ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವಿಶ್ರಾಂತಿ ಕೊರತೆಯಿಂದ ಅನಾರೋಗ್ಯ, ನಿಮ್ಮನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುವ ಜನರ ಬಗ್ಗೆ ಎಚ್ಚರ; ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

ವಿಶ್ರಾಂತಿ ಕೊರತೆಯಿಂದ ಅನಾರೋಗ್ಯ, ನಿಮ್ಮನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುವ ಜನರ ಬಗ್ಗೆ ಎಚ್ಚರ; ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

ಜೂನ್‌ 22ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ವಿಶ್ರಾಂತಿ ಕೊರತೆಯಿಂದ ಅನಾರೋಗ್ಯ, ನಿಮ್ಮನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುವ ಜನರ ಬಗ್ಗೆ ಎಚ್ಚರ; ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ
ವಿಶ್ರಾಂತಿ ಕೊರತೆಯಿಂದ ಅನಾರೋಗ್ಯ, ನಿಮ್ಮನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುವ ಜನರ ಬಗ್ಗೆ ಎಚ್ಚರ; ಧನಸ್ಸು, ಮಕರ, ಕುಂಭ, ಮೀನ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(22nd June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ: ಹುಣ್ಣಿಮೆ ಬೆಳಗ್ಗೆ 06.16 ವರೆಗು ಇದ್ದು ಉಪರಿ ಪಾಡ್ಯ ಇರುತ್ತದೆ.

ನಕ್ಷತ್ರ : ಮೂಲ ನಕ್ಷತ್ರವು ಸಂಜೆ 06.23 ರವರೆಗೆ ಇದ್ದು ನಂತರ ಪೂರ್ವಾಷಢ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.53

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: ಬೆಳಗ್ಗೆ 09.13 ರಿಂದ 10.49

ರಾಶಿ ಫಲ

ಧನಸ್ಸು

ನಿಮ್ಮ ಬಗ್ಗೆ ನಿಮಗೆ ಹೆಮ್ಮೆ ಇರುತ್ತದೆ. ಕುಟುಂಬದಲ್ಲಿ ಪರಸ್ಪರ ಸಹಕಾರ ಮನೋಭಾವನೆ ಕಂಡುಬರುತ್ತದೆ. ಹಣದ ಕೊರತೆ ಇರುವುದಿಲ್ಲ. ಇರುವ ಹಣವನ್ನು ಪೋಲು ಮಾಡದೆ ಸರಿಯಾದ ಹಾದಿಯಲ್ಲಿ ಖರ್ಚು ಮಾಡುವಿರಿ. ಅವಶ್ಯಕತೆ ಇರುವಷ್ಟು ಹಣ ಸಂಪಾದಿಸುವ ಸಾಮರ್ಥ್ಯ ನಿಮಗಿರುತ್ತದೆ. ಮನೆಯ ಹೊರಗೂ ಒಳಗೂ ಒಳ್ಳೆ ಹೆಸರು ಗಳಿಸುವಿರಿ. ಅತಿಯಾದ ಕೋಪವಿರುತ್ತದೆ. ಆದರೆ ಅದರಿಂದ ಯಾರಿಗೂ ತೊಂದರೆ ಉಂಟಾಗುವುದಿಲ್ಲ. ಕುಟುಂಬದಲ್ಲಿ ಸುಖ ಸಂತೋಷ ಮನೆ ಮಾಡಿರುತ್ತದೆ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಅಶಕ್ತ ವಯೋವೃದ್ಧರ ಬಗ್ಗೆ ಕನಿಕರ ವಿರುತ್ತದೆ. ಸಮಾಜ ಸೇವೆ ಮಾಡಲು ಅವಕಾಶವೊಂದನ್ನು ಹುಡುಕುವಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಮಕರ

ಬೇರೆಯವರ ಸಲಹೆ ನಡುವೆಯೂ ನಿಮ್ಮ ತೀರ್ಮಾನವೇ ಅಂತಿಮವಾಗುತ್ತದೆ. ನಿಮ್ಮ ಮಕ್ಕಳ ಬಗ್ಗೆ ಎಲ್ಲರೂ ಉತ್ತಮ ಅಭಿಪ್ರಾಯ ಹೊಂದಿರುತ್ತಾರೆ. ಉತ್ತಮ ವರಮಾನವಿರುತ್ತದೆ. ಸಂತೃಪ್ತಿಯ ಜೀವನ ನಡೆಸುವಿರಿ. ನಿಮ್ಮಉನ್ನತಿಗೆ ಸಹೋದ್ಯೋಗಿಗಳಿಂದ ಅಡ್ಡಿ ಉಂಟಾಗುತ್ತದೆ. ಎದುರಾಗುವ ಆಪತ್ತನ್ನು ಬುದ್ಧಿವಂತಿಕೆಯಿಂದ ಗೆಲ್ಲುವಿರಿ. ನಿಮ್ಮಲ್ಲಿರುವ ಒಳ್ಳೆಯ ಗುಣ ನಡತೆಯನ್ನು ಎಲ್ಲರೂ ಮೆಚ್ಚುತ್ತಾರೆ. ಸಂಗಾತಿಗೆ ಉತ್ತಮ ಉದ್ಯೋಗ ದೊರೆಯುತ್ತದೆ. ತಂದೆಯ ಕೆಲಸ ಕಾರ್ಯದಲ್ಲಿನ ಅಡ್ಡಿ ಆತಂಕ ದೂರವಾಗುತ್ತದೆ. ಯಾವುದೇ ವಿಚಾರವನ್ನು ಮರೆಮಾಚದೆ ಸತ್ಯವನ್ನು ನುಡಿಯುವಿರಿ. ತಪ್ಪು ಮಾಡುವವರನ್ನು ಕ್ಷಮಿಸುವ ದೊಡ್ಡತನ ನಿಮ್ಮಲ್ಲಿರುತ್ತದೆ. ನಿಮ್ಮ ನಿರೀಕ್ಷೆಯಂತೆ ಎಲ್ಲಾ ರೀತಿಯ ಅನುಕೂಲತೆಗಳು ದೊರೆಯುತ್ತವೆ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಕುಂಭ

ಯಾವುದೇ ನಿರ್ಬಂಧನೆ ಇಲ್ಲದೆ ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಅಗೋಚರ ಶಕ್ತಿಗಳ ಬಗ್ಗೆ ಕುತೂಹಲ ಉಂಟಾಗುತ್ತದೆ. ನಿಮ್ಮಲ್ಲಿರುವ ಅನ್ವೇಷಣಾ ಬುದ್ಧಿಯು ಹಿರಿಯರಲ್ಲಿ ಆತಂಕ ಉಂಟುಮಾಡುತ್ತದೆ. ಗುರು ಹಿರಿಯರಿಂದ ಸ್ಪೂರ್ತಿ ಪಡೆಯುವಿರಿ. ಸರಿಯಾದ ಅಧ್ಯಯನವಿಲ್ಲದೆ ಯಾವುದೇ ಕೆಲಸ ಮಾಡುವುದಿಲ್ಲ. ನಿಮ್ಮಲ್ಲಿರುವ ಉದಾರ ಬುದ್ಧಿಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುವ ಜನರಿದ್ದಾರೆ. ಅನುಕೂಲವಿಲ್ಲದ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಸುಖಜೀವನ ನಡೆಸುವಿರಿ. ನಿಮ್ಮ ಮಕ್ಕಳಿಗೆ ವಿಶೇಷ ಬುದ್ಧಿ ಇರುತ್ತದೆ. ಸಮಯದ ಅರಿವಿಲ್ಲದೆ ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ವಿಶ್ರಾಂತಿಯ ಕೊರತೆ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ:10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬಿಳಿ

ಮೀನ

ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತದೆ. ಸಮಯದ ಅಭಾವದಿಂದ ಕೆಲವೊಂದು ಕೆಲಸ ಕಾರ್ಯಗಳು ಅಪೂರ್ಣಗೊಳ್ಳುತ್ತವೆ. ಉತ್ತಮ ಆದಾಯವಿದ್ದರೂ ಖರ್ಚು ವೆಚ್ಚಗಳಿಗೆ ಸರಿದೂಗುತ್ತದೆ. ಆರಂಭದಲ್ಲಿ ಇದ್ದ ಆತಂಕ ಕ್ರಮೇಣ ಮರೆಯಾಗುತ್ತದೆ. ಯಾವುದೇ ವಿಚಾರದಲ್ಲಿ ನಿರ್ದಿಷ್ಟ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಸಣ್ಣ ಪುಟ್ಟ ವಿಚಾರಗಳಿಗೂ ಹೆಚ್ಚಿನ ಪ್ರಯತ್ನ ಅವಶ್ಯಕವಾಗುತ್ತದೆ. ಮನಸ್ಸು ಒಳ್ಳೆಯದಾದರೂ ಆಡುವ ಮಾತಿನಿಂದ ಕುಟುಂಬದವರ ವಿರೋಧ ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ತೊಂದರೆ ಎದುರಾಗುತ್ತದೆ. ಹಣದ ತೊಂದರೆಯಿಂದ ಪಾರಾಗಲು ಉಪವೃತ್ತಿಯೊಂದನ್ನು ಆರಂಭಿಸುವಿರಿ. ಗುರು ಹಿರಿಯರ ಆಶೀರ್ವಾದ ನಿಮಗೆ ದೊರೆಯಲಿದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಬೂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).