ಕನ್ನಡ ಸುದ್ದಿ  /  Astrology  /  Horoscope Today Astrology Prediction 20 March 2024 Leo Virgo Libra Scorpio Daily Horoscope Sts

Horoscope Today: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ವಿದೇಶಿ ಆಡಳಿತ ಸಂಸ್ಥೆಯಲ್ಲಿ ಉದ್ಯೋಗ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ರಾಶಿಫಲ

20 ಮಾರ್ಚ್‌ 2024, ಬುಧವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (20 March 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (20 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ : ಏಕಾದಶಿ ರಾತ್ರಿ 03.49 ರವರೆಗೂ ಇರುತ್ತದೆ ನಂತರ ದ್ವಾದಶಿ ಆರಂಭವಾಗುತ್ತದೆ

ನಕ್ಷತ್ರ : ಪುಷ್ಯ ನಕ್ಷತ್ರವು ರಾತ್ರಿ 12.14 ರವರೆಗೆ ಇರುತ್ತದೆ ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.24

ಸೂರ್ಯಾಸ್ತ: ಸಂಜೆ 06.29

ರಾಹುಕಾಲ: ಮಧ್ಯಾಹ್ನ 12.00 ರಿಂದ 01.30

ದಿನದ ವಿಶೇಷ: ಇಂದು ಸರ್ವೇಷಾಮೇಕಾದಶಿ

ರಾಶಿ ಫಲ

ಸಿಂಹ

ಕುಟುಂಬದಲ್ಲಿ ಅಶಾದಾಯಕ ಬದಲಾವಣೆಗಳು ಉಂಟಾಗಲಿವೆ. ಉದ್ಯೋಗದಲ್ಲಿನ ಕಾರ್ಯದ ಒತ್ತಡದಿಂದ ಬೇಸತ್ತು ಉದ್ಯೋಗ ಬದಲಿಸುವಿರಿ. ಸಮಾಜದಲ್ಲಿ ಉನ್ನತ ಸ್ಥಾನ ಮಾನ ದೊರೆಯುತ್ತವೆ. ಪಾಲುದಾರಿಕೆ ವ್ಯಾಪಾರದಲ್ಲಿ ಹೆಚ್ಚಿನ ಲಾಭಾಂಶ ಪಡೆಯುವಿರಿ. ಗಣ್ಯವ್ಯಕ್ತಿಯೊಬ್ಬರು ಕುಟುಂಬದ ಆಸ್ತಿಯ ವಿವಾದವನ್ನು ಬಗೆಹರಿಸುತ್ತಾರೆ. ವಿದ್ಯಾರ್ಥಿಗಳಿಗೆ ವಿದೇಶಿ ಆಡಳಿತದ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಕುಟುಂಬದ ಹೆಚ್ಚಿನ ಜವಾಬ್ದಾರಿ ಒತ್ತಡವನ್ನು ಉಂಟುಮಾಡುತ್ತದೆ. ಮಹಿಳೆಯರು ಚಿನ್ನ ಬೆಳ್ಳಿ ಒಡವೆಗಳಿಗೆ ಹೆಚ್ಚಿನ ಹಣ ಖರ್ಚುಮಾಡುತ್ತಾರೆ. ಆತುರದಲ್ಲಿ ಮುಖ್ಯವಾದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಎಲ್ಲರ ಜೊತೆ ಪ್ರೀತಿ ವಿಶ್ವಾಸದಿಂದ ಮಾತನಾಡಿ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಕಂದು

ಕನ್ಯಾ

ಕುಟುಂಬದಲ್ಲಿ ಪರಸ್ಪರ ವಿಶ್ವಾಸದ ಕೊರತೆ ಇರುತ್ತದೆ. ಆತ್ಮೀಯರ ಆಗಮನ ಹೊಸ ಹುರುಪು ನೀಡಲಿದೆ. ಸಾಲದ ವ್ಯವಹಾರ ಮಾಡಬೇಡಿ. ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಆಮದು ರಪ್ತು ವ್ಯಾಪಾರದಲ್ಲಿ ಹೇರಳ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಥಿತಿಯನ್ನು ಹೊಂದುವ ಅಗತ್ಯವಿದೆ. ಪ್ರತಿಯೊಂದು ಕೆಲಸ ಕಾರ್ಯಗಳಿಗೆ ಬಾಳ ಸಂಗಾತಿಯ ಸಹಾಯ ಸಹಕಾರ ದೊರೆಯುತ್ತದೆ. ಪ್ರಸ್ತುತ ಇರುವ ವ್ಯಾಪಾರ ವ್ಯವಹಾರವನ್ನು ಮುಂದುವರಿಸಿ. ಹಣಕಾಸಿನ ವಿಚಾರದಲ್ಲಿ ಸ್ಥಿರತೆ ಕಂಡುಬರುವುದು. ಹಳೆ ವಾಹನದ ಬದಲಾಗಿ ಹೊಸ ವಾಹನ ಕೊಳ್ಳುವಿರಿ. ಮನೆಯ ಸುತ್ತ ಮುತ್ತಲ ಪ್ರಕೃತಿಯನ್ನು ಕಾಪಾಡಲಿದ್ದೀರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ: ಕಪ್ಪು

ತುಲಾ

ಕುಟುಂಬದಲ್ಲಿ ಒಮ್ಮತದ ವಾತಾವರಣ ಇರುತ್ತದೆ. ಉದ್ಯೋಗದಲ್ಲಿನ ಸಣ್ಣ ಪುಟ್ಟ ಬದಲಾವಣೆಗಳು ಅನುಕೂಲಕಾರಿ ಆಗಲಿವೆ. ಬಂಧು ಬಳಗದವರ ಜವಾಬ್ದಾರಿ ನಿಮಗೆ ದೊರೆಯುತ್ತದೆ. ವಿದ್ಯಾರ್ಥಿಗಳು ಕಲಿಯಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಾರೆ. ಕಾನೂನು ಪಾಲನಾ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಹಣದ ಕೊರತೆಯನ್ನು ಕಡಿಮೆಮಾಡಲು ಸಣ್ಣಪ್ರಮಾಣದ ವ್ಯಾಪಾರ ಆರಂಭಿಸುವಿರಿ. ಧೈರ್ಯ ಸಾಹಸದ ಗುಣ ನಿಮ್ಮಲ್ಲಿದೆ. ಶಾಂತಿ ಸಂಧಾನದಿಂದ ಕುಟುಂಬದ ಭೂವಿವಾದಕ್ಕೆ ಬಗೆಹರಿಯುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಿರಿ. ಮನೆಯ ಸಾಕು ಪ್ರಾಣಿಗಳಿಗೆ ಕೂಡಿಟ್ಟ ಹಣ ಖರ್ಚುಮಾಡುವಿರಿ. ಅನಾವಶ್ಯಕ ಓಡಾಟ ಹೆಚ್ಚಾಗಲಿದೆ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ವೃಶ್ಚಿಕ

ಕುಟುಂಬದಲ್ಲಿ ಬೇಸರದ ಸನ್ನಿವೇಶವೊಂದು ಎದುರಾಗಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳೊಡನೆ ಅನಿರೀಕ್ಷಿತ ವಾದ ವಿವಾದ ಇರುತ್ತದೆ. ಕೃಷಿಯಾಧಾರಿತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವರು. ಮನಸ್ಸಿದ್ದರೂ ಉದ್ಯೋಗವನ್ನು ಬದಲಿಸಲು ಸಾಧ್ಯವಾಗದು. ಹಣಕಾಸಿನ ನಿರ್ವಹಣೆಯಲ್ಲಿ ಆತಂಕದ ಪರಿಸ್ಥಿತಿ ಎದುರಾಗುತ್ತದೆ. ಅನಗತ್ಯ ವಾದ ವಿವಾದಗಳನ್ನು ಮರೆತು ಕುಟುಂಬದವರೊಂದಿಗೆ ಪ್ರೀತಿಯಿಂದ ವರ್ತಿಸಿ. ದೈಹಿಕ ವ್ಯಾಯಾಮದಿಂದ ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ. ಹಣದ ಉಳಿತಾಯದ ಯೋಜನೆಗಳನ್ನು ರೂಪಿಸುವಿರಿ. ಬೇರೆಯವರ ಮನಸ್ಸನ್ನು ಅರಿತುಕೊಳ್ಳಲು ಪ್ರಯತ್ನಿಸಿ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನಸು ಗೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).