ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಹಣಕಾಸಿನ ವಿಚಾರದಲ್ಲಿ ದುಡುಕದಿರಿ, ಸೋಲು ಪಾಠ ಕಲಿಸುತ್ತದೆ; ಧನುರಾಶಿಯಿಂದ ಮೀನದವರೆಗಿನ ದಿನಭವಿಷ್ಯ

Horoscope Today: ಹಣಕಾಸಿನ ವಿಚಾರದಲ್ಲಿ ದುಡುಕದಿರಿ, ಸೋಲು ಪಾಠ ಕಲಿಸುತ್ತದೆ; ಧನುರಾಶಿಯಿಂದ ಮೀನದವರೆಗಿನ ದಿನಭವಿಷ್ಯ

19th ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (19th April 2024 2024 Daily Horoscope).

ಏಪ್ರಿಲ್‌ 19ರ ದಿನಭವಿಷ್ಯ
ಏಪ್ರಿಲ್‌ 19ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (19th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಶುಕ್ರವಾರ

ತಿಥಿ: ಏಕಾದಶಿ ರಾತ್ರಿ 8.25 ರವರೆಗೂ ಇರುತ್ತದೆ. ಅನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ: ಮಖೆ ನಕ್ಷತ್ರವು ಬೆಳಿಗ್ಗೆ 11.38 ರವರೆಗೂ ಇರುತ್ತದೆ. ಅನಂತರ ಪುಬ್ಬ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 6.03

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 10.30 ರಿಂದ ಬೆಳಿಗ್ಗೆ 12.00

ಧನಸ್ಸು

ಕ್ರೀಡಾ ಮನೋಭಾವನೆಯಿಂದ ಸೋಲು ಗೆಲುವನ್ನು ಒಂದೇ ಭಾವನೆಯಿಂದ ಸ್ವೀಕರಿಸುವಿರಿ. ನೆಮ್ಮದಿಯ ಜೀವನ ನಡೆಸುವಿರಿ. ಹೊಸ ಆಸೆ ಆಕಾಂಕ್ಷೆಗಳು ಗೆಲ್ಲಲೇಬೇಕೆಂಬ ಹಠ ಮೂಡಿಸುತ್ತದೆ. ಕುಟುಂಬದಲ್ಲಿ ಸಂತೋಷ ನೆಲೆಸಲು ಕಾರಣರಾಗುವಿರಿ. ಇಲ್ಲದ ಹಣವನ್ನು ನೆಚ್ಚಿಕೊಂಡು ಅನಾವಶ್ಯಕ ಖರ್ಚು ವೆಚ್ಚಗಳನ್ನು ಮಾಡುವಿರಿ. ಆತ್ಮೀಯರೊಬ್ಬರು ಹಣಕಾಸಿನ ಸಹಾಯ ಮಾಡಲಿದ್ದಾರೆ. ದುಡುಕದೆ ತೆಗೆದುಕೊಳ್ಳುವ ನಿರ್ಧಾರವೊಂದು ಅವಘಡದಿಂದ ಪಾರು ಮಾಡುತ್ತದೆ. ಬಹುತೇಕ ಸಮಯವನ್ನು ಕುಟುಂಬದವರ ಜೊತೆಯಲ್ಲಿ ಕಳೆಯುವಿರಿ. ಸಂಗಾತಿಯ ಜೊತೆಯಲ್ಲಿ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವಿರಿ. ಆರೋಗ್ಯದಲ್ಲಿ ಸ್ಥಿರತೆ ಇರಲಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಮಕರ

ಕುಟುಂಬದ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಲಿವೆ. ಶಾಂತಿಯಿಲ್ಲದೆ ಯೋಚನೆಗೆ ಒಳಗಾಗುವಿರಿ. ಕುಟುಂಬದಲ್ಲಿ ಅಸಹಜ ಸನ್ನಿವೇಶವು ಎದುರಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ನಿರೀಕ್ಷೆ ಸಲ್ಲ. ಆತುರದ ನಿರ್ಧಾರದಿಂದ ಉದ್ಯೋಗವನ್ನು ಬದಲಿಸುವ ನಿರ್ಧಾರ ತೆಗೆದುಕೊಳ್ಳುವಿರಿ. ಸೋಲಿನ ನಂತರ ತಪ್ಪನ್ನು ತಿದ್ದಿಕೊಳ್ಳುವಿರಿ. ಉದ್ಯೋಗದಲ್ಲಿನ ಜವಾಬ್ದಾರಿಯು ಹೆಚ್ಚುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ತಮ್ಮ ಗುರಿ ಸಾಧಿಸಬಲ್ಲರು. ಹಣಕಾಸಿನ ವಿಚಾರದಲ್ಲಿ ದುಡುಕದಿರಿ. ಸಂಬಂಧಿಕರಿಂದ ದೂರ ಉಳಿಯಲು ಪ್ರಯತ್ನಿಸುವಿರಿ. ಕುಟುಂಬದಲ್ಲಿ ಶುಭಕಾರ್ಯದ ಏರ್ಪಾಟು ನಡೆಯಲಿದೆ. ಗೃಹಬಳಕೆಯ ಸಾಧನಗಳಿಗೆ ಹಣವು ವೆಚ್ಚವಾಗುತ್ತದೆ.

ಪರಿಹಾರ: ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಕುಂಭ

ಧನಾತ್ಮಕ ಚಿಂತನೆ ಇರುವ ಕಾರಣ ಮನಸ್ಸಿಗೆ ನೆಮ್ಮದಿ ಇರುತ್ತದೆ. ಹಠದ ಗುಣ ಕಡಿಮೆ ಆದಲ್ಲಿ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಕಾಣುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಕ್ರಮೇಣವಾಗಿ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಒಂಟಿಯಾಗಿ ಅಧ್ಯಯನದಲ್ಲಿ ಮುಂದುವರೆಯುತ್ತಾರೆ. ಆತ್ಮೀಯರಿಗೆ ಹಣವನ್ನು ಸಾಲವಾಗಿ ನೀಡಬೇಕಾಗುತ್ತದೆ. ಸಾಹಸ ಕಲಾವಿದರು ಅಮೂಲ್ಯವಾದ ಅವಕಾಶವನ್ನು ಪಡೆಯಲಿದ್ದಾರೆ. ಕಷ್ಟದಲ್ಲಿರುವವರಿಗೆ ಹಣದ ಸಹಾಯ ಮಾಡುವಿರಿ. ದಾಂಪತ್ಯ ಜೀವನದಲ್ಲಿ ಸುಖ ಸಂತೋಷ ಮನೆ ಮಾಡಿರುತ್ತದೆ. ಹುದುಗಿರುವ ಪ್ರತಿಭೆಯ ಪರಿಚಯ ಎಲ್ಲರಿಗೂ ಆಗಲಿದೆ. ಮನಮೆಚ್ಚುವ ಒಡವೆ ವಸ್ತ್ರಗಳಿಗೆ ಹಣ ಖರ್ಚಾಗುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಮೀನ

ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಾಯಿಸುವಿರಿ. ಮನದಲ್ಲಿ ಯೋಚನೆಯೊಂದು ಮನೆಮಾಡಲಿದೆ. ವೈರಾಗ್ಯದ ಮನೋಭಾವನೆ ನಿಮ್ಮನ್ನು ಕಾಡುತ್ತದೆ. ಅನಪೇಕ್ಷಿತ ವಿಚಾರಗಳಿಂದಾಗಿ ಅನಾರೋಗ್ಯಕ್ಕೆ ಈಡಾಗುವಿರಿ. ಶಾಂತಿಯಿಂದ ಇದ್ದಷ್ಟೂ ಆತ್ಮೀಯರಿಂದ ಸಹಾಯ ಸಹಕಾರ ದೊರೆಯುತ್ತದೆ. ಉದ್ಯೋಗದಲ್ಲಿ ಸಾಫಲ್ಯವನ್ನು ಪಡೆಯುವಿರಿ. ವ್ಯಾಪಾರ ವ್ಯವಹಾರವು ಹಣದ ಕೊರತೆಯನ್ನು ನೀಗಿಸಲಿವೆ. ಕಷ್ಟ ನಷ್ಟವನ್ನು ಎದುರಿಸಿ ಗೆಲ್ಲುವಿರಿ. ವಿದ್ಯಾರ್ಥಿಗಳು ಕಲಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ತಪ್ಪನ್ನು ಒಪ್ಪದಿದ್ದರೂ ವಿಧಿ ಇಲ್ಲದೆ ಕ್ಷಮಿಸುವಿರಿ. ಆಧುನಿಕತೆಗೆ ಒಗ್ಗಿಕೊಂಡಲ್ಲಿ ಸಮಾಜದ ಮುಖ್ಯ ಸ್ಥಾನವನ್ನು ಅಲಂಕರಿಸುವಿರಿ. ಪ್ರಾಣಿ ಪಕ್ಷಿಗಳ ಬಗ್ಗೆ ಅನುಕಂಪ ತೋರುವಿರಿ.

ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಎಲೆ ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).