ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ನೂತನ ದಂಪತಿಗಳಿಗೆ ಶುಭಫಲ, ಅನಿರೀಕ್ಷಿತ ಧನಲಾಭ; ಸಿಂಹದಿಂದ ವೃಶ್ಚಿಕರಾಶಿವರೆಗಿನ ದಿನಭವಿಷ್ಯ

Horoscope Today: ನೂತನ ದಂಪತಿಗಳಿಗೆ ಶುಭಫಲ, ಅನಿರೀಕ್ಷಿತ ಧನಲಾಭ; ಸಿಂಹದಿಂದ ವೃಶ್ಚಿಕರಾಶಿವರೆಗಿನ ದಿನಭವಿಷ್ಯ

18 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (18th May 2024 Daily Horoscope).

ನೂತನ ದಂಪತಿಗಳಿಗೆ ಶುಭಫಲ, ಅನಿರೀಕ್ಷಿತ ಧನಲಾಭ; ಸಿಂಹದಿಂದ ವೃಶ್ಚಿಕರಾಶಿವರೆಗಿನ ದಿನಭವಿಷ್ಯ
ನೂತನ ದಂಪತಿಗಳಿಗೆ ಶುಭಫಲ, ಅನಿರೀಕ್ಷಿತ ಧನಲಾಭ; ಸಿಂಹದಿಂದ ವೃಶ್ಚಿಕರಾಶಿವರೆಗಿನ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (18th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲಪಕ್ಷ, ಶನಿವಾರ

ತಿಥಿ: ದಶಮಿ ಬೆಳ್ಳಿಗ್ಗೆ 10.48 ರವರೆಗೂ ಇರುತ್ತದೆ. ಅನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ: ಉತ್ತರ ನಕ್ಷತ್ರವು ರಾತ್ರಿ 11.56 ರವರೆಗೂ ಇರುತ್ತದೆ. ಅನಂತರ ಹಸ್ತ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 5.53

ಸೂರ್ಯಾಸ್ತ: ಸಂಜೆ 6.38

ರಾಹುಕಾಲ: ಬೆಳಿಗ್ಗೆ 9.09 ರಿಂದ ಬೆಳಿಗ್ಗೆ 10.44

ರಾಶಿಫಲ

ಸಿಂಹ

ಆತ್ಮವಿಶ್ವಾಸ ಹೆಚ್ಚಾಗಿದ್ದರೂ ಆಂತರಿಕವಾದ ಯೋಚನೆಗಳು ಇರಲಿವೆ. ಯಾವುದೇ ಒತ್ತಡವನ್ನು ಎದುರಿಸಲು ಹಿಂಜರಿಯುವುದಿಲ್ಲ. ಆಸಕ್ತಿಯಿಂದ ಕೆಲಸ ಕಾರ್ಯಗಳನ್ನು ಆರಂಭಿಸುವ ಕಾರಣ ಸೋಲಿನ ಭಯವಿರುವುದಿಲ್ಲ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು ಉಂಟಾಗುತ್ತದೆ. ಆದರೆ ಕುಟುಂಬದವರ ಸಹಾಯ ನಿಮಗಿರುತ್ತದೆ. ಮನೆಯ ಜನರೊಂದಿಗೆ ಪ್ರೀತಿ ವಿಶ್ವಾಸದಿಂದ ದಿನ ಕಳೆಯುವಿರಿ. ಚಾಡಿ ಮಾತನ್ನು ಕೇಳಿ ಸಂಗಾತಿಯೊಂದಿಗೆ ಜಗಳವಾಡಬಹುದು. ಆರಂಭಿಸಬೇಕಾದ ಹಲವು ಕೆಲಸ ಕಾರ್ಯಗಳನ್ನು ಮುಂದೂಡುವಿರಿ. ನೂತನ ದಂಪತಿಗಳಿಗೆ ಅನಿರೀಕ್ಷಿತ ಶುಭಫಲಗಳು ದೊರೆಯಲಿವೆ. ಉದ್ಯೋಗ ಬದಲಿಸುವ ಮನಸ್ಸಿದ್ದರೂ ಸಾಧ್ಯವಾಗುವುದಿಲ್ಲ. ಸಂಪ್ರದಾಯಿಕ ಕಲೆಗಳಲ್ಲಿ ವಿಶೇಷವಾದ ಆಸಕ್ತಿ ಮೂಡುತ್ತದೆ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಕನ್ಯಾ

ಮನಸ್ಸಿನಲ್ಲಿರುವ ಬೇಸರ ದೂರಾಗಲು ಮನರಂಜನೆಯನ್ನು ಆಶ್ರಯಿಸುವಿರಿ. ಕುಟುಂಬ ಸದಸ್ಯರ ಜೊತೆಯಲ್ಲಿ ವಿಹಾರಧಾಮಕ್ಕೆ ಭೇಟಿ ನೀಡುವಿರಿ. ಹಣದ ತೊಂದರೆ ಇರದೇ ಹೋದರು ಮಾನಸಿಕ ಒತ್ತಡ ನಿಮ್ಮನ್ನು ಕಾಡುತ್ತದೆ. ಬೇರೆಯವರ ಮನಸ್ಸನ್ನು ಅರ್ಥ ಮಾಡಿಕೊಳ್ಳುವ ಕಾರಣ ವಾದ ವಿವಾದಗಳು ದೂರಾಗುತ್ತವೆ. ಸಂಗಾತಿಯೊಂದಿಗೆ ದೀರ್ಘಕಾಲದ ಪ್ರವಾಸಕ್ಕೆ ಹೊರಡುವಿರಿ. ಸಮಾಜದಲ್ಲಿ ಉನ್ನತ ಸ್ಥಾನಮಾನ ಮತ್ತು ಗೌರವ ದೊರೆಯುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಉಂಟಾಗುವುದಿಲ್ಲ. ನಿಮ್ಮ ಕಾರ್ಯ ಯೋಜನೆಗಳು ಸುಲಭವಾಗಿ ಕೈಗೂಡುತ್ತವೆ. ದಂಪತಿಗಳ ನಡುವೆ ಉತ್ತಮ ಮನೋಭಾವನೆ ಇರುತ್ತದೆ. ಅನಿರೀಕ್ಷಿತ ಧನಲಾಭವಿರುತ್ತದೆ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಬಿಳಿ ಬಣ್ಣ

ತುಲಾ

ಹೊಸ ನಿರೀಕ್ಷೆಗಳು ಇರುವ ಕಾರಣ ನೆಮ್ಮದಿ ಇರುತ್ತದೆ. ಕೌಟುಂಬಿಕ ಜೀವನದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ. ನಿಮ್ಮಲ್ಲಿರುವ ವಿನಮ್ರ ಭಾವನೆ ಎಲ್ಲರನ್ನೂ ಆಕರ್ಷಿಸುತ್ತದೆ. ನಕಾರಾತ್ಮಕ ಭಾವನೆಗಳನ್ನು ತೊರೆದು ಜೀವನ ನಡೆಸುವಿರಿ. ಹಣದ ಬಗ್ಗೆ ಯೋಚಿಸದೆ ಮಿತಿಮೀರಿ ಖರ್ಚು ಮಾಡುವಿರಿ. ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಕುಟುಂಬದ ಹಿರಿಯರ ಸಹಾಯದಿಂದ ಜೀವನದ ಸಮಸ್ಯೆಗಳನ್ನು ಎದುರಿಸುತ್ತೀರಿ. ನಿರೀಕ್ಷಿತ ಕೆಲಸ ಕಾರ್ಯವೊಂದು ನಿಧಾನಗತಿಯಲ್ಲಿ ಸಾಗುತ್ತದೆ. ಸಂಗಾತಿಯೊಂದಿಗೆ ಉತ್ತಮ ಒಡನಾಟ ಇರುವುದಿಲ್ಲ. ಅನಾವಶ್ಯಕ ವಾದವಿವಾದಗಳು ಬೇಸರವನ್ನು ಮೂಡಿಸುತ್ತದೆ.

ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಬೂದುಬಣ್ಣ

ವೃಶ್ಚಿಕ

ನಿಮ್ಮಲ್ಲಿನ ಅಚಲವಾದ ವಿಶ್ವಾಸವು ಹೊಸ ಆಯಾಮವನ್ನು ಸೃಷ್ಟಿಸುತ್ತದೆ. ದೊರೆಯುವ ಉತ್ತಮ ಉದ್ಯೋಗಾವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸಿ. ಕುಟುಂಬದ ಹಿರಿಯರ ಸಹಾಯ ಸಹಕಾರ ನಿಮಗೆ ದೊರೆಯುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಮೆಚ್ಚುಗೆ ಮತ್ತು ಬೆಂಬಲ ನಿಮ್ಮದಾಗುತ್ತದೆ. ಕಷ್ಟವೆನಿಸಿದರು ಮುಂದಿನ ಜೀವನಕ್ಕಾಗಿ ಹಣವನ್ನು ಉಳಿಸುವಿರಿ. ಮನದಲ್ಲಿ ಸ್ವಾರ್ಥದ ಬುದ್ಧಿ ಇಲ್ಲದೆ ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಸಂಗಾತಿಯ ಒಲುಮೆ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಹಣದ ಪರಿಸ್ಥಿತಿಯು ಉನ್ನತ ಮಟ್ಟ ತಲುಪುತ್ತದೆ. ಸಮಾಜ ಕಾರ್ಯಗಳಿಗಾಗಿ ಗಳಿಸಿದ ಹಣವನ್ನು ವಿನಿಯೋಗಿಸುವಿರಿ.

ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಂದು ಬಣ್ಣ

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

 

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)