ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಪ್ರಯೋಜನವಿಲ್ಲದ ಓಡಾಟದಿಂದ ಮಾನಸಿಕ ಒತ್ತಡ, ನೀರಿನಿಂದ ಸಮಸ್ಯೆ ಇದೆ ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಪ್ರಯೋಜನವಿಲ್ಲದ ಓಡಾಟದಿಂದ ಮಾನಸಿಕ ಒತ್ತಡ, ನೀರಿನಿಂದ ಸಮಸ್ಯೆ ಇದೆ ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

20 ಜೂನ್‌ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (20th June 2024 Daily Horoscope).

ಪ್ರಯೋಜನವಿಲ್ಲದ ಓಡಾಟದಿಂದ ಮಾನಸಿಕ ಒತ್ತಡ, ನೀರಿನಿಂದ ಸಮಸ್ಯೆ ಇದೆ ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಪ್ರಯೋಜನವಿಲ್ಲದ ಓಡಾಟದಿಂದ ಮಾನಸಿಕ ಒತ್ತಡ, ನೀರಿನಿಂದ ಸಮಸ್ಯೆ ಇದೆ ಎಚ್ಚರ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (20th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ತ್ರಯೋದಶಿ ಬೆಳಗ್ಗೆ 06.13 ರವರೆಗೂ ಇದ್ದು ನಂತರ ಚತುರ್ದಶಿ ತಿಥಿ ಇರುತ್ತದೆ.

ನಕ್ಷತ್ರ : ಅನೂರಾಧ ನಕ್ಷತ್ರವು ಸಂಜೆ 05.22 ರವರೆಗೆ ಇದ್ದು ನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ05.53

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: 02.01 ರಿಂದ 03.37

ರಾಶಿಫಲ

ಮೇಷ

ವಿಶೇಷ ವಿದ್ಯೆಯನ್ನು ಕಲಿಯುವ ಅವಕಾಶ ದೊರೆಯಲಿದೆ. ಸಂಗಾತಿಯಿಂದ ಹಣದ ಸಹಾಯ ದೊರೆಯುತ್ತದೆ. ಸೋದರರ ಸಹಯೋಗದಲ್ಲಿ ಸ್ವಂತ ವ್ಯಾಪಾರದ ಬಗ್ಗೆ ಯೋಚಿಸುವಿರಿ. ದುಡುಕಿ ಖರ್ಚು ಮಾಡಿ ನಂತರ ಚಿಂತೆಗೆ ಒಳಗಾಗುವಿರಿ. ಬದಲಾಗುವ ವಾತಾವರಣದ ಕಾರಣ ಅನಾರೋಗ್ಯವಿರುತ್ತದೆ. ಸರ್ಕಾರಿ ನೌಕರರಿಗೆ ಶುಭಸುದ್ದಿಯೊಂದು ಬರಲಿದೆ. ಅತಿಯಾದ ಆತ್ಮವಿಶ್ವಾಸದಿಂದ ಉದ್ಯೋಗದಲ್ಲಿ ತಪ್ಪು ಮಾಡುವ ಸಾಧ್ಯತೆ ಇರುತ್ತದೆ. ಆದಾಯಕ್ಕೆ ಸಮನಾದ ಖರ್ಚು ವೆಚ್ಚಗಳಿರುತ್ತವೆ. ಪ್ರಯೋಜನವಿಲ್ಲದ ಓಡಾಟ ಮಾನಸಿಕ ಒತ್ತಡಕ್ಕೆ ಕಾರಣವಾಗಲಿದೆ. ವಂಶದ ಹಣಕಾಸಿನ ವಿಚಾರದಲ್ಲಿ ನಿರೀಕ್ಷಿಸಿದ ಲಾಭ ದೊರೆಯದು. ಸಿಡುಕದೆ ಸಹನೆಯಿಂದ ವರ್ತಿಸಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬೂದು

ವೃಷಭ

ಹಟದ ಬುದ್ದಿಯಿಂದ ಮನ:ಶಾಂತಿ ಕೆಡುತ್ತದೆ. ಕುಟುಂಬದಲ್ಲಿ ಒಮ್ಮತದ ಕೊರತೆ ಇರುತ್ತದೆ. ಮಕ್ಕಳು ವಿದ್ಯಾಭ್ಯಾಸದಲ್ಲಿ ಮೊದಲ ಸ್ಥಾನ ಗಳಿಸುವರು. ಪಠ್ಯೇತರ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಮಾತಿನಲ್ಲಿ ಎಲ್ಲರ ಮನ ಗೆಲ್ಲುವ ಚತುರತೆ ಇರುತ್ತದೆ. ಕಷ್ಟವಲ್ಲದ ಕೆಲಸಗಳನ್ನು ಆಯ್ಕೆ ಮಾಡಿಕೊಳ್ಳುವಿರಿ. ಇರುವ ಉದ್ಯೋಗದಲ್ಲಿ ಅನಾವಶ್ಯಕ ವಿವಾದಗಳು ಎದುರಾಗುತ್ತದೆ. ಸಂಗಾತಿಯ ಚಿನ್ನಾಭರಣಗಳಿಗೆ ಹಣ ಖರ್ಚು ಮಾಡುವಿರಿ. ಕಾನೂನು ಪ್ರಕ್ರಿಯೆಯಲ್ಲಿ ಯಶಸ್ಸು ಗಳಿಸುವಿರಿ ಹಣಕಾಸಿನ ವ್ಯವಹಾರದಲ್ಲಿ ಲಾಭವಿದೆ. ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಮನೆಯಲ್ಲಿನ ಪೂಜಾಸ್ಥಳವನ್ನು ಬದಲಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಆಕಾಶ ನೀಲಿ

ಮಿಥುನ

ಅಪೂರ್ಣಗೊಂಡಿರುವ ಕುಟುಂಬದ ಕೆಲಸಗಳನ್ನು ಪೂರ್ಣಗೊಳಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಕೊಂಚ ಹಿನ್ನೆಡೆ ಉಂಟಾಗುತ್ತದೆ. ನಿರುದ್ಯೋಗಿಗಳಿಗೆ ಬೃಹತ್ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ವೃತ್ತಿಯ ವಿಚಾರಲ್ಲಿ ಗಲಿಬಿಲಿ ಇರುತ್ತದೆ. ದೀರ್ಘಕಾಲದಿಂದ ಕಾಡುತ್ತಿರುವ ಆನಾರೋಗ್ಯದ ತೊಂದರೆ ಕಡಿಮೆ ಆಗುತ್ತದೆ. ವಿದ್ಯಾರ್ಥಿಗಳು ಆತುರದಿಂದ ತಪ್ಪು ನಿರ್ಧಾರ ತೆಗೆದುಕೊಳ್ಳುತ್ತಾರೆ. ಗುರುಗಳ ಮಾರ್ಗದರ್ಶನದಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ವಿಶ್ರಾಂತಿಯ ಕೊರತೆ ಇರುತ್ತದೆ. ಸಂಗಾತಿ ಜೊತೆ ಉತ್ತಮ ಬಾಂಧವ್ಯ ರೂಪುಗೊಳ್ಳುತ್ತದೆ. ನೀರಿರುವ ಪ್ರದೇಶದಲ್ಲಿ ತೊಂದರೆ ಇರುತ್ತದೆ. ಎಚ್ಚರಿಕೆ ಇರಲಿ. ಮನರಂಜನಾ ಕೂಟದಲ್ಲಿ ಭಾಗವಹಿಸುವಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೆಂಪು

ಕಟಕ

ಆತ್ಮವಿಶ್ವಾಸದಿಂದ ನಿಮ್ಮ ಕೆಲಸ ಕಾರ್ಯಗಳು ಸರಾಗವಾಗಿ ಸಾಗುತ್ತವೆ. ಒಂದೇ ಬಾರಿ ಹಲವು ಕೆಲಸಗಳನ್ನು ಮಾಡಬಲ್ಲ ಚಾತುರ್ಯತೆ ಇರುತ್ತದೆ. ವಿದ್ಯಾರ್ಥಿ ವೃಂದಕ್ಕೆ ಅನಿರೀಕ್ಷಿತವಾದ ಶುಭಫಲಗಳು ದೊರೆಯಲಿದೆ. ಸಾರ್ವಜನಿಕ ಜೀವನದಲ್ಲಿ ನಿಮಗೆ ಉನ್ನತ ಗೌರವ ಲಭಿಸುತ್ತದೆ. ಯಾರನ್ನೂ ನಂಬದೆ ಏಕಾಂಗಿಯಾಗಿ ಕೆಲಸ ಕಾರ್ಯಗಳಲ್ಲಿ ಮಗ್ನರಾಗುವಿರಿ. ವ್ಯಾಪಾರದಲ್ಲಿ ಆಸಕ್ತಿ ಇರುವುದಿಲ್ಲ. ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಇರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಮಧ್ಯವರ್ತಿಗಳಿಂದ ತೊಂದರೆ ಉಂಟಾಗಬಹುದು. ಸಾರ್ವಜನಿಕರಿಗೆ ಅನುಕೂಲವಾಗುವಂತಹ ಕೆಲಸ ಆರಂಭಿಸುವಲ್ಲಿ ಯಶಸ್ವಿಯಾಗುವಿರಿ. ಅನಾರೋಗ್ಯವಿರುತ್ತದೆ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.