Horoscope Today: ದಾಂಪತ್ಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ, ವಿದ್ಯಾರ್ಥಿಗಳಿಗೆ ಶುಭ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
1 ಮೇ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (1st May 2024 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (1st May 2024 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಬುಧವಾರ
ತಿಥಿ : ಅಷ್ಟಮಿ ರಾತ್ರಿ 12.44 ರವರೆಗೂ ಇದ್ದು ಆನಂತರ ನವಮಿ ಆರಂಭವಾಗುತ್ತದೆ.
ನಕ್ಷತ್ರ : ಶ್ರವಣ ನಕ್ಷತ್ರವು ರಾತ್ರಿ 12.17 ರವರೆಗೂ ಇದ್ದು ನಂತರ ಧನಿಷ್ಠ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.59
ಸೂರ್ಯಾಸ್ತ: ಸಂಜೆ 06.34
ರಾಹುಕಾಲ: 12.20 ರಿಂದ 01.54
ರಾಶಿಫಲ
ಮೇಷ
ಮನದ ಆಸೆ ಅಕಾಂಕ್ಷೆಗಳನ್ನು ಪೂರ್ಣಗೊಳ್ಳಲು ತಾಯಿಯ ಬೆಂಬಲ ದೊರೆಯಲಿದೆ. ಹಟದ ಗುಣ ಬೇರೆಯವರಲ್ಲಿ ಬೇಸರ ಉಂಟುಮಾಡಲಿದೆ. ಅನಿವಾರ್ಯವಾಗಿ ಏಕಾಂಗಿಯಾಗಿ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಉದ್ಯೋಗದಲ್ಲಿ ಆತ್ಮೀಯರ ಮಾರ್ಗದರ್ಶನದಿಂದ ಉತ್ತಮ ಯಶಸ್ಸನ್ನು ಗಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭವಿರುತ್ತದೆ. ದಾಂಪತ್ಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನುಕಾಣುವಿರಿ. ವಿದ್ಯಾರ್ಥಿಗಳ ನಿರೀಕ್ಷೆಗಳು ಹುಸಿಯಾಗದು. ಉನ್ನತ ಅಧ್ಯಯನದಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಹಣಕಾಸಿನ ವ್ಯವಹಾರದಲ್ಲಿ ಆತಂಕವಿರುವುದಿಲ್ಲ.
ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ತಿಳಿ ಹಸಿರು
ವೃಷಭ
ಅತಿಯಾದ ಆಸೆಯಿಂದ ನೆಮ್ಮದಿಯ ಕೊರತೆ ಇರುತ್ತದೆ. ಫಲಿತಾಂಶವನ್ನು ಲೆಕ್ಕಿಸದೆ ಧೈರ್ಯದಿಂದ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಉತ್ತಮ ಆದಾಯವಿರುತ್ತದೆ. ಮಿತಿ ಮೀರಿದ ಖರ್ಚು ವೆಚ್ಚಗಳಿಂದ ಹಣದ ಕೊರತೆ ಎದುರಾಗುತ್ತವೆ. ಅವಶ್ಯಕತೆ ಇದ್ದಲ್ಲಿ ತಾಯಿಯವರು ಹಣದ ಸಹಾಯ ಮಾಡುತ್ತಾರೆ. ಹೆಚ್ಚಿನ ಪ್ರಯತ್ನದಿಂದ ಸ್ವಂತ ಮನೆಯ ಕನಸು ನನಸಾಗಲಿದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ವಿದ್ಯಾರ್ಥಿಗಳು ಕರ್ತವ್ಯ ಪಾಲನೆಯಲ್ಲಿ ನಿರತರಾಗುತ್ತಾರೆ. ತಾಯಿಯವರಿಗೆ ತವರಿನ ಹಣದಲ್ಲಿ ಪಾಲು ದೊರೆಯುತ್ತದೆ. ವಿದೇಶದಲ್ಲಿ ಉದ್ಯೋಗ ಗಳಿಸಲು ತಯಾರಿ ನಡೆಸುವಿರಿ. ಅಶಕ್ತರಿಗೆ ಹಣದ ಸಹಾಯ ಮಾಡುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ.
ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ 4
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ನಸು ಕೆಂಪು
ಮಿಥುನ
ಸರಿ ತಪ್ಪು ಎಣಿಸದೆ ಮನದ ಮಾತನ್ನು ಆಡುವಿರಿ. ಆದರೆ ಆಡುವ ಮಾತಿನಲ್ಲಿ ದಿಟ್ಟತನವಿರುತ್ತದೆ. ನಿಮ್ಮ ಪಾಲಿನ ಹಣವನ್ನು ಪಡೆಯುವಿರಿ. ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳುವುದಿಲ್ಲ. ಅನಿರೀಕ್ಷಿತ ಧನಲಾಭವಿರುತ್ತದೆ. ಕೆಲಸ ಕಾರ್ಯಗಳ ವೈಖರಿಯನ್ನು ಪದೇ ಪದೇ ಬದಲಿಸದಿರಿ. ಸೋದರ ಸೋದರಿಯ ಒಡನೆ ಉತ್ತಮ ಬಾಂಧವ್ಯ ಬೆಳೆಯುತ್ತದೆ. ವಿದ್ಯಾರ್ಥಿಗಳು ಕಷ್ಟ ಪಟ್ಟು ತಮ್ಮ ಗುರಿ ತಲುಪುತ್ತಾರೆ . ಉದ್ಯೋಗದಲ್ಲಿ ಬಗೆಹರಿಯದ ಕಾರ್ಯದ ಒತ್ತಡ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಆದಾಯ ಗಳಿಸುವಿರಿ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತದೆ. ಉದ್ಯೋಗದ ವಿಚಾರದಲ್ಲಿ ಉನ್ನತ ಅಧಿಕಾರಿಯೊಬ್ಬರ ಭೇಟಿ ಮಾಡಬೇಕಾಗುತ್ತದೆ.
ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ಕಟಕ
ಬಿಡುವು ತೆಗೆದುಕೊಳ್ಳುವುದೆಂದರೆ ಇಷ್ಟವಾಗದು. ಸದಾ ಕಾಲ ಕ್ರಿಯಾಶೀಲತೆಯಿಂದ ಕೆಲಸದಲ್ಲಿ ನಿರತರಾಗುವಿರಿ. ಆತ್ಮವಿಶ್ವಾಸವು ಸುಲಭವಾಗಿ ಯಶಸ್ಸನ್ನು ನೀಡುತ್ತದೆ. ಯಾವುದೇ ಅಡ್ಡಿಆತಂಕಗಳು ಇದ್ದರೂ ಗೆಲುವನ್ನು ಸಾಧಿಸುವಿರಿ. ಹಣಕಾಸಿನ ವಿಚಾರದಲ್ಲಿ ಕುಟುಂಬದಲ್ಲಿ ಒಮ್ಮತದ ನಿಲುವು ಉಂಟಾಗುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಉತ್ತಮ ಸಹಕಾರ ದೊರೆಯಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಬಂಡವಾಳದ ಕೊರತೆ ಇರುತ್ತದೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯುತ್ತಾರೆ. ತಂದೆಯ ಆರೋಗ್ಯದಲ್ಲಿನ ತೊಂದರೆ ಮರೆಯಾಗಲಿದೆ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದ ಇರಿ. ಆತ್ಮೀಯರಿಗೆ ಉಡುಗೊರೆಯೊಂದನ್ನು ನೀಡುವಿರಿ.
ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
