ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಈ ರಾಶಿಯವರು ಗೋಸೇವೆ ಮಾಡಿ ದಿನದ ಕೆಲಸ ಆರಂಭಿಸಿದರೆ ಶುಭ ಫಲ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಈ ರಾಶಿಯವರು ಗೋಸೇವೆ ಮಾಡಿ ದಿನದ ಕೆಲಸ ಆರಂಭಿಸಿದರೆ ಶುಭ ಫಲ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

22 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (22nd May 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (22nd May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ಚತುರ್ದಶಿ ಸಂಜೆ 05.35 ರವರೆಗೂ ಇರುತ್ತದೆ ನಂತರ ಹುಣ್ಣಿಮೆ ಆರಂಭವಾಗುತ್ತದೆ.

ನಕ್ಷತ್ರ : ಸ್ವಾತಿ ನಕ್ಷತ್ರವು ಬೆಳಗ್ಗೆ 07.01 ರವರೆಗು ಇರುತ್ತದೆ ನಂತರ ವಿಶಾಖ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.39

ರಾಹುಕಾಲ: 12.20 ರಿಂದ ಹ. 01.55

ರಾಶಿಫಲ

 

ಮೇಷ

ಹಾಸ್ಯದ ಮನೋ ಭಾವಯಿಂದ ಎಲ್ಲರ ಮನಗೆಲ್ಲುವಿರಿ. ಹಿರಿಯರ ನಿರ್ಧಾರದಿಂದ ಕುಟುಂಬದಲ್ಲಿ ಸಂತಸ ಉಳಿಯುತ್ತದೆ. ಹೆಚ್ಚಿನ ಪರಿಶ್ರಮದಿಂದ ಉದ್ಯೋಗದಲ್ಲಿ ಅನುಕೂಲಕರ ಬದಲಾವಣೆ ಕಂಡುಬರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಸೋಲನ್ನು ಒಪ್ಪದೆ ಹೆಚ್ಚಿನ ಪ್ರಯತ್ನದಿಂದ ಗೆಲುವನ್ನು ಸಾಧಿಸುತ್ತಾರೆ. ಕುಟುಂಬದ ಭೂ ವಿವಾದವೊಂದು ನಿಮ್ಮಿಂದಾಗಿ ಬಗೆಹರಿಯಲಿದೆ. ಬಂಧು ಬಳಗದವರು ನಿಮ್ಮ ಕಾರ್ಯ ನೈಪುಣ್ಯತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಮುಂಗೋಪ ಕಡಿಮೆ ಮಾಡಿಕೊಂಡಲ್ಲಿ ಎದುರಾಗುವ ಸಮಸ್ಯೆ ದೂರವಾಗುವುದು. ಸಂಗಾತಿಯ ದುಡುಕಿನ ನಿರ್ಧಾರದಿಂದ ಸಂದಿಗ್ದತೆಗೆ ಸಿಲುಕುವಿರಿ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ವೃಷಭ

ಬೇರೊಬ್ಬರ ಸಹಾಯವಿಲ್ಲದೆ ಕುಟುಂಬದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿನ ಬದಲಾವಣೆಗಳು ಬೇಸರ ಮೂಡಿಸುತ್ತದೆ. ಹಣಕಾಸಿನ ಪ್ರಗತಿ ಕಾಣದೆ ಹೋದರು ಯಾವುದೇ ಸಮಸ್ಯೆ ಇರದು. ಒಂದೇ ರೀತಿಯ ಕೆಲಸ ಬೇಸರ ಮೂಡಿಸುತ್ತದೆ. ಕರ್ತವ್ಯದ ನಡುವೆ ವಿಶ್ರಾಂತಿ ಪಡೆಯುವುದು ನಿಮಗೆ ಅವಶ್ಯಕ. ಆರೋಗ್ಯ ಸುಧಾರಿಸಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯಕ್ಕೆ ಕೊರತೆ ಕಾಣದು. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಥಿತಿಯನ್ನು ಹೊಂದಿರುತ್ತಾರೆ. ವಿದೇಶಿ ಕಂಪನಿಯೊಂದರ ಸಹಭಾಗಿತ್ವ ದೊರೆವ ಸೂಚನೆಗಳಿವೆ. ಸಭೆ ಸಮಾರಂಭದಿಂದ ದೂರ ಉಳಿಯುವಿರಿ. ತಪ್ಪನ್ನು ಮರೆತು ಪ್ರೀತಿ ತೋರುವ ದೊಡ್ಡತನ ತೋರುವಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಮಿಥುನ

ಕುಟುಂಬದಲ್ಲಿ ಅಚ್ಚರಿಯ ಬದಲಾವಣೆಗಳು ಉಂಟಾಗಲಿವೆ. ಕುಟುಂಬದ ಸದಸ್ಯರಲ್ಲಿ ಒಮ್ಮತದ ವಾತಾವರಣ ಕಂಡುಬರುತ್ತವೆ. ಚಿಕ್ಕ ಪುಟ್ಟ ವಿಚಾರಗಳನ್ನು ಸಹ ಕುತೂಹಲದಿಂದ ಪರಿಶೀಲಿಸುವಿರಿ. ಮಕ್ಕಳ ಜೊತೆ ಆನಂದದಿಂದ ದಿನ ಕಳೆಯುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಎದುರಾದರೂ ಲೆಕ್ಕಿಸುವುದಿಲ್ಲ. ಉತ್ತಮ ಆದಾಯ ಇರುತ್ತದೆ. ಮನಸ್ಸಿಗೆ ಇಷ್ಟವೆನಿಸುವ ಒಡವೆ ವಸ್ತ್ರವನ್ನು ಕೊಳ್ಳುವಿರಿ. ದಾಂಪತ್ಯದಲ್ಲಿ ಉತ್ತಮ ಅನ್ಯೋನ್ಯತೆ ಇರುತ್ತದೆ. ಖರ್ಚು ಕಡಿಮೆ ಮಾಡಿ ಹಣ ಉಳಿಸಲಿದ್ದೀರಿ. ಬಿಡುವಿನ ವೇಳೆ ವಿದ್ಯಾರ್ಥಿಗಳು ಹೊಸ ಕಾರ್ಯ ಯೋಜನೆಗಳನ್ನು ರೂಪಿಸುತ್ತಾರೆ. ಸಮಯದ ಅಭಾವದಿಂದ ಹಲವು ಕೆಲಸ ಕಾರ್ಯಗಳು ಅಪೂರ್ಣಗೊಳ್ಳುತ್ತವೆ. ಆಹಾರ ಸೇವನೆಯಲ್ಲಿ ಇತಿಮಿತಿ ಇರಲಿ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ಕಟಕ

ಕುಟುಂಬದಲ್ಲಿ ಒಮ್ಮತದ ಮನೋಭಾವನೆ ಇರುತ್ತದೆ. ಆದಾಯದಲ್ಲಿ ಹೆಚ್ಚಳ ಕಂಡುಬರುತ್ತದೆ. ಹಿರಿಯರ ಸಹಕಾರವು ಹೊಸ ಆಸೆಗೆ ಕಾರಣವಾಗಲಿದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಕೆಲಸ ಕಾರ್ಯಗಳಲ್ಲಿ ದುಡುಕದೆ ವರ್ತಿಸಿದರೆ ಉತ್ತಮ ಫಲಿತಾಂಶ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಒತ್ತಡವಿಲ್ಲದೆ ಉತ್ತಮ ಆದಾಯ ಗಳಿಸುವಿರಿ. ಬೇರೆಯವರ ಪ್ರಭಾವಕ್ಕೆ ಒಳಗಾಗದೆ ಕೆಲಸ ನಿರ್ವಹಿಸುವಿರಿ. ಗೃಹಿಣಿಯರು ತಮ್ಮ ದೈನಂದಿನ ಕೆಲಸಗಳಿಗೆ ಸಂಪೂರ್ಣವಾಗಿ ಬೇರೆಯವರನ್ನು ಅವಲಂಬಿಸುತ್ತಾರೆ. ಉತ್ತಮ ಆದಾಯವಿದ್ದರೂ ಹಣ ಉಳಿಸಲಾರಿರಿ. ಖರ್ಚುವೆಚ್ಚಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಕುಟುಂಬದ ಸದಸ್ಯರಲ್ಲಿ ಅನಾವಶ್ಯಕ ವಾದ ವಿವಾದ ಎದುರಾಗುತ್ತವೆ.

ಪರಿಹಾರ : ತಲೆಗೆ ಹಾಲು ಹಚ್ಚಿ ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).