Horoscope Today: ಕಲಾವಿದರಿಗೆ ಉತ್ತಮ ಅವಕಾಶ, ಸ್ವಂತ ವಾಹನ ಕೊಳ್ಳುವ ಆಸೆ ನನಸು; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕಲಾವಿದರಿಗೆ ಉತ್ತಮ ಅವಕಾಶ, ಸ್ವಂತ ವಾಹನ ಕೊಳ್ಳುವ ಆಸೆ ನನಸು; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

Horoscope Today: ಕಲಾವಿದರಿಗೆ ಉತ್ತಮ ಅವಕಾಶ, ಸ್ವಂತ ವಾಹನ ಕೊಳ್ಳುವ ಆಸೆ ನನಸು; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

21 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21st April 2024 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(21st April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ: ತ್ರಯೋದಶಿ ರಾತ್ರಿ 12.28 ರವರೆಗೂ ಇದ್ದು ನಂತರ ಚತುರ್ದಶಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು 04.46 ರವರೆಗೂ ಇದ್ದು ನಂತರ ಹಸ್ತ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.04

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಸಂಜೆ 05.03 ರಿಂದ 06.36

ರಾಶಿಫಲ

ಧನಸ್ಸು

ಕುಟುಂಬದ ಹೆಚ್ಚಿನ ಹೊಣೆ ನಿಮ್ಮದಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿ ನಿಮ್ಮದಾಗುವ ಕಾರಣ ನೆಮ್ಮದಿ ಮತ್ತು ವಿಶ್ರಾಂತಿ ಇರದು. ಕುಟುಂಬದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ನೆಲೆಸಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಲಭಿಸುವುದು. ವಿದ್ಯಾರ್ಥಿಗಳು ಆತಂಕದ ನಡುವೆಯೂ ವಿದ್ಯಾಭ್ಯಾಸದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ವಂಶದ ವೃತ್ತಿಯನ್ನು ಲಘುವಾಗಿ ತೆಗೆದುಕೊಳ್ಳದಿರಿ. ಹಣದ ಕೊರತೆ ಇರುವುದಿಲ್ಲ. ಕಲಾವಿದರಿಗೆ ಅವಕಾಶ ಮತ್ತು ವಿಶೇಷ ಗೌರವ ಲಭಿಸುತ್ತದೆ ಸಂಗಾತಿಯ ಸಹಾಯದಿಂದ ಪಾಲುದಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ ಹಣಕಾಸಿನ ವಿಚಾರದಲ್ಲಿ ಯಾರನ್ನೂ ಸುಲಭವಾಗಿ ನಂಬುವುದಿಲ್ಲ.

ಪರಿಹಾರ: ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ಮಕರ

ಸೋಲು ಗೆಲುವನ್ನು ಪರಿಗಣಿಸದೆ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವಿರಿ. ಪ್ರತಿಯೊಂದು ವಿಚಾರಗಳಿಗೂ ಬೇರೆಯವರ ಸಹಾಯ ದೊರೆಯಲಿದೆ. ಆರಂಭಿಸಿದ ಕೆಲಸ ಪೂರ್ಣಗೊಳ್ಳುವವರೆಗೂ ವಿರಮಿಸುವುದಿಲ್ಲ. ಯಾರ ನಿರ್ಣಯವನ್ನೂ ಸುಲಭವಾಗಿ ನಂಬದೇ ಸ್ವಂತ ನಿಲುವಿಗೆ ಬದ್ಧರಾಗುವಿರಿ. ಕುಟುಂಬದಲ್ಲಿ ಪರಸ್ಪರ ಪ್ರೀತಿ ವಾತ್ಸಲ್ಯ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗದು. ಹೆಚ್ಚಿನ ಆದಾಯಕ್ಕಾಗಿ ಉದ್ಯೋಗ ಬದಲಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಬರುವ ಆದಾಯವನ್ನು ಉಳಿಸುವಿರಿ. ಅನಾವಶ್ಯಕ ಓಡಾಟ ಇರಲಿದೆ. ಮಕ್ಕಳ ವಾದ ವಿವಾದವು ಬೇಸರಕ್ಕೆ ಕಾರಣವಾಗುತ್ತದೆ. ಧಾರ್ಮಿಕ ಕೇಂದ್ರಕ್ಕೆ ದೇಣಿಗೆ ನೀಡುವಿರಿ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ

ಕುಂಭ

ಮನರಂಜನೆಗಾಗಿ ಹೆಚ್ಚಿನ ಹಣ ಬೇಕಾಗಲಿದೆ. ಕುಟುಂಬದವರೊಂದಿಗೆ ಯಾತ್ರಾಸ್ಥಳಕ್ಕೆ ಪ್ರವಾಸ ಕೈಗೊಳ್ಳುವಿರಿ. ಆಪ್ತರ ಸಹಾಯದಿಂದ ಉದ್ಯೋಗದಲ್ಲಿ ಮಹತ್ತರ ಬದಲಾವಣೆ ಆಗುವ ಸಾಧ್ಯತೆ ಇದೆ. ಬುದ್ಧಿವಂತಿಕೆಯಿಂದ ಕುಟುಂಬದ ಸಮಸೆಯನ್ನುಗೆಲ್ಲುವಿರಿ. ಉತ್ತಮ ವ್ಯಕ್ತಿತ್ವದಿಂದ ಜನಮನ ಗೆಲ್ಲುವಿರಿ. ಸತತ ಪ್ರಯತ್ನಗಳು ಉನ್ನತ ಅಧಿಕಾರ ಗಳಿಸಲು ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ಸ್ಣೇಹಿತರೊಂದಿಗೆ ಸಮಯ ಕಳೆಯುವರು. ವ್ಯಾಪಾರ ವ್ಯವಹಾರದಲ್ಲಿ ಉದ್ಭವಿಸುವ ಸಮಸ್ಯೆ ಮರೆಯಾಗುತ್ತದೆ. ಮಕ್ಕಳ ಜೊತೆಯಲ್ಲಿ ಸಂತಸದಿಂದ ಸಮಯವನ್ನು ಕಳೆಯುವಿರಿ. ದೊಡ್ಡ ವಾಹನ ಕೊಳ್ಳುವ ಆಸೆ ನೆರವೇರಲಿದೆ.

ಪರಿಹಾರ : ಹಣೆಯಲ್ಲಿ ತಿಲಕ ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಮೀನ

ಮಾನಸಿಕ ಒತ್ತಡದಿಂದ ಹೊರ ಬರಲು ಯೋಗ ಪ್ರಾಣಾಯಾಮವನ್ನು ಅನುಸರಿಸುವಿರಿ. ಹಣದ ವಿಚಾರದಲ್ಲಿ ಹಿರಿಯರ ಸಹಾಯ ಪಡೆಯುವಿರಿ. ಗಣ್ಯವ್ಯಕ್ತಿಗಳ ಸಹಾಯ ಗೌರವ ದೊರೆಯುತ್ತದೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಇರುತ್ತದೆ. ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವಿರಿ. ವಿವಾದಗಳನ್ನು ಸಮರ್ಪಕವಾಗಿ ಎದುರಿಸಿ ಯಶಸ್ಸಿನತ್ತ ತೆರಳುವಿರಿ. ಜೀವನದ ಕೂಡಿಟ್ಟ ಹಣವು ಬೇಡದ ವಿಚಾರಗಳಿಗೆ ಬಳಸಬೇಕಾಗುತ್ತದೆ. ಹಣವನ್ನು ಉಳಿಸುವ ಬಗ್ಗೆ ಯೋಚಿಸಿ. ದುಡುಕಿನ ಮಾತಿನಿಂದ ಸ್ನೇಹ ಕಳೆದುಕೊಳ್ಳುವಿರಿ. ಹಣಕಾಸಿನ ವ್ಯವಹಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಅನುಕೂಲಕರ ವಾತಾವರಣದಲ್ಲಿ ಹೊಸ ವ್ಯಾಪಾರ ಆರಂಭಿಸುವ ಸಾಧ್ಯತೆಗಳಿವೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.