ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ನಿಮ್ಮ ಜೊತೆಗಿದ್ದವರೇ ವಿರೋಧಿಗಳಾಗುತ್ತಾರೆ, ವಿದೇಶ ಪ್ರಯಾಣ ಯೋಗವಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ನಿಮ್ಮ ಜೊತೆಗಿದ್ದವರೇ ವಿರೋಧಿಗಳಾಗುತ್ತಾರೆ, ವಿದೇಶ ಪ್ರಯಾಣ ಯೋಗವಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಜೂನ್‌ 22ರ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ)

ನಿಮ್ಮ ಜೊತೆಗಿದ್ದವರೇ ವಿರೋಧಿಗಳಾಗುತ್ತಾರೆ, ವಿದೇಶ ಪ್ರಯಾಣ ಯೋಗವಿದೆ
ನಿಮ್ಮ ಜೊತೆಗಿದ್ದವರೇ ವಿರೋಧಿಗಳಾಗುತ್ತಾರೆ, ವಿದೇಶ ಪ್ರಯಾಣ ಯೋಗವಿದೆ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (22nd June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ: ಹುಣ್ಣಿಮೆ ಬೆಳಗ್ಗೆ 06.16 ವರೆಗು ಇದ್ದು ಉಪರಿ ಪಾಡ್ಯ ಇರುತ್ತದೆ.

ನಕ್ಷತ್ರ : ಮೂಲ ನಕ್ಷತ್ರವು ಸಂಜೆ 06.23 ರವರೆಗೆ ಇದ್ದು ನಂತರ ಪೂರ್ವಾಷಢ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.53

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: ಬೆಳಗ್ಗೆ 09.13 ರಿಂದ 10.49

ರಾಶಿ ಫಲ

ಮೇಷ

ಬೇರೊಬ್ಬರ ಅಧೀನದಲ್ಲಿ ಕೆಲಸ ಮಾಡಲು ಇಷ್ಟಪಡುವುದಿಲ್ಲ.ಆಡಳಿತದ ಚುಕ್ಕಾಣಿ ಹಿಡಿಯಬಯಸುವಿರಿ ಇಲ್ಲವಾದಲ್ಲಿ ಸ್ವಂತ ವ್ಯಾಪಾರ ವ್ಯವಹಾರಗಳನ್ನು ಆರಂಭಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಎದುರಾಗುವ ಸನ್ನಿವೇಶದಿಂದ ಈ ತೀರ್ಮಾನಕ್ಕೆ ಬರುವಿರಿ. ಉತ್ತಮ ವರಮಾನವಿರುತ್ತದೆ. ಬುದ್ದಿವಂತಿಕೆಯನ್ನು ಸದ್ಬಳಕೆ ಮಾಡಿಕೊಳ್ಳಿ. ಕುಟುಂಬಕ್ಕೆ ಹೊಸ ಅತಿಥಿಗಳ ಆಗಮನವಾಗುತ್ತದೆ. ಹಣ ಉಳಿಸಲು ಸಾಧ್ಯವಾಗುವುದಿಲ್ಲ. ಗೃಹೋಪಯೋಗಿ ಕೆಲಸ ಕಾರ್ಯಗಳಿಗೆ ಹಣ ಖರ್ಚು ಮಾಡುವಿರಿ. ನಿಮ್ಮ ಮಕ್ಕಳು ದುಂದು ವೆಚ್ಚ ಮಾಡುತ್ತಾರೆ. ಸಮಾಜದಲ್ಲಿ ಉನ್ನತ ಗೌರವ ಗಳಿಸುವಿರಿ. ಅಧಿಕಾರಿಗಳಿಗೆ ತಮ್ಮ ಕಾರ್ಮಿಕ ವರ್ಗದಿಂದ ವಿಶೇಷ ಅನುಕೂಲತೆ ದೊರೆಯಲಿದೆ. ನಿಮ್ಮ ಜೊತೆ ಇರುವ ಜನರೇ ನಿಮ್ಮ ವಿರೋಧಿಗಳಾಗಿ ವರ್ತಿಸುತ್ತಾರೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೆಂಪು

ವೃಷಭ

ಮನದಲ್ಲಿ ಹೆಚ್ಚಿನ ಧೈರ್ಯವಿರುತ್ತದೆ. ನಿಮ್ಮ ಸಮಾನ ವಯಸ್ಸಿನವರ ನಡುವೆ ನಾಯಕರಾಗಿ ಮೆರೆಯುವಿರಿ. ಹಣಕಾಸಿನ ತೊಂದರೆ ಇರುವುದಿಲ್ಲ. ಬೇರೆಯವರ ಮನಸ್ಸಿಗೆ ನಾಟುವಂತೆ ಮಾತನಾಡುವಿರಿ. ಅಪಜಯಗಳಿಗೆ ಹೆದರದೆ ಮುಂದುವರೆಯುವಿರಿ. ಬೇರೆಯವರ ಗೆಲುವಿನ ಬಗ್ಗೆ ಹಗುರವಾಗಿ ಮಾತನಾಡುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಯಾರೊಬ್ಬರ ಬುದ್ಧಿ ಮಾತನ್ನು ಕೇಳುವುದಿಲ್ಲ. ಪ್ರತಿಯೊಂದು ವಿಚಾರಗಳಲ್ಲಿಯೂ ನಿಮಗೆ ಸರಿ ಎನಿಸಿದಂತಹ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಶಾಂತವಾಗಿ ಕಂಡರೂ ಕೋಪಗೊಂಡಾಗ ಉದ್ವೇಗದಿಂದ ವರ್ತಿಸುವಿರಿ. ಮಾನಸಿಕ ನೆಮ್ಮದಿ ಇರುವುದಿಲ್ಲ. ಸ್ನೇಹಿತರ ವರ್ಗ ದೊಡ್ಡದಾಗಿರುತ್ತದೆ. ನಿಮ್ಮ ಪರವಾಗಿ ಕೆಲಸ ಕಾರ್ಯಗಳನ್ನು ಪೂರೈಸಲು ಆತ್ಮೀಯರ ಪಡೆಯೇ ಇರುತ್ತದೆ.

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಎಲೆ ಹಸಿರು

ಮಿಥುನ

ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಧೈರ್ಯ ಸಾಹಸದ ಗುಣ ನಿಮ್ಮಲ್ಲಿ ಇರುತ್ತದೆ. ಬಂಧು-ಬಳಗದವರ ವಿಶ್ವಾಸಕ್ಕೆ ಪಾತ್ರರಾಗುವಿರಿ. ಸಂಗಾತಿಯ ಆರೋಗ್ಯದಲ್ಲಿಯೂ ತೊಂದರೆ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ಗಳಿಸುವಿರಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಕೌಶಲ್ಯ ಇರುತ್ತದೆ. ಕೆಲಸ ಕಾರ್ಯಗಳಲ್ಲಿ ಆಸಕ್ತಿ ಇರುವುದಿಲ್ಲ. ಬೇರೆಯವರಿಗೆ ಬೇಸರ ಉಂಟಾಗುವಂತೆ ಮಾತನಾಡುವಿರಿ. ವಿದೇಶ ಪ್ರಯಾಣ ಯೋಗವಿದೆ. ಹಣಕಾಸಿನ ವಿಚಾರದಲ್ಲಿ ಉಂಟಾಗಿದ್ದ ವಿರೋಧ ಕೊನೆಗೊಳ್ಳುತ್ತದೆ. ಸಮಾಜದಲ್ಲಿಉತ್ತಮ ಕೀರ್ತಿ ಪ್ರತಿಷ್ಠೆ ದೊರೆಯುತ್ತದೆ. ನಿಮ್ಮ ಕೆಲಸ ಕಾರ್ಯಗಳಿಗೆ ಬೇರೆಯವರನ್ನು ಆಶ್ರಯಿಸುವುದಿಲ್ಲ. ನಿಮಗೆ ಒಳ್ಳೆಯ ಊಹಾಶಕ್ತಿ ಇರುತ್ತದೆ. ದಂಪತಿ ನಡುವೆ ಉತ್ತಮ ಅನುಭವ ಇರುತ್ತದೆ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಕಟಕ

ಅವಿವಾಹಿತರಿಗೆ ವಿವಾಹ ನಿಶ್ಚಯವಾಗಬಹುದು. ದಂಪತಿ ನಡುವೆ ಪ್ರೀತಿ ವಿಶ್ವಾಸ ಹೆಚ್ಚುತ್ತದೆ. ಉದ್ಯೋಗದ ಸಲುವಾಗಿ ಕುಟುಂಬದಿಂದ ದೂರ ಉಳಿಯಬೇಕಾಗುತ್ತದೆ. ಸಂಗಾತಿಯಿಂದ ಹಣದ ಸಹಾಯವಿದೆ. ಮಕ್ಕಳ ಬಗ್ಗೆ ಯೋಚನೆ ಇರುತ್ತದೆ. ನಿಮ್ಮ ಸಂಗಾತಿಯು ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಮಕ್ಕಳಿಗೆ ವಿಶೇಷ ಜ್ಞಾನವಿರುತ್ತದೆ. ನಿಮಗೆ ಅರಿವಿಲ್ಲದಂತೆ ಜನಪ್ರಿಯತೆಯ ತುತ್ತತುದಿಯಲ್ಲಿರುವಿರಿ. ಮಕ್ಕಳು ಬೇರೆಯವರನ್ನು ಆಶ್ರಯಿಸದೆ ತಮ್ಮ ಕೆಲಸವನ್ನು ಪೂರ್ಣಗೊಳಿಸುತ್ತಾರೆ. ಸಣ್ಣವಿಚಾರವಾದರೂ ದೊಡ್ಡದಾಗಿ ಪ್ರತಿಬಿಂಬಿಸುವಿರಿ. ಅತಿಯಾದ ಖರ್ಚಿನಿಂದಾಗಿ ನೆಮ್ಮದಿ ಕೆಡುತ್ತದೆ. ಆದಾಯಕ್ಕಿಂತಲೂ ಹೆಚ್ಚು ಖರ್ಚು ವೆಚ್ಚ ಅಧಿಕವಾಗಿರುತ್ತದೆ. ಮಕ್ಕಳೊಂದಿಗೆ ಉತ್ತಮ ಬಾಂಧವ್ಯ ಇರುವುದಿಲ್ಲ. ಅಪಘಾತವಾಗುವ ಸಾಧ್ಯತೆಗಳಿವೆ ಎಚ್ಚರಿಕೆ ಇರಲಿ. ಹೊಸ ಬಗೆಯ ಆಭರಣ ಮತ್ತು ವಸ್ತ್ರಗಳಿಗೆ ಹಣ ವೆಚ್ಚವಾಗುತ್ತದೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).