ಕನ್ನಡ ಸುದ್ದಿ  /  Astrology  /  Horoscope Today Astrology Prediction 22 March 2024 Sagittarius Capricorn Aquarius Pisces Daily Horoscope Sts

Horoscope Today: ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಲಾಭ, ಬಂಧುವೊಬ್ಬರಿಗೆ ಹಣದ ಸಹಾಯ ಮಾಡುವಿರಿ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

ಮಾರ್ಚ್​ 22, ಶುಕ್ರವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (22 March 2024 Daily Horoscope).

ಮಾರ್ಚ್​ 22ರ ದಿನಭವಿಷ್ಯ
ಮಾರ್ಚ್​ 22ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (22 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಶುಕ್ರವಾರ

ತಿಥಿ : ದಿನ ಪೂರ್ತಿ ತ್ರಯೋದಶಿ ಇರಲಿದೆ

ನಕ್ಷತ್ರ : ಮಖೆ ನಕ್ಷತ್ರವು ರಾ.04.34 ರವರೆಗೆ ಇರುತ್ತದೆ. ಆನಂತರ ಪುಬ್ಬ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.23

ಸೂರ್ಯಾಸ್ತ: ಸ.06.30

ರಾಹುಕಾಲ : ಬೆ.10.30 ರಿಂದ ಮ.12.00

ರಾಶಿ ಫಲಗಳು

ಧನಸ್ಸು

ಬದಲಾಗುವ ಮನಸ್ಸಿನ ಕಾರಣ ಕುಟುಂಬದ ಕೆಲಸ ಕಾರ್ಯದಲ್ಲಿ ನಿರಾಸೆ ಇರಲಿದೆ. ಸಾಮರಸ್ಯದ ಕೊರೆತೆ ಕಂಡರೂ ಉದ್ಯೋಗದಲ್ಲಿ ಉಪಯುಕ್ತ ಬದಲಾವಣೆ ಉಂಟಾಗುತ್ತದೆ. ಅನಿರೀಕ್ಷಿತ ಧನಲಾಭವಿದೆ. ಸ್ವಂತ ಬಳಕೆಗಾಗಿ ವಾಹನ ಕೊಳ್ಳುವಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಿರುತ್ತದೆ. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಲಾಭಗಳಿಸುವಿರಿ. ಮಕ್ಕಳ ಅಧ್ಯಯನಕ್ಕಾಗಿ ಹೆಚ್ಚಿನ ಹಣ ಬೇಕಾಗಬಹುದು. ವಿದೇಶ ಪ್ರವಾಸದ ಯೋಜನೆಯಿಂದ ದೂರ ತೆರಳುವಿರಿ. ಕುಟುಂಬದಲ್ಲಿನ ಮಂಗಳಕಾರ್ಯದ ಹೊಣೆ ನಿಮ್ಮದಾಗಲಿದೆ. ಮನದಲ್ಲಿ ಬೇಸರವಿರುತ್ತದೆ. ಸರಳ ಮತ್ತು ಕಷ್ಟವಲ್ಲದ ಜೀವನಕ್ಕಾಗಿ ಸಣ್ಣ ಬಂಡವಾಳದ ವ್ಯಾಪಾರವನ್ನು ಆರಂಭಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಮಕರ

ಸುಳ್ಳು ಮಾತನ್ನು ನಂಬುವ ಕಾರಣ ಕುಟುಂಬದ ಹಣಕಾಸಿನ ವಿವಾದಗಳಿಗೆ ಕಾರಣರಾಗುವಿರಿ. ಉದ್ಯೋಗದಲ್ಲಿ ಬೇಸರದ ಸನ್ನಿವೇಶ ಎದುರಾಗುತ್ತದೆ. ವ್ಯಾಪಾರವನ್ನು ವಿಸ್ತರಿಸಲು ಹೆಚ್ಚಿನ ಬಂಡವಾಳ ಹೂಡುವಿರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದಲ್ಲಿ ಆಸಕ್ತಿ ತೋರುವರು. ಜಮೀನು ಅಥವ ಹೊಸ ಮನೆಯನ್ನು ಕೊಳ್ಳುವ ಬಗ್ಗೆ ಮಾತುಕತೆ ನಡೆಸುವಿರಿ. ಹಣದ ಕೊರತೆ ಇರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಹಿಂದೊಮ್ಮೆ ನೀಡಿದ ಮಾತನ್ನು ಉಳಿಸಿಕೊಳ್ಳಲು ಬಂಧುವೊಬ್ಬರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ಮನರಂಜನೆಗಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ತಾಯಿಯವರಿಗೆ ಉಡುಗೊರೆಯೊಂದನ್ನು ನೀಡುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಕುಂಭ

ಕುಟುಂಬದಲ್ಲಿ ನೀರಸ ವಾತಾವರಣ ಕಂಡುಬರುತ್ತದೆ. ಉದ್ಯೋಗದಲ್ಲಿ ಫಲಿತಾಂಶಗಳು ಗಲಿಬಿಲಿಗೆ ಕಾರಣವಾಗಲಿವೆ. ಆತ್ಮೀಯರಿಂದ ಉತ್ತಮ ಸಹಕಾರ ದೊರೆಯುವುದಿಲ್ಲ. ಏಕಾಂಗಿಯಾಗಿ ಮಾಡುವ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ಇರುತ್ತದೆ. ಕಷ್ಟ ಪಟ್ಟು ದುಡಿಯುವುದನ್ನು ಇಚ್ಚಿಸದೆ ಕಮೀಷನ್ ಆಧಾರಿತ ಸಂಸ್ಥೆಯನ್ನು ಆರಂಭಿಸುವಿರಿ. ಹಣಕಾಸಿನ ಕೊರತೆ ಕಂಡುಬರದು. ಪರಸ್ಥಳದಲ್ಲಿ ವ್ಯಾಪಾರಸಂಸ್ಥೆಯ ಶಾಖೆಯನ್ನು ಆರಂಭಿಸುವ ಗುರಿ ಇರುತ್ತದೆ. ಬೇರೆಯವರ ಹಣಕಾಸಿನ ವಿವಾದಗಳನ್ನು ಪರಿಹರಿಸಿ ಆದಾಯ ಗಳಿಸುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಆದಾಯ ಇರುತ್ತದೆ. ವಿದ್ಯಾರ್ಥಿಗಳು ಯಾವುದೆ ಕ್ಲಿಷ್ಟಕರವಾದ ವಿಚಾರವನ್ನು ಅರ್ಥಮಾಡಿಕೊಳ್ಳಬಲ್ಲರು. ಸಮಯಕ್ಕೆ ತಕ್ಕಂತಹ ತೀರ್ಮಾನವನ್ನು ತೆಗೆದುಕೊಳ್ಳುವಿರಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಮೀನ

ಕುಟುಂಬದಲ್ಲಿ ಆಶಾದಾಯಕ ವಾತಾವರಣ ಕಂಡುಬರುತ್ತದೆ. ಮನಸ್ಸಿಗೆ ನೆಮ್ಮದಿ ನೀಡುವ ಘಟನೆಯೊಂದು ನಡೆಯಲಿದೆ. ಉದ್ಯೋಗವು ಮಂದಗತಿಯ ಫಲಗಳನ್ನು ನೀಡುತ್ತದೆ. ಸಾಕುಪ್ರಾಣಿಗಳ ವ್ಯಾಪಾರದಲ್ಲಿ ಉತ್ತಮ ಲಾಭವಿದೆ. ಪಶುಸಂಗೋಪನೆಯಲ್ಲಿ ಆಸಕ್ತಿ ಮೂಡುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಹಣದ ಜೊತೆ ನೆಮ್ಮದಿಯನ್ನೂ ಕಾಣುವಿರಿ. ವಿದ್ಯಾರ್ಥಿಗಳಿಗೆ ಸಹಪಾಠಿಗಳ ಸಹಕಾರವಿರುತ್ತದೆ. ಆದರೂ ಏಕಚಿತ್ತತೆಯಿಂದ ಕಲಿಕೆಯಲ್ಲಿ ನಿರತರಾಗಬೇಕು. ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ. ಸತತವಾಗಿ ಮನಸ್ಸಿನ ವಿಚಾರಗಳನ್ನು ಬದಲಾಯಿಸದಿರಿ. ಸ್ವಂತ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಹಣದ ತೊಂದರೆ ಬಾರದು. ಶೀತದ ತೊಂದರೆ ಕಾಡುತ್ತದೆ. ಬೆಳ್ಳಿ ಪದಾರ್ಥವನ್ನು ಉಡುಗೊರೆ ನೀಡಲು ಕೊಳ್ಳುವಿರಿ. ಹಾಲು ಅಥವಾ ನೀರನ್ನು ಕುಡಿವ ವೇಳೆ ಸ್ವಚ್ಚತೆ ಕಾಪಾಡಿರಿ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಕೆಂಪು ಬಣ್ಣ

-----------------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).