ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸರ್ಕಾರಿ ನೌಕರರಿಗೆ ಬಡ್ತಿ ದೊರೆಯಲಿದೆ, ದಾಂಪತ್ಯದಲ್ಲಿ ಮನಸ್ತಾಪ; ಮೇಷದಿಂದ ಕಟಕ ರಾಶಿವರೆಗಿನ ದಿನಭವಿಷ್ಯ

Horoscope Today: ಸರ್ಕಾರಿ ನೌಕರರಿಗೆ ಬಡ್ತಿ ದೊರೆಯಲಿದೆ, ದಾಂಪತ್ಯದಲ್ಲಿ ಮನಸ್ತಾಪ; ಮೇಷದಿಂದ ಕಟಕ ರಾಶಿವರೆಗಿನ ದಿನಭವಿಷ್ಯ

19 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (19th April 2024 Daily Horoscope).

ಏಪ್ರಿಲ್‌ 19ರ ದಿನಭವಿಷ್ಯ
ಏಪ್ರಿಲ್‌ 19ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (19th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಶುಕ್ರವಾರ

ತಿಥಿ: ಏಕಾದಶಿ ರಾತ್ರಿ 8.25 ರವರೆಗೂ ಇರುತ್ತದೆ. ಅನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ: ಮಖೆ ನಕ್ಷತ್ರವು ಬೆಳಿಗ್ಗೆ 11.38 ರವರೆಗೂ ಇರುತ್ತದೆ. ಅನಂತರ ಪುಬ್ಬ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 6.03

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 10.30 ರಿಂದ ಬೆಳಿಗ್ಗೆ 12.00

ಮೇಷ

ಸ್ಥಳ ಬದಲಾವಣೆಯ ಕಾರಣ ಅನಾರೋಗ್ಯ ಉಂಟಾಗುತ್ತದೆ. ವಿಶ್ರಾಂತಿಗಾಗಿ ಬಂಧುವೊಬ್ಬರ ಮನೆಗೆ ತೆರಳುವಿರಿ. ವೇಳೆ ಕಳೆಯಲು ಧಾರ್ಮಿಕ ವಿಧಿವಿಧಾನಗಳ ಮೊರೆ ಹೋಗುವಿರಿ. ಕುಟುಂಬಕ್ಕೆ ಸಂಬಂಧಿಸಿದ ಆಸ್ತಿಯ ವಿವಾದವು ಕೊನೆಗೊಳ್ಳುತ್ತದೆ. ಹಣವನ್ನು ಅವಶ್ಯಕತೆ ಇರುವ ವಿಚಾರಗಳಿಗೆ ಮಾತ್ರ ಖರ್ಚು ಮಾಡುವಿರಿ. ಉದ್ಯೋಗದಲ್ಲಿನ ಆಂತರಿಕ ಬದಲಾವಣೆಯೊಂದು ಬೇಸರ ಉಂಟು ಮಾಡಲಿದೆ. ವ್ಯಾಪಾರ ವ್ಯವಹಾರದಲ್ಲಿ ಹೊಸಬರ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ವಿದ್ಯಾರ್ಥಿಗಳು ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುತ್ತಾರೆ. ಪಾಲುದಾರಿಕೆಯ ವ್ಯಾಪಾರ ಆರಂಭಿಸುವಿರಿ. ಸರಳ ವಿಚಾರವಾದರೂ ಮೊದಲು ಯೋಚಿಸಿ ನಂತರ ಕಾರ್ಯರೂಪಕ್ಕೆ ತನ್ನಿ.

ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ವೃಷಭ

ಕುಟುಂಬದ ವಿಚಾರಗಳು ಸರಿಯಾದ ಮಾರ್ಗದಲ್ಲಿ ಇರುತ್ತದೆ. ಅನಾವಶ್ಯಕವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ಉದ್ಯೋಗದಲ್ಲಿನ ಒತ್ತಡ ತಾಳ್ಮೆ ಕಳೆದುಕೊಳ್ಳುವಂತೆ ಮಾಡುತ್ತದೆ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಗೆ ತಕ್ಕ ಆದಾಯ ದೊರೆಯುತ್ತದೆ. ಮನೆಯ ಜವಾಬ್ದಾರಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ವಿದ್ಯಾರ್ಥಿಗಳು ಉನ್ನತ ಮಟ್ಟದ ಸಾಧನೆ ಮಾಡಲಿದ್ದಾರೆ. ನೂತನವಾಗಿ ಮದುವೆಯಾದವರು ಹಿರಿಯರ ಕಟ್ಟಪ್ಪಣೆಗೆ ಬೇಸರಗೊಳ್ಳುತ್ತಾರೆ. ವಾಸಸ್ಥಳ ಬದಲಾಯಿಸುವ ಸಾಧ್ಯತೆಗಳಿವೆ. ಸರ್ಕಾರಿ ನೌಕರರಿಗೆ ಬಡ್ತಿ ದೊರೆಯುತ್ತದೆ. ಕುಟುಂಬದವರೊಂದಿಗೆ ಸಮಯವನ್ನು ಕಳೆಯಲು ಕೆಲಸ ಕಾರ್ಯಗಳನ್ನು ಮುಂದೂಡುವಿರಿ. ದಾಂಪತ್ಯದಲ್ಲಿನ ಮನಸ್ತಾಪ ದೂರವಾಗುತ್ತದೆ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಬೂದು ಬಣ್ಣ

ಮಿಥುನ

ಅತಿಯಾದ ಆತ್ಮವಿಶ್ವಾಸದಿಂದ ತಪ್ಪು ನಿರ್ಧಾರವನ್ನು ಕೈಗೊಳ್ಳುವಿರಿ. ನಿಧಾನಗತಿಯಲ್ಲಿ ದಿನದ ಕೆಲಸಕಾರ್ಯಗಳನ್ನು ಆರಂಭಿಸುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಇದ್ದರೂ ಸಂಯಮದಿಂದ ವರ್ತಿಸುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕದೆ ಬುದ್ಧಿವಂತಿಕೆಯಿಂದ ವ್ಯವಹರಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಲಾಭಾಂಶ ಹೆಚ್ಚುತ್ತದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಪರಸ್ಥಳಕ್ಕೆ ಪ್ರಯಾಣ ಬೆಳೆಸುವಿರಿ. ಕುಟುಂಬ ಸಮೇತ ಕಿರುಪ್ರವಾಸಕ್ಕೆ ತೆರಳುವಿರಿ. ಅವಿವಾಹಿತರಿಗೆ ವಿವಾಹಯೋಗ ಇದೆ. ವಿದ್ಯಾರ್ಥಿಗಳು ಕ್ರಿಯಾಶೀಲತೆಯಿಂದ ಮುನ್ನಡೆಯುತ್ತಾರೆ. ಧಾರ್ಮಿಕ ಕೇಂದ್ರಕ್ಕೆ ಹಣದ ಸಹಾಯ ಮಾಡುವಿರಿ. ದಾಂಪತ್ಯದಲ್ಲಿ ಮನಸ್ತಾಪ ಉಂಟಾಗಲಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು ಬಣ್ಣ

ಕಟಕ

ಬಿಡುವಿಲ್ಲದೆ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ನೇರ ನಿಷ್ಠುರತೆಯ ಮಾತುಕತೆ ವಿರೋಧಿಗಳನ್ನು ಹೆಚ್ಚಿಸುತ್ತದೆ. ಅನಾವಶ್ಯಕ ವಾದ ವಿವಾದಗಳನ್ನು ಇಷ್ಟಪಡುವುದಿಲ್ಲ. ಕುಟುಂಬದಲ್ಲಿ ಹೊಂದಾಣಿಕೆ ಮರುಕಳಿಸುತ್ತದೆ. ಬೇಸರದಿಂದ ಮಿತ್ರರೊಬ್ಬರ ಕಾರ್ಯಕ್ರಮದಲ್ಲಿ ಭಾಗವಹಿಸುವಿರಿ. ವಿದ್ಯಾರ್ಥಿಗಳು ತಮ್ಮ ಗುರಿ ತಲುಪಲು ಸಹಪಾಠಿಗಳನ್ನು ಅವಲಂಬಿಸುತ್ತಾರೆ. ಮೂಳೆ ಅಥವಾ ಸ್ನಾಯು ನೋವು ಬಾಧಿಸುತ್ತದೆ. ದುಡುಕಿನ ನಿರ್ಧಾರದಿಂದ ಉದ್ಯೋಗವನ್ನು ಬದಲಾಯಿಸುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ವಂಶಕ್ಕೆ ಸಂಬಂಧಿಸಿದ ಉಪವೃತ್ತಿಯನ್ನು ಆರಂಭಿಸುವಿರಿ. ಮನೆಯ ಶುಭ್ರತೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವಿರಿ.

ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).