ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸ್ವಂತ ಕೆಲಸ ಕಾರ್ಯಗಳು ಅರ್ಧಕ್ಕೆ ನಿಲ್ಲಲಿದೆ, ಸಾಲದ ವ್ಯವಹಾರದಿಂದ ದೂರ ಇದ್ದಷ್ಟು ಒಳ್ಳೆಯದು; ಮೇ 21ರ ದಿನ ಭವಿಷ್ಯ

Horoscope Today: ಸ್ವಂತ ಕೆಲಸ ಕಾರ್ಯಗಳು ಅರ್ಧಕ್ಕೆ ನಿಲ್ಲಲಿದೆ, ಸಾಲದ ವ್ಯವಹಾರದಿಂದ ದೂರ ಇದ್ದಷ್ಟು ಒಳ್ಳೆಯದು; ಮೇ 21ರ ದಿನ ಭವಿಷ್ಯ

21 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21st May 2024 Daily Horoscope).

ಮೇ 21ರ ದಿನ ಭವಿಷ್ಯ
ಮೇ 21ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (21st May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ತ್ರಯೋದಶಿ 04.21 ರವರೆಗೂ ಇರುತ್ತದೆ ನಂತರ ಚತುರ್ದಶಿ ಆರಂಭವಾಗುತ್ತದೆ.

ನಕ್ಷತ್ರ : ಸ್ವಾತಿ ನಕ್ಷತ್ರವು ದಿನಪೂರ್ತಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.39

ರಾಹುಕಾಲ: 03.31 ರಿಂದ 05.07

ರಾಶಿಫಲ

 

ಸಿಂಹ

ಸಮಯ ಸಂದರ್ಭಕ್ಕೆ ಹೊಂದಿಕೊಂಡು ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಆರೋಗ್ಯದಲ್ಲಿ ಯಾವುದೇ ಬದಲಾವಣೆಗಳು ಉಂಟಾಗದು. ಸಂಪಾದಿಸಿದ ಹಣವನ್ನು ಹತ್ತಿರದ ಬಂಧುಗಳಿಗಾಗಿ ಖರ್ಚು ಮಾಡುವಿರಿ. ದಿನಾಂತ್ಯಕ್ಕೆ ಹಣದ ತೊಂದರೆ ಉಂಟಾಗುತ್ತದೆ. ಆತ್ಮೀಯರು ನಿಮ್ಮಲ್ಲಿನ ಒಳ್ಳೆಯ ಭಾವನೆಗಳಿಗೆ ಧಕ್ಕೆ ತರುತ್ತಾರೆ. ಸಂಗಾತಿ ಮಕ್ಕಳ ಸಹಾಯದಿಂದ ಕುಟುಂಬದಲ್ಲಿ ಶಾಂತಿ ನೆನೆಸುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ಅನಾವಶ್ಯಕವಾಗಿ ವಾದ ವಿವಾದಗಳು ಇರುತ್ತದೆ. ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳು ದೊರೆಯಲಿವೆ. ಅನಾವಶ್ಯಕವಾಗಿ ಯೋಚನೆ ಮಾಡುವುದನ್ನು ಕಡಿಮೆ ಮಾಡಿರಿ.

ಪರಿಹಾರ : ಹಣೆಯಲ್ಲಿ ತಿಲಕ ಇಟ್ಟು ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕೆಂಪು

ಕನ್ಯಾ

ಗರ್ಭಿಣಿ ಸ್ತ್ರೀಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವನ್ನು ನೀಡಬೇಕು. ಕುಟುಂಬದ ಆರ್ಥಿಕ ಪರಿಸ್ಥಿತಿಯಲ್ಲಿ ಗುರುತರ ಬದಲಾವಣೆಗಳು ಕಂಡು ಬರಲಿದೆ. ಆದಾಯದಲ್ಲಿ ಕಡಿತ ಉಂಟಾದರೂ ಬುದ್ಧಿವಂತಿಕೆಯಿಂದ ಖರ್ಚು ವೆಚ್ಚಗಳನ್ನು ನಿಯಂತ್ರಿಸುವಿರಿ. ಭವಿಷ್ಯದ ಉತ್ತಮ ದಿನಗಳಿಗಾಗಿ ಯೋಜನೆಗಳನ್ನು ರೂಪಿಸುವಿರಿ. ಅನಿಯಮಿತ ಆಹಾರ ಸೇವನೆಯಿಂದ ಅನಾರೋಗ್ಯ ಉಂಟಾಗುತ್ತದೆ. ಉದ್ಯೋಗದಲ್ಲಿ ನಿಮ್ಮ ಮನಸ್ಸಿಗೆ ಸಂತೋಷವಾಗುವಂತಹ ಬದಲಾವಣೆಗಳು ಉಂಟಾಗುತ್ತವೆ. ಅನಿವಾರ್ಯವಾಗಿ ಸಹೋದ್ಯೋಗಿಗಳ ಜವಾಬ್ದಾರಿಯನ್ನು ಪೂರೈಸಬೇಕಾಗುತ್ತದೆ. ಸ್ವಂತ ಕೆಲಸ ಕಾರ್ಯಗಳು ಅರ್ಧಕ್ಕೆ ನಿಲ್ಲಲಿದೆ. ಸರಳ ರೀತಿಯ ದೈಹಿಕ ವ್ಯಾಯಾಮವು ಅನುಕೂಲಕರವಾಗುತ್ತದೆ. ಸಾಲದ ವ್ಯವಹಾರದಿಂದ ದೂರವಿರುವುದು ಒಳ್ಳೆಯದು.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಕಿತ್ತಳೆ

ತುಲಾ

ಮಕ್ಕಳ ಒತ್ತಡಕ್ಕೆ ಮಣಿದು ಮನರಂಜಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ. ದೂರದ ಊರಿಗೆ ಪ್ರಯಾಣ ಬೆಳೆಸುವಿರಿ. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಕ್ರೀಡಾ ಸ್ಪರ್ಧೆಗಳಲ್ಲಿ ಆಸಕ್ತಿ ಹೊಂದುತ್ತಾರೆ. ಉನ್ನತ ವಿದ್ಯಾಭ್ಯಾಸದ ಆಸೆ ಇದ್ದಲ್ಲಿ ಸಫಲತೆ ಗಳಿಸುತ್ತಾರೆ. ಅನಿರೀಕ್ಷಿತ ಧನ ಲಾಭಗಳು ನಿಮ್ಮದಾಗುತ್ತದೆ. ಸಮಾಜದ ಗೌರವಯುತ ಸ್ಥಾನವು ದೊರೆಯುತ್ತದೆ. ಕುಟುಂಬದ ಹಿರಿಯರಿಂದ ಹಣದ ಸಹಾಯ ದೊರೆಯಲಿದೆ. ಅನಾವಶ್ಯಕ ಚಿಂತೆಯಿಂದ ಹೊರ ಬರಲು ಧಾರ್ಮಿಕ ಚಿಂತನೆಗೆ ಒಳಗಾಗುವಿರಿ. ಸ್ನೇಹಿತರ ಸಹಾಯದಿಂದ ಉದ್ಯೋಗವನ್ನು ಬದಲಿಸುವಿರಿ. ಮನೆಯ ಅಂದವನ್ನು ಹೆಚ್ಚಿಸಲು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವಿರಿ. ಸಂಗಾತಿಯ ಜೊತೆ ಅನಾವಶ್ಯಕ ವಾದ ವಿವಾದಗಳು ಎದುರಾಗಲಿವೆ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಹಳದಿ

ವೃಶ್ಚಿಕ

ದೇಹದ ತೂಕವೇ ನಿಮಗೆ ದೊಡ್ಡ ಸಮಸ್ಯೆಯಾಗುತ್ತದೆ. ಆರೋಗ್ಯವನ್ನು ಉಳಿಸಿಕೊಳ್ಳಲು ಆಹಾರ ಸೇವನೆಯನ್ನು ನಿಯಂತ್ರಿಸುವಿರಿ. ಹಿರಿಯರ ಅಧಿಕಾರಿಗಳ ಸಹಯೋಗದಿಂದ ಉದ್ಯೋಗದಲ್ಲಿ ಉನ್ನತ ಮಟ್ಟ ತಲುಪುವಿರಿ. ನಿಮ್ಮ ಮನದಲ್ಲೇ ಯೋಜನೆಗಳನ್ನು ಕಾರ್ಯಗತಗೊಳಿಸಲು ಪ್ರಯತ್ನಿಸುವಿರಿ. ಸುತ್ತಮುತ್ತಲಿನ ಪರಿಸರದಲ್ಲಿ ನಿಮ್ಮಿಂದ ಸಂತೋಷದ ವಾತಾವರಣ ನಿರ್ಮಾಣವಾಗುತ್ತವೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ದುಡಿಯುವ ಸಮಯವನ್ನು ಪರಿಗಣಿಸದೆ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಸಂಗಾತಿಯು ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಾರೆ. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೆ ಕೆಲಸ ಕಾರ್ಯಗಳಲ್ಲಿ ಮುಂದುವರೆಯಿರಿ. ದಾಂಪತ್ಯ ಜೀವನದಲ್ಲಿ ಸುಖ ಸಂತೋಷ ಮನೆ ಮಾಡಿರುತ್ತದೆ. ಆದಾಯಕ್ಕೆ ತಕ್ಕಂತಹ ಖರ್ಚು ವೆಚ್ಚಗಳು ಎದುರಾಗಲಿವೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).