ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ನೀವು ಇಷ್ಟಪಟ್ಟ ವಾಹನ ಕೊಳ್ಳುವಿರಿ, ತಂದೆ ಜೊತೆಗಿನ ಮನಸ್ತಾಪ ದೂರ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ನೀವು ಇಷ್ಟಪಟ್ಟ ವಾಹನ ಕೊಳ್ಳುವಿರಿ, ತಂದೆ ಜೊತೆಗಿನ ಮನಸ್ತಾಪ ದೂರ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಜೂನ್‌ 22ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ)

ನೀವು ಇಷ್ಟಪಟ್ಟ ವಾಹನ ಕೊಳ್ಳುವಿರಿ, ತಂದೆ ಜೊತೆಯಿದ್ದ ಮನಸ್ತಾಪ ದೂರ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ನೀವು ಇಷ್ಟಪಟ್ಟ ವಾಹನ ಕೊಳ್ಳುವಿರಿ, ತಂದೆ ಜೊತೆಯಿದ್ದ ಮನಸ್ತಾಪ ದೂರ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (22nd June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ: ಹುಣ್ಣಿಮೆ ಬೆಳಗ್ಗೆ 06.16 ವರೆಗು ಇದ್ದು ಉಪರಿ ಪಾಡ್ಯ ಇರುತ್ತದೆ.

ನಕ್ಷತ್ರ : ಮೂಲ ನಕ್ಷತ್ರವು ಸಂಜೆ 06.23 ರವರೆಗೆ ಇದ್ದು ನಂತರ ಪೂರ್ವಾಷಢ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.53

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: ಬೆಳಗ್ಗೆ 09.13 ರಿಂದ 10.49

ರಾಶಿ ಫಲ

ಸಿಂಹ

ಕುಟುಂಬದಲ್ಲಿಒಮ್ಮತವಿರುವುದಿಲ್ಲ. ಸೋದರದ ನಡುವೆ ಆಸ್ತಿಯ ವಿಚಾರದಲ್ಲಿ ಮನಸ್ತಾಪವಿರುತ್ತದೆ. ಅನಾವಶ್ಯಕವಾದ ಕಟ್ಟುಪಾಡುಗಳು ನಿಮ್ಮ ಮನಸ್ಸಿನ ಮೇಲೆ ಋಣಾತ್ಮಕ ಪ್ರಭಾವ ಬೀರುತ್ತದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಸಂಕುಚಿತ ಮನಸ್ಸಿರುತ್ತದೆ. ಚಿಕ್ಕ ಮಕ್ಕಳ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಕೈ ಕಾಲುಗಳಲ್ಲಿ ನಿತ್ರಾಣ ಉಂಟಾಗುತ್ತದೆ. ಯೋಗ ಪ್ರಾಣಾಯಾಮದಿಂದ ಉತ್ತಮ ಆರೋಗ್ಯ ಲಭಿಸುತ್ತದೆ. ಆತ್ಮೀಯರು ಹಣದ ಸಹಾಯ ಮಾಡುವರು. ಹಣಕಾಸಿನ ವಿಚಾರದಲ್ಲಿ ದುರಾಸೆ ಇರುತ್ತದೆ. ಗುರು ಹಿರಿಯರ ಸಲಹೆ ಪಾಲಿಸಿದರೆ ತೊಂದರೆ ದೂರವಾಗುತ್ತವೆ. ವಾಹನ ಕೊಳ್ಳುವ ಸೂಚನೆಗಳಿವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಕೆಂಪು ಬಣ್ಣ

ಕನ್ಯಾ

ಕುಟುಂಬದ ಐಕ್ಯತೆಗೆ ಧಕ್ಕೆ ಬರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಹೆಚ್ಚಲಿವೆ. ಅನಾರೋಗ್ಯವಿರುತ್ತದೆ. ಸೋದರರೊಂದಿಗೆ ವಿಶೇಷ ಭಾಂದವ್ಯ ರೂಪುಗೊಳ್ಳುತ್ತದೆ. ಎಲ್ಲರೂ ಮೆಚ್ಚುವಂತೆ ವರ್ತಿಸುವಿರಿ. ಸಮಸ್ಯೆಗಳು ಎದುರಾದಾಗ ಭಯ ಪಡದೆ ಪರಿಹಾರ ಕಂಡುಹಿಡಿಯುವಿರಿ. ಹಣದ ತೊಂದರೆ ಕಡಿಮೆಯಾಗುತ್ತದೆ. ಮನೆಯನ್ನು ಅಲಂಕರಿಸಲು ಆಕರ್ಷಕ ವಸ್ತುಗಳನ್ನು ಕೊಳ್ಳುವಿರಿ. ಮಕ್ಕಳು ಹೆಮ್ಮೆಪಡುವ ಕೆಲಸ ಮಾಡುತ್ತಾರೆ. ಕುಟುಂಬದ ಹಿರಿಯರಿಗೆ ಅನಾರೋಗ್ಯವಿರುತ್ತದೆ. ಯಾರನ್ನೂ ಲೆಕ್ಕಿಸದೆ ಮನದಲ್ಲಿರುವ ವಿಚಾರಗಳನ್ನು ತಿಳಿಸುವಿರಿ. ಪ್ರಯತ್ನಪೂರ್ವಕವಾಗಿ ಉದ್ಯೋಗವನ್ನು ಬದಲಿಸುವ ಸಾಧ್ಯತೆಗಳಿವೆ. ಸಮಾಜ ಸೇವೆಯಲ್ಲಿ ಎಲ್ಲರ ಮನ ಗೆಲ್ಲುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :11

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ : ಹಳದಿ ಬಣ್ಣ

ತುಲಾ

ನವ ವಿವಾಹತೆಯರಿಗೆ ಹೆಚ್ಚಿನ ಶುಭಫಲಗಳು ದೊರೆಯಲಿವೆ. ಹಣಕಾಸಿನ ತೊಂದರೆ ಇಲ್ಲ. ಸಂಗಾತಿಯ ಮನೆಯವರಿಂದ ಅನುಕೂಲತೆಗಳು ದೊರೆಯಲಿವೆ. ತಂದೆ ಜೊತೆಯಿದ್ದ ಮನಸ್ತಾಪ ಕೊನೆಯಾಗಲಿದೆ. ಸಂಬಂಧಿಕರಿಂದ ಯಾವುದೇ ಸಹಾಯ ದೊರೆಯುವುದಿಲ್ಲ. ಹೊಸ ಮನೆ ಅಥವಾ ಭೂಮಿಯನ್ನು ಕೊಳ್ಳುವ ಮಾತುಕತೆ ನಡೆಯುತ್ತದೆ. ತಂದೆ ತಾಯಿಯ ಬಗ್ಗೆ ವಿಶೇಷ ಪ್ರೀತಿ ಮತ್ತು ಗೌರವ ತೋರುವಿರಿ. ದಾನ ಧರ್ಮದ ಕೆಲಸವನ್ನು ಮಾಡುವಲ್ಲಿ ಸಂತೋಷ ಕಾಣುವಿರಿ. ಸ್ವಯಂಪ್ರೇರಣೆಯಿಂದ ಆತ್ಮೀಯರಿಗೆ ಸಹಾಯ ಮಾಡುವಿರಿ ಕುಟುಂಬದ ಅತಿಮುಖ್ಯ ವಿಚಾರಗಳನ್ನು ರಹಸ್ಯವಾಗಿ ಇಡುವಿರಿ.

ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹಸಿರು

ವೃಶ್ಚಿಕ

ವಿವಿಧ ಮೂಲಗಳಿಂದ ಹಣ ಕೈ ಸೇರುತ್ತದೆ. ನಿಮ್ಮ ಪ್ರಯತ್ನದಿಂದಾಗಿ ಹಣಕಾಸಿನ ತೊಂದರೆ ಕಾಣುವುದಿಲ್ಲ. ನಿಮ್ಮ ನಿರೀಕ್ಷೆಯಂತೆ ಕೆಲಸ ಕಾರ್ಯಗಳು ನಡೆಯುವ ಕಾರಣ ಕುಟುಂಬದಲ್ಲಿ ಸಂತಸದ ವಾತಾವರಣವಿರುತ್ತದೆ. ಸಮಾಜದಲ್ಲಿ ನಿಮ್ಮ ನಡವಳಿಕೆಗೆ ಎಲ್ಲರ ಪ್ರಶಂಸೆ ದೊರೆಯುತ್ತದೆ. ಸಮಸ್ಯೆಗಳು ಜೀವನದಲ್ಲಿ ಎದುರಾದಾಗ ಗೆಲ್ಲುವ ಛಲವನ್ನು ತೋರುವಿರಿ. ತಂದೆ ತಾಯಿಯ ಜೊತೆ ಅನಾವಶ್ಯಕವಾಗಿ ಮನಸ್ತಾಪ ಉಂಟಾಗುತ್ತದೆ. ತಂದೆಯಿಂದ ನಿಮಗೆ ಯಾವುದೇ ರೀತಿಯ ಅನುಕೂಲತೆ ದೊರೆಯುವುದಿಲ್ಲ. ಎಲ್ಲರೂ ಮೆಚ್ಚುವಂಥ ಜನೋಪಕಾರಿ ಕೆಲಸಗಳನ್ನು ಮಾಡುವಿರಿ. ಚಿಕ್ಕ ಮಕ್ಕಳಿಗೆ ಆರೋಗ್ಯದ ಸಮಸ್ಯೆ ಕಾಡುತ್ತದೆ. ಅತಿಥಿ ಸತ್ಕಾರ ಮಾಡುವುದರಲ್ಲಿ ಸಂತೃಪ್ತಿ ಕಾಣುವಿರಿ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).