Horoscope Today: ಒಳ್ಳೆಯ ಕೆಲಸಗಳಿಗಾಗಿ ಹಣ ವಿನಿಯೋಗಿಸುವಿರಿ, ಅವಿವಾಹಿತರಿಗೆ ವಿವಾಹ ಯೋಗ; ಮಾರ್ಚ್‌ 21ರ ರಾಶಿಫಲ-horoscope today astrology prediction 21st march 2024 aries taurus gemini cancer daily horoscope sts ,ರಾಶಿ ಭವಿಷ್ಯ ಸುದ್ದಿ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಒಳ್ಳೆಯ ಕೆಲಸಗಳಿಗಾಗಿ ಹಣ ವಿನಿಯೋಗಿಸುವಿರಿ, ಅವಿವಾಹಿತರಿಗೆ ವಿವಾಹ ಯೋಗ; ಮಾರ್ಚ್‌ 21ರ ರಾಶಿಫಲ

Horoscope Today: ಒಳ್ಳೆಯ ಕೆಲಸಗಳಿಗಾಗಿ ಹಣ ವಿನಿಯೋಗಿಸುವಿರಿ, ಅವಿವಾಹಿತರಿಗೆ ವಿವಾಹ ಯೋಗ; ಮಾರ್ಚ್‌ 21ರ ರಾಶಿಫಲ

21 ಮಾರ್ಚ್‌ 2024 ಗುರುವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21st March 2024 Daily Horoscope).

21 ಮಾರ್ಚ್‌ 2024 ಗುರುವಾರ ರಾಶಿಫಲ
21 ಮಾರ್ಚ್‌ 2024 ಗುರುವಾರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (21st March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ : ದ್ವಾದಶಿ ಬೆ 05.18 ರವರೆಗೂ ಇರುತ್ತದೆ. ನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ : ಆಶ್ಲೇಷ ನಕ್ಷತ್ರವು ರಾತ್ರಿ 02.14 ವರೆಗೆ ಇರುತ್ತದೆ ನಂತರ ಮಖೆ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.23

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : ಮಧ್ಯಾಹ್ನ01.30 ರಿಂದ .03.00

ಮೇಷ

ದೈನಂದಿನ ಜೀವನದ ರೀತಿ ನೀತಿಯನ್ನು ಬದಲಾಯಿಸಿಕೊಳ್ಳುವಿರಿ. ಆತುರ ಪಡದೆ ಸಂಯಮದಿಂದ ಕೆಲಸ ಕಾರ್ಯ ನಿರ್ವಹಿಸುವಿರಿ. ಅನಾವಶ್ಯಕ ಯೋಚನೆಗಳಿಂದ ದೂರವಾಗುವಿರಿ. ಆಧ್ಯಾತ್ಮಿಕ ಮಾರ್ಗದಿಂದ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವಿರಿ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳಲ್ಲಿ ಸುಲಭವಾಗಿ ಯಶಸ್ಸು ಗಳಿಸುವಿರಿ. ಸ್ನೇಹಿತರ ಸಹಾಯದಿಂದ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ಗಳಿಸುವಿರಿ. ಕುಟುಂಬದ ಸದಸ್ಯರ ಜೊತೆ ಉತ್ತಮ ಹೊಂದಾಣಿಕೆ ಇರುತ್ತದೆ. ಆತ್ಮೀಯರನ್ನು ಭೇಟಿ ಮಾಡುವುದರಿಂದ ಲಾಭವಿರುತ್ತದೆ. ನಿಮ್ಮ ಕೆಲಸ ಕಾರ್ಯಗಳಿಗೆ ಬೇರೆಯವರು ಪ್ರಶಂಸೆ ಪಡೆಯುತ್ತಾರೆ. ಆದ್ದರಿಂದ ಸದಾಕಾಲ ಎಚ್ಚರಿಕೆಯಿಂದ ಇರಬೇಕಾದ ಅವಶ್ಯಕತೆ ಇದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ.

ಪರಿಹಾರ : ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ವೃಷಭ

ಹಣ್ಣಿನ ರಸದಂತಹ ದ್ರವ ರೂಪದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಹಣಕಾಸಿನ ಕೊರತೆ ಉಂಟಾಗುವುದಿಲ್ಲ. ಆದರೆ ಪರಿಸ್ಥಿತಿಯ ಒತ್ತಡಕ್ಕೆ ಒಳಗಾಗಿ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಮಕ್ಕಳ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಅಮೂಲ್ಯವಾದ ವಸ್ತುಗಳನ್ನು ಕೊಳ್ಳಲು ನಿರ್ಧರಿಸುವಿರಿ. ದಂಪತಿ ನಡುವೆ ಉತ್ತಮ ಮನೋಭಾವನೆ ಇರುತ್ತದೆ. ನಿಮ್ಮಲ್ಲಿರುವ ಕಾರ್ಯ ದಕ್ಷತೆಗೆ ತಕ್ಕಂತಹ ಉದ್ಯೋಗ ದೊರೆಯಲಿದೆ. ಕ್ಷೀಪ್ರಗತಿಯಲ್ಲಿ ಕೆಲಸ ಕಾರ್ಯಗಳನ್ನು ಪೂರೈಸಲು ಪ್ರಯತ್ನಿಸುವಿರಿ. ಸಮಾಜದಲ್ಲಿನ ಲೋಪ ದೋಷಗಳನ್ನು ತಿದ್ದುವ ಪ್ರಯತ್ನ ಮಾಡುವಿರಿ. ಮನಸ್ಸಿನಲ್ಲಿ ಆತಂಕದ ಭಾವನೆ ಮನೆ ಮಾಡಿರುತ್ತದೆ

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ ಎಲೆ ಹಸಿರು ಬಣ್ಣ

ಮಿಥುನ

ನಿತ್ಯ ಜೀವನದಲ್ಲಿನ ಒತ್ತಡದಿಂದ ಪಾರಾಗುವಿರಿ. ಎದುರಾಗುವ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಗೆಲ್ಲುವಿರಿ. ಅನಿವಾರ್ಯ ಪರಿಸ್ಥಿತಿಯಿಂದಾಗಿ ಉದ್ಯೋಗ ಬದಲಾಯಿಸುವಿರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ಕುಟುಂಬದ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ನೆರೆಹೊರೆಯವರ ಜೊತೆ ಉತ್ತಮ ಬಾಂಧವ್ಯ ಇರುತ್ತದೆ. ಸಂಗಾತಿಯ ಆರೋಗ್ಯದಲ್ಲಿ ಏರಿಳಿತ ಉಂಟಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಕುಟುಂಬಕ್ಕೆ ಸಂಬಂಧಿಸಿದ ಕೆಲಸವೊಂದನ್ನು ಪೂರ್ಣಗೊಳಿಸುವಿರಿ. ದೈಹಿಕ ದುರ್ಬಲತೆಯ ಕಾರಣ ವಿಶ್ರಾಂತಿಯನ್ನು ಪಡೆಯುವಿರಿ. ಒಳ್ಳೆಯ ಕೆಲಸಗಳಿಗಾಗಿ ಹಣ ವಿನಿಯೋಗಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಆತ್ಮೀಯರಿಂದ ಉಡುಗೊರೆ ದೊರೆಯಲಿದೆ. ಸ್ವಂತ ಉದ್ದಿಮೆ ಆರಂಭಿಸುವ ಇಂಗಿತ ವ್ಯಕ್ತಪಡಿಸುವಿರಿ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶ್ಕಾನ್ಯ

ಅದೃಷ್ಟದ ಬಣ್ಣ: ಕೇಸರಿ

ಕಟಕ

ಕುಟುಂಬಕ್ಕೆ ಸೇರಿದ ವಿಚಾರಗಳಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವಿರಿ. ತಪ್ಪು ಮಾಡದೇ ಹೋದರು ಬೇರೆಯವರ ಟೀಕೆಗೆ ಗುರಿಯಾಗುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಆಸೆಯನ್ನು ಪೂರೈಸಲಿದ್ದೀರಿ. ಖರ್ಚು ವೆಚ್ಚದ ಮೇಲೆ ನಿಯಂತ್ರಣ ಗಳಿಸುವಿರಿ. ಕುಟುಂಬದ ಸಂತಸವನ್ನು ಹೆಚ್ಚಿಸುವಂತಹ ಶುಭ ವರ್ತಮಾನ ದೊರೆಯಲಿದೆ. ಬಂಧು ಬಳಗದವರ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುತ್ತದೆ. ಆಧುನಿಕತೆಗೆ ತಕ್ಕಂತೆ ಮನೆಯನ್ನು ನವೀಕರಣಗೊಳಿಸುವಿರಿ. ದಂಪತಿಗಳಲ್ಲಿ ಅನಾವಶ್ಯಕ ವಿವಾದಗಳು ಎದುರಾಗಲಿವೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಹಣವನ್ನು ದೇಣಿಗೆಯ ರೂಪದಲ್ಲಿ ನೀಡುವಿರಿ. ಸಮಯವನ್ನು ಸ್ವಂತ ಹಿತಕ್ಕಾಗಿ ಬಳಸಿಕೊಳ್ಳಲು ವ್ಯಾಪಾರವನ್ನು ಆರಂಭಿಸುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿ ದಾರದಲ್ಲಿ ಸುತ್ತಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.