ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅನಾರೋಗ್ಯ ಕಾಡಲಿದೆ, ಸಂಗಾತಿಯ ಮಾತಿನಿಂದ ಮನಸ್ಸಿಗೆ ಬೇಸರ; ಧನುರಾಶಿಯಿಂದ ಮೀನದವರೆಗೆ ರಾಶಿಭವಿಷ್ಯ

Horoscope Today: ಅನಾರೋಗ್ಯ ಕಾಡಲಿದೆ, ಸಂಗಾತಿಯ ಮಾತಿನಿಂದ ಮನಸ್ಸಿಗೆ ಬೇಸರ; ಧನುರಾಶಿಯಿಂದ ಮೀನದವರೆಗೆ ರಾಶಿಭವಿಷ್ಯ

18ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (18th May 2024 Daily Horoscope).

ಅನಾರೋಗ್ಯ ಕಾಡಲಿದೆ, ಸಂಗಾತಿಯ ಮಾತಿನಿಂದ ಮನಸ್ಸಿಗೆ ಬೇಸರ; ಧನುರಾಶಿಯಿಂದ ಮೀನದವರೆಗೆ ರಾಶಿಭವಿಷ್ಯ
ಅನಾರೋಗ್ಯ ಕಾಡಲಿದೆ, ಸಂಗಾತಿಯ ಮಾತಿನಿಂದ ಮನಸ್ಸಿಗೆ ಬೇಸರ; ಧನುರಾಶಿಯಿಂದ ಮೀನದವರೆಗೆ ರಾಶಿಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(18th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲಪಕ್ಷ, ಶನಿವಾರ

ತಿಥಿ: ದಶಮಿ ಬೆಳ್ಳಿಗ್ಗೆ 10.48 ರವರೆಗೂ ಇರುತ್ತದೆ. ಅನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ: ಉತ್ತರ ನಕ್ಷತ್ರವು ರಾತ್ರಿ 11.56 ರವರೆಗೂ ಇರುತ್ತದೆ. ಅನಂತರ ಹಸ್ತ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 5.53

ಸೂರ್ಯಾಸ್ತ: ಸಂಜೆ 6.38

ರಾಹುಕಾಲ: ಬೆಳಿಗ್ಗೆ 9.09 ರಿಂದ ಬೆಳಿಗ್ಗೆ 10.44

ರಾಶಿಫಲ

ಧನಸ್ಸು

ಅನಾರೋಗ್ಯದ ತೊಂದರೆ ಬಹುವಾಗಿ ಕಾಡಲಿದೆ. ಶುಚಿ-ರುಚಿಯಾದ ಆಹಾರದಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಮನಸ್ಸಿನ ಭಾವನೆಗಳಿಗೆ ಬೆಲೆ ನೀಡುವಿರಿ. ಬಂಡವಾಳದಿಂದ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸುವಿರಿ. ಮಕ್ಕಳ ಜೊತೆಯಲ್ಲಿ ಸಂತೋಷದಿಂದ ದಿನ ಕಳೆಯುವಿರಿ. ದಾಂಪತ್ಯದಲ್ಲಿದ್ದ ಮನಸ್ತಾಪ ಮರೆಯಾಗಲಿದೆ. ಆತ್ಮೀಯರಿಗೆ ಉತ್ತಮ ಸಲಹೆ ನೀಡಿ ಸಮಸ್ಯೆಗಳನ್ನು ದೂರ ಮಾಡುವಿರಿ. ಅನಿವಾರ್ಯವೆನಿಸಿದರೆ ಉದ್ಯೋಗ ಬದಲಿಸುವ ತೀರ್ಮಾನ ತೆಗೆದುಕೊಳ್ಳಿ. ನಿಮಗೆ ತೊಂದರೆ ನೀಡುವ ಜನರು ಕಷ್ಟಕ್ಕೆ ಸಿಲುಕುತ್ತಾರೆ. ಒಳ್ಳೆಯ ಅಭ್ಯಾಸಗಳಿಂದ ಜನಮನ್ನಣೆ ಗಳಿಸುವಿರಿ. ಸಂಬಂಧಿಕರ ವಿವಾಹದ ಸಂಪೂರ್ಣ ಜವಾಬ್ದಾರಿಯನ್ನು ಒಪ್ಪಿಕೊಳ್ಳುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಅನಾವಶ್ಯಕ ವಾದ ವಿವಾದಗಳು ಎದುರಾಗುತ್ತವೆ.

ಪರಿಹಾರ: ಪುಟ್ಟ ಮಕ್ಕಳಿಗೆ ಬೆಣ್ಣೆ ನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಮಕರ

ಆನಂದಮಯ ಜೀವನ ನಿಮ್ಮದಾಗುತ್ತದೆ. ಅನಾವಶ್ಯಕ ಚಿಂತೆ ಮಾಡುವುದಿಲ್ಲ. ಸ್ವಲ್ಪ ತಡವೆನಿಸಿದರೂ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ವಿದೇಶಿ ಸಂಬಂಧಿತ ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಎಲ್ಲರ ಮನಸ್ಸನ್ನು ಅರ್ಥ ಮಾಡಿಕೊಂಡು ನಡೆಯುವ ಕಾರಣ ಯಾವುದೇ ತೊಂದರೆ ಎದುರಾಗದು. ದಾಂಪತ್ಯ ಜೀವನದಲ್ಲಿ ಸಂತಸದ ಗಳಿಗೆಗಳು ಇರಲಿವೆ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳು ಅನುಕೂಲಕರವಾಗುತ್ತವೆ. ಸಹೋದ್ಯೋಗಿಗಳ ಸಹಾಯದಿಂದ ಎದುರಾಗಿದ್ದ ತೊಂದರೆಯೂ ದೂರವಾಗುತ್ತದೆ. ಆರೋಗ್ಯದ ಬಗ್ಗೆ ಗಮನವಿರಲಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನವಿರುತ್ತದೆ. ನಿಮ್ಮ ಮಾತನ್ನು ಅರ್ಥ ಮಾಡಿಕೊಳ್ಳದೆ ಕುಟುಂಬದ ಹಿರಿಯರು ಬೇಸರಗೊಳ್ಳುತ್ತಾರೆ.

ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಕುಂಭ

ನಿಮ್ಮಲ್ಲಿನ ಆತ್ಮವಿಶ್ವಾಸವು ಜೀವನಕ್ಕೆ ಹೊಸ ಅರ್ಥವನ್ನು ನೀಡುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿದೆ. ಆರ್ಥಿಕ ಸಬಲತೆಗೆ ಕುಟುಂಬದ ಹಿರಿಯರ ಸಹಾಯವು ಕಾರಣವಾಗುತ್ತದೆ. ಕುಟುಂಬದಲ್ಲಿ ಮಂಗಳ ಕಾರ್ಯ ಒಂದು ನಡೆಯಲಿದೆ. ಆಪ್ತರಿಗಾಗಿ ಸಂತೋಷಕೂಟವನ್ನು ಏರ್ಪಡಿಸುವಿರಿ. ಸಂಗಾತಿಯ ಮಾತುಕತೆಗಳಿಂದ ಮನಸ್ಸಿಗೆ ಬೇಸರ ಉಂಟಾಗುತ್ತದೆ. ಮಕ್ಕಳ ಆಟ ಪಾಠಗಳು ಸಂತೋಷದ ವಾತಾವರಣವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ತೃಪ್ತಿಕರ ಫಲಿತಾಂಶವನ್ನು ಪಡೆಯಲಿದ್ದಾರೆ. ನಿಮ್ಮಲ್ಲಿನ ಸಮರ್ಪಣಾ ಮನೋಭಾವ ಉದ್ಯೋಗದಲ್ಲಿ ಉನ್ನತ ಬದಲಾವಣೆಗಳನ್ನು ನೀಡುತ್ತವೆ. ಕೆಲಸ ಕಾಯದ ಒತ್ತಡ ನಿಮ್ಮನ್ನುಆವರಿಸುತ್ತದೆ. ಕುಟುಂಬದ ಸದಸ್ಯರೊಂದಿಗೆ ದಿನದ ಹೆಚ್ಚಿನ ಸಮಯವನ್ನು ಕಳೆಯುವಿರಿ.

ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನಸುಗೆಂಪು

ಮೀನ

ಆರೋಗ್ಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆಗಳಿವೆ. ಕೇವಲ ಆತ್ಮವಿಶ್ವಾಸದಿಂದ ಮಾತ್ರ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ. ಐಷಾರಾಮಿ ಜೀವನಕ್ಕೆ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಆದಾಯವನ್ನು ಹೆಚ್ಚಿಸಲು ವಿರಾಮದ ವೇಳೆ ಮತ್ತೊಂದು ಕೆಲಸವನ್ನು ಆರಂಭಿಸುವಿರಿ. ಸಂಗಾತಿಯ ಸಹಾಯದಿಂದ ನಿಮ್ಮ ನಿರೀಕ್ಷೆಗಳು ಕೈಗೂಡಲಿವೆ. ಆಧಾರವಿಲ್ಲದ ಮಾತುಕತೆಯಿಂದ ದೂರವಿರುವುದು ಒಳ್ಳೆಯದು. ರಕ್ತ ಸಂಬಂಧಿಕರಿಂದ ಒತ್ತಡದ ಸನ್ನಿವೇಶವು ಎದುರಾಗಲಿದೆ. ಬೇರೆಯವರಿಂದ ಹಣದ ಸಹಾಯವನ್ನು ಬಯಸುವುದಿಲ್ಲ. ಮಕ್ಕಳ ಜೀವನದಲ್ಲಿ ಹೊಸ ನಿರೀಕ್ಷೆಯೊಂದು ಮೂಡಲಿದೆ. ನಿರುದ್ಯೋಗಿಗಳಿಗೆ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನೀಲಿಮಿಶ್ರಿತ ಬಿಳಿ ಬಣ್ಣ

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

 

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)