Horoscope Today: ಬಹಳ ದಿನಗಳಿಂದ ದೂರ ಇದ್ದ ಸೋದರರು ಮುನಿಸು ಮರೆತು ಒಂದಾಗಲಿದ್ದಾರೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಬಹಳ ದಿನಗಳಿಂದ ದೂರ ಇದ್ದ ಸೋದರರು ಮುನಿಸು ಮರೆತು ಒಂದಾಗಲಿದ್ದಾರೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಬಹಳ ದಿನಗಳಿಂದ ದೂರ ಇದ್ದ ಸೋದರರು ಮುನಿಸು ಮರೆತು ಒಂದಾಗಲಿದ್ದಾರೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

20 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (20th May 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (20th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ: ದ್ವಾದಶಿ 02.44 ವರೆಗೂ ಇರುತ್ತದೆ ನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ: ಚಿತ್ತೆ ನಕ್ಷತ್ರವು ರಾತ್ರಿ 04.53 ರವರೆಗೂ ಇದ್ದು ನಂತರ ಸ್ವಾತಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.51

ಸೂರ್ಯಾಸ್ತ: ಸಂಜೆ 06.38

ರಾಹುಕಾಲ: ಬೆಳಗ್ಗೆ 07.32 ರಿಂದ 09.08

ರಾಶಿಫಲ

ಮೇಷ

ಕುಟುಂಬದ ವಿಚಾರಗಳ ಗೆಲುವಿಗೆ ಹೆಚ್ಚಿನ ಪ್ರಾಶಸ್ತ್ರ್ಯ ನೀಡುವಿರಿ. ವಾಸವಿರುವ ಮನೆಯನ್ನು ಬದಲಿಸುವ ಯೋಚನೆ ಕಾರ್ಯರೂಪಕ್ಕೆ ಬರಲಿದೆ. ಉದ್ಯೋಗದಲ್ಲಿನ ಕಾರ್ಯದ ಒತ್ತಡ ಮನಸ್ಸಿನ ಶಾಂತಿಯನ್ನು ದೂರ ಮಾಡುತ್ತದೆ. ಮನೆಯಲ್ಲಿ ಸಾಕಿರುವ ಪ್ರಾಣಿಗಳಿಂದ ತೊಂದರೆ ಉಂಟಾಗಬಹುದು. ಹುಟ್ಟೂರಿನಲ್ಲಿ ಜಮೀನನ್ನು ಕೊಳ್ಳುವಿರಿ. ಸಣ್ಣ ಪುಟ್ಟ ವಿಚಾರಗಳಲ್ಲಿಯೂ ಹೆಚ್ಚಿನ ಆಸಕ್ತಿ ತೋರುವಿರಿ. ದಿನನಿತ್ಯ ಬಳಸುತ್ತಿರುವ ವಾಹನವನ್ನು ಮಾರಾಟ ಮಾಡುವಿರಿ. ಹೊಸ ವಾಹನವೊಂದು ಉಡುಗೊರೆಯಾಗಿ ದೊರೆಯಲಿದೆ. ಹಣದ ಕೊರತೆ ಕಡಿಮೆ ಆಗುತ್ತದೆ. ವಿದ್ಯಾರ್ಥಿಗಳು ಕಷ್ಟದಿಂದ ನಿರ್ದಿಷ್ಠ ಗುರಿ ತಲುಪಲಿದ್ದಾರೆ. ಅತಿಯಾದ ಆತ್ಮವಿಶ್ವಾಸದಿಂದ ಸಂದಿಗ್ದ ಪರಿಸ್ಥಿತಿ ಎದುರಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ವೃಷಭ

ಕುಟುಂಬದ ಕೆಲಸ ಕಾರ್ಯದಲ್ಲಿ ಅಡಚಣೆಯೊಂದು ಕಂಡುಬರುತ್ತದೆ. ಉದ್ಯೋಗದಲ್ಲಿನ ಗೊಂದಲಗಳು ಮರೆಯಾಗುತ್ತವೆ. ವಿದ್ಯಾರ್ಥಿಗಳು ಭಯದಿಂದ ಅನಿರೀಕ್ಷಿತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅನಗತ್ಯ ಬೆಳವಣಿಗೆಗೆ ಬೇಸರಗೊಂಡು ಉದ್ಯೋಗವನ್ನು ಬದಲಾಯಿಸುವಿರಿ. ಮಕ್ಕಳ ವಿಚಾರದಲ್ಲಿ ದಿಟ್ಟ ತೀರ್ಮಾನ ತೆಗೆದುಕೊಳ್ಳುವಿರಿ. ಕುಟುಂಬದ ಹಿರಿಯರ ಸಹಾಯದಿಂದ ಹಣದ ಕೊರತೆಯಿಂದ ಪಾರಾಗುವಿರಿ. ಸಂಗಾತಿಗೆ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ವಂಶದ ಆಸ್ತಿ ಹಂಚಿಕೆಯಲ್ಲಿ ವಿವಾದ ಉಂಟಾಗುವ ಸಾದ್ಯತೆಗಳಿವೆ. ವಾದ ವಿವಾದಗಳನ್ನು ಮರೆತು ಬಾಳುವಿರಿ. ಪ್ರಯೋಜನವಿಲ್ಲದ ವಿಚಾರಗಳಿಗೆ ಹಣ ಖರ್ಚು ಮಾಡುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ

ಮಿಥುನ

ವ್ಯರ್ಥ ಖರ್ಚಿನ ಕಾರಣ ಹಣದ ಕೊರತೆ ಇರಲಿದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಸಮರ್ಪಣಾ ಮನೋಭಾವನೆಯಿಂದ ಉದ್ಯೋಗದಲ್ಲಿ ಗೌರವಯುತ ಸ್ಥಾನ ಗಳಿಸುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಅಧಿಕಾರಿಗಳ ಕೆಟ್ಟ ಧೋರಣೆ ದೂರವಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಮಧ್ಯಮಗತಿಯ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಸಾಧನೆಯ ದಾರಿಯಲ್ಲಿ ಸಾಗುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಆದಾಯ ಇರಲಿದೆ. ಬೆರೆಯವರ ಸಹಾಯದಿಂದ ವಿವಾಹ ನಿಶ್ಚಯವಾಗಲಿದೆ. ಕುಟುಂಬದಿಂದ ದೂರವಿದ್ದ ಸೋದರನೊಬ್ಬನು ಜಗಳ ಮರೆತು ಮರಳಿ ಬರುತ್ತಾರೆ. ವಿದ್ಯಾರ್ಥಿಗಳಿಗೆ ವಿಶೇಷ ಉದ್ಯೋಗಾವಕಾಶಗಳು ದೊರೆಯುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬಿಳಿ

ಕಟಕ

ತಂದೆಯವರ ಭೂವಿವಾದವೊಂದನ್ನು ಪರಿಹರಿಸುವಿರಿ. ಬುದ್ಧಿವಂತಿಕೆಯಿಂದ ಉದ್ಯೋಗ ಬದಲಿಸುವಿರಿ. ಕುಟುಂಬದ ಹೆಚ್ಚಿನ ಜವಾಬ್ದಾರಿ ಹೊರಬೇಕಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಯಾವುದೇ ತೊಂದರೆ ಕಾಣುವುದಿಲ್ಲ. ಕುಟುಂಬದ ಕೆಲಸ ಕಾರ್ಯದ ನಿರ್ಧಾರವನ್ನು ಚರ್ಚಿಸದೆ ತೆಗೆದುಕೊಳ್ಳುವುದಿಲ್ಲ. ವಿದ್ಯಾರ್ಥಿಗಳು ಕಲಿಕೆಯ ಮಟ್ಟವನ್ನು ಹೆಚ್ಚಿಸಿ ಕೊಳ್ಳುವಿರಿ. ಬೇಸಾಯದಲ್ಲಿ ಲಾಭವಿದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಸಣ್ಣ ಪ್ರಮಾಣದ ಉದ್ದಿಮೆಯಲ್ಲಿ ಲಾಭ ಗಳಿಸುವಿರಿ. ನಿಮ್ಮ ತಾಯಿಯವರು ನಿಮ್ಮನ್ನು ಹಣದ ಕಷ್ಟದಿಂದ ಪಾರು ಮಾಡುತ್ತಾರೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಶುಚಿಯಾದ ಆಹಾರ ಸೇವಿಸಿರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.