ಕನ್ನಡ ಸುದ್ದಿ  /  Astrology  /  Horoscope Today Astrology Prediction 1st April 2024 Sagittarius Capricorn Aquarius Pisces Daily Horoscope Sts

Horoscope Today: ಅನಿರೀಕ್ಷಿತ ಜವಾಬ್ದಾರಿ ಆತ್ಮವಿಶ್ವಾಸ ಕುಗ್ಗಿಸಲಿದೆ, ಸಾಲದ ವ್ಯವಹಾರ ಸಲ್ಲ; ಧನುರಾಶಿಯಿಂದ ಮೀನದವರೆಗೆ ದಿನಭವಿಷ್ಯ

ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (1st April 2024 Daily Horoscope).

ಧನು, ಮಕರ, ಕುಂಭ, ಮೀನ ರಾಶಿಯವರ ದಿನಭವಿಷ್ಯ
ಧನು, ಮಕರ, ಕುಂಭ, ಮೀನ ರಾಶಿಯವರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (1st April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಸೋಮವಾರ

ತಿಥಿ: ಸಪ್ತಮಿ ಬೆಳಿಗ್ಗೆ 4.22ರವರೆಗೂ ಇರುತ್ತದೆ. ಅನಂತರ ಅಷ್ಟಮಿ ಆರಂಭವಾಗಲಿದೆ.

ನಕ್ಷತ್ರ: ಮೂಲ ನಕ್ಷತ್ರವು ಸಂಜೆ 6.51 ರವರೆಗೂ ಇರುತ್ತದೆ. ಅನಂತರ ಪೂರ್ವಾಷಾಡ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 6.17

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಬೆಳಿಗ್ಗೆ 7.30 ರಿಂದ ಬೆಳಿಗ್ಗೆ 9.00

ಧನಸ್ಸು

ಹಿರಿಯರ ಸಹಾಯ ಸಹಕಾರ ದೊರೆವ ಕಾರಣ ನೆಮ್ಮದಿ ನೆಲೆಸುತ್ತದೆ. ಹಠದಿಂದ ಸ್ವಂತ ಉದ್ದಿಮೆಯನ್ನು ಆರಂಭಿಸುವ ನಿರ್ಧಾರಕ್ಕೆ ಬರಲಿರುವಿರಿ. ದಿಟ್ಟ ನಿರ್ಧಾರದಿಂದಾಗಿ ಉದ್ಯೋಗದಲ್ಲಿ ಹಿನ್ನೆಡೆ ಇರುವುದಿಲ್ಲ. ಕೆಲವೊಂದು ವಿಚಾರಗಳು ಅಪೂರ್ಣಗೊಳ್ಳಲಿವೆ. ವಿದ್ಯಾರ್ಥಿಗಳು ದೃಡವಾದ ನಿಲುವನ್ನು ತೆಗೆದುಕೊಳ್ಳಲು ವಿಫಲರಾಗುತ್ತಾರೆ. ವಿದ್ಯಾರ್ಥಿಗಳು ಹಣದ ವಿಚಾರದಲ್ಲಿ ಬೇರೆಯವರನ್ನು ಆಶ್ರಯಿಸುತ್ತಾರೆ. ಉದರ ಸಂಬಂಧಿತ ತೊಂದರೆ ಕಾಡುತ್ತದೆ. ಕೆಲಸ ಕಾರ್ಯಗಳು ನಡೆಯದೆ ಹೋದಲ್ಲಿ ಕೋಪಕ್ಕೆ ಒಳಗಾಗುವಿರಿ. ಮಕ್ಕಳಿಗೆ ಉದ್ಯೋಗ ದೊರೆಯುವ ಸಾಧ್ಯತೆ ಇದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ.

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಕರ

ನಿರೀಕ್ಷಿಸದ ಜವಾಬ್ದಾರಿಯೊಂದು ಆತ್ಮವಿಶ್ವಾಸವನ್ನು ಕುಗ್ಗಿಸುತ್ತದೆ. ಉದ್ಯೋಗದಲ್ಲಿ ಮಾಡುವ ತಪ್ಪನ್ನು ಮನ್ನಿಸಿ ಹಿರಿಯ ಅಧಿಕಾರಿಗಳು ಮಾರ್ಗದರ್ಶನ ನೀಡಲಿದ್ದಾರೆ. ಹಣಕಾಸಿನ ವಿಚಾರದಲ್ಲಿ ಹಿನ್ನಡೆ ಎದುರಿಸಬೇಕಾಗುತ್ತದೆ. ಅತಿಯಾದ ಕೆಲಸ ಕಾರ್ಯಗಳಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಸಮಾಜದ ಗಣ್ಯ ವ್ಯಕ್ತಿಯೊಬ್ಬರು ನಿಮ್ಮ ಸಹಾಯಕ್ಕೆ ಬರುತ್ತಾರೆ. ಸಹೋದರರ ಸಹಾಯದಿಂದ ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವಿರಿ. ಚುರುಕುತನದಿಂದ ವರ್ತಿಸಿ. ವಾದ ವಿವಾದಗಳಿಂದ ದೂರವಿರಿ. ದಿನಬಳಕೆಯ ಲೋಹದಿಂದ ತೊಂದರೆ ಉಂಟಾಗಬಹುದು. ಕುಟುಂಬದಲ್ಲಿ ಧಾರ್ಮಿಕ ಕಾರ್ಯವೊಂದು ನಡೆಯಲಿದೆ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕುಂಭ

ಕುಟುಂಬದ ಜನ ಹೆಮ್ಮೆ ಪಡುವಂತೆ ಜೀವನ ನಡೆಸುವಿರಿ. ಮನಸ್ಸಿಗೆ ಮುದ ನೀಡುವಂತೆ ಕಾರ್ಯವೊಂದನ್ನು ಪೂರ್ಣಗೊಳಿಸುವಿರಿ. ನಿಮ್ಮಲ್ಲಿ ಹುದುಗಿದ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ ಲಭ್ಯವಾಗುತ್ತದೆ. ಪ್ರಯತ್ನಕ್ಕೆ ತಕ್ಕಂತೆ ಆದಾಯ ಇರುತ್ತದೆ. ಸೋದರನ ಮಾತಿನಿಂದ ಕುಟುಂಬದ ತೊಂದರೆ ದೂರವಾಗಲಿದೆ. ಆರೋಗ್ಯದಲ್ಲಿ ತೊಂದರೆ ಇದೆ. ಉದ್ಯೋಗದಲ್ಲಿ ವಿಶಿಷ್ಟ ಸ್ಥಾನ ಮಾನ ದೊರೆತು ಅಧಿಕಾರಿಗಳ ಪ್ರಶಂಸೆ ಗಳಿಸುವಿರಿ. ವಿಶೇಷ ಅಧ್ಯಯನಕ್ಕೆ ವಿದೇಶಕ್ಕೆ ಪ್ರಯಾಣ ಬೆಳೆಸುವಿರಿ. ಸಾಲದ ವ್ಯವಹಾರ ಮಾಡದಿರಿ. ಆರೋಗ್ಯದ ಬಗ್ಗೆ ಗಮನ ಇರಲಿ. ಕುಟುಂಬದವರಿಗಾಗಿ ಮಂಗಳಕಾರ್ಯವೊಂದನ್ನು ನಡೆಸಿಕೊಡುವಿರಿ. ಅನಾವಶ್ಯಕ ಓಡಾಟಗಳಿರುತ್ತವೆ.

ಪರಿಹಾರ: ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮೀನ

ಆತ್ಮೀಯರಿಗೆ ಕೊಟ್ಟ ಮಾತನ್ನು ಮರೆಯುವಿರಿ. ಸ್ವಂತ ಉದ್ಯಮ ಆರಂಭಿಸುವ ಯೋಚನೆ ಇರುತ್ತದೆ. ನಿರ್ಧಾರಗಳಿಗೆ ಬದ್ಧರಾಗಿ ನೂತನ ಸಾಧನೆ ಮಾಡುವಿರಿ. ಹಿತೈಷಿಗಳ ಸಹಾಯ ಸಹಕಾರ ದೊರೆತಲ್ಲಿ ಹೆಚ್ಚಿನ ಅನುಕೂಲವಿದೆ. ಕುಟುಂಬಕ್ಕೆ ನಿಮ್ಮ ಪ್ರಸ್ತುತಿ ಅತಿ ಮುಖ್ಯ. ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಸಹಾಯ ದೊರೆಯುತ್ತದೆ. ಸಮಾಜದಲ್ಲಿ ವಿಶೇಷ ಗೌರವ ಲಭಿಸುತ್ತದೆ. ಹಣದ ಕೊರತೆಯಿಂದ ಪಾರಾಗಲು ಭೂ ವ್ಯವಹಾರವನ್ನು ಆರಂಭಿಸುವಿರಿ. ಆರೋಗ್ಯದ ಬಗ್ಗೆ ಗಮನ ಇರಲಿ. ಏಕಾಂಗಿತನದ ಕಾರಣ ಕುಟುಂಬದ ಕೆಲಸವೂಂದು ಅಪೂರ್ಣಗೊಳ್ಳಲಿದೆ. ಕೈಕಾಲುಗಳಿಗೆ ಶಕ್ತಿಯ ಕೊರತೆ ಕಂಡು ಬರುತ್ತದೆ. ಸಂಗಾತಿಗಾಗಿ ದುಬಾರಿ ಬೆಲೆಯ ಉಡುಗೊರೆ ನೀಡುವಿರಿ.

ಪರಿಹಾರ: ಸಹೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ : ಹಸಿರು ಬಣ್ಣ

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).