Horoscope Today: ಗೃಹಿಣಿಯರಿಗೆ ಉದ್ಯೋಗ ದೊರೆಯಲಿದೆ, ಸಾಲದ ವ್ಯವಹಾರಕ್ಕೆ ಕೈ ಹಾಕದಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
20th ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (20th April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(20th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಶನಿವಾರ
ತಿಥಿ : ದ್ವಾದಶಿ ರಾತ್ರಿ 10.26 ರವರೆಗೂ ಇದ್ದು ನಂತರ ತ್ರಯೋದಶಿ ಆರಂಭವಾಗುತ್ತದೆ.
ನಕ್ಷತ್ರ : ಪುಬ್ಬ ನಕ್ಷತ್ರವು 02.10 ರವರೆಗೂ ಇರುತ್ತದೆ ನಂತರ ಉತ್ತರ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.04
ಸೂರ್ಯಾಸ್ತ: ಸಂಜೆ 06.32
ರಾಹುಕಾಲ : ಬೆಳಗ್ಗೆ 09.15 ರಿಂದ 10.49
ರಾಶಿಫಲ
ಧನಸ್ಸು
ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರುತ್ತದೆ. ಕುಟುಂಬದ ಖರ್ಚು ವೆಚ್ಚಗಳ ಬಗ್ಗೆ ಗಮನವಿರಲಿ. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿ ಲಾಭವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸುತ್ತದೆ. ತಂದೆಯವರ ಪ್ರಯತ್ನದಿಂದ ಕುಟುಂಬದಲ್ಲಿ ಒಮ್ಮತ ಮೂಡುತ್ತದೆ. ಮಕ್ಕಳಿಗೆ ಪರಸ್ಥಳದಲ್ಲಿ ಉದ್ಯೋಗ ದೊರಕುತ್ತದೆ. ಹಣದ ಕೊರತೆ ಕಡಿಮೆ ಆಗಲಿದೆ. ವಿದ್ಯಾರ್ಥಿಗಳು ಸುಲಭವಾಗಿ ಯಶಸ್ಸನ್ನು ಕಾಣುತ್ತಾರೆ. ತಾಯಿಗೆ ಅನಾರೋಗ್ಯ ಇರುತ್ತದೆ. ನೀರಿರುವ ಸ್ಥಳದಲ್ಲಿ ತೊಂದರೆ ಇರಲಿದೆ. ವೈವಾಹಿಕ ಜೀವನದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಸಮಾಜದಲ್ಲಿ ಪ್ರಮುಖ ಸ್ಥಾನ ದೊರೆಯಲಿದೆ. ಗೃಹಿಣಿಯರಿಗೆ ಉದ್ಯೋಗ ದೊರೆಯಲಿದೆ. ಸಾಲವಾಗಿ ಹಣವನ್ನು ಪಡೆಯದಿರಿ.
ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಗುಲಾಬಿ
ಮಕರ
ಹಣಕಾಸಿನ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತತೆ. ವ್ಯವಸಾಯಕ್ಕೆ ಅಗತ್ಯವಾದ ಯಂತ್ರೋಪಕರಣಗಳ ಸರಬರಾಜಿನಲ್ಲಿ ಲಾಭವಿದೆ. ಸೋದರನಿಗೆ ವಿವಾಹದ ನೆಂಟಸ್ಥಿಕೆ ಕೂಡಿ ಬರುತ್ತದೆ. ಕುಟುಂಬದ ನಿರ್ವಹಣೆಗಾಗಿ ಉಪವೃತ್ತಿಯೊಂದನ್ನು ಆರಂಭಿಸುವಿರಿ. ಬೆಲೆ ಬಾಳುವ ವಸ್ತುಗಳಿಗೆ ಹಣ ಖರ್ಚಾಗುತ್ತದೆ. ಮಾತಿನಿಂದ ಕೆಲಸ ಸಾಧಿಸಬಲ್ಲಿರಿ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನಕ್ಕೆ ವಿದೇಶದಲ್ಲಿ ಅವಕಾಶ ಪಡೆಯುತ್ತಾರೆ. ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ಕುಟುಂಬದಲ್ಲಿ ಅನಾವಶ್ಯಕ ವಾದ ವಿವಾದಗಳು ಇರುತ್ತವೆ. ಬಡವರ ಮದುವೆಗೆ ಸಹಾಯ ಮಾಡುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ.
ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರ ಕಟ್ಟುವುದರಿಂದ ಶುಭವಿರುತ್ತದೆ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬಿಳಿ
ಕುಂಭ
ಆಸ್ತಿಯ ವಿಚಾರದಲ್ಲಿ ತಂದೆಯವರಿಗೆ ಮೋಸವಾಗುತ್ತದೆ. ಕಾನೂನು ಪ್ರಕ್ರಿಯೆಯಲ್ಲಿ ಯಶಸ್ಸು ದೊರೆಯುತ್ತದೆ. ಕುಟುಂಬದಲ್ಲಿ ವಿನಾಕಾರಣ ವಿರಸದ ಸನ್ನಿವೇಶವಿರುತ್ತದೆ. ಉದ್ಯೋಗದಲ್ಲಿನ ಆಂತರಿಕ ಸಮಸ್ಯೆಯನ್ನು ಪರಿಹರಿಸುವಿರಿ. ವಿದ್ಯಾರ್ಥಿಗಳು ಜವಾಬ್ದಾರಿಯನ್ನು ಅರಿತು ನಡೆದುಕೊಳ್ಳಲಿದ್ದಾರೆ. ಸ್ವಂತ ಬಳಕೆಗಾಗಿ ಹೊಸ ವಾಹನ ಕೊಳ್ಳುವಿರಿ. ಕುಟುಂಬದಲ್ಲಿ ಮಂಗಳಕಾರ್ಯವೊಂದು ನಡೆಯಲಿದೆ. ಸಮಾಜದ ವಿವಾದವನ್ನು ಬಗೆಹರಿಸುವಿರಿ. ಕೈಹಿಡಿದ ಕೆಲಸ ಕಾರ್ಯಗಳು ಯಶಸ್ವಿಯಾಗುವವರೆಗೂ ರಹಸ್ಯ ಕಾಪಾಡುವಿರಿ. ತಂದೆಯ ಆರೋಗ್ಯದ ಬಗ್ಗೆ ಗಮನ ಇರಲಿ. ಧಾರ್ಮಿಕ ವಿಧಿ ವಿದಾನಗಳ ಜವಾಬ್ದಾರಿ ನಿಮಗೆ ದೊರೆಯುತ್ತದೆ.
ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಬೂದು ಬಣ್ಣ
ಮೀನ
ಬಂಧು ಬಳಗದವರಿಗೆ ಅನುಕೂಲವಾಗುವ ಹಣಕಾಸಿನ ವ್ಯವಹಾರವನ್ನು ಆರಂಭಿಸುವಿರಿ. ಸಮಯ ಸಾಧಿಸಿ ಸ್ವಂತ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಯಂತ್ರ ವಾಹನದ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಯಾರನ್ನೂ ಸಹಾಯಕ್ಕಾಗಿ ಬೇಡುವುದಿಲ್ಲ. ಬೇರೆಯವರ ಹಣಕಾಸಿನ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿದಲ್ಲಿ ತೊಂದರೆ ಅನುಭವಿಸುವಿರಿ. ವಿದ್ಯಾರ್ಥಿಗಳಿಗೆ ಖ್ಯಾತ ಸಂಸ್ಥೆಯೊಂದರಲ್ಲಿ ಉದ್ಯೋಗ ಲಭಿಸುತ್ತದೆ. ವಿದ್ಯಾರ್ಥಿಗಳು ಅಪರೂಪದ ಸಾಧನೆಗೆ ಸಾಕ್ಷಿಯಾಗುತ್ತಾರೆ. ಸಾಮಾಜಿಕ ರಂಗದಲ್ಲಿ ಗಣ್ಯಸ್ಥಾನ ಲಭಿಸುತ್ತದೆ. ಪಶು ಸಂಗೋಪನೆಯಲ್ಲಿ ಲಾಭವಿರುತ್ತದೆ. ಅರೆ ತಲೆಶೂಲೆ ನಿಮ್ಮನ್ನು ಕಾಡಲಿದೆ. ತೂಕ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುವಿರಿ.
ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಕಂದು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ