Horoscope Today: ಸ್ವಂತ ಮನೆ ಕೊಳ್ಳುವ ಸಾಧ್ಯತೆ, ಹಸಿದವರಿಗೆ ಆಹಾರದ ವ್ಯವಸ್ಥೆ ಮಾಡಿದರೆ ಇನ್ನಷ್ಟು ಶುಭ ಫಲ; ಏ. 21ರ ದಿನ ಭವಿಷ್ಯ
21 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21st April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (21st April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಭಾನುವಾರ
ತಿಥಿ: ತ್ರಯೋದಶಿ ರಾತ್ರಿ 12.28 ರವರೆಗೂ ಇದ್ದು ನಂತರ ಚತುರ್ದಶಿ ಆರಂಭವಾಗುತ್ತದೆ.
ನಕ್ಷತ್ರ : ಉತ್ತರ ನಕ್ಷತ್ರವು 04.46 ರವರೆಗೂ ಇದ್ದು ನಂತರ ಹಸ್ತ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.04
ಸೂರ್ಯಾಸ್ತ: ಸಂಜೆ 06.32
ರಾಹುಕಾಲ: ಸಂಜೆ 05.03 ರಿಂದ 06.36
ರಾಶಿಫಲ
ಸಿಂಹ
ನಿಮ್ಮಲ್ಲಿ ಅನುಕರಣೆಯ ವ್ಯಕ್ತಿತ್ವ ಇರುತ್ತದೆ. ಕುಟುಂಬದ ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದ ಯಶಸ್ಸು ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯುತ್ತದೆ. ವಿರೋಧಿಗಳಿದ್ದರೂ ಅವರಿಂದ ಯಾವುದೇ ತೊಂದರೆಯಾಗದು. ವಿದ್ಯಾರ್ಥಿಗಳಿಗೆ ಸುಲಭದ ಗೆಲುವು ದೊರೆಯುತ್ತದೆ. ಹಿರಿಯ ಅಧಿಕಾರಿಗಳ ಜವಾಬ್ದಾರಿ ಹೆಚ್ಚುತ್ತದೆ. ಆತ್ಮೀಯರೊಬ್ಬರನ್ನು ಭೇಟಿ ಮಾಡುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಸರ್ಕಾರದ ಅನುದಾನದಲ್ಲಿ ಹೊಸ ವ್ಯಾಪಾರವನ್ನು ಆರಂಭಿಸುವಿರಿ. ದೇವತಾ ಕಾರ್ಯಕ್ಕಾಗಿ ಯಾತ್ರಾಸ್ಥಳಕ್ಕೆ ತೆರಳುವಿರಿ. ಸ್ವಂತ ಮನೆ ಕೊಳ್ಳುವ ಸಾಧ್ಯತೆ ಇದೆ. ಹಸಿದವರಿಗೆ ಆಹಾರದ ವ್ಯವಸ್ಥೆ ಮಾಡುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಬಿಳಿ
ಕನ್ಯಾ
ಸಮಯಕ್ಕೆ ತಕ್ಕಂತೆ ವರ್ತಿಸಿ ಗೆಲುವು ಸಾಧಿಸುವಿರಿ. ಬುದ್ಧಿವಂತಿಕೆಯಿಂದ ಮಾತನಾಡುವಿರಿ. ವಾದ ವಿವಾದಗಳಿಗೆ ಆಸ್ಪದ ನೀಡದೆ ಶಾಂತಿಯಿಂದ ಕೆಲಸ ಸಾಧಿಸುವಿರಿ. ಮನೆಯಲ್ಲಿ ಪರಸ್ಪರ ಹೊಂದಾಣಿಕೆಯ ಸ್ವಭಾವ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಾಗದು. ವಿದ್ಯಾರ್ಥಿಗಳು ದೃಢವಾದ ಮನಸ್ಸಿನಿಂದ ಅಧ್ಯಯನದಲ್ಲಿ ತೊಡಗುವರು. ಎಡೆಬಿಡದ ಕೆಲಸದ ನಡುವೆ ವಿಶ್ರಾಂತಿಯ ಅಗತ್ಯವಿದೆ. ಆಸ್ತಿ ಪಾಲಿನ ವಿಚಾರದಲ್ಲಿ ದಿಟ್ಟ ನಿಲುವು ತೆಗೆದುಕೊಳ್ಳಿರಿ. ಹಣಕಾಸಿನ ವ್ಯವಹಾರದಲ್ಲಿ ವಿವಾದ ಒಂದು ಎದುರಾಗಬಹುದು. ಸಂತಾನ ಲಾಭವಿದೆ. ಸಂಗಾತಿಯೊಂದಿಗೆ ವಿವಾದದ ಮಾತುಕತೆ ಇರುತ್ತದೆ ಆತ್ಮೀಯರಿಂದ ಆಪತ್ಕಾಲದಲ್ಲಿ ಹಣ ದೊರೆಯುತ್ತದೆ. ವಿನಾಕಾರಣ ಯಾರನ್ನು ಟೀಕಿಸದಿರಿ.
ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಬೂದು ಬಣ್ಣ
ತುಲಾ
ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ. ಉತ್ತಮ ಪರಿಸರದಲ್ಲಿ ಉದ್ಯೋಗ ಮಾಡುವಿರಿ. ಶಾಂತಿ ಸಂಯಮ ಇರುವ ಕಾರಣ ಸಂತಸದ ಬಾಳ್ವೆ ನಡೆಸುವಿರಿ. ಕುಟುಂಬದಲ್ಲಿ ಒಮ್ಮತದ ನಿರ್ಧಾರ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರಮಾನ ದೊರೆಯಲಿದೆ. ಆರೋಗ್ಯದಲ್ಲಿ ಆತಂಕದ ಮನೋಭಾವನೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಕ್ರಿಯಾಶೀಲತೆ ಬೆಳೆಸಿಕೊಳ್ಳುತ್ತಾರೆ. ನಿಮಗೆ ಅಸಾಧ್ಯ ಎನಿಸುವ ಕೆಲಸ ಮಾಡುವ ಹವ್ಯಾಸ ಇರುತ್ತದೆ. ಸಂಬಂಧಿಕರಿಂದ ದೂರ ಉಳಿಯಲು ಬಯಸುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಮನದಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ಸಾಕುಪ್ರಾಣಿಗಳಿಂದ ದೂರವಿರಿ.
ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಆಕಾಶ ನೀಲಿ
ವೃಶ್ಚಿಕ
ಸಣ್ಣ ಪುಟ್ಟ ವಿಚಾರಗಳನ್ನು ಆಸಕ್ತಿ ತೋರುವಿರಿ. ಕುಟುಂಬದಲ್ಲಿ ಹಣಕಾಸಿನ ಕೊರತೆ ಉಂಟಾಗುತ್ತದೆ. ಮನೆಯಲ್ಲಿ ಗಂಭೀರವಾದ ವಾತಾವರಣ ಉಂಟಾಗುತ್ತದೆ. ವ್ಯಾಪಾರ ವ್ಯವಹಾರಗಳಿಂದ ದಿನನಿತ್ಯಕ್ಕೆ ಬೇಕಾಗುವಷ್ಟು ಹಣವನ್ನು ದೊರೆಯುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಆತಂಕ ಬಿಟ್ಟು ಗುರು ಹಿರಿಯರ ಸಲಹೆಯನ್ನು ಸ್ವೀಕರಿಸುವುದು ಒಳ್ಳೆಯದು. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ಸಂಗಾತಿಯ ಜೊತೆಗೆ ಉತ್ತಮ ಬಾಂಧವ್ಯ ಏರ್ಪಡುತ್ತದೆ ಯಾರಿಂದಲೂ ಹಣವನ್ನು ಸಾಲವಾಗಿ ಪಡೆಯುವುದಿಲ್ಲ. ಸ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಯಾತ್ರಾಸ್ಥಳಕ್ಕೆ ಬೇಟಿ ನೀಡುವಿರಿ.
ಪರಿಹಾರ : ದೇವರ ಮನೆಯಲ್ಲಿ ತುಪ್ಪದ ದೀಪ ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
