶಸ್ವಿಗೊಳಿಸಲು ಸಾಧ್ಯ. ಹಣಕಾಸಿನ ವಿಚಾರದಲ್ಲಿ ವಿವಾದ ಒಂದರಲ್ಲಿ ಸಿಲುಕುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಮನದಲ್ಲಿರುವ ಯೋಚನೆಯನ್ನು ಯಾರಿಗೂ ಹೇಳಿಕೊಳ್ಳುವುದಿಲ್ಲ. ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಸ್ನೇಹಿತರೊಬ್ಬರು ನಿಮ್ಮೊಂದಿಗೆ ವ್ಯಾಪಾರವೊಂದನ್ನು ಆರಂಭಿಸುತ್ತಾರೆ. ವಿದೇಶ ಪ್ರಯಾಣ ಯೋಗವಿದೆ. ದಂಪತಿಗಳ ನಡುವೆ ಅನಾವಶ್ಯಕ ಸಮಸ್ಯೆಗಳು ಉದ್ಭವಿಸುತ್ತದೆ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಮೀನ ರಾಶಿ

ಆದಾಯವು ಕಡಿಮೆಯಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಯೋಚನೆ ಇರುತ್ತದೆ. ನಿಮ್ಮ ಆಪ್ತರೊಬ್ಬರು ನಿಮ್ಮಿಂದ ದೂರವಾಗುತ್ತಾರೆ. ನಿಮ್ಮ ಆಶೋತ್ತರಗಳು ಈಡೇರಲಿವೆ. ಕಷ್ಟ ನಷ್ಟಗಳನ್ನು ಪರಿಗಣಿಸದೆ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಜೀವನದಲ್ಲಿ ನಿಧಾನವಾಗಿ ಅಭಿವೃದ್ಧಿಯ ಹಾದಿಯಲ್ಲಿ ಸಾಗುವಿರಿ. ಅನಿರೀಕ್ಷಿತವಾಗಿ ಎದುರಾಗುವ ಬದಲಾವಣೆಗಳಿಗೆ ಹೊಂದಿಕೊಂಡು ಬಾಳುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭವಿರುತ್ತದೆ. ಐಷಾರಾಮಿ ಜೀವನಕ್ಕೆ ಮಾರು ಹೋಗುವಿರಿ. ಸಂಗೀತ ನಾಟ್ಯದಂತಹ ಪ್ರಾಚೀನ ಕಲೆಗಳು ನಿಮಗೆ ಸಿದ್ಧಿಸುತ್ತವೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)