ಕನ್ನಡ ಸುದ್ದಿ  /  Astrology  /  Horoscope Today Astrology Prediction 19 March 2024 Leo Virgo Libra Scorpio Daily Horoscope Sts

Horoscope Today: ಅವಿವಾಹಿತರಿಗೆ ದೊಡ್ಡ ಮನೆತನದವರ ಜೊತೆ ವಿವಾಹ ನಿಶ್ಚಯ, ವ್ಯಾಪಾರದಲ್ಲಿ ಲಾಭ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 19, ಮಂಗಳವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (19 March 2024 Daily Horoscope).

ಮಾರ್ಚ್​ 19ರ ದಿನಭವಿಷ್ಯ
ಮಾರ್ಚ್​ 19ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (19 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಮಂಗಳವಾರ

ತಿಥಿ : ದಶಮಿ ರಾ.02.46 ರವರೆಗು ಇರುತ್ತದೆ. ಆನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು ರಾ.10.41 ರವರೆಗೆ ಇರುತ್ತದೆ. ಆನಂತರ ಪುಷ್ಯ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.24

ಸೂರ್ಯಾಸ್ತ: ಸ.06.29

ರಾಹುಕಾಲ : ಮ.03.00 ರಿಂದ ಬೆ.04.30

ರಾಶಿ ಫಲಗಳು

ಸಿಂಹ

ಕುಟುಂಬದಲ್ಲಿ ಸಲಹೆ ನೀಡುವವರ ಸಂಖ್ಯೆ ಹೆಚ್ಚಾಗುತ್ತದೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಉದ್ಯೋಗದಲ್ಲಿ ಯಾವುದೆ ಬದಲಾವಣೆಗಳು ಕಾಣದು. ಮಾಡುವ ಪ್ರತಿ ಕೆಲಸದಲ್ಲಿಯೂ ಉನ್ನತ ಸ್ಥಾನಮಾನ ಗಳಿಸುವಿರಿ. ಅಧಿಕಾರದ ಆಸೆ ಇದ್ದಲ್ಲಿ ಯಶಸ್ಸನ್ನು ಕಾಣುವಿರಿ. ಸೇವಾಧಾರಿತ ವ್ಯಾಪಾರ ವ್ಯವಹಾರದಲ್ಲಿ ವಿಶೇಷ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆತರೆ ಮೇಲ್ಮಟ್ಟಕ್ಕೆ ಏರಲಿದ್ದಾರೆ. ಸರ್ಕಾರದ ಅನುದಾನದಲ್ಲಿ ಸಮಾಜಸೇವಾ ಸಂಘ ಸಂಸ್ಥೆಯನ್ನು ಆರಂಭಿಸುವಿರಿ. ಅವಿವಾಹಿತರಿಗೆ ದೊಡ್ಡ ಮನೆತನದವರ ಜೊತೆ ವಿವಾಹ ನಿಶ್ಚಯವಾಗಲಿದೆ. ಸಹನೆಯಿಂದ ಎಲ್ಲವನ್ನೂ ಗೆಲ್ಲಬಲ್ಲಿರಿ. ಧಾರ್ಮಿಕ ಗುರುಗಳ ಆಶೀರ್ವಾದ ದೊರೆಯುತ್ತದೆ. ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಎಲೆಹಸಿರು ಬಣ್ಣ

ಕನ್ಯಾ

ಕೌಟುಂಬಿಕ ಕಲಹದಿಂದ ಬೇಸರಕ್ಕೆ ಒಳಗಾಗುವಿರಿ. ದುಡುಕುವ ಕಾರಣ ಕೆಲಸವು ಅಂತಿಮ ಹಂತ ತಲುಪುವ ವೇಳೆ ಕ್ಕೆ ಜಾರಲಿದೆ. ಉದ್ಯೋಗದಲ್ಲಿ ಸ್ಥಿರತೆ ಕಾಣದೆ ಉದ್ಯೋಗವನ್ನು ಬದಲಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಲಾಭಕ್ಕೆ ಮೋಸವಾಗದು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುಂದಿನ ಹಂತ ತಲುಪಲಿದ್ದಾರೆ. ನಿಸರ್ಗವನ್ನುಇಷ್ಟಪಟ್ಟು ಕೃಷಿಕಾರ್ಯವನ್ನು ಆರಂಭಿಸುವಿರಿ. ಸ್ವಂತ ಮನೆ ಕೊಳ್ಳುವ ಬಗ್ಗೆ ಮಾತುಕತೆ ನಡೆಸುವಿರಿ. ಯಂತ್ರ ಸಂಬಂದಿತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ನೀರಿನ ಜೊತೆ ಚೆಲ್ಲಾಟವಾಡದಿರಿ. ಹಿರಿಯ ಸೋದರನೊಂದಿಗೆ ಹಣಕಾಸಿನ ಮನಸ್ತಾಪ ಇರುತ್ತದೆ. ಬೆಳ್ಳಿಯ ಸರ ಮತ್ತು ಪದಕ ಕೊಳ್ಳುವಿರಿ. ಆರೋಗ್ಯದಲ್ಲಿ ಸಣ್ಣ ಪುಟ್ಟ ತೊಂದರೆ ಎದುರಾಗಬಹುದು.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ತುಲಾ

ಕುಟುಂಬದಲ್ಲಿ ಆತುರದ ಭಾವನೆ ಸ್ವಭಾವ ಇರುತ್ತದೆ. ಯೋಚಿಸದೆ ಮಾಡುವ ಕೆಲಸ ಕಾರ್ಯಗಳ್ಳಲ್ಲಿ ಹಿನ್ನಡೆ ಉಂಟಾಗಲಿದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಇರದು. ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಿದರೆ ತೊಂದರೆ ಎದುರಿಸುವಿರಿ. ತಂದೆಯವರಿಗೆ ವ್ಯಾಪಾರದಲ್ಲಿ ಸಹಾಯ ಮಾಡಿದಲ್ಲಿ ಹೆಚ್ಚಿನ ಅನುಕೂಲವಿದೆ. ತಾಯಿಗೆ ಸೋದರ ವರ್ಗದವರಿಂದ ಸಹಾಯ ಇರುತ್ತದೆ. ವಿದ್ಯಾರ್ಥಿಗಳಿಗೆ ರಾಜಕೀಯದ ನಂಟು ದೊರೆಯುತ್ತದೆ. ಹೆಚ್ಚಿನ ಪ್ರಯತ್ನದಿಂದ ಉನ್ನತ ಅಧಿಕಾರ ಗಳಿಸುವಿರಿ. ಆಧುನಿಕ ತಂತ್ರಜ್ಞಾನದ ಅರಿವು ಇದ್ದವರು ವಿದೇಶದಲ್ಲಿ ಉದ್ಯೋಗವನ್ನು ಗಳಿಸುತ್ತಾರೆ. ದುಡುಕಿನ ತೀರ್ಮಾನವನ್ನು ತೆಗೆದುಕೊಳ್ಳದಿರಿ. ಪಾಲುಗಾರಿಕೆ ವ್ಯಾಪಾರವು ಮಧ್ಯಮಗತಿಯಲ್ಲಿ ನಡೆಯಲಿದೆ.

ಪರಿಹಾರ : ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಶ್ಚಿಕ

ಕುಟುಂಬದ ಕೆಲಸ ಕಾರ್ಯಗಳು ಹಠ ಮತ್ತು ಛಲದ ಕಾರಣ ಅಪೂರ್ಣಗೊಳ್ಳಬಹುದು. ನಿಮ್ಮಲ್ಲಿನ ತಪ್ಪು ಅಭಿಪ್ರಾಯ ಉದ್ಯೋಗದಲ್ಲಿ ವಿವಾದಕ್ಕೆ ಕಾರಣವಾಗಲಿದೆ. ಆದರೂ ಬುದ್ಧಿವಂತಿಕೆಯಿಂದ ಪಾರಾಗುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯಲಿದೆ. ಉನ್ನತ ಅಧಿಕಾರ ದೊರೆತು ಉದ್ಯೋಗವನ್ನು ಬದಲಾಯಿಸುವಿರಿ. ಹಣಕಾಸಿನ ಕೊರತೆಯು ಕ್ರಮೇಣವಾಗಿ ಕಡಿಮೆ ಆಗುತ್ತದೆ. ವಿದ್ಯಾರ್ಥಿಗಳು ಉನ್ನತ ಜ್ಞಾನಾರ್ಜನೆಗಾಗಿ ಸತತ ಅಭ್ಯಾಸದಲ್ಲಿ ತೊಡಗುತ್ತಾರೆ. ಸಂಗಾತಿಯ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದಗಳು ಉಂಟಾಗುತ್ತವೆ. ಭೂವ್ಯವಹಾರದಲ್ಲಿ ಸಾಧಾರಣ ಲಾಭವಿರುತ್ತದೆ. ಬಡ ವಿಧ್ಯಾರ್ಥಿಗಳಿಗೆ ಸಹಾಯ ಮಾಡುವಿರಿ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು ಬಣ್ಣ

--------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).