ಮನೆಯಲ್ಲಿ ಮಂಗಳ ಕಾರ್ಯಕ್ಕೆ ಹೆಚ್ಚಿನ ಹಣ ಖರ್ಚು, ಸಂಗಾತಿ ವರ್ತನೆಯಿಂದ ಬೇಸರ; ಜೂ 21ರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮನೆಯಲ್ಲಿ ಮಂಗಳ ಕಾರ್ಯಕ್ಕೆ ಹೆಚ್ಚಿನ ಹಣ ಖರ್ಚು, ಸಂಗಾತಿ ವರ್ತನೆಯಿಂದ ಬೇಸರ; ಜೂ 21ರ ದಿನ ಭವಿಷ್ಯ

ಮನೆಯಲ್ಲಿ ಮಂಗಳ ಕಾರ್ಯಕ್ಕೆ ಹೆಚ್ಚಿನ ಹಣ ಖರ್ಚು, ಸಂಗಾತಿ ವರ್ತನೆಯಿಂದ ಬೇಸರ; ಜೂ 21ರ ದಿನ ಭವಿಷ್ಯ

21 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21st June 2024 Daily Horoscope).

ಮನೆಯಲ್ಲಿ ಮಂಗಳ ಕಾರ್ಯಕ್ಕೆ ಹೆಚ್ಚಿನ ಹಣ ಖರ್ಚು, ಸಂಗಾತಿ ವರ್ತನೆಯಿಂದ ಬೇಸರ; ಜೂ 21ರ ದಿನ ಭವಿಷ್ಯ
ಮನೆಯಲ್ಲಿ ಮಂಗಳ ಕಾರ್ಯಕ್ಕೆ ಹೆಚ್ಚಿನ ಹಣ ಖರ್ಚು, ಸಂಗಾತಿ ವರ್ತನೆಯಿಂದ ಬೇಸರ; ಜೂ 21ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (21st June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ : ಚತುರ್ದಶಿ ಬೆಳಗ್ಗೆ 06.32 ರವರೆಗೂ ಇದ್ದು ನಂತರ ಹುಣ್ಣಿಮೆ ಆರಂಭವಾಗುತ್ತದೆ.

ನಕ್ಷತ್ರ : ಜ್ಯೇಷ್ಠ ನಕ್ಷತ್ರವು ಸಂಜೆ 06.08 ರವರೆಗೆ ಇದ್ದು ನಂತರ ಮೂಲ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ ಬೆಳಗ್ಗೆ : 05.53

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: 10.48 ರಿಂದ 12.24

ರಾಶಿಫಲ

ಸಿಂಹ

ದಂಪತಿ ನಡುವಿನ ಮನಸ್ತಾಪ ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ದಂಪತಿಗಳಲ್ಲಿ ಪರಸ್ಪರ ತಿರಸ್ಕಾರದ ಮನೋಭಾವನೆ ಇರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳಿಂದ ಕಂಗೆಡುವಿರಿ. ಯುವಕ ಯುವತಿಯರಿಗೆ ತೊಂದರೆಯೊಂದು ಎದುರಾಗಲಿದೆ. ತಂದೆಯವರ ಧೈರ್ಯ ಸಾಹಸದ ಬುದ್ದಿ ನಿಮ್ಮ ಸುಖಿ ಜೀವನಕ್ಕೆ ಕಾರಣವಾಗುತ್ತದೆ. ಶುಭ ವರ್ತಮಾನವೊಂದು ಬರಲಿದೆ. ಭಾವ ಮೈದುನನಿಗೆ ಹಣದ ಸಹಾಯ ಮಾಡುವಿರಿ. ನಿಮ್ಮ ಬಗ್ಗೆ ಅಪಾರ್ಥ ಕಲ್ಪಿಸಿಕೊಂಡು ನಿಮ್ಮ ಸಂಗಾತಿಯು ಕೋಪದಿಂದ ವರ್ತಿಸುತ್ತಾರೆ. ಕೆಲವೊಂದು ಕೆಲಸ ಕಾರ್ಯಗಳು ಮುಂದೂಡಲ್ಪಡುತ್ತವೆ. ಗೃಹಿಣಿಯರಿಗೆ ತಮ್ಮ ತವರು ಮನೆಯ ಮೇಲೆ ವಿಶೇಷವಾದ ಅಕ್ಕರೆ ಮೂಡುತ್ತದೆ. ಮಕ್ಕಳ ಆರೋಗ್ಯದ ವಿಚಾರವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಂದು ಬಣ್ಣ

ಕನ್ಯಾ

ಧೈರ್ಯದ ಕೊರತೆಯಿಂದ ಅತಿ ಮುಖ್ಯವಾದ ಕೆಲಸ ಕಾರ್ಯವನ್ನು ಮುಂದೂಡುವಿರಿ. ಆತುರದ ನಿರ್ಧಾರದಿಂದಾಗಿ ಅಪರೂಪದ ಉದ್ಯೋಗದ ಅವಕಾಶ ದೂರವಾಗುತ್ತದೆ. ಹೊಸ ವಾಹನ ಖರೀದಿಸುವಿರಿ. ಸುಖ ಜೀವನ ನಡೆಸುವಿರಿ. ವಿದ್ಯಾರ್ಥಿಗಳು ಎಲ್ಲರೂ ಮೆಚ್ಚುವಂತೆ ಸಾಧನೆ ಮಾಡಲಿದ್ದಾರೆ. ಹಣಕಾಸಿನ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯಲಿದೆ. ಸಮಾಜದಲ್ಲಿ ಜನಪ್ರಿಯ ವ್ಯಕ್ತಿಯಾಗಿ ಬಾಳುವಿರಿ. ಸ್ವಂತ ಸಾಮರ್ಥ್ಯದಿಂದ ಕುಟುಂಬದ ಸಮಸ್ಯೆಯನ್ನು ದೂರ ಮಾಡುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ. ಸಾಹಸದ ಗುಣ ಇರುತ್ತದೆ. ಆತ್ಮೀಯರ ಕಷ್ಟದ ಕಾಲದಲ್ಲಿ ನೆರವಾಗುವಿರಿ. ಬಂಧು ಬಳಗದವರ ಜೊತೆಗೂಡಿ ಯಾತ್ರಾಸ್ಥಳಕ್ಕೆ ಪ್ರವಾಸಕ್ಕೆ ತೆರಳುವಿರಿ. ಮನೆಯಲ್ಲಿನ ಮಂಗಳ ಕಾರ್ಯವೊಂದಕ್ಕೆ ಹೆಚ್ಚಿನ ಹಣ ಬೇಕಾಗುತ್ತದೆ. ಸಾಲದ ವ್ಯವಹಾರದಿಂದ ದೂರ ಉಳಿಯುವಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ. .

ಅದೃಷ್ಟದ ಸಂಖ್ಯೆ :9

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ : ಕಪ್ಪು

ತುಲಾ

ಸೋದರರಿಗೆ ಹಣಕಾಸಿನ ನೆರವು ದೊರೆಯುತ್ತದೆ. ಬಂಧು ಬಳಗದವರು ನಿಮ್ಮಿಂದ ದೂರ ಉಳಿಯುತ್ತಾರೆ. ಸಂಗಾತಿಯ ನಡವಳಿಕೆಯಿಂದ ಬೇಸರಗೊಳ್ಳುವಿರಿ. ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸಲು ಸಾಧ್ಯವಾಗುವುದಿಲ್ಲ. ಮಕ್ಕಳ ಮನಸ್ಸನ್ನು ಅರ್ಥಮಾಡಿಕೊಳ್ಳದೆ ಅವರ ಮನಸ್ಸನ್ನು ನೋಯಿಸುವಿರಿ. ನಿಮ್ಮ ಗೌರವಕ್ಕೆ ಧಕ್ಕೆ ಉಂಟು ಮಾಡುವ ಸನ್ನಿವೇಶವೊಂದು ಎದುರಾಗುತ್ತದೆ. ನಿಮ್ಮ ತಂದೆಯವರ ಧೈರ್ಯದ ಗುಣ ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ. ನಿಮ್ಮಲ್ಲಿ ಸಾಹಸದ ಗುಣ ಇರುತ್ತದೆ. ಕಷ್ಟಗಳಿಗೆ ಕುಗ್ಗುವುದಿಲ್ಲ. ಭಾವ ಮೈದುನರ ಸಹಾಯದಿಂದ ಆರ್ಥಿಕ ಪ್ರಗತಿ ಕಂಡು ಬರುತ್ತದೆ. ಗೃಹಿಣಿಯರಿಗೆ ತವರು ಮನೆಯ ಜನರ ಮೇಲೆ ವಿಶೇಷ ಮಮಕಾರ ತೋರುವಿರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರುತ್ತದೆ

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ತಿಳಿ ಹಸಿರು

ವೃಶ್ಚಿಕ

ಸ್ವಂತ ಸಾಮರ್ಥ್ಯದಿಂದ ಅವಶ್ಯಕತೆಗೆ ತಕ್ಕಷ್ಟು ಹಣವನ್ನು ಸಂಪಾದಿಸುವಿರಿ. ಯಾರ ಬಳಿಯೂ ಹಣದ ವಿಚಾರವಾಗಿ ಕೈಚಾಚುವುದಿಲ್ಲ. ಸಣ್ಣಪುಟ್ಟ ಕೆಲಸಗಳನ್ನು ಹೆಚ್ಚಿನ ಪರಿಶ್ರಮದಿಂದಲೇ ಮಾಡುವಿರಿ. ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸು ದೊರೆಯಲಿದೆ. ಉತ್ತಮ ಆದಾಯ ಇಲ್ಲದ ಕೆಲಸವನ್ನು ಮಾಡುವುದಿಲ್ಲ. ಮನದಲ್ಲಿ ಆತ್ಮವಿಶ್ವಾಸದ ಕೊರತೆ ಇರುತ್ತದೆ. ಕೋಪ ಬಂದರೂ ಯಾವುದೇ ತಪ್ಪು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಪ್ರೀತಿಯ ಮಾತುಗಳಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ತಪ್ಪಿಲ್ಲದೇ ಹೋದರು ಸಂಗಾತಿಯನ್ನು ನಿಂದಿಸುವಿರಿ. ಸ್ವಂತ ವಾಹನ ಕೊಳ್ಳುವಿರಿ. ವಿದ್ಯಾರ್ಥಿಗಳು ಯಶಸ್ಸಿನ ಹಾದಿನಲ್ಲಿ ಸಾಗುತ್ತಾರೆ. ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನಸು ಗೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.