Horoscope Today: ಸಣ್ಣಪುಟ್ಟ ಕೆಲಸಗಳಿಗೂ ಹೆಚ್ಚಿನ ಶ್ರಮ ಅಗತ್ಯ, ಕಣ್ಣಿನ ತೊಂದರೆ ಕಾಡುವ ಸಾಧ್ಯತೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
21 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21st April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (21st April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಭಾನುವಾರ
ತಿಥಿ: ತ್ರಯೋದಶಿ ರಾತ್ರಿ 12.28 ರವರೆಗೂ ಇದ್ದು ನಂತರ ಚತುರ್ದಶಿ ಆರಂಭವಾಗುತ್ತದೆ.
ನಕ್ಷತ್ರ : ಉತ್ತರ ನಕ್ಷತ್ರವು 04.46 ರವರೆಗೂ ಇದ್ದು ನಂತರ ಹಸ್ತ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.04
ಸೂರ್ಯಾಸ್ತ: ಸಂಜೆ 06.32
ರಾಹುಕಾಲ: ಸಂಜೆ 05.03 ರಿಂದ 06.36
ರಾಶಿಫಲ
ಮೇಷ
ಆತುರದ ನಿರ್ಧಾರಗಳು ಕೆಲಸ ಕಾರ್ಯಗಳ ಹಾದಿ ತಪ್ಪಿಸುತ್ತವೆ. ಬೇಸರದಿಂದ ಎಲ್ಲರಿಂದಲೂ ದೂರ ಉಳಿಯುವಿರಿ. ಬೇಸರದಿಂದ ಹೊರ ಬರಲು ಮನರಂಜನೆಯನ್ನು ಅವಲಂಬಿಸುವಿರಿ. ಹಿರಿಯರ ಮಧ್ಯಸ್ಥಿಕೆಯಿಂದ ಕೌಟುಂಬಿಕ ವಿವಾದ ದೂರವಾಗುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ನೆರವು ನಿಮಗಿರುತ್ತದೆ. ಮಾನಸಿಕ ಚಿಂತೆ ನಿಮ್ಮನ್ನು ಕಾಡಲಿದೆ. ಧನಾತ್ಮಕ ಫಲಿತಾಂಶಗಳು ಆತ್ಮವಿಶ್ವಾಸ ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ಯೋಚಿಸಿ ತಮ್ಮ ಮನದಾಸೆಯನ್ನು ಪೂರ್ಣಗೊಳಿಸುವರು. ಹಣಕಾಸಿನ ವ್ಯವಹಾರದ ಬಗ್ಗೆ ಎಚ್ಚರಿಕೆ ಇರಲಿ. ಆತ್ಮೀಯರೊಬ್ಬರಿಗೆ ಹಣದ ಸಹಾಯ ಮಾಡುವಿರಿ. ಅವಿವಾಹಿತರಿಗೆ ಪ್ರೀತಿ ಚಿಗುರೊಡೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಯಶಸ್ವಿಯಾಗುವಿರಿ. ಅರೋಗ್ಯ ಹೆಚ್ಚಿಸಿಕೊಳ್ಳಲು ಒಳ್ಳೆಯ ಅಭ್ಯಾಸಗಳನ್ನು ಬೆಳೆಸಿಕೊಳ್ಳುವಿರಿ.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ವೃಷಭ
ಧನಾತ್ಮಕ ಮನೋಭಾವನೆಯಿಂದ ಸಮಾಜದ ಮೆಚ್ಚುಗೆಯನ್ನು ಗಳಿಸುವಿರಿ. ಗೌರವಯುತ ಸ್ಥಾನಮಾನಕ್ಕಾಗಿ ಹೊಂದಿಕೊಂಡು ಬಾಳುವಿರಿ. ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ. ನಿಮ್ಮಲ್ಲಿನ ಹಾಸ್ಯದ ಮನೋಭಾವನೆಯ ಕಾರಣ ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಗೆಲ್ಲುವವರೆಗೂ ಮನ ಬದಲಾಯಿಸದೆ ಕೆಲಸ ಕಾರ್ಯಗಳಲ್ಲಿ ತಲ್ಲೀನರಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ವಿಶೇಷತೆ ಕಂಡು ಬರದು. ವಿದ್ಯಾರ್ಥಿಗಳು ಸಮೂಹ ವ್ಯಾಸಂಗದಿಂದ ಹೆಚಿನ ಅಂಕಗಳನ್ನು ಗಳಿಸುತ್ತಾರೆ. ಪಾಲುದಾರಿಕೆ ವ್ಯಾಪಾರದಿಂದ ಹೊರ ಬರುವಿರಿ. ವಂಶದ ಹಿರಿಯ ವ್ಯಕ್ತಿ ಒಬ್ಬರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರಲಿದೆ. ಅನಿರೀಕ್ಷಿತ ಆದಾಯ ಇರಲಿದೆ.
ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ತಿಳಿ ಹಸಿರು
ಮಿಥುನ
ಕುಟುಂಬಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಆತ್ಮವಿಶ್ವಾಸದಿಂದ ಜೀವನದಲ್ಲಿ ಯಶಸ್ಸು ಗಳಿಸುವಿರಿ. ಕುಟುಂಬದಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ಅಡಚಣೆ ಇರುವುದಿಲ್ಲ. ಹೊಸ ರೀತಿಯ ವ್ಯಾಪಾರ ವ್ಯವಹಾರಗಳು ಜೀವನಕ್ಕೆ ಆಧಾರವಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ನಿರೀಕ್ಷಿಸಿದ ಮಟ್ಟವನ್ನು ತಲುಪುವಿರಿ. ಸಂಯಮದ ಮನಸ್ಸನ್ನು ಬೆಳೆಸಿಕೊಳ್ಳುವಿರಿ. ಉತ್ತಮ ಭವಿಷ್ಯಕ್ಕಾಗಿ ಹೊಸ ವ್ಯಾಪಾರವನ್ನು ಆರಂಭಿಸುವಿರಿ. ಕುಟುಂಬದ ಬಿಕ್ಕಟ್ಟನ್ನು ಮಾತುಕತೆಯಿಂದ ಪರಿಹರಿಸುವಿರಿ. ಕಣ್ಣಿನ ತೊಂದರೆ ಇರಲಿದೆ. ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಿಸದಿರಿ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನಸು ಗೆಂಪು
ಕಟಕ
ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ವಿವಾದಗಳು ಎದುರಾಗಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಮುಂದಿರುತ್ತಾರೆ. ಹಣಕಾಸಿನ ವಿಚಾರದಲ್ಲಿ ಚಿಂತೆ ಇರುತ್ತದೆ. ಸಣ್ಣಪುಟ್ಟ ವಿಚಾರಗಳಿಗೂ ಹೆಚ್ಚಿನ ಪ್ರಯತ್ನ ಬೇಕಾಗಬಹುದು. ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಬಂಧು ಬಾಂಧವರೊಂದಿಗೆ ಇದ್ದ ವಿವಾದಗಳು ದೂರಾಗುತ್ತವೆ. ಸಮಾಜದಲ್ಲಿ ಹೆಚ್ಚಿನ ಗೌರವಾದರಗಳು ಲಭಿಸುತ್ತವೆ. ಭೂ ವಿವಾದದಲ್ಲಿ ಯಶಸ್ಸು ದೊರೆಯುತ್ತದೆ. ಹಣಕಾಸಿನ ವ್ಯವಹಾರದಿಂದ ದೂರ ಉಳಿಯುವಿರಿ. ಆಕಸ್ಮಿಕವಾಗಿ ವಿವಾಹ ನಿಶ್ಚಯ ಆಗಲಿದೆ. ನಿಮಗೆ ಇಷ್ಟವಾದ ವಸ್ತ್ರಗಳನ್ನು ಕೊಳ್ಳಲು ಹೆಚ್ಚಿನ ಹಣ ವೆಚ್ಚವಾಗಲಿದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
