Horoscope Today: ಕೃಷಿಭೂಮಿ ಕೊಳ್ಳುವಿರಿ, ಸಾಕುಪ್ರಾಣಿಗಳಿಂದ ತೊಂದರೆ ಉಂಟಾಗಬಹುದು, ಎಚ್ಚರ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
20 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (20th April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (20th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಶನಿವಾರ
ತಿಥಿ : ದ್ವಾದಶಿ ರಾತ್ರಿ 10.26 ರವರೆಗೂ ಇದ್ದು ನಂತರ ತ್ರಯೋದಶಿ ಆರಂಭವಾಗುತ್ತದೆ.
ನಕ್ಷತ್ರ : ಪುಬ್ಬ ನಕ್ಷತ್ರವು 02.10 ರವರೆಗೂ ಇರುತ್ತದೆ ನಂತರ ಉತ್ತರ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.04
ಸೂರ್ಯಾಸ್ತ: ಸಂಜೆ 06.32
ರಾಹುಕಾಲ : ಬೆಳಗ್ಗೆ 09.15 ರಿಂದ 10.49
ರಾಶಿಫಲ
ಮೇಷ
ಕುಟುಂಬದಲ್ಲಿ ಗೆಲುವೊಂದರ ಕಾರಣ ಸಂತೋಷ ನೆಮ್ಮದಿ ಇರುತ್ತದೆ. ಇರುವ ಮನೆಯನ್ನು ವಿಸ್ತರಿಸುವ ಯೋಚನೆ ಕಾರ್ಯರೂಪಕ್ಕೆ ಬರಲಿದೆ. ಉದ್ಯೋಗದಲ್ಲಿ ಕಾರ್ಯದ ಒತ್ತಡ ಹೆಚ್ಚುತ್ತದೆ. ವಿಶ್ರಾಂತಿ ದೊರೆಯದೆ ಉದ್ಯೋಗ ಬದಲಿಸುವ ಯೋಚನೆ ಮಾಡುವಿರಿ. ಮಕ್ಕಳ ಸಹಾಯ ದೊರೆತು ಮನಸ್ಸಿನ ಆತಂಕ ದೂರವಾಗುತ್ತದೆ. ಸಾಕು ಪ್ರಾಣಿಗಳಿಂದ ತೊಂದರೆ ಉಂಟಾಗಬಹುದು. ಕೃಷಿ ಭೂಮಿಯನ್ನು ಕೊಳ್ಳುವಿರಿ. ಚಿಕ್ಕ ಪುಟ್ಟ ವಿಚಾರಗಳಲ್ಲಿಯೂ ಹೆಚ್ಚಿನ ಆಸಕ್ತಿ ತೋರುವಿರಿ. ಬಳಸಿದ ವಾಹನಗಳ ವಿಲೇವಾರಿ ಮಾಡುವಿರಿ. ಹಣದ ಕೊರತೆಯಿಂದ ನೆಮ್ಮದಿ ಕಡಿಮೆ ಆಗುತ್ತದೆ. ವಿದ್ಯಾರ್ಥಿಗಳು ಪ್ರಯಾಸದಿಂದ ಗುರಿ ತಲುಪಲಿದ್ದಾರೆ. ಅತಿಯಾದ ಆತ್ಮವಿಶ್ವಾಸದಿಂದ ತಪ್ಪು ಮಾಡುವ ಸಾಧ್ಯತೆಗಳಿವೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕೇಸರಿ
ವೃಷಭ
ದೈನಂದಿನ ಜೀವನದಲ್ಲಿ ಅಡಚಣೆಯೊಂದು ಕಂಡು ಬರುತ್ತದೆ. ಉದ್ಯೋಗದಲ್ಲಿ ಗೊಂದಲ ಮರೆಯಾಗುತ್ತದೆ. ವಿದ್ಯಾರ್ಥಿಗಳು ಭಯದಿಂದ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಗಾಳಿಮಾತಿಗೆ ಓಗೊಟ್ಟು ಉದ್ಯೋಗ ಬದಲಾಯಿಸುವಿರಿ. ಕುಟುಂಬದ ಸದಸ್ಯರ ಸಹಾಯದಿಂದ ಹಣದ ಕೊರತೆಯಿಂದ ಪಾರಾಗುವಿರಿ. ಮಕ್ಕಳಿಗೆ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ. ವಾದ ವಿವಾದಗಳನ್ನು ಇಷ್ಟಪಡದೆ ಶಾಂತಿಯಿಂದ ಗೆಲುವು ಸಾಧಿಸುವಿರಿ. ಉಪಯೋಗವಿಲ್ಲದ ವಿಚಾರಗಳಿಗೆ ಹಣ ಖರ್ಚು ಮಾಡುವಿರಿ. ಮನೆಯ ಸುತ್ತಮುತ್ತಲ ಪರಿಸರವನ್ನು ಶ್ರಭ್ರವಾಗಿಟುಕೊಳ್ಳುವಿರಿ. ಹೈನು ವ್ಯಾಪಾರದಲ್ಲಿ ಆಸಕ್ತಿ ಮೂಡುತ್ತದೆ. ನಿಶ್ಯಕ್ತಿ ಕಾಡಲಿದೆ.
ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ 12
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ
ಮಿಥುನ
ಹಣದ ಕೊರತೆ ಕಡಿಮೆ ಆಗಲಿದೆ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತದೆ. ಕುಟುಂಬದಲ್ಲಿ ಪರಸ್ಪರ ಸಮರ್ಪಣಾ ಮನೋಭಾವನೆ ಇರುತ್ತದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಅಧಿಕಾರಿಗಳ ನಕಾರಾತ್ಮಕ ಧೋರಣೆಯಿಂದ ಉದ್ಯೋಗದಲ್ಲಿ ಬೇಸರ ಉಂಟಾಗಲಿದೆ. ವ್ಯಾಪಾರ ವ್ಯವಹಾರದಲ್ಲಿನ ಆದಾಯ ಹೆಚ್ಚುತ್ತದೆ. ವಿದ್ಯಾರ್ಥಿಗಳು ಹೊಸ ನಿರೀಕ್ಷೆಯಲ್ಲಿ ಸಾಗುತ್ತಾರೆ. ಮಕ್ಕಳಿಗೆ ವಿವಾಹ ಯೋಗವಿದೆ. ಕುಟುಂಬದಿಂದ ದೂರವಿದ್ದ ಸೋದರರೊಬ್ಬರು ಮರಳಿ ಬರುತ್ತಾರೆ. ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲ್ಲಿದ್ದಾರೆ. ಕರ ಕುಶಲಕಲತೆ ಬಲ್ಲವರಿಗೆ ಸಮಾಜದಲ್ಲಿ ವಿಶೇಷ ಗೌರವ ದೊರೆಯಲಿದೆ. ಪ್ರಾಣಿ ಪಕ್ಷಿಗಳ ಬಗ್ಗೆ ಅನುಕಂಪ ಮೂಡುತ್ತದೆ.
ಪರಿಹಾರ : ಗೋಶಾಲೆಗೆ ಧನ ಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕೆಂಪು
ಕಟಕ
ಜಾಣ್ಮೆಯಿಂದ ತಂದೆಯವರ ಭೂ ವಿವಾದವೊಂದನ್ನು ಪರಿಹರಿಸುವಿರಿ. ಆತುರದಿಂದ ಉದ್ಯೋಗ ಬದಲಿಸುವಿರಿ. ಕುಟುಂಬದ ಹೆಚ್ಚಿನ ಜವಾಬ್ದಾರಿ ನಿಮ್ಮದಾಗುತ್ತದೆ. ಚರ್ಚಿಸದೆ ವ್ಯಾಪಾರ ವ್ಯವಹಾರದಲ್ಲಿ ತೀರ್ಮಾನವನ್ನು ತೆಗೆದುಕೊಳ್ಳದಿರಿ. ವಿದ್ಯಾರ್ಥಿಗಳು ಚುರುಕಿನಿಂದ ಮುಂದುವರೆಯುತ್ತಾರೆ. ಬೇಸಾಯದಲ್ಲಿ ಲಾಭವಿದೆ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ. ಸಣ್ಣ ಪ್ರಮಾಣದ ವ್ಯಾಪಾರದಲ್ಲಿ ಲಾಭವಿರುತ್ತದೆ. ತಾಯಿಯವರಿಗೆ ತವರಿನಿಂದ ಹಣ ಅಥವ ಆಸ್ತಿ ದೊರೆಯಲಿದೆ. ಹೊಸ ವ್ಯಾಪಾರ ಆರಂಭಿಸುವ ಪ್ರಯತ್ನ ಕೈಬಿಡುವಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಮಕ್ಕಳಿಗೆ ಉಡುಗೊರೆಯೊಂದನ್ನು ನೀಡುವಿರಿ. ಖರ್ಚಿನ ಮೇಲೆ ನಿಗಾ ಇರಲಿ.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಕಿತ್ತಳೆ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).