Horoscope Today: ಉಸಿರಾಟದ ತೊಂದರೆ ಎದುರಾಗಲಿದೆ, ಯಾತ್ರಾಸ್ಥಳಕ್ಕೆ ಭೇಟಿ ಸಾಧ್ಯತೆ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (1st April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (1st April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಸೋಮವಾರ
ತಿಥಿ: ಸಪ್ತಮಿ ಬೆಳಿಗ್ಗೆ 4.22ರವರೆಗೂ ಇರುತ್ತದೆ. ಅನಂತರ ಅಷ್ಟಮಿ ಆರಂಭವಾಗಲಿದೆ.
ನಕ್ಷತ್ರ: ಮೂಲ ನಕ್ಷತ್ರವು ಸಂಜೆ 6.51 ರವರೆಗೂ ಇರುತ್ತದೆ. ಅನಂತರ ಪೂರ್ವಾಷಾಡ ನಕ್ಷತ್ರ ಆರಂಭವಾಗಲಿದೆ.
ಸೂರ್ಯೋದಯ: ಬೆಳಿಗ್ಗೆ 6.17
ಸೂರ್ಯಾಸ್ತ: ಸಂಜೆ 6.31
ರಾಹುಕಾಲ: ಬೆಳಿಗ್ಗೆ 7.30 ರಿಂದ ಬೆಳಿಗ್ಗೆ 9.00
ಸಿಂಹ
ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬುವುದಿಲ್ಲ. ಕುಟುಂಬದಲ್ಲಿನ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. ವಿವಾಹ ಕಾರ್ಯವು ಆತ್ಮೀಯರ ಸಹಾಯದಿಂದ ನೆರವೇರುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಪ್ರಶಂಸೆ ದೊರೆಯುತ್ತದೆ. ದೊರೆವ ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವುದಿಲ್ಲ. ವಿದ್ಯಾಭ್ಯಾಸದಲ್ಲಿ ವಿದ್ಯಾರ್ಥಿಗಳು ಉನ್ನತ ಮಟ್ಟ ತಲುಪಲಿದ್ದಾರೆ. ಅವಕಾಶ ಇದ್ದರೂ ಅಧಿಕಾರದ ಆಸೆ ಬಾರದು. ಸಮಾಜದಲ್ಲಿ ವಿಶೇಷವಾದ ಸ್ಥಾನಮಾನ ದೊರೆಯುತ್ತದೆ. ಬೇರೆಯವರಿಗೆ ಬುದ್ಧಿವಾದ ಹೇಳಿ ಕೆಟ್ಟ ಹಸರು ಪಡೆಯುವಿರಿ. ವೈವಾಹಿಕ ಜೀವನದ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವಿರಿ. ಸ್ವಂತ ಬಳಕೆಗಾಗಿ ಐಷಾರಾಮಿ ವಾಹನ ಕೊಳ್ಳುವಿರಿ.
ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ : ರಕ್ತದ ಬಣ್ಣ
ಕನ್ಯಾ
ಸಾರ್ವಜನಿಕರಿಗೆ ಉಪಯೋಗವಾಗುವ ಕೆಲಸ ಕಾರ್ಯಗಳಲ್ಲಿ ಮುಂದಾಳತ್ವ ವಹಿಸುವಿರಿ. ಕಠಿಣವಾದ ಕೆಲಸ ಕಾರ್ಯವಾದರೂ ಬುದ್ದಿವಂತಿಕೆಯಿಂದ ಜಯ ಸಾಧಿಸುವಿರಿ. ಕುಟುಂಬದ ಎಲ್ಲಾ ಜವಾಬ್ದಾರಿ ನಿಮಗೆ ದೊರೆಯುತ್ತದೆ. ಸ್ವಂತ ಇಚ್ಚೆಯಂತೆ ವಿವಾಹವಾಗುವುದು. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳು ಮಧ್ಯಮಗತಿಯಲ್ಲಿ ಸಾಗುತ್ತವೆ. ಮಾಡದ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಬದಲಿಸದಿರಿ. ಉಸಿರಿಗೆ ಸಂಬಧಿಸಿದ ತೊಂದರೆ ಇದ್ದಲ್ಲಿ ಎಚ್ಚರಿಕೆ ಇರಲಿ. ಯಾರ ಮಾತಿಗೂ ನೋವನ್ನು ಉಂಟು ಮಾಡುವುದಿಲ್ಲ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 10
ಅಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ
ತುಲಾ
ಸುಲಭವಾಗಿ ಜೀವನದಲ್ಲಿ ನಿರೀಕ್ಷಿಸಿದ ಮಟ್ಟವನ್ನು ತಲುಪುವಿರಿ. ಕುಟುಂಬದ ಹೊಸ ನಿರೀಕ್ಷೆಗಳು ಮನದ ದುಗುಡವನ್ನು ದೂರ ಮಾಡುತ್ತದೆ. ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ದೂರವಾಗಿ ಸಂತೋಷದಿಂದ ಬಾಳುತ್ತಾರೆ. ಉದ್ಯೋಗದಲ್ಲಿನ ಧನಾತ್ಮಕ ಫಲಿತಾಂಶಗಳು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಉದ್ಯೋಗವನ್ನು ಬದಲಿಸುವ ಸಾದ್ಯತೆಗಳನ್ನು ಪರಾಮರ್ಶಿಸುವಿರಿ. ಹಣಕಾಸಿನದ ವಿಚಾರದಲ್ಲಿ ಗಲಿಬಿಲಿಯ ವಾತವರಣ ಇರಲಿದೆ. ಅವಿವಾಹಿತರಿಗೆ ವಿವಾಹ ನಿಶಯವಾಗಲಿದೆ. ಹೊಸದಾಗಿ ಆರಂಭಿಸಿದ ಪಾಲುದಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಕುಟುಂಬದ ಸದಸ್ಯರ ಜೊತೆ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ.
ಪರಿಹಾರ: ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕೇಸರಿ ಬಣ್ಣ
ವೃಶ್ಚಿಕ
ಕೆಲಸ ಕಾರ್ಯಗಳಲ್ಲಿ ಆರಂಭದಲ್ಲಿ ಅಡ್ಡಿ ಆತಂಕಗಳು ಇರಲಿವೆ. ಸ್ವಂತ ಪರಿಶ್ರಮದಿಂದ ಯಶಸ್ಸು ಗಳಿಸುವಿರಿ. ಉದ್ಯೋಗದಲ್ಲಿ ಎದುರಾದ ತೊಂದರೆ ಮಾತುಕತೆಯ ಮೂಲಕ ಪರಿಹಾರವಾಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಯತ್ನಕ್ಕೆ ತಕ್ಕಂತೆ ಫಲಿತಾಂಶಗಳು ದೊರೆಯುತ್ತವೆ. ಉತ್ತಮ ಯೋಜನಾ ತಂತ್ರಗಳು ಆಪತ್ತನ್ನು ದೂರ ಮಾಡಲಿದೆ. ಬಂಧು ಬಳಗದವರಿಗೆ ಜೀವನದಲ್ಲಿ ಅಭಿವೃದ್ದಿ ಹೊಂದಲು ಸಹಾಯ ಮಾಡುವಿರಿ. ಸಮಾಜದ ಮುಖ್ಯಸ್ಥರಾಗಿ ಹೊರಹೊಮ್ಮವಿರಿ. ವಿನಾಕಾರಣ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಸಿಡುಕುತನ ಕಡಿಮೆ ಮಾಡಿಕೊಂಡಷ್ಟು ಒಳ್ಳೆಯದು.
ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).