ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಹಿರಿಯರ ವಿಚಾರದಲ್ಲಿ ಎಚ್ಚರ ವಹಿಸಿ, ಆದಾಯ ಹೆಚ್ಚಳಕ್ಕೆ ಸೂಕ್ತ ಕ್ರಮ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Horoscope Today: ಹಿರಿಯರ ವಿಚಾರದಲ್ಲಿ ಎಚ್ಚರ ವಹಿಸಿ, ಆದಾಯ ಹೆಚ್ಚಳಕ್ಕೆ ಸೂಕ್ತ ಕ್ರಮ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

19 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (19th May 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನದ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನದ ಭವಿಷ್ಯ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (19th May 2024 Horoscope)

ಇಂದಿನ ಪಂಚಾಂಗ

ಶ್ರೀಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ: ಏಕಾದಶಿ ಹ. 12.50 ರವರೆಗೂ ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ: ಹಸ್ತ ನಕ್ಷತ್ರವು ರಾ. 02.31 ರವರೆಗು ಇರುತ್ತದೆ. ಆನಂತರ ಚಿತ್ತೆ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.05.53

ಸೂರ್ಯಾಸ್ತ: ಸ.06.38

ರಾಹುಕಾಲ: ಸ. 05.05 ರಿಂದ ಸ. 06.41

ಸಿಂಹ ರಾಶಿ

ಸಣ್ಣ ಪುಟ್ಟ ಗೆಲುವು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಎದುರಾಗುವ ಸಮಸ್ಯೆಗಳಿಗೆ ಸಮಸ್ಯೆಗಳನ್ನು ನೀಗಿಸುವತ್ತ ಉದ್ಯೋಗದಲ್ಲಿ ಮುನ್ನಡೆಯುವಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ತೊಡಗುತ್ತಾರೆ. ಬಿಡುವಿನ ವೇಳೆಯಲ್ಲಿ ಕ್ರೀಡಾಚಟುವಟಿಕೆಗಳಲ್ಲಿ ತೊಡಗುತ್ತಾರೆ. ಕುಟುಂಬದಲ್ಲಿ ನಿಮ್ಮಿಂದಾಗಿ ಸಂತಸದ ವಾತಾವರಣ ನಿರ್ಮಾಣವಾಗುತ್ತದೆ. ಪ್ರತಿಯೊಂದು ವಿಚಾರಗಳನ್ನು ಕುಟುಂಬದವರೊಡನೆ ಚರ್ಚಿಸುವಿರಿ. ಜೀವನದಲ್ಲಿನ ಪ್ರಮುಖ ಘಟನೆಯೊಂದು ನಡೆಯಲಿದೆ. ನಿಮ್ಮಲ್ಲಿನ ಹಾಸ್ಯ ಪ್ರಜ್ಞೆ ಜನಮನ ಗೆಲ್ಲುತ್ತದೆ. ಎಷ್ಟೇ ಸಿರಿವಂತರಾದರು ಸರಳತೆಯಿಂದ ಬಾಳುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಕನ್ಯಾ ರಾಶಿ

ಬಿಡುವಿಲ್ಲದ ಕೆಲಸದಿಂದ ಆಯಾಸವಿರುತ್ತದೆ. ಆದಾಯವನ್ನು ಹೆಚ್ಚಿಸಿಕೊಳ್ಳಲು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕದೆ ಮುಂದುವರಿಯುವಿರಿ. ಅನಗತ್ಯವಾದ ವಾದ ವಿವಾದಗಳು ಎದುರಾಗಲಿವೆ. ವಂಶದ ಆಸ್ತಿಯ ವಿಚಾರದಲ್ಲಿ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಕಂಡುಬರಲಿವೆ. ಸಂಗಾತಿಯ ಜೊತೆಯಲ್ಲಿ ಉತ್ತಮ ಅನುಬಂಧ ಏರ್ಪಡುತ್ತದೆ. ಉದ್ಯೋಗದಲ್ಲಿ ಎದುರಾಗುವ ಅಡೆತಡೆಗಳು ನಿವಾರಣೆಯಾಗಿ ಹೊಸತನ ಮೂಡುತ್ತದೆ. ಕುಟುಂಬದಲ್ಲಿರುವ ಮಕ್ಕಳಿಗೆ ಉಡುಗೊರೆಗಳನ್ನು ನೀಡುವಿರಿ. ವಿದೇಶಕ್ಕೆ ತೆರಳುವ ಅವಕಾಶವನ್ನು ಕಳೆದುಕೊಳ್ಳುವಿರಿ. ಅನಗತ್ಯವಾಗಿ ಯಾವುದೇ ಕೆಲಸ ಕಾರ್ಯಗಳನ್ನುಮುಂದೂಡದೆ ತಕ್ಷಣ ಬಗೆಹರಿಸಲು ಪ್ರಯತ್ನಿಸುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೇಸರಿ

ತುಲಾ ರಾಶಿ

ಹಿರಿಯರ ವಿಚಾರದಲ್ಲಿ ಎಚ್ಚರ ವಹಿಸಿ. ಆತ್ಮೀಯರ ಸಲಹೆ ಸೂಚನೆಯನ್ನು ಸ್ವೀಕರಿಸಿದಲ್ಲಿ ಶುಭ ಫಲಗಳು ದೊರೆಯಲಿವೆ. ಸ್ವತಂತ್ರವಾಗಿ ಯಾವುದೇ ಕೆಲಸವನ್ನು ಮಾಡಲಿಚ್ಚಿಸುವುದಿಲ್ಲ. ಮನಸ್ಸಿಲ್ಲದೆ ಆರಂಭಿಸುವ ಕೆಲಸ ಕಾರ್ಯಗಳು ಅಪೂರ್ಣಗೊಳ್ಳುತ್ತವೆ. ಹಣಕಾಸಿನ ಉಳಿತಾಯ ಯೋಜನೆಯಲ್ಲಿ ಆಸಕ್ತಿ ಮೂಡಲಿದೆ. ತಪ್ಪು ಅಭಿಪ್ರಾಯದಿಂದ ಉದ್ಯೋಗವನ್ನು ಬದಲಿಸುವಿರಿ. ಕೆಲಸದ ಒತ್ತಡ ಹೆಚ್ಚುವ ಸಾಧ್ಯತೆ ಇದೆ. ಮಾತುಕತೆಯಿಂದ ಕುಟುಂಬದ ಬಿಕ್ಕಟ್ಟು ದೂರವಾಗುತ್ತದೆ. ಕೆಲಸ ಕಾರ್ಯಗಳನ್ನು ಆರಂಭಿಸುವ ಮೊದಲೇ ಅದರಿಂದ ಆಗುವ ಅನುಕೂಲತೆಯನ್ನು ಗ್ರಹಿಸುವಿರಿ.

ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಶ್ಚಿಕ ರಾಶಿ

ಹಣಕಾಸಿನ ವಿಚಾರದಲ್ಲಿ ಆತ್ಮೀಯರ ಸಲಹೆ ಸಹಕಾರ ದೊರೆಯಲಿದೆ. ಯಾವುದೇ ಪ್ರಭಾವಕ್ಕೆ ಮಣಿಯದೆ ಸ್ವಂತ ಕೆಲಸ ಕಾರ್ಯಗಳನ್ನು ಸ್ವತಂತ್ರವಾಗಿ ನಿರ್ವಹಿಸುವಿರಿ. ಕುಟುಂಬದ ಹಿರಿಯರ ಪ್ರಯತ್ನದಿಂದಾಗಿ ಪರಸ್ಪರ ಅನ್ಯೋನ್ಯತೆ ಬೆಳೆಯುತ್ತದೆ. ಸಮಯ ವ್ಯರ್ಥ ಮಾಡದೆ ಕೆಲಸ ಕಾರ್ಯಗಳಲ್ಲಿ ತೊಡಗಿದರೆ ಸುಲಭವಾಗಿ ಯಶಸ್ಸು ದೊರೆಯುತ್ತದೆ. ಉದ್ಯೋಗದಲ್ಲಿ ನಿಮ್ಮ ಮಾತಿಗೆ ಸಾಕಷ್ಟು ಗೌರವ ವ್ಯಕ್ತವಾಗುತ್ತದೆ. ಸಮಾಜದಲ್ಲಿನ ನಾಯಕತ್ವ ದೊರೆಯಲಿದೆ. ಸಂಗಾತಿಯೊಂದಿಗೆ ಉತ್ತಮ ಸ್ನೇಹಿತರಂತೆ ವರ್ತಿಸುವಿರಿ. ಹಠದಸ್ವಭಾವದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸುವಿರಿ.

ಪರಿಹಾರ: ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ .

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)