ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ತಂದೆ ಮಕ್ಕಳ ಮನಸ್ತಾಪಕ್ಕೆ ತೆರೆ, ಅನಿವಾರ್ಯವಾಗಿ ವಾಸಸ್ಥಳ ಬದಲಾಯಿಸುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಭವಿಷ್ಯ

Horoscope Today: ತಂದೆ ಮಕ್ಕಳ ಮನಸ್ತಾಪಕ್ಕೆ ತೆರೆ, ಅನಿವಾರ್ಯವಾಗಿ ವಾಸಸ್ಥಳ ಬದಲಾಯಿಸುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಭವಿಷ್ಯ

21 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21st May 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(21st May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ತ್ರಯೋದಶಿ 04.21 ರವರೆಗೂ ಇರುತ್ತದೆ ನಂತರ ಚತುರ್ದಶಿ ಆರಂಭವಾಗುತ್ತದೆ.

ನಕ್ಷತ್ರ: ಸ್ವಾತಿ ನಕ್ಷತ್ರವು ದಿನಪೂರ್ತಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.39

ರಾಹುಕಾಲ: 03.31 ರಿಂದ 05.07

ರಾಶಿಫಲ

 

ಧನಸ್ಸು

ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಅನಾವಶ್ಯಕವಾದ ಖರ್ಚು ವೆಚ್ಚಗಳಿಂದ ಕುಟುಂಬದಲ್ಲಿ ಮನಸ್ತಾಪ ಉಂಟಾಗುತ್ತದೆ. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಸಂಗಾತಿ ಮತ್ತು ಮಕ್ಕಳ ಜೊತೆ ದೀರ್ಘಕಾಲದ ಪ್ರವಾಸ ಕೈಗೊಳ್ಳುವಿರಿ. ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸದೆ ಹೋದಲ್ಲಿ ಶುಭ ಫಲಗಳು ದೊರೆಯುತ್ತವೆ. ಆತ್ಮೀಯರಿಂದ ದೊರೆಯುವ ಅವಕಾಶವನ್ನು ನಿಮ್ಮ ಅನುಕೂಲಕ್ಕಾಗಿ ಬಳಸಿಕೊಳ್ಳಲು ಪ್ರಯತ್ನಿಸುವಿರಿ. ದಂಪತಿಗಳ ನಡುವೆ ಹೊಂದಾಣಿಕೆ ಇರುತ್ತದೆ. ನಿಮ್ಮದಲ್ಲದ ಹಣಕಾಸಿನ ವ್ಯವಹಾರಕ್ಕೆ ಸಾಕ್ಷಿಯಾಗಬೇಕಾಗುತ್ತದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ವಿವಾಹವಾಗಿರುವ ಮಕ್ಕಳ ಜೀವನದಲ್ಲಿ ಆಶಾದಾಯಕ ಬದಲಾವಣೆಗಳು ಕಂಡುಬರುತ್ತವೆ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ

ಮಕರ

ಆತ್ಮವಿಶ್ವಾಸ ಬೆಳೆಸಿಕೊಂಡು ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಅಪಾಯದ ಸಮಯದಲ್ಲೂ ಧೈರ್ಯದಿಂದ ವರ್ತಿಸುವಿರಿ. ವಿರೋಧಿಗಳು ಹೆಚ್ಚುತ್ತಾರೆ. ಉದ್ಯೋಗದಲ್ಲಿ ನಿರೀಕ್ಷಿಸಿದ ಯಶಸ್ಸು ದೊರೆಯುತ್ತದೆ. ಪ್ರಯತ್ನ ಪಟ್ಟಲ್ಲಿ ಇರುವ ಆದಾಯದಲ್ಲಿಯೇ ಹಣವನ್ನು ಉಳಿಸಬಹುದು. ವಿದ್ಯಾರ್ಥಿ ಜೀವನದಲ್ಲಿ ವಿಶೇಷವಾದಂತಹ ಸಂಗತಿಗಳು ನಡೆಯಲಿವೆ. ಸಂತಾನ ಲಾಭವಿದೆ. ದಂಪತಿಗಳ ನಡುವೆ ಉತ್ತಮ ಹೊಂದಾಣಿಕೆ ಕಂಡು ಬರುತ್ತದೆ. ಆರೋಗ್ಯದ ಬಗ್ಗೆ ಗಮನ ವಹಿಸಿ. ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿ ಬಹಳ ಮುಖ್ಯವಾಗುತ್ತದೆ. ಮಕ್ಕಳೊಂದಿಗೆ ಮಮತೆಯಿಂದ ವರ್ತಿಸುವಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೇರಳೆ

ಕುಂಭ

ಮನಸ್ಸು ಒಪ್ಪದ ಕಾರಣ ಉತ್ತಮ ಅವಕಾಶ ದೊರೆತರೂ ಉದ್ಯೋಗ ಬದಲಿಸುವುದಿಲ್ಲ. ಮಾನಸಿಕವಾಗಿ ದುರ್ಬಲರಾಗುವಿರಿ. ಅನಾವಶ್ಯಕವಾಗಿ ಹಣ ಖರ್ಚಾಗುತ್ತದೆ. ಬೇರೆಯವರ ಸಾಲದ ವ್ಯವಹಾರದಲ್ಲಿ ಸಾಕ್ಷಿದಾರರಾಗಬೇಡಿ. ಮೊದಲ ಆದ್ಯತೆಯನ್ನು ನಿಮ್ಮ ಸ್ವಂತ ಕೆಲಸಗಳಿಗೆ ನೀಡುವಿರಿ. ಸಮಯದ ಪರಿವಿಲ್ಲದೆ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಸಮಾಜ ಸೇವೆ ಮಾಡಲಿದ್ದೀರಿ. ಕುಟುಂಬದ ಹಿರಿಯರಿಗೆ ಸೇರಿದ ಭೂಮಿಯು ನಿಮ್ಮ ಪಾಲಾಗುತ್ತದೆ. ಸೋದರ ಮತ್ತು ತಂದೆಯ ನಡುವಿನ ಮನಸ್ತಾಪವು ದೂರವಾಗುತ್ತದೆ. ವಾಸವಿರುವ ಮನೆಯನ್ನು ಅನಿವಾರ್ಯವಾಗಿ ಬದಲಾವಣೆ ಮಾಡುವಿರಿ. ಭೂವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ

ಮೀನ

ಯಾವುದೇ ಅಡೆತಡೆ ಇಲ್ಲದೆ ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಕುಟುಂಬದಲ್ಲಿ ಸಂತೋಷದ ವಾತಾವರಣ ಉಂಟಾಗಲು ಕಾರಣರಾಗುವಿರಿ. ವೈರತ್ವವನ್ನು ಮರೆತು ಎಲ್ಲರೊಂದಿಗೆ ಸ್ನೇಹದಿಂದ ವರ್ತಿಸುವಿರಿ. ಸಂತೋಷಕೂಟಕ್ಕಾಗಿ ಹೆಚ್ಚಿನ ಹಣ ಖರ್ಚು ಮಾಡುವಿರಿ. ವೃತ್ತಿ ಕ್ಷೇತ್ರದಲ್ಲಿ ನಿಮಗೆ ಅನುಕೂಲವಾಗುವಂತಹ ಪರಿಸ್ಥಿತಿ ಎದುರಾಗುತ್ತದೆ. ಆರೋಗ್ಯದಲ್ಲಿ ಏರಿಳಿತ ಕಂಡು ಬರಬಹುದು. ಕುಟುಂಬದ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ಆತ್ಮೀಯರ ಜೊತೆ ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ವಿದೇಶಕ್ಕೆ ತೆರಳುವ ಅವಕಾಶ ಪಡೆಯುತ್ತಾರೆ. ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ದುಬಾರಿ ಉಡುಗೊರೆಯನ್ನು ನೀಡುವಿರಿ.

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 10

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).