ಕನ್ನಡ ಸುದ್ದಿ  /  Astrology  /  Horoscope Today Astrology Prediction 21st March 2024 Leo Virgo Libra Scorpio Daily Horoscope Sts

Horoscope Today: ಕುಟುಂಬದ ಖುಷಿ ಹೆಚ್ಚಿಸುವ ಶುಭ ಸುದ್ದಿಯೊಂದನ್ನು ಕೇಳಲಿದ್ದೀರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

21 ಮಾರ್ಚ್‌ 2024 ಗುರುವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21st March 2024 Daily Horoscope).

21 ಮಾರ್ಚ್‌ 2024 ಗುರುವಾರದ ರಾಶಿಫಲ
21 ಮಾರ್ಚ್‌ 2024 ಗುರುವಾರದ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (21st March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ : ದ್ವಾದಶಿ ಬೆ 05.18 ರವರೆಗೂ ಇರುತ್ತದೆ. ನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ : ಆಶ್ಲೇಷ ನಕ್ಷತ್ರವು ರಾತ್ರಿ 02.14 ವರೆಗೆ ಇರುತ್ತದೆ ನಂತರ ಮಖೆ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.23

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : ಮಧ್ಯಾಹ್ನ01.30 ರಿಂದ .03.00

ಸಿಂಹ

ಭವಿಷ್ಯದ ಬಗ್ಗೆ ಹೆಚ್ಚಿನ ಚಿಂತೆ ಮಾಡುವುದಿಲ್ಲ. ತಾನಾಗಿಯೇ ದೊರಕುವ ಫಲಾಫಲಗಳನ್ನು ಸಂತಸದಿಂದ ಸ್ವೀಕರಿಸುವಿರಿ. ಅದೃಷ್ಟದಲ್ಲಿ ನಂಬಿಕೆ ಇರುತ್ತದೆ. ಬೇರೆಯವರ ಪ್ರೋತ್ಸಾಹವಿಲ್ಲದೆ ಯಾವುದೇ ಕೆಲಸವನ್ನು ಮಾಡಲಾರಿರಿ. ದೇಹದ ತೂಕ ಅತಿಯಾಗಬಹುದು. ದೇಹ ದಂಡನೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಏರಿಳಿತ ಇರಲಿದೆ. ಕುಟುಂಬದಲ್ಲಿ ಸಂತೋಷವನ್ನು ಹೆಚ್ಚಿಸುವ ವರ್ತಮಾನ ಬರಲಿದೆ. ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಯಾರೊಂದಿಗೂ ಮಾತನಾಡದೆ ಮೌನ ವಹಿಸುವಿರಿ. ಹಣದ ಕೊರತೆ ಇದ್ದರೂ ಕಷ್ಟನಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ಕೇವಲ ಬಂಧು-ಬಳಗವಲ್ಲದೆ ಹೊರಗಿನ ಜನರಿಂದಲೂ ಉತ್ತಮ ಗೌರವ ಗಳಿಸುವಿರಿ.

ಪರಿಹಾರ : ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಕೆಂಪು ಬಣ್ಣ

ಕನ್ಯಾ

ಕುಟುಂಬದ ಕೆಲಸ ಕಾರ್ಯಗಳು ಅರ್ಧಕ್ಕೆ ನಿಲ್ಲಲಿದೆ. ಕೈ ಸಾಲವಾಗಿ ಪಡೆದ ಹಣವನ್ನು ಮರುಪಾವತಿ ಮಾಡಲು ಸಾಧ್ಯವಾಗುವುದಿಲ್ಲ. ಸಮಾಜ ಸೇವೆಯಲ್ಲಿ ತೊಡಗಲು ಅವಕಾಶ ಒಂದು ದೊರೆಯಲಿದೆ. ಸಮಾಜದ ಗೌರವಾನ್ವಿತ ವ್ಯಕ್ತಿಯೊಬ್ಬರು ನಿಮ್ಮ ಸಹಾಯವನ್ನು ಬಯಸಿ ಬರಲಿದ್ದಾರೆ. ತಪ್ಪು ಕಲ್ಪನೆಯಿಂದ ದೂರಾಗಿದ್ದ ಆಪ್ತರೊಬ್ಬರು ಮರಳಿ ಬರಲಿದ್ದಾರೆ. ನಿಮ್ಮ ಮನಸ್ಸು ಮಗುವಿನಂತಿದ್ದರು, ಕೆಲವೊಮ್ಮೆ ತೆಗೆದುಕೊಳ್ಳುವ ತೀರ್ಮಾನಗಳು ಸಂದಿಗ್ದತೆಯನ್ನು ಉಂಟುಮಾಡುತ್ತದೆ. ಆತ್ಮೀಯ ಸ್ನೇಹಿತರೊಂದಿಗೆ ಮನ ಬಿಚ್ಚಿ ಮಾತನಾಡುವ ಅವಕಾಶ ದೊರೆಯಲಿದೆ. ಅನಾವಶ್ಯಕವಾಗಿ ಬೇಡದ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡಬೇಕಾಗುತ್ತದೆ. ಅತಿಯಾದ ಸಂತಸ ನೀಡುವ ಘಟನೆಯು ಮನೆಯಲ್ಲಿ ನೆರವೇರಲಿದೆ. ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ

ತುಲಾ

ಹೊಸ ನಿರೀಕ್ಷೆಗಳಿಂದ ಕುಟುಂಬದಲ್ಲಿ ಸಂತೋಷ ನೆಲೆಸಿರುತ್ತದೆ. ಕುಟುಂಬದಲ್ಲಿ ಪರಸ್ಪರ ನಂಬಿಕೆ ಮತ್ತು ಭರವಸೆ ನೆಲೆಸಿರುತ್ತದೆ. ಒಳ್ಳೆಯ ಕೆಲಸಗಳನ್ನು ಪ್ರೋತ್ಸಾಹಿಸುವಿರಿ. ನಿಮ್ಮಲ್ಲಿನ ಕರ್ತವ್ಯ ನಿಷ್ಠೆಗೆ ಎಲ್ಲರ ಮೆಚ್ಚುಗೆ ದೊರೆಯುತ್ತದೆ. ಸಾರ್ವಜನಿಕ ಸಂಸ್ಥೆಯೊಂದರ ಹಣದ ನಿರ್ವಹಣೆಯ ಜವಾಬ್ದಾರಿ ದೊರೆಯಲಿದೆ. ಉದ್ಯೋಗದಲ್ಲಿ ನಿರೀಕ್ಷಿಸಿದಂತೆ ಧನಾತ್ಮಕ ಬದಲಾವಣೆಗಳು ಎದುರಾಗಲಿವೆ. ಮನೆತನಕ್ಕೆ ಸೇರಿದ ಭೂ ವಿವಾದವನ್ನು ಬಗೆಹರಿಸುವಿರಿ ಉತ್ತಮ ಆದಾಯವಿರುತ್ತದೆ ಅವಶ್ಯಕತೆ ಇದ್ದಲ್ಲಿ ಹಣದ ಸಹಾಯ ದೊರೆಯುತ್ತದೆ ಮಕ್ಕಳಿಂದ ಸಂತೋಷ ಎನಿಸುವ ವರ್ತಮಾನ ದೊರೆಯಲಿದೆ. ಸಮಾಜಕ್ಕಾಗಿ ಸೇವೆ ಸಲ್ಲಿಸಬೇಕೆಂಬ ಮನಸಿರುತ್ತದೆ. ಬೇರೆಯವರಿಗೆ ಆದರ್ಶವೆನಿಸುವ ದಾಂಪತ್ಯ ಜೀವನ ನಡೆಸುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ವೃಶ್ಚಿಕ

ದಿಢೀರನೆ ಆರೋಗ್ಯದಲ್ಲಿ ತೊಂದರೆ ಕಂಡು ಬರಬಹುದು. ನಿಮ್ಮ ನಿರೀಕ್ಷೆಯಂತೆ ಕೆಲಸ ಕಾರ್ಯಗಳು ನಡೆಯುವ ಸಂಭವ ಕಡಿಮೆ. ನಿರಾಸೆ ಪಡದೆ ಹೆಚ್ಚಿನ ಪ್ರಯತ್ನದಿಂದ ಮುಖ್ಯವಾದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಅತಿಯಾದ ಖರ್ಚು ವೆಚ್ಚಗಳು ಬೇಸರ ಮೂಡಿಸುತ್ತದೆ. ಆದರೆ ಕುಟುಂಬದ ಸದಸ್ಯರ ಸಹಾಯ ಸಹಕಾರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನವ ದಂಪತಿಗಳಲ್ಲಿ ಪರಸ್ಪರ ಪ್ರೀತಿ-ವಿಶ್ವಾಸ ಹೆಚ್ಚುತ್ತದೆ. ಸಂಗಾತಿ ಮತ್ತು ಮಕ್ಕಳೊಂದಿಗೆ ಸಂತಸದಿಂದ ದಿನವನ್ನು ಕಳೆಯುವಿರಿ. ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು ಪ್ರಯತ್ನಿಸುವಿರಿ. ಹಣಕಾಸಿನ ವಿಚಾರದಲ್ಲಿ ಕೊರತೆ ಇದ್ದರೂ ಯಾವುದೇ ತೊಂದರೆ ಉಂಟಾಗದು. ಯೋಗ ಮತ್ತು ಆಧ್ಯಾತ್ಮಿಕ ವಿಚಾರಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವಿರಿ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಳದಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).