Horoscope Today: ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಲಿದ್ದೀರಿ, ಕಲಾವಿದರಿಗೆ ಪ್ರತಿಭೆಗೆ ತಕ್ಕಂತೆ ಅವಕಾಶ ದೊರೆಯಲಿದೆ; ಮಾರ್ಚ್ 20ರ ದಿನಭವಿಷ್ಯ
20 ಮಾರ್ಚ್ 2024, ಬುಧವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (20th March 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (20th March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಶುಕ್ಲಪಕ್ಷ-ಬುಧವಾರ
ತಿಥಿ : ಏಕಾದಶಿ ರಾತ್ರಿ 03.49 ರವರೆಗೂ ಇರುತ್ತದೆ ನಂತರ ದ್ವಾದಶಿ ಆರಂಭವಾಗುತ್ತದೆ
ನಕ್ಷತ್ರ : ಪುಷ್ಯ ನಕ್ಷತ್ರವು ರಾತ್ರಿ 12.14 ರವರೆಗೆ ಇರುತ್ತದೆ ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.24
ಸೂರ್ಯಾಸ್ತ: ಸಂಜೆ 06.29
ರಾಹುಕಾಲ: ಮಧ್ಯಾಹ್ನ 12.00 ರಿಂದ 01.30
ದಿನದ ವಿಶೇಷ: ಇಂದು ಸರ್ವೇಷಾಮೇಕಾದಶಿ
ರಾಶಿಫಲ
ಮೇಷ
ಆತುರದ ನಿರ್ಧಾರ ತೆಗೆದುಕೊಳ್ಳುವ ಕಾರಣ ಕುಟುಂಬದಲ್ಲಿ ಗಲಿಬಿಲಿಯ ವಾತಾವರಣ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆಗಳು ಎದುರಾಗುತ್ತವೆ. ವಿದ್ಯಾರ್ಥಿಗಳು ಮನಸ್ಸಿನ ಮೇಲೆ ಹಿಡಿತ ಹೊಂದಬೇಕು. ಕೆಲವರ ಸಹವಾಸದಿಂದ ದೂರವಿರಲು ವಾಸಸ್ಥಳವನ್ನು ಬದಲಿಸುವಿರಿ. ಉಷ್ಣದ ತೊಂದರೆ ಕಾಡುತ್ತದೆ. ಆಹಾರದಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕಾಗುತ್ತದೆ. ಸಾಂಪ್ರದಾಯಿಕ ಕಲೆಯಲ್ಲಿ ಆಸಕ್ತಿ ಮೂಡಲಿದೆ. ಕಲಾವಿದರಿಗೆ ತಮ್ಮ ಪ್ರತಿಭೆಗೆ ತಕ್ಕಂತೆ ಅವಕಾಶಗಳು ದೊರೆಯುತ್ತವೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರಗಳಲ್ಲಿ ಆಸಕ್ತಿ ಇರುವುದಿಲ್ಲ. ತಂದೆಯವರಿಗೆ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುವಿರಿ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಈಶಾನ್ಯ
ಬಣ್ಣ: ನೇರಳೆ ಬಣ್ಣ
ವೃಷಭ
ಕುಟುಂಬದಲ್ಲಿ ಹಣದ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ. ವ್ಯಾಪಾರ ವ್ಯವಹಾರಕ್ಕಾಗಿ ಬೇರೆಯವರಿಂದ ಹಣ ಪಡೆಯುವಿರಿ. ವಿದ್ಯಾರ್ಥಿಗಳು ಸ್ವಂತ ಬುದ್ಧಿಬಲದಿಂದ ಉನ್ನತ ವಿದ್ಯಾಭ್ಯಾಸದಲ್ಲಿ ಮುಂದುವರೆಯುತ್ತಾರೆ. ಖರ್ಚು ವೆಚ್ಚಕ್ಕೆ ತಕ್ಕಂತ ಆದಾಯ ಇರುತ್ತದೆ. ಆದಾಯ ಹೆಚ್ಚಿಸಲು ಉಪವೃತ್ತಿಯನ್ನು ಆರಂಭಿಸುವಿರಿ. ಬಡವರಿಗೆ ಸಹಾಯ ಮಾಡುವಿರಿ. ಕಣ್ಣಿನ ತೊಂದರೆ ಇದ್ದಲ್ಲಿ ಚಿಕಿತ್ಸೆಯ ಅವಶ್ಯಕತೆ ಇರುತ್ತದೆ. ಕುಟುಂಬದಲ್ಲಿ ಆಸ್ತಿಯ ವಿಚಾರದಲ್ಲಿ ಮಾತುಕತೆ ನಡೆಯಲಿದೆ. ಪಶುಸಂಗೋಪನೆಯಲ್ಲಿ ಆಸಕ್ತಿ ಮೂಡಲಿದೆ. ದೈನಂದಿನ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಂಡುಬರಲಿದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ಗುಲಾಬಿ
ಮಿಥುನ
ಕುಟುಂಬದ ಪ್ರಮುಖ ಕೆಲಸವೊಂದು ಮುಂದೆ ಹೋಗಲಿದೆ. ಒಬ್ಬರನೊಬ್ಬರು ದೂರುವ ಕಾರಣ ಕುಟುಂಬದ ಸಾಮರಸ್ಯ ಕೆಡಲಿದೆ. ಮನೆ ರಿಪೇರಿ ಮಾಡಲು ಹೆಚ್ಚಿನ ಹಣ ಖರ್ಚಾಗಲಿದೆ. ವೈಭೋಗದ ಜೀವನವನ್ನು ಇಷ್ಟಪಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ಇರುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ನಿರೀಕ್ಷೆಯಿಂದ ದಿನ ಕಳೆಯುತ್ತಾರೆ. ವಾಹನದಿಂದ ತೊಂದರೆ ಉಂಟಾಗಬಹುದು ಎಚ್ಚರಿಕೆ ವಹಿಸಿ. ದಂಪತಿಗಳ ನಡುವೆ ಅನ್ಯೋನ್ಯತೆ ಇರುತ್ತದೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ವೃತ್ತಿ ಬದಲಾಯಿಸುವಿರಿ. ತಾಯಿಯವರಿಗೆ ಅನಾರೋಗ್ಯ ಇರುತ್ತದೆ. ಹಣ ಉಳಿಸುವ ಆಲೋಚನೆ ಮಾಡಿರ. ಪೂರ್ವ ನಿರ್ಧರಿತ ಕಾರ್ಯಕ್ರಮವೊಂದು ಮುಂದಕ್ಕೆ ಹೋಗಲಿದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಕಟಕ
ಕುಟುಂಬದಲ್ಲಿ ಪರಸ್ಪರರ ನಡುವೆ ವಿಶ್ವಾಸ ಇರುತ್ತದೆ. ಶ್ರದ್ದೆಯಿಂದ ವ್ಯಾಪಾರ ವ್ಯವಹಾರದಲ್ಲಿ ತೊಡಗುವಿರಿ. ಒತ್ತಡದ ಸನ್ನಿವೇಶದಲ್ಲಿ ಶಾಂತಿಯಿಂದ ನಡೆದುಕೊಳ್ಳುವಿರಿ. ಉದ್ಯೋಗಸ್ಥರಿಗೆ ಉನ್ನತ ಅಧಿಕಾರ ದೊರೆಯುತ್ತದೆ. ರಾಜಕೀಯದಲ್ಲಿ ಆಸಕ್ತಿ ಇರುವವರಿಗೆ ಉತ್ತಮ ಅವಕಾಶವೊಂದು ದೊರೆಯುತ್ತದೆ. ಭೂವಿವಾದವನ್ನು ಎದುರಿಸಬೇಕಾಗುತ್ತದೆ. ಭೂಮಿ ಕೊಳ್ಳುವ ಮನಸ್ಸು ಮಾಡುವಿರಿ. ವಿದ್ಯಾರ್ಥಿಗಳಿಗೆ ಶುಭಫಲ ದೊರೆಯುತ್ತವೆ. ಪಾಲುಗಾರಿಕೆ ವ್ಯಾಪಾರದಲ್ಲಿನ ವಿವಾದ ಕೊನೆಯಾಗಲಿದೆ. ಜೀವನದ ಆಡ್ಡಿ ಆತಂಕಗಳನ್ನು ದಿಟ್ಟತನದಿಂದ ಎದುರಿಸುವಿರಿ. ಹಾಲು ಮತ್ತು ಹಾಲಿನ ಉತ್ಪನ್ನಗಳ ವ್ಯಾಪಾರವನ್ನು ಆರಂಭಿಸುವಿರಿ.
ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಬೂದು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).