ಕನ್ನಡ ಸುದ್ದಿ  /  Astrology  /  Horoscope Today Astrology Prediction 21 February 2024 Sagittarius Capricorn Aquarius Pisces Daily Horoscope Sts

Horoscope Today: ಕುಟುಂಬದ ವಿವಾಹವೊಂದು ಮುಂದೂಡಿಕೆ, ಮನಸಿಟ್ಟು ಮಾಡುವ ಕೆಲಸದಲ್ಲಿ ಜಯ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

ಫೆಬ್ರವರಿ 21, ಬುಧವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21 February 2024 Daily Horoscope).

 ಫೆಬ್ರವರಿ 21ರ ದಿನಭವಿಷ್ಯ
ಫೆಬ್ರವರಿ 21ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 21 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಶುಕ್ಲಪಕ್ಷ, ಬುಧವಾರ

ತಿಥಿ : ದ್ವಾದಶಿ ತಿಥಿಯು ಹಗಲು.12.23 ರವರೆಗು ಇದ್ದು ಆನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು ಹ.03.19 ವರೆಗು ಇರುತ್ತದೆ. ಆನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.43

ಸೂರ್ಯಾಸ್ತ: ಸ.06.23

ರಾಹುಕಾಲ : ಮ. 12.00 ರಿಂದ ಮ. 01.30

ರಾಶಿ ಫಲಗಳು

ಧನಸ್ಸು

ನಿರಾಸೆಗೆ ಬೇಸರ ಪಡದೆ ಕಷ್ಟದ ಸನ್ನಿವೇಶವನ್ನು ಲಾಭವಾಗಿ ಪರಿವರ್ತಿಸಬಲ್ಲಿರಿ. ಮುಂಗೋಪದಿಂದಾಗಿ ಉದ್ಯೋಗದಲ್ಲಿ ವಿರೋಧಿಗಳು ಹೆಚ್ಚಬಹುದು. ಸೋತು ಗೆಲ್ಲುವ ಬುದ್ದಿ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿನ ವರಮಾನ ಹೆಚ್ಚಲಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ವಿಶೇಷವಾದ ವಿಚಾರಗಳ ಅಧ್ಯಯನದಲ್ಲಿ ನಿರತರಾಗುತ್ತಾರೆ. ಆತ್ಮೀಯರ ಸಹಾಯ ದೊರೆಯುತ್ತದೆ. ಸ್ಥಿರವಾದ ಮನಸ್ಸನ್ನು ರೂಪಿಸಿಕೊಳ್ಳಿ. ಕುಟುಂಬದ ಹಿರಿಯರು ಹಣದ ಸಹಾಯ ಮಾಡಲಿದ್ದಾರೆ. ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ. ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ತಲೆನೋವಿನ ಭಾದೆಯಿಂದ ಬಳಲುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಮಕರ

ಕುಟುಂಬದಲ್ಲಿ ಸೋದರನ ಸಲುವಾಗಿ ವಾದ ವಿವಾದ ಇರಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಉದ್ಯೋಗದಲ್ಲಿ ಎದುರಾಗುವ ತೊಂದರೆಯನ್ನು ಹಿಮ್ಮೆಟ್ಟಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ತೊಂದರೆ ಕಾಣದು. ವಿದ್ಯಾರ್ಥಿಗಳು ತಮ್ಮ ಕೆಲಸ ಕಾರ್ಯಗಳಿಗೆ ಬೇರೆಯವರನ್ನು ಆಶ್ರಯಿಸುವರು. ರಕ್ತದ ಒತ್ತಡದ ಇದ್ದಲ್ಲಿ ಶಿಸ್ತಿನ ಜೀವನ ನಡೆಸಿರಿ. ಸಣ್ಣ ಪುಟ್ಟ ಕೆಲಸಗಳಿಗೂ ಹೆಚ್ಚಿನ ಆಸಕ್ತಿ ತೋರುವಿರಿ. ಕುಟುಂಬದ ವಿವಾಹವೊಂದು ಕೆಲದಿನಗಳವರೆಗೆ ಮುಂದೂಡಲ್ಪಡುತ್ತದೆ. ವಂಶದ ವೃತ್ತಿಯೊಂದು ನಿಮ್ಮ ನೆರವಿಗೆ ಬರುತ್ತದೆ. ಭೂವಿವಾದದಲ್ಲಿ ಜಯ ಲಭಿಸುತ್ತದೆ. ಹಣದ ವ್ಯವಹಾರದಲ್ಲಿ ಎಚ್ಚರಿಕೆ ಇರುವುದು ಒಳ್ಳೆಯದು. ಆತ್ಮೀಯರೊಬ್ಬರನ್ನು ಭೇಟಿಮಾಡುವಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಗುಲಾಬಿಬಣ್ಣ

ಕುಂಭ

ಕುಟುಂಬದಲ್ಲಿನ ಘಟನೆಗಳು ನಿರೀಕ್ಷಿತ ಹಾದಿಯಲ್ಲಿ ಸಾಗುವ ಕಾರಣ ನೆಮ್ಮದಿ ಇರುತ್ತದೆ. ಉದ್ಯೋಗದ ಪ್ರಮುಖ ಕೆಲಸ ಕಾರ್ಯಗಳು ನಡೆಯದೇ ಹೋಗಬಹುದು. ವಿದ್ಯಾರ್ಥಿಗಳು ತಮ್ಮ ಕೆಲಸವನ್ನಷ್ಟೇ ಮಾಡಲಿಚ್ಚಿಸುತ್ತಾರೆ. ಏಕಾಂಗಿತನ ಬಯಸುತ್ತಾರೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಆದಾಯವಿರುತ್ತದೆ. ಮನದ ಆಸೆಯನ್ನು ಬೇರೆಯವರಲ್ಲಿ ಹೇಳಿಕೊಂಡಲ್ಲಿ ನಿರಾಶೆ ಆಗದು. ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವುದು ಮುಖ್ಯ. ಹಠದ ಕಾರಣ ತಪ್ಪುನಿರ್ಧಾರವನ್ನು ತೆಗೆದುಕೊಳ್ಳುವಿರಿ. ನಿಮ್ಮಲ್ಲಿರುವ ವಿಶೇಷವಾದ ಪ್ರತಿಭೆ ಜನಮನ ಗೆಲ್ಲುತ್ತದೆ. ಸಂಗೀತ ಬಲ್ಲವರು ಅಪೂರ್ವವಾದ ಅವಕಾಶ ಪಡೆಯಲಿದ್ದಾರೆ. ಹಣಕಾಸಿನ ನಿರ್ವಹಣೆಯಲ್ಲಿ ವಿಶೇಷವಾದ ಮೆಚ್ಚುಗೆ ಗಳಿಸುವಿರಿ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮೀನ

ಒಳ್ಳೆಯ ನಡತೆ ಮತ್ತು ಮಾತು ಕುಟುಂಬದಲ್ಲಿ ನಿಮಗೆ ಹಿರಿತನವನ್ನು ನೀಡುತ್ತದೆ. ಹಣದ ತೊಂದರೆ ಇರುವುದಿಲ್ಲ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಉದ್ಯೋಗದಲ್ಲಿನ ಕೆಟ್ಟಅನುಭವಗಳು ಮರೆಯಾಗಲಿವೆ. ಉದ್ಯೋಗವನ್ನು ಬದಲಿಸುವ ಸಾಧ್ಯತೆ ಇರುತ್ತದೆ. ಮನಸಿಟ್ಟು ಮಾಡುವ ಕೆಲಸ ಕಾರ್ಯಗಳಲ್ಲಿ ಜಯ ಸಾಧಿಸಬಲ್ಲಿರಿ. ವಿದ್ಯಾರ್ಥಿಗಳು ಸಹಪಾಠಿಗಳ ಅಭ್ಯಾಸಕ್ಕೆ ಸಹಕಾರ ನೀಡಲಿದ್ದಾರೆ. ಅವಿವಾಹಿತರಿಗೆ ವಿವಾಹದ ಮಾತುಕತೆ ನಡೆಯಲಿದೆ. ಹಣದ ಬಗ್ಗೆ ಅತಿಯಾದ ಆಸೆ ಇರುವುದಿಲ್ಲ. ಹಣದ ಕೊರತೆ ಕಡಿಮೆ ಮಾಡಲು ಉಪವೃತ್ತಿಯೊಂದನ್ನು ಆರಂಭಿಸುವಿರಿ. ತಂದೆಯವರಿಗೆ ವೃತ್ತಿ ಬದಲಾವಣೆಯ ಯೋಗವಿದೆ. ಮಕ್ಕಳ ಮಾತಿಗೆ ಹೆಚ್ಚಿನ ಆದ್ಯತೆ ನೀಡುವಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು ಬಣ್ಣ

-----------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).