ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅವಿವಾಹಿತರಿಗೆ ವಿವಾಹ ನಿಶ್ಚಯ, ಆರೋಗ್ಯದಲ್ಲಿ ಚೇತರಿಕೆ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

Horoscope Today: ಅವಿವಾಹಿತರಿಗೆ ವಿವಾಹ ನಿಶ್ಚಯ, ಆರೋಗ್ಯದಲ್ಲಿ ಚೇತರಿಕೆ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

19 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (19th May 2024 Daily Horoscope).

ಧನು, ಮಕರ, ಕುಂಭ, ಮೀನ ರಾಶಿಯವರ ದಿನದ ಭವಿಷ್ಯ
ಧನು, ಮಕರ, ಕುಂಭ, ಮೀನ ರಾಶಿಯವರ ದಿನದ ಭವಿಷ್ಯ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (19th May 2024 Horoscope)

ಇಂದಿನ ಪಂಚಾಂಗ

ಶ್ರೀಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ: ಏಕಾದಶಿ ಹ. 12.50 ರವರೆಗೂ ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ: ಹಸ್ತ ನಕ್ಷತ್ರವು ರಾ. 02.31 ರವರೆಗು ಇರುತ್ತದೆ. ಆನಂತರ ಚಿತ್ತೆ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.05.53

ಸೂರ್ಯಾಸ್ತ: ಸ.06.38

ರಾಹುಕಾಲ: ಸ. 05.05 ರಿಂದ ಸ. 06.41

ಧನಸ್ಸು ರಾಶಿ

ಯಾವುದೇ ಕೆಲಸವಾದರೂ ಮಾನಸಿಕವಾಗಿ ಸದೃಢಗೊಳ್ಳುವಿರಿ. ಕುಟುಂಬದ ಎಲ್ಲಾ ಕೆಲಸ ಕಾರ್ಯಗಳಲ್ಲಿ ನಿಮ್ಮ ಪಾತ್ರ ಅತಿ ಮುಖ್ಯವಾಗುತ್ತದೆ. ಆತಂಕದ ಪರಿಸ್ಥಿತಿಯಲ್ಲಿಯೂ ಧೈರ್ಯದಿಂದ ಮುನ್ನುಗ್ಗುವಿರಿ. ಉತ್ತಮ ಆದಾಯವಿದ್ದರೂ ಹಣವನ್ನು ಉಳಿಸಲು ವಿಫಲರಾಗುವಿರಿ. ಕುಟುಂಬದ ಮತ್ತು ಬಂಧು ಬಳಗದವರ ಸಭೆ ಸಮಾರಂಭಗಳಲ್ಲಿ ಪ್ರಮುಖ ಪಾತ್ರ ವಹಿಸುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಸಂತೋಷದಿಂದ ಸಮಯ ಕಳೆಯುವಿರಿ. ನಿಮ್ಮ ಪ್ರೀತಿ ಪಾತ್ರರೊಡನೆ ಅನಾವಶ್ಯಕವಾದ ವಾದ ವಿವಾದಗಳು ಎದುರಾಗುತ್ತವೆ.

ಪರಿಹಾರ: ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ

ಮಕರ ರಾಶಿ

ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಕುಟುಂಬದ ಸಲುವಾಗಿ ಹೆಚ್ಚಿನ ಖರ್ಚು ವೆಚ್ಚಗಳು ಇರುತ್ತವೆ. ಆರಂಭಿಸಿದ ಕಾರ್ಯಗಳಲ್ಲಿ ಹಿನ್ನಡೆ ಕಂಡು ಬಂದರೆ ಸಿಡುಕುತನದಿಂದ ವರ್ತಿಸುವಿರಿ. ಯಾವುದೇ ಅನುಕೂಲವಿಲ್ಲದ ವ್ಯವಹಾರಗಳಿಂದ ದೂರ ಉಳಿಯುವಿರಿ. ಅಭಿವೃದ್ಧಿ ಪಾಥದಲ್ಲಿ ಸಾಗುವಿರಿ. ಅವಿವಾಹಿತರಿಗೆ ಸಂಬಂಧ ಅಥವಾ ಪರಿಚಯದಲ್ಲಿ ವಿವಾಹ ನಿಶ್ಚಯವಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ವಿನೂತನ ಸಾಧನೆ ಮಾಡಲಿದ್ದಾರೆ. ಮಕ್ಕಳ ವಿಚಾರದಲ್ಲಿ ಇದ್ದ ಯೋಚನೆಯು ದೂರವಾಗುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯವೊಂದನ್ನು ನಡೆಸಿಕೊಡುವಿರಿ. ದಾಂಪತ್ಯ ಜೀವನವು ಸುಖಮಯವಾಗಿರುತ್ತದೆ.

ಪರಿಹಾರ: ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಕುಂಭ ರಾಶಿ

ಗೃಹಿಣಿಯರು ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕು. ಪಾಲುಗಾರಿಕೆ ವ್ಯಾಪಾರವಿದ್ದರೆ ಹಣದ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕುಟುಂಬ ನಿರ್ವಹಣೆಗಾಗಿ ಹೆಚ್ಚಿನ ಹಣದ ಅವಶ್ಯಕತೆ ಕಂಡುಬರುತ್ತದೆ. ಹಣದ ಕೊರತೆ ಕಂಡು ಬರುವ ಕಾರಣ ಚಿಂತೆಯಿಂದ ಬಳಲುವಿರಿ. ನಿಮ್ಮ ಕಾರ್ಯವೈಖರಿಯನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಾರೆ. ಪ್ರವಾಸದ ವೇಳೆಯಲ್ಲಿ ಆತ್ಮೀಯರೊಬ್ಬರನ್ನು ಭೇಟಿ ಮಾಡುವಿರಿ. ಆರ್ಥಿಕ ಪ್ರಗತಿಗೆ ಕುಟುಂಬದ ಹಿರಿಯರ ಮಾರ್ಗದರ್ಶನವು ಬಲು ಮುಖ್ಯವಾಗುತ್ತದೆ. ದಾಂಪತ್ಯದಲ್ಲಿ ಪರಸ್ಪರ ಪ್ರೀತಿ ವಿಶ್ವಾಸಗಳು ಇರಲಿವೆ. ನಿಮ್ಮ ಮನದ ನೋವುಗಳನ್ನು ಯಾರಲ್ಲಿಯೂ ಹಂಚಿಕೊಳ್ಳುವುದಿಲ್ಲ.

ಪರಿಹಾರ: ತಲೆಗೆ ಹಾಲಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹಸಿರು

ಮೀನ ರಾಶಿ

ಕೆಲಸ ಕಾರ್ಯದಲ್ಲಿ ಗೆಲ್ಲುವ ಹಠ ನಿಮ್ಮಲ್ಲಿರುತ್ತದೆ. ಕೆಲಸ ಕಾರ್ಯಗಳನ್ನು ಆರಂಭಿಸಿದ ಮೇಲೆ ಕಷ್ಟವೆನಿಸಿದರು ಪೂರ್ಣಗೊಳಿಸುವಿರಿ. ಸಾಧನೆ ಮಾಡುವ ವೇಳೆ ಎಚ್ಚರಿಕೆಯಿಂದ ಇರಿ. ಮಕ್ಕಳಿಗೆ ನಿಮ್ಮ ಸಹಾಯ, ಸಹಕಾರ ಮುಖ್ಯವಾಗುತ್ತದೆ. ನಿಮ್ಮ ಮಕ್ಕಳಿಗೆ ಸಂಗೀತ ನಾಟ್ಯದಲ್ಲಿ ಆಸಕ್ತಿ ಮೂಡುತ್ತದೆ. ಮನದಲ್ಲಿ ಅನಾವಶ್ಯಕ ಚಿಂತೆ ಇರುತ್ತದೆ. ನೆರೆಹೊರೆಯವರ ಜೊತೆಯಲ್ಲಿ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಅನಿವಾರ್ಯವಾಗಿ ಉದ್ಯೋಗವನ್ನು ಬದಲಿಸುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಮನದ ಸಂತಸವನ್ನು ಹಂಚಿಕೊಳ್ಳುವಿರಿ.

ಪರಿಹಾರ: ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)