ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವಿದ್ಯಾರ್ಥಿಗಳಿಗೆ ಉನ್ನತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ, ದಾಂಪತ್ಯ ಜೀವನದಲ್ಲಿ ವಾದ ವಿವಾದ; ಮೇ 20ರ ದಿನ ಭವಿಷ್ಯ

Horoscope Today: ವಿದ್ಯಾರ್ಥಿಗಳಿಗೆ ಉನ್ನತ ಸಂಸ್ಥೆಯಲ್ಲಿ ಉದ್ಯೋಗ ದೊರೆಯಲಿದೆ, ದಾಂಪತ್ಯ ಜೀವನದಲ್ಲಿ ವಾದ ವಿವಾದ; ಮೇ 20ರ ದಿನ ಭವಿಷ್ಯ

20 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (20th May 2024 Daily Horoscope).

ಮೇ 20ರ ದಿನ ಭವಿಷ್ಯ
ಮೇ 20ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (20th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ: ದ್ವಾದಶಿ 02.44 ವರೆಗೂ ಇರುತ್ತದೆ ನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ: ಚಿತ್ತೆ ನಕ್ಷತ್ರವು ರಾತ್ರಿ 04.53 ರವರೆಗೂ ಇದ್ದು ನಂತರ ಸ್ವಾತಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.51

ಸೂರ್ಯಾಸ್ತ: ಸಂಜೆ 06.38

ರಾಹುಕಾಲ: ಬೆಳಗ್ಗೆ 07.32 ರಿಂದ 09.08

ರಾಶಿಫಲ

ಸಿಂಹ

ತಾರತಮ್ಯ ತೋರದೆ ಪ್ರತಿಯೊಂದು ಕೆಲಸಗಳಿಗೂ ಹೆಚ್ಚಿನ ಪ್ರಾಶಸ್ತ್ಯ ನೀಡುವಿರಿ. ಹೊಂದಾಣಿಕೆಯ ಗುಣ ಇರುವ ಕಾರಣ ಕುಟುಂಬದಲ್ಲಿ ಶಾಂತಿ ನೆಲೆಸಿರುತ್ತದೆ. ಆತ್ಮವಿಶ್ವಾಸದಿಂದ ಯಶಸ್ಸಿನ ಜೀವನ ನಡೆಸುವಿರಿ. ಆತ್ಮೀಯರ ಸಹಾಯದಿಂದ ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಕೃಷಿ ಕೆಲಸಕ್ಕಾಗಿ ಭೂಮಿಯನ್ನು ಕೊಳ್ಳುವಿರಿ. ಹಟದ ಕಾರಣ ಹಣಕಾಸಿನ ವಿಚಾರದಲ್ಲಿ ತೊಂದರೆಗೆ ಸಿಲುಕುವಿರಿ. ಕುಟುಂಬದ ಸದಸ್ಯರ ಜೊತೆ ಮನರಂಜನಾ ಕೂಟಕ್ಕೆ ತೆರಳುವಿರಿ. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನ ಮಾಡುವ ಅವಕಾಶ ದೊರೆಯುತ್ತದೆ. ಜನಪ್ರತಿನಿಗಳಿಗೆ ವಿಶೇಷ ಗೌರವ ಲಭಿಸುತ್ತದೆ. ಮನೆಯ ನೆರೆ ಹೊರೆಯಲ್ಲಿ ಉತ್ತಮ ಆತ್ಮೀಯತೆ ಉಂಟಾಗುತ್ತದೆ.

ಪರಿಹಾರ: ದೇವರಿಗೆ ತುಪ್ಪದ ದೀಪ ಹಚ್ಚಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕಂದು

ಕನ್ಯಾ

ಕುಲ ಕಸುಬಿನಿಂದಾಗಿ ಕುಟುಂಬದ ಆದಾಯ ಹೆಚ್ಚುತ್ತದೆ. ದೈಹಿಕ ವ್ಯಾಯಾಮದಿಂದ ಆರೋಗ್ಯದ ತೊಂದರೆ ದೂರವಾಗುತ್ತದೆ. ಸ್ವತಂತ್ರವಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಕುಟುಂಬದಲ್ಲಿ ವಿವಾಹ ಕಾರ್ಯ ನಡೆಯಲಿದೆ. ತಂದೆಯವರ ಸಲಹೆಯಿಂದ ಒಪ್ಪಿದಲ್ಲಿ ಸಮಸ್ಯೆಯೊಂದು ನಿವಾರಣೆ ಆಗುವುದು. ಕಲಾವಿದರಿಗೆ ಶುಭಫಲಗಳು ದೊರೆಯಲಿದೆ. ಉದ್ಯೋಗದಲ್ಲಿ ದುಡುಕಿನ ಮಾತನಾಡದಿರಿ. ವಿದ್ಯಾರ್ಥಿಗಳಿಗೆ ಶುಭವಿದೆ. ಗಣ್ಯವ್ಯಕ್ತಿಯೊಬ್ಬರ ಸಹಾಯ ದೊರೆಯುತ್ತದೆ. ತಂದೆಯವರಿಗೆ ಅನಾವಶ್ಯಕ ಖರ್ಚು ವೆಚ್ಚಗಳು ಇರಲಿವೆ. ಕುಟುಂಬದ ಜವಾಬ್ದಾರಿ ನಿಮ್ಮದಾಗಲಿದೆ. ದಾಂಪತ್ಯ ಜೀವನದಲ್ಲಿ ವಾದವಿವಾದಗಳು ಇರಲಿವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

ತುಲಾ

ತಂದೆಯ ಜೊತೆ ಹಣಕಾಸಿನ ವಿಚಾರದಲ್ಲಿ ವಾದ ವಿವಾದ ಇರುತ್ತದೆ. ಸಹನೆಯಿಂದ ವರ್ತಿಸಿದಲ್ಲಿ ಉದ್ಯೋಗದಲ್ಲಿ ಶುಭಫಲಗಳು ದೊರೆಯಲಿವೆ. ವ್ಯಾಪಾರ ವ್ಯವಹಾರದಲ್ಲಿ ನಿಮ್ಮ ಜವಾಬ್ದಾರಿ ಹೆಚ್ಚುತ್ತದೆ. ಕಷ್ಟಕರ ಕೆಲಸದಲ್ಲಿ ಆಸಕ್ತಿ ಇರದು. ಮೈದಣಿವಿಲ್ಲದೆ ಕೆಲಸ ಕಾರ್ಯಗಳನ್ನು ಮಾಡಲು ಇಚ್ಚಿಸುವಿರಿ. ಹಣಕಾಸಿನ ವಿಚಾರದಲ್ಲಿ ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಆರೋಗ್ಯದ ಬಗ್ಗೆ ಕಾಳಜಿ ಹೊಂದುವಿರಿ. ಎಚ್ಚರಿಕೆಯಿಂದ ದಾಂಪತ್ಯದ ಸಮಸ್ಯೆಯನ್ನು ನಿವಾರಿಸುವಿರಿ. ಚಾಡಿ ಮಾತನ್ನು ನಂಬಿದಲ್ಲಿ ಕುಟುಂಬದ ಒಗ್ಗಟ್ಟು ಕಡಿಮೆಯಾಗುತ್ತದೆ. ಭೂವಿವಾದದಲ್ಲಿ ಮಾತುಕತೆಯ ಮೂಲಕ ಹಿಡಿತ ಸಾಧಿಸುವಿರಿ. ಸೋದರಿಯ ವಿವಾಹದ ಜವಾಬ್ದಾರಿ ನಿಮ್ಮದಾಗುತ್ತದೆ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ವೃಶ್ಚಿಕ

ಮಗಳ ಆರೋಗ್ಯದ ಬಗ್ಗೆ ಎಚ್ಚರ ಇರಲಿ. ಭೂವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯಲಿದೆ. ತಂದೆಗೆ ಪರಸ್ಥಳದಲ್ಲಿ ಉದ್ಯೋಗ ದೊರೆಯಲಿದೆ. ಹಣದ ಕೊರತೆಯಿಂದ ಪಾರಾಗಲು ಸಣ್ಣ ಬಂಡವಾಳದ ವ್ಯಾಪಾರವನ್ನು ಆರಂಭಿಸುವಿರಿ. ಅನಾರೋಗ್ಯ ಕಾಡುತ್ತದೆ. ವಿದ್ಯಾರ್ಥಿಗಳಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ತಾಯಿಗೆ ಅನಾರೋಗ್ಯ ಇರುತ್ತದೆ, ನೀರಿನೊಂದಿಗೆ ಚೆಲ್ಲಾಟವಾಡದಿರಿ. ಮಕ್ಕಳ ಜೀವನವು ಯಾವುದೇ ತೊಂದರೆ ಇಲ್ಲದೆ ನಡೆಯಲಿದೆ. ಕಲಾವಿದರಿಗೆ ವಿನೂತನದ ಅವಕಾಶ ದೊರೆಯಲಿದೆ. ಸಾಲದ ವ್ಯವಹಾರ ಮಾಡದಿರಿ. ವ್ಯಾಪಾರ ಆರಂಭಿಸಲು ಸೋದರನ ಸಹಾಯ ದೊರೆಯುತ್ತದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸು ಗೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).