ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅನಾವಶ್ಯಕ ಖರ್ಚಿನಿಂದ ಹಣದ ಕೊರತೆ, ಸಾಲದ ವ್ಯವಹಾರದಲ್ಲಿ ತೊಂದರೆ; ಮೇ 22ರ ದಿನ ಭವಿಷ್ಯ

Horoscope Today: ಅನಾವಶ್ಯಕ ಖರ್ಚಿನಿಂದ ಹಣದ ಕೊರತೆ, ಸಾಲದ ವ್ಯವಹಾರದಲ್ಲಿ ತೊಂದರೆ; ಮೇ 22ರ ದಿನ ಭವಿಷ್ಯ

22 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (22nd May 2024 Daily Horoscope).

ಮೇ 22ರ ದಿನ ಭವಿಷ್ಯ
ಮೇ 22ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (22nd May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ಚತುರ್ದಶಿ ಸಂಜೆ 05.35 ರವರೆಗೂ ಇರುತ್ತದೆ ನಂತರ ಹುಣ್ಣಿಮೆ ಆರಂಭವಾಗುತ್ತದೆ.

ನಕ್ಷತ್ರ : ಸ್ವಾತಿ ನಕ್ಷತ್ರವು ಬೆಳಗ್ಗೆ 07.01 ರವರೆಗು ಇರುತ್ತದೆ ನಂತರ ವಿಶಾಖ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.39

ರಾಹುಕಾಲ: 12.20 ರಿಂದ ಹ. 01.55

ರಾಶಿಫಲ

 

ಸಿಂಹ

ಸಂಯಮದ ವರ್ತನೆಯಿಂದ ಕುಟುಂಬದ ಹಣಕಾಸಿನ ವಿವಾದ ಬಗೆಹರಿಯುತ್ತದೆ. ಉದ್ಯೋಗದಲ್ಲಿ ದಿಢೀರ್ ಬದಲಾವಣೆಗಳು ಉಂಟಾಗಲಿವೆ. ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿ ದೊರೆಯುತ್ತದೆ. ಯಾರಿಗೂ ತಿಳಿಯದಂತೆ ಹಣಕಾಸಿನ ವ್ಯವಹಾರ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ಇರಲಿದೆ. ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳ ನಡುವೆ ನಾಯಕರಾಗಿ ಬಾಳುತ್ತಾರೆ. ದಿನಾಂತ್ಯಕ್ಕೆ ಹಣದ ಕೊರತೆ ಕಂಡು ಬರುತ್ತದೆ. ಕುಟುಂಬದ ಮಂಗಳ ಕಾರ್ಯವು ಮುಂದೂಡಲ್ಪಡುತ್ತದೆ. ಕೋಪ ತೊರೆದು ಮಾತನಾಡಿದರೆ ಅನೇಕ ಸಮಸ್ಯೆಗಳು ಕೊನೆಗೊಳ್ಳುತ್ತವೆ. ವಿದ್ಯಾರ್ಥಿಗಳು ಸುಲಭವಾಗಿ ಯಾರ ಮಾತನ್ನೂ ಒಪ್ಪುವುದಿಲ್ಲ. ಮಕ್ಕಳೊಂದಿಗೆ ಸಂತಸದಿಂದ ಸಮಯ ಕಳೆಯುವಿರಿ.

ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ನೀಲಿ

ಕನ್ಯಾ

ಕುಟುಂಬದಲ್ಲಿ ಸಂತೋಷದ ವಾತಾವರಣ ಉಂಟು ಮಾಡುವಿರಿ. ಉದ್ಯೋಗದಲ್ಲಿ ಸೋಲು ಎದುರಾದರೂ ನಿಮ್ಮ ಪ್ರಯತ್ನದಿಂದ ಎಲ್ಲಾ ಸರಿ ಆಗಲಿದೆ. ಗೆಲುವಿಗಾಗಿ ಸ್ನೇಹ ವಿಶ್ವಾಸವನ್ನು ದೂರ ಮಾಡಿಕೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ಇರುತ್ತದೆ. ವಿದ್ಯಾರ್ಥಿಗಳು ಬೇರೆಯವರನ್ನು ಟೀಕಿಸುವುದನ್ನು ಬಿಡಬೇಕು. ದಿಢೀರನೆ ಹಣದ ಕೊರತೆ ಉಂಟಾಗಬಹುದು. ಗುರು ಹಿರಿಯರ ಕೆಲಸ ಕಾರ್ಯಗಳಲ್ಲಿ ನೆರವಾಗುವಿರಿ. ನಿಮ್ಮಲ್ಲಿ ಹುದುಗಿರುವ ಪ್ರತಿಭೆಗೆ ತಕ್ಕ ವೇದಿಕೆ ದೊರೆಯಲಿದೆ. ದಂಪತಿಗಳ ನಡುವೆ ವಾದ ವಿವಾದ ಇರುತ್ತದೆ. ಕುಟುಂಬದ ಜವಾಬ್ದಾರಿಯನ್ನು ಎಲ್ಲರೊಡನೆ ಹಂಚಿಕೊಳ್ಳುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ನೇರಳೆ

ತುಲಾ

ನಿಮ್ಮ ನಿರ್ಧಾರದ ಬಗ್ಗೆ ಕುಟುಂಬದಲ್ಲಿ ಎಲ್ಲರೂ ಚರ್ಚೆ ನಡೆಸುತ್ತಾರೆ. ಹಣಕಾಸಿನ ವಿಷಯದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾರಿರಿ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳು ತಡೆಯಿಲ್ಲದೆ ನಡೆಯಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರಮಾನ ದೊರೆಯುತ್ತದೆ. ವಿದ್ಯಾರ್ಥಿಗಳು ಕ್ರಿಯಾಶೀಲ ಮನಸಿನಿಂದ ಮುಂದುವರೆಯುತ್ತಾರೆ. ಸ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಕುಟುಂಬದ ಸದಸ್ಯರು ನಿಮ್ಮ ಪರ ನಿಲ್ಲಲಿದ್ದಾರೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರ ಲಾಭದಾಯಕ. ಸಾಲದ ವ್ಯವಹಾರದಲ್ಲಿ ತೊಂದರೆ ಇದೆ. ಅರೋಗ್ಯದ ಬಗ್ಗೆ ಕಾಳಜಿ ಇರಲಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಗುಲಾಬಿ

ವೃಶ್ಚಿಕ

ಬೇರೆಯವರ ಮನಸ್ಸನ್ನು ಅರಿತುಕೊಂಡು ಮೃದುವಾಗಿ ಮಾತನಾಡಿದರೆ ಒಳ್ಳೆಯದು. ಕುಟುಂಬದ ಕೆಲಸ ಕಾರ್ಯಗಳನ್ನು ಹೆಚ್ಚಿನ ಮುತುವರ್ಜಿಯಿಂದ ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಪರೋಕ್ಷ ಸಹಕಾರ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ವರಮಾನಕ್ಕೆ ತೊಂದರೆ ಇರದು. ಮುಕ್ತ ಮನಸ್ಸಿನಿಂದ ಆತ್ಮೀಯರಿಗೆ ಸಹಾಯ ಮಾಡುವಿರಿ. ವಿದ್ಯಾರ್ಥಿಗಳು ಹಟದಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕುಟುಂಬದ ಹಿರಿಯರು ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುತ್ತಾರೆ. ದುಡುಕದೆ ತಾಳ್ಮೆಯಿಂದ ಇದ್ದಲ್ಲಿ ಜೀವನ ಸುಖಮಯವಾಗಿರುತ್ತದೆ. ಉದ್ಯೋಗದ ವಿಚಾರವಾಗಿ ಪರಸ್ಥಳಕ್ಕೆ ತೆರಳ ಬೇಕಾಗುತ್ತದೆ. ಹಾಸ್ಯ ಮನೋಭಾವನೆಯಿಂದ ಎಲ್ಲರ ಮನ ಗೆಲ್ಲುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)