ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಒತ್ತಡವನ್ನು ಜಯಿಸುತ್ತೀರಿ, ಎಚ್ಚರಿಕೆಯಿಂದ ಹಣ ಖರ್ಚು ಮಾಡಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

Horoscope Today: ಒತ್ತಡವನ್ನು ಜಯಿಸುತ್ತೀರಿ, ಎಚ್ಚರಿಕೆಯಿಂದ ಹಣ ಖರ್ಚು ಮಾಡಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ

1 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (1st June 2024 Daily Horoscope).

ಸಿಂಹ, ಕನ್ಯಾ, ತುಲಾ ಮತ್ತು ವೃಶ್ಚಿಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ
ಸಿಂಹ, ಕನ್ಯಾ, ತುಲಾ ಮತ್ತು ವೃಶ್ಚಿಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಬ್ರಹ್ಮಶ್ರೀ ಚಿಲಕಮರ್ತಿ ಪ್ರಭಾಕರ ಚಕ್ರವರ್ತಿ ಶರ್ಮಾ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (1st June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ: ನವಮಿ

ನಕ್ಷತ್ರ: ಉತ್ತರ ಭಾದ್ರಪದ

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.43

ರಾಹುಕಾಲ: ಮಧ್ಯಾಹ್ನ 12.17 ರಿಂದ 1.59 ರವರೆಗೆ

ಸಿಂಹ ರಾಶಿ

ಸಿಂಹ ರಾಶಿಯವರಿಗೆ ಸಾಧಾರಣ ಫಲಿತಾಂಶಗಳಿವೆ. ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಸಂಘರ್ಷಗಳನ್ನು ತಪ್ಪಿಸಿ. ಧನಯೋಗವಿದೆ. ಏಕಾಗ್ರತೆಯಿಂದ ಇಷ್ಟಪಟ್ಟ ಕೆಲಸವನ್ನು ಮಾಡುತ್ತೀರಿ. ಒತ್ತಡವನ್ನು ಜಯಿಸುತ್ತೀರಿ. ಆರೋಗ್ಯದಲ್ಲಿ ಮುನ್ನೆಚ್ಚರಿಕೆ ವಹಿಸುವುದು ಒಳ್ಳೆಯದು. ಕೌಟುಂಬಿಕ ಸಮಸ್ಯೆಗಳು ಕಾಡುತ್ತವೆ. ಸಿಂಹ ರಾಶಿಯವರಿಗೆ ಹೆಚ್ಚಿನ ಮಂಗಳಕರ ಫಲಿತಾಂಶಗಳಿಗಾಗಿ ವಿಘ್ನೇಶ್ವರನನ್ನು ಆರಾಧಿಸಬೇಕು. ಸಂಕಟನಾಶನ ಗಣಪತಿ ಸ್ತೋತ್ರ ಪಠಿಸಿ.

ಕನ್ಯಾ ರಾಶಿ

ಕನ್ಯಾ ರಾಶಿಯವರಿಗೆ ಅನುಕೂಲಕರವಾಗಿಲ್ಲ. ವ್ಯವಹಾರದಲ್ಲಿ ಎಚ್ಚರಿಕೆಯ ಅಗತ್ಯವಿದೆ. ಇತರರೊಂದಿಗೆ ಮಾತನಾಡುವಾಗ ಸೌಜನ್ಯದಿಂದ ವರ್ತಿಸಿ. ಹಣ ಇರುತ್ತದೆ. ಆ ಹಣವನ್ನು ಎಚ್ಚರಿಕೆಯಿಂದ ಖರ್ಚು ಮಾಡಿ. ಆರೋಗ್ಯದ ಬಗ್ಗೆ ಮುಂಜಾಗ್ರತೆ ವಹಿಸಬೇಕು. ಕನ್ಯಾ ರಾಶಿಯವರಿಗೆ ಹೆಚ್ಚಿನ ಶುಭ ಫಲಗಳಿಗಾಗಿ ಋಣ ಪರಿಹಾರ ಮಂಗಳ ಸ್ತೋತ್ರವನ್ನು ಪಠಿಸಬೇಕು. ನವಗ್ರಹ ಪೀಡಾಹರ ಸ್ತೋತ್ರವನ್ನು ಪಠಿಸುವುದು ಒಳ್ಳೆಯದು.

ತುಲಾ ರಾಶಿ

ತುಲಾ ರಾಶಿಯವರಿಗೆ ಸಾಧಾರಣ ಫಲಿತಾಂಶಗಳಿವೆ. ಪ್ರಶಂಸೆಗೆ ಒಳಗಾಗುತ್ತೀರಿ. ಭೂಮಿ ಮತ್ತು ಗೃಹ ಲಾಭ ಇದೆ. ಸಾಲ ಮಾಡುವುದನ್ನು ತಪ್ಪಿಸಿ. ಉತ್ತಮ ಫಲಿತಾಂಶಗಳನ್ನು ಸಾಧಿಸಲಾಗುವುದು. ವ್ಯಾಪಾರ ಯಶಸ್ಸನ್ನು ಪಡೆಯುತ್ತೀರಿ. ಒಳ್ಳೆಯ ಸುದ್ದಿಯು ಸಂತೋಷವನ್ನು ತರುತ್ತದೆ. ಆರೋಗ್ಯ ಕಾಳಜಿ ಅಗತ್ಯ. ಶಾಂತವಾಗಿ ಯೋಚಿಸುವುದು ಉತ್ತಮ. ವೆಚ್ಚವನ್ನು ನಿಯಂತ್ರಿಸಬೇಕು. ತುಲಾ ರಾಶಿಯವರಿಗೆ ಹೆಚ್ಚು ಮಂಗಳಕರ ಫಲಿತಾಂಶಗಳಿಗಾಗಿ ನವಗ್ರಹ ಪೀಡಾಹರ ಸ್ತೋತ್ರವನ್ನು ಪಠಿಸಿ. ನವಗ್ರಹ ದೇವಾಲಯಗಳಿಗೆ ಭೇಟಿ ನೀಡುವುದು ಮತ್ತು ನವಗ್ರಹ ಪ್ರದಕ್ಷಿಣೆ ಮಾಡುವುದು ಒಳ್ಳೆಯದು.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಹಿರಿಯರಿಂದ ಪ್ರಶಂಸೆ ಇದೆ. ಶಕ್ತಿ ಯೋಗವಿದೆ. ಕೆಲಸಕ್ಕೆ ಸೇರುತ್ತೀರಿ. ನಿರ್ಧಾರಗಳನ್ನು ಮುಂದೂಡುವುದಿಲ್ಲ. ಗೌರವ ಪ್ರಶಸ್ತಿಗಳು ಲಭಿಸಲಿವೆ. ಕಾಮಗಾರಿಗಳಲ್ಲಿ ಪ್ರಗತಿ ಇರಲಿದೆ. ಗೆಳೆಯರೊಂದಿಗೆ ತೊಂದರೆಗಳು ಎದುರಾಗಬಹುದು. ತಾಳ್ಮೆಯಿಂದಿರಿ. ಒಂದು ಒಳ್ಳೆಯ ಸುದ್ದಿ ಕೇಳುತ್ತೀರಿ. ವೃಶ್ಚಿಕ ರಾಶಿಯವರಿಗೆ ಹೆಚ್ಚಿನ ಮಂಗಳಕರ ಫಲಿತಾಂಶಗಳಿಗಾಗಿ ನವಗ್ರಹ ಪೀಡಾಹರ ಸ್ತೋತ್ರವನ್ನು ಪಠಿಸಿ. ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಹೆಚ್ಚಿನ ಆಶೀರ್ವಾದ ಇರಲಿದೆ.

ಬರಹ: ಜ್ಯೋತಿಷಿ ಬ್ರಹ್ಮಶ್ರೀ ಚಿಲಕಮರ್ತಿ ಪ್ರಭಾಕರ ಚಕ್ರವರ್ತಿ ಶರ್ಮಾ

ಮೊಬೈಲ್: 9494981000

ಇ-ಮೇಲ್: www.chilakamarthi.com

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)