ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸಣ್ಣ ಪುಟ್ಟ ವಿಚಾರಕ್ಕೂ ಮಾನಸಿಕ ಒತ್ತಡ ಅನುಭವಿಸುವಿರಿ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರವಿರಲಿ; ಜೂ 21ರ ದಿನ ಭವಿಷ್ಯ

ಸಣ್ಣ ಪುಟ್ಟ ವಿಚಾರಕ್ಕೂ ಮಾನಸಿಕ ಒತ್ತಡ ಅನುಭವಿಸುವಿರಿ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರವಿರಲಿ; ಜೂ 21ರ ದಿನ ಭವಿಷ್ಯ

ಜೂನ್‌ 21ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21st June 2024 Daily Horoscope).

ಸಣ್ಣ ಪುಟ್ಟ ವಿಚಾರಕ್ಕೂ ಮಾನಸಿಕ ಒತ್ತಡ ಅನುಭವಿಸುವಿರಿ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರವಿರಲಿ; ಜೂ 21ರ ದಿನ ಭವಿಷ್ಯ
ಸಣ್ಣ ಪುಟ್ಟ ವಿಚಾರಕ್ಕೂ ಮಾನಸಿಕ ಒತ್ತಡ ಅನುಭವಿಸುವಿರಿ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರವಿರಲಿ; ಜೂ 21ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(21st June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ : ಚತುರ್ದಶಿ ಬೆಳಗ್ಗೆ 06.32 ರವರೆಗೂ ಇದ್ದು ನಂತರ ಹುಣ್ಣಿಮೆ ಆರಂಭವಾಗುತ್ತದೆ.

ನಕ್ಷತ್ರ : ಜ್ಯೇಷ್ಠ ನಕ್ಷತ್ರವು ಸಂಜೆ 06.08 ರವರೆಗೆ ಇದ್ದು ನಂತರ ಮೂಲ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ ಬೆಳಗ್ಗೆ : 05.53

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: 10.48 ರಿಂದ 12.24

ರಾಶಿಫಲ

ಧನಸ್ಸು

ನಿಮ್ಮ ತಪ್ಪನ್ನು ಮರೆಮಾಚಿ ಬೇರೆಯವರ ತಪ್ಪನ್ನು ಎಲ್ಲರಿಗೂ ತಿಳಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಪ್ರೀತಿ ವಿಶ್ವಾಸ ಗಳಿಸುವಿರಿ. ಹಣಕಾಸಿನ ಕೊರತೆ ಇರುವುದಿಲ್ಲ. ಅನಾರೋಗ್ಯವಿರುತ್ತದೆ. ಉದಾರಿಗಳು ಸುಖ ಸಂತೋಷ ನೆಲೆಸಿರುತ್ತದೆ. ರುಚಿಕರ ಭೋಜನವನ್ನು ಇಷ್ಟಪಡುವಿರಿ. ಸಮಾಜದಲ್ಲಿ ಗೌರವಾನ್ವಿತ ಸ್ಥಾನ ಗಳಿಸುವಿರಿ. ದಂಪತಿಗಳು ಸಂತಸದಿಂದ ಬಾಳುತ್ತಾರೆ. ತಾಯಿಯ ಸಂಬಂಧದಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ಅನಾವಶ್ಯಕವಾಗಿ ಕೋಪಕ್ಕೆ ಒಳಗಾಗುವಿರಿ. ಸುಳ್ಳನ್ನು ಹೇಳಿ ಸಂದಿಗ್ದ ಪರಿಸ್ಥಿತಿಯಿಂದ ಪಾರಾಗುವಿರಿ. ಸದಾ ವಂಶದ ಆಸ್ತಿಯ ವಿವಾದದಲ್ಲಿ ನಿಮಗೆ ಹಿನ್ನೆಡೆ ಇರುತ್ತದೆ. ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಲಿದೆ. ಅನಾವಶ್ಯಕವಾಗಿ ಮಾತನಾಡುವುದನ್ನು ಕಡಿಮೆ ಮಾಡುವಿರಿ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಮಕರ

ಸಂಗಾತಿಯ ಜೊತೆಯಲ್ಲಿ ಸಂತೋಷದಿಂದ ಬಾಳುವಿರಿ. ಸಣ್ಣಪುಟ್ಟ ಸೋಲಿಗೂ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಬಳಸುತ್ತಿರುವ ವಾಹನವನ್ನು ಮಾರಾಟ ಮಾಡುವಿರಿ. ನಿಮ್ಮ ಮನಸ್ಸಿನ ಇಚ್ಛೆಯಂತೆ ದಿನದ ಕೆಲಸ ಕಾರ್ಯಗಳು ನಡೆಯಲಿವೆ. ಗುರು ಹಿರಿಯರಲ್ಲಿ ವಿಶೇಷ ಗೌರವ ಮತ್ತು ನಂಬಿಕೆ ಇರುತ್ತದೆ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ಗಳಿಸುವಿರಿ. ಶಾಸ್ತ್ರ ಸಂಪ್ರದಾಯದಲ್ಲಿ ಆಸಕ್ತಿ ಮೂಡುತ್ತದೆ. ಉತ್ತಮ ಆದಾಯವಿರುತ್ತದೆ. ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸುವಿರಿ. ಮನದಲ್ಲಿ ಯಾವುದೋ ಒಂದು ಯೋಚನೆ ಮನೆ ಮಾಡಿರುತ್ತದೆ. ಸಂತಾನ ಲಾಭವಿದೆ. ಬುದ್ಧಿವಂತಿಕೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ಚಾಡಿ ಮಾತುಗಳನ್ನು ನಂಬಲೇ ಹೋದರೂ ಅದನ್ನು ಆಸ್ವಾದಿಸುವಿರಿ.

ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಕುಂಭ

ಕುಟುಂಬದ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಕಡಿಮೆಯಾಗುತ್ತದೆ. ಮುಂದಿನ ಸುಖಮಯ ಜೀವನಕ್ಕಾಗಿ ಹಣ ಉಳಿಸುವಿರಿ. ನೀವು ಆಡುವ ಮಾತುಗಳಿಗೆ ನಾನಾ ಅರ್ಥಗಳು ಬರುತ್ತವೆ. ಇದರಿಂದ ಅನಾವಶ್ಯಕವಾಗಿ ವಾತಾವರಣ ಉಂಟಾಗುತ್ತದೆ. ಮಕ್ಕಳ ಜೊತೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ವಿದ್ಯಾರ್ಥಿಗಳು ಏಕಾಂಗಿಯಾಗಿ ಅಭ್ಯಾಸದಲ್ಲಿ ತೊಡಗುತ್ತಾರೆ. ನಿಮ್ಮ ಮಕ್ಕಳಿಗೆ ಅತಿಯಾದ ಕೋಪವಿರುತ್ತದೆ. ತಾಯಿಯ ಜೊತೆ ಅನಾವಶ್ಯಕ ವಾದ ವಿವಾದಗಳು ಇರುತ್ತವೆ. ಸಮಯಕ್ಕೆ ತಕ್ಕಂತೆ ಬುದ್ಧಿವಂತಿಕೆಯಿಂದ ಮಾತನಾಡುವಿರಿ. ಬೇರೆಯವರಿಗೆ ನೀಡುವ ಮಾತನ್ನು ಉಳಿಸಿಕೊಳ್ಳಲಾಗದೆ ಹೋಗುವಿರಿ. ಚಂಚಲ ಮನಸ್ಸು ಇರುತ್ತದೆ. ಸ್ನೇಹಿತರಿಗಿಂತ ವಿರೋಧಿಗಳೇ ಹೆಚ್ಚಾಗಿರುತ್ತಾರೆ. ನಿಮ್ಮ ಮಕ್ಕಳು ನಿಮ್ಮನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವುದಿಲ್ಲ. ಬೇಸರದಿಂದ ಹೊರ ಬರಲು ಯೋಗದ ಮೊರೆ ಹೋಗುವಿರಿ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ..

ಅದೃಷ್ಟದ ಸಂಖ್ಯೆ 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಮೀನ

ಕಾನೂನಿನ ಮುಖಾಂತರ ಹಣಕಾಸಿನ ವಿವಾದದಲ್ಲಿ ಜಯ ಗಳಿಸುವಿರಿ. ಸಂಗಾತಿಗಿರುವ ವಿಶೇಷವಾದ ಬುದ್ಧಿವಂತಿಗೆ ನಿಮ್ಮನ್ನು ಆಪತ್ತಿನಿಂದ ಪಾರು ಮಾಡುತ್ತದೆ. ಸ್ವತಂತ್ರವಾಗಿ ನಿರ್ವಹಿಸುವ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ಗಳಿಸುವಿರಿ. ನೀವು ಸುಲಭವಾಗಿ ಯಾವುದೇ ತೀರ್ಮಾನಕ್ಕೆ ಬದ್ಧರಾಗುವುದಿಲ್ಲ. ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಿ. ದಾನ ಧರ್ಮದಲ್ಲಿ ನಿರತರಾಗುವಿರಿ. ನೂತನ ದಂಪತಿಗಳಿಗೆ ಸಂತಾನ ಲಾಭವಿದೆ. ನಿಮ್ಮ ಮಕ್ಕಳು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುತ್ತಾರೆ. ಕಷ್ಟಪಟ್ಟು ದುಡಿದ ಹಣವನ್ನು ಒಳ್ಳೆಯ ಕೆಲಸಗಳಿಗಾಗಿ ಮಾತ್ರ ಖರ್ಚು ಮಾಡುವಿರಿ. ಮಕ್ಕಳು ಮಿತಿ ಇಲ್ಲದೆ ಹಣವನ್ನು ಖರ್ಚು ಮಾಡುತ್ತಾರೆ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಆಕಾಶ ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.