ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಯಾರನ್ನೂ ಸುಲಭವಾಗಿ ನಂಬಲ್ಲ, ವಿರೋಧಿಗಳ ಮನಸ್ಸನ್ನು ಗೆಲ್ಲುವಿರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Horoscope Today: ಯಾರನ್ನೂ ಸುಲಭವಾಗಿ ನಂಬಲ್ಲ, ವಿರೋಧಿಗಳ ಮನಸ್ಸನ್ನು ಗೆಲ್ಲುವಿರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

1 ಜುಲೈ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (1st July 2024 Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ.
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ.

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (1st July 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ದಶಮಿ ಹ.10.47 ರವರೆಗು ಇದ್ದು ಆನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ : ಅಶ್ವಿನಿ ನಕ್ಷತ್ರವು ಬೆ. 07.26 ರವರೆಗೆ ಇದ್ದು ಉಪರಿ ಭರಣಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.56

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: ಬೆಳಗ್ಗೆ 07.39 ರಿಂದ ಬೆಳಗ್ಗೆ 09.15

ಸಿಂಹ ರಾಶಿ

ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಜವಾಬ್ದಾರಿಯು ಹೆಚ್ಚುತ್ತದೆ. ಕೆಲಸದ ಒತ್ತಡದ ಕಾರಣ ಅಸಹನೆಯಿಂದ ವರ್ತಿಸುವಿರಿ. ಬೇರೆಯವರ ಅನಿಸಿಕೆಗೆ ಬೆಲೆ ಕೊಡದೆ ಸ್ವಂತ ತೀರ್ಮಾನಕ್ಕೆ ಮೇಲೆ ಬದ್ಧರಾಗುವಿರಿ. ನಿಮ್ಮಿಂದ ಯಾರಿಗೂ ತೊಂದರೆ ಅಥವಾ ನಷ್ಟವಾಗುವುದಿಲ್ಲ. ಅಪಾಯದ ಸನ್ನಿವೇಶದಲ್ಲಿ ಧೈರ್ಯ ಸಾಹಸದಿಂದ ಮುನ್ನುಗ್ಗುವಿರಿ. ನಿಮ್ಮ ವಿರೋಧಿಗಳಿಗೂ ಸಹಾಯ ಮಾಡುವಿರಿ. ಗೌರವವನ್ನು ಉಳಿಸಿಕೊಂಡು ಜೀವನದಲ್ಲಿ ಮುಂದುವರೆಯುವಿರಿ. ಸಮಾಜದಲ್ಲಿ ಕೀರ್ತಿಗಳಿಸುವಿರಿ. ಮನದಲ್ಲಿ ದೊಡ್ಡ ಆಸೆ ಆಕಾಂಕ್ಷೆಗಳು ಇರುತ್ತವೆ. ಕುಟುಂಬದ ಜೊತೆ ಯಾತ್ರಾಸ್ಥಳಕ್ಕೆ ತೆರಳುವಿರಿ. ಹೊಗಳಿಕೆಗೆ ಮರುಳಾಗಿ ಹಣದ ಸಹಾಯ ಮಾಡುವಿರಿ.

ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನೇರಳೆ

ಕನ್ಯಾ ರಾಶಿ

ನಿಮ್ಮ ಕಷ್ಟದ ಸಂದರ್ಭ ದಲ್ಲಿ ಆತ್ಮೀಯರು ದೂರವಾಗುತ್ತಾರೆ. ಸಂಬಂಧ ಅಥವಾ ಆತ್ಮೀಯರೊಂದಿಗೆ ವಿವಾಹವಾಗುತ್ತದೆ. ನಿಮ್ಮ ನಿಸ್ವಾರ್ಥ ವ್ಯಕ್ತಿತ್ವಕ್ಕೆ ಎಲ್ಲರೂ ತಲೆಬಾಗುತ್ತಾರೆ. ಉತ್ತಮ ಆದಾಯವಿದ್ದರೂ ಖರ್ಚು ವೆಚ್ಚಗಳು ಹೆಚ್ಚುತ್ತವೆ. ಹಣವನ್ನು ಉಳಿಸುವಲ್ಲಿ ಸಫಲರಾಗುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಯಾರೊಂದಿಗೂ ಮನ ಬಿಚ್ಚಿ ಮಾತನಾಡುವುದಿಲ್ಲ. ಶಾಸ್ತ್ರ ಸಂಪ್ರದಾಯದಲ್ಲಿ ಆಸಕ್ತಿ ಮೂಡುತ್ತದೆ. ಪ್ರತಿಯೊಂದು ವಿಚಾರವನ್ನು ಮನಸ್ಸಿಟ್ಟು ಅಭ್ಯಾಸ ಮಾಡುವಿರಿ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಬಾಳುವಿರಿ. ಬೇರೆಯವರಿಗೆ ಉತ್ತಮ ಸ್ಪೂರ್ತಿಯಾಗುವಿರಿ. ಅತಿಯಾದ ಮಾತಿನಿಂದ ಮನದಲ್ಲಿರುವ ವಿಚಾರಗಳನ್ನೆಲ್ಲ ಬೇರೆಯವರಿಗೆ ತಿಳಿಸುವಿರಿ.

ಪರಿಹಾರ: ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 9

ಅಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ

ತುಲಾ ರಾಶಿ

ಮನದಲ್ಲಿರುವ ವಿಚಾರವನ್ನು ಸಂಕೋಚದ ಕಾರಣ ಯಾರಿಗೂ ತಿಳಿಸುವುದಿಲ್ಲ. ವಿಶೇಷ ಬುದ್ಧಿವಂತಿಕೆ ಇರುತ್ತದೆ. ನಿಮ್ಮ ರೀತಿ ನೀತಿಗಳು ಇತರರಿಗೆ ಸ್ಪೂರ್ತಿಯಾಗುತ್ತದೆ. ಬೇಡದ ವಿಚಾರಗಳಿಗೆ ಹಣವನ್ನು ಖರ್ಚು ಮಾಡುವಿರಿ. ಸಂಘ ಸಂಸ್ಥೆಯ ನೇತೃತ್ವವು ನಿಮಗೆ ದೊರೆಯಲಿದೆ. ಶಿಸ್ತಿನ ಜೀವನ ನಡೆಸುವವರನ್ನು ಗೌರವಿಸುವಿರಿ. ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿಗೆ ತೆಗೆದುಕೊಳ್ಳುವಿರಿ. ಯಾರನ್ನು ಸುಲಭವಾಗಿ ನಂಬುವುದಿಲ್ಲ. ನಿಮ್ಮಲ್ಲಿರುವ ವಿಚಾರಗಳನ್ನು ಬೇರೆಯವರಿಗೂ ಹಂಚುವಿರಿ. ಅತಿಯಾದ ಆತುರತೆ ಒಳ್ಳೆಯದಲ್ಲ.

ಪರಿಹಾರ: ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ವೃಶ್ಚಿಕ ರಾಶಿ

ಸಣ್ಣಪುಟ್ಟ ವಿವಾದಗಳನ್ನು ದೊಡ್ಡದು ಮಾಡುವಿರಿ. ಕೋಪ ಬಂದಾಗ ಉದ್ವೇಗದಿಂದ ವರ್ತಿಸುವಿರಿ. ತಪ್ಪು ಮಾಡಿದ ನಂತರ ಪಶ್ಚಾತಾಪ ಪಡುವಿರಿ. ನಿಮ್ಮ ಮನಸ್ಸಿಗೆ ಮುದ ನೀಡುವ ವಸ್ತುಗಳನ್ನು ಕೊಳ್ಳುವಿರಿ. ವಿದ್ಯಾರ್ಥಿಗಳ ಅಭ್ಯಾಸವು ಉನ್ನತ ಮಟ್ಟದಲ್ಲಿರುತ್ತದೆ. ಯಾವುದೇ ವಿಚಾರವಾದರೂ ಅದರ ಮೂಲವನ್ನು ತಿಳಿದು ನಂತರ ಮುಂದುವರೆಯುವಿರಿ. ಬುದ್ಧಿವಂತಿಕೆಯ ಮಾತುಗಳಿಂದ ವಿರೋಧಿಗಳ ಮನಸ್ಸನ್ನು ಗೆಲ್ಲುವಿರಿ. ಹಾಸ್ಯಪ್ರಿಯರು. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಕೌಶಲ್ಯ ಇರುತ್ತದೆ. ಆರ್ಥಿಕ ಪರಿಸ್ಥಿತಿಯು ಕ್ರಮೇಣವಾಗಿ ಉತ್ತಮಗೊಳ್ಳುತ್ತದೆ. ಕೂಡಿಟ್ಟ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಚಿಕ್ಕ ಮಕ್ಕಳ ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ.

ಪರಿಹಾರ: ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)