Horoscope Today: ಅನಾವಶ್ಯಕ ಖರ್ಚಿನಿಂದ ಬೇಸರ, ಅವಿವಾಹಿತರಿಗೆ ದೂರದ ಸಂಬಂಧದಲ್ಲಿ ವಿವಾಹ ನಿಶ್ಚಯ; ಮೇ 21ರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅನಾವಶ್ಯಕ ಖರ್ಚಿನಿಂದ ಬೇಸರ, ಅವಿವಾಹಿತರಿಗೆ ದೂರದ ಸಂಬಂಧದಲ್ಲಿ ವಿವಾಹ ನಿಶ್ಚಯ; ಮೇ 21ರ ದಿನ ಭವಿಷ್ಯ

Horoscope Today: ಅನಾವಶ್ಯಕ ಖರ್ಚಿನಿಂದ ಬೇಸರ, ಅವಿವಾಹಿತರಿಗೆ ದೂರದ ಸಂಬಂಧದಲ್ಲಿ ವಿವಾಹ ನಿಶ್ಚಯ; ಮೇ 21ರ ದಿನ ಭವಿಷ್ಯ

21 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21st May 2024 Daily Horoscope).

ಮೇ 21ರ ದಿನ ಭವಿಷ್ಯ
ಮೇ 21ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (21st May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ತ್ರಯೋದಶಿ 04.21 ರವರೆಗೂ ಇರುತ್ತದೆ ನಂತರ ಚತುರ್ದಶಿ ಆರಂಭವಾಗುತ್ತದೆ.

ನಕ್ಷತ್ರ : ಸ್ವಾತಿ ನಕ್ಷತ್ರವು ದಿನಪೂರ್ತಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.39

ರಾಹುಕಾಲ: 03.31 ರಿಂದ 05.07

ರಾಶಿಫಲ

ಮೇಷ

ಬಿಡುವಿಲ್ಲದ ಓಡಾಟಗಳಿಂದ ಬೇಸರಗೊಳ್ಳುವಿರಿ. ಕೆಲಸ ಕಾರ್ಯದ ನಡುವೆ ವಿಶ್ರಾಂತಿ ಪಡೆಯದೇ ಹೋದಲ್ಲಿ ಆರೋಗ್ಯದಲ್ಲಿ ತೊಂದರೆ ಎದುರಾಗುತ್ತದೆ. ಕುಟುಂಬದವರ ಮತ್ತು ಜನಸಾಮಾನ್ಯರ ನಿರೀಕ್ಷೆಯನ್ನು ಪೂರೈಸುವಿರಿ. ಅನಾವಶ್ಯಕ ಖರ್ಚು ವೆಚ್ಚಗಳು ಬೇಸರವನ್ನು ಉಂಟುಮಾಡುತ್ತದೆ. ಮಕ್ಕಳಿಗೆ ವಿಶೇಷ ಗೌರವ, ಪ್ರತಿಷ್ಠೆ, ಪ್ರಶಸ್ತಿಗಳು ದೊರೆಯುತ್ತವೆ. ನಿಮ್ಮ ಮನದಲ್ಲಿ ಇರುವ ಆಸೆ ಆಕಾಂಕ್ಷೆಗಳು ಕೈ ಗೂಡಲಿವೆ. ಆದರೆ ಯಾವುದೇ ಕೆಲಸ ಕಾರ್ಯಗಳು ಹೆಚ್ಚಿನ ಪ್ರಯತ್ನವಿಲ್ಲದೆ ಸಫಲಗೊಳ್ಳುವುದಿಲ್ಲ. ಸಂಗಾತಿಯಿಂದ ಕೆಲಸ ಕಾರ್ಯಗಳಲ್ಲಿ ಸಂಪೂರ್ಣ ಸಹಾಯ ಸಹಕಾರ ದೊರೆಯುತ್ತದೆ. ಹಣದ ಕೊರತೆ ಇರುವುದಿಲ್ಲ. ಆರೋಗ್ಯವನ್ನು ಕಾಪಾಡಿಕೊಳ್ಳಲು ಸರಳ ವ್ಯಾಯಾಮವನ್ನು ಅವಲಂಬಿಸುವುದು ಒಳ್ಳೆಯದು.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೆಂಪು

ವೃಷಭ

ಜೀವನದಲ್ಲಿ ಉತ್ತಮ ಮಟ್ಟದ ಸುಧಾರಣೆ ಕಂಡು ಬರುತ್ತದೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಧಾರ್ಮಿಕ ಸ್ಥಳಕ್ಕೆ ಪ್ರಯಾಣ ಬೆಳೆಸುವಿರಿ. ನಿಮ್ಮ ಪಾಲಿನ ಅಮೂಲ್ಯವಾದ ವಸ್ತುಗಳನ್ನು ಸಂರಕ್ಷಿಸಿಡಲು ಪ್ರಯತ್ನಿಸಿ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಲ್ಲಿ ಗಮನ ಸೆಳೆಯುವ ಕೆಲಸವೊಂದನ್ನು ಮಾಡುತ್ತಾರೆ. ನೆರೆಹೊರೆಯವರ ಪ್ರೀತಿ ವಿಶ್ವಾಸವು ನಿಮಗೆ ದೊರೆಯಲಿದೆ. ಯಾರನ್ನೂ ದ್ವೇಷಿಸದೆ ಪ್ರೀತಿಯಿಂದ ಕಾಣುವ ಕಾರಣ ಮನಸ್ಸಿಗೆ ನೆಮ್ಮದಿ ಇರುತ್ತದೆ. ದಾಂಪತ್ಯ ಜೀವನದಲ್ಲಿ ಸಂತಸ ನೀಡುವ ವರ್ತಮಾನವೊಂದು ಬರುತ್ತದೆ. ಹೊಸ ವಿಚಾರಗಳನ್ನು ಅಧ್ಯಯನ ಮಾಡುವ ಅವಕಾಶ ನಿಮ್ಮದಾಗಲಿದೆ. ಅವಿವಾಹಿತರಿಗೆ ದೂರದ ಸಂಬಂಧಿಕರಿಂದ ವಿವಾಹ ನಿಶ್ಚಯವಾಗುತ್ತದೆ. ಅತಿಯಾದ ಆತ್ಮವಿಶ್ವಾಸದಿಂದ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ.

ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಎಲೆ ಹಸಿರು

ಮಿಥುನ

ಸಭೆ ಸಮಾರಂಭಗಳಲ್ಲಿ ಭಾಗವಹಿಸಲಿದ್ದೀರಿ. ಹಣಕಾಸಿನ ಸ್ಥಿತಿಗತಿಯನ್ನು ಉತ್ತಮಗೊಳಿಸಲು ಹೊಸ ಯೋಜನೆಗಳನ್ನು ಆರಂಭಿಸುವಿರಿ. ನಿಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುವಂತೆ ಕುಟುಂಬದಲ್ಲಿ ಒತ್ತಡ ಉಂಟಾಗುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವುದು ಒಳ್ಳೆಯದು. ನಿಮ್ಮ ವಿವಾಹ ನಿಶ್ಚಯವಾಗುತ್ತದೆ. ಸ್ವಂತ ಖರ್ಚು ವೆಚ್ಚಗಳಿಗಿಂತಲೂ ಬೇರೆಯವರಿಗೆ ಹಣ ಖರ್ಚು ಮಾಡುವುದೇ ಹೆಚ್ಚು. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವುದನ್ನು ಪ್ರಯತ್ನಿಸಿ. ದೇಹಾಲಸ್ಯದಿಂದ ವಿಶ್ರಾಂತಿ ಪಡೆದುಕೊಳ್ಳಲು ನಿರ್ಧರಿಸುವಿರಿ. ನಿಮ್ಮ ಕೆಲಸ ಕಾರ್ಯಗಳನ್ನು ಸಂಗಾತಿಯು ಯಶಸ್ವಿಯಾಗಿ ಪೂರ್ಣಗೊಳಿಸುತ್ತಾರೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಲಿ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೇಸರಿ

ಕಟಕ

ಅಳುಕಿನ ಭಾವನೆಯಿಂದ ಕೆಲವು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಬೇರೆಯವರ ಸಹಾಯ ಸಹಕಾರ ಇಲ್ಲದೆ ಯಾವುದೇ ಕೆಲಸವನ್ನು ಮಾಡಲಾರಿರಿ. ವರಮಾನದಲ್ಲಿ ಕೊರತೆ ಉಂಟಾದರೂ ಖರ್ಚು ವೆಚ್ಚಗಳನ್ನು ಸರಿದೂಗಿಸಬಲ್ಲಿರಿ. ಕೂಡಿಟ್ಟ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ವಾದ ವಿವಾದಗಳಲ್ಲಿ ತೊಡಗುವ ಬದಲು ಪ್ರೀತಿ ವಿಶ್ವಾಸದಿಂದ ಕೆಲಸ ಸಾಧಿಸಲು ಪ್ರಯತ್ನಿಸಿ. ನಿಮ್ಮಲ್ಲಿರುವ ಬುದ್ಧಿಗೆ ತಕ್ಕಂತಹ ಉದ್ಯೋಗವು ದೊರೆಯುತ್ತದೆ. ಕಾರ್ಮಿಕ ಕೆಲಸ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಮನಸ್ಸಿಗೆ ಮುದ ನೀಡುವ ವಸ್ತುಗಳನ್ನುಕೊಳ್ಳುವಿರಿ. ಸಾಕಿರುವ ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ತೋರುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.