Horoscope Today: ವೃತ್ತಿಜೀವನದಲ್ಲಿ ಉತ್ತಮ ಬದಲಾವಣೆ, ಕುಟುಂಬದ ಹಣದ ವಿವಾದ ಪರಿಹಾರ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
ಫೆಬ್ರವರಿ 23, ಶುಕ್ರವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23 February 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 23 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಶುಕ್ಲಪಕ್ಷ, ಶುಕ್ರವಾರ
ತಿಥಿ : ಚತುರ್ದಶಿ ತಿಥಿಯು ಹಗಲು 03.01 ರವರೆಗು ಇದ್ದು ಆನಂತರ ಹುಣ್ಣಿಮೆ ಆರಂಭವಾಗುತ್ತದೆ.
ನಕ್ಷತ್ರ : ಆಶೇಷ ನಕ್ಷತ್ರವು ರಾ.07.06 ವರೆಗು ಇರುತ್ತದೆ. ಆನಂತರ ಮಖ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.39
ಸೂರ್ಯಾಸ್ತ: ಸ.06.26
ರಾಹುಕಾಲ : ಬೆ.10.30 ರಿಂದ ಮ. 12.00
ರಾಶಿ ಫಲಗಳು
ಧನಸ್ಸು
ಪುಟ್ಟ ಮಕ್ಕಳ ಅರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಕುಟುಂಬದಲ್ಲಿ ಹಣದ ವಿಚಾರವಾಗಿ ಬಿಗುವಿನ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಸ್ಥಿರತೆ ಕಂಡುಬರುತ್ತದೆ. ಆದರೆ ಕೆಲಸ ಕಾರ್ಯಗಳು ಅಪೂರ್ಣಗೊಳ್ಳಲಿವೆ. ಹಣದ ತೊಂದರೆ ಬಾರದು. ಸಹನೆಯಿಂದ ವರ್ತಿಸುವುದು ಒಳ್ಳೆಯದು. ಸಣ್ಣ ಪುಟ್ಟ ವಿಚಾರಗಳಲ್ಲೂ ಅಸಹನೆ ಮತ್ತು ಉದ್ವೇಗದಿಂದ ವರ್ತಿಸುವಿರಿ. ಷೇರಿನಲ್ಲಿ ಹಣ ಹೂಡಿಕೆ ಮಾಡದಿರಿ. ನೌಕರರಿಗೆ ವಿಶೇಷವಾದ ಸೌಲಭ್ಯ ದೊರೆಯುತ್ತದೆ. ಶುಭಕರ ಕೆಲಸವೊಂದನ್ನು ಪೂರೈಸುವಿರಿ. ಸರ್ಕಾರದ ಸಹಾಯದಿಂದ ವಿದ್ಯಾರ್ಥಿಗಳು ವಿದೇಶಕ್ಕೆ ತೆರಳಬಹುದು. ಹಣಕಾಸಿನ ವಿಚಾರದಲ್ಲಿ ಸ್ವಂತ ನಿರ್ಧಾರಗಳಿಗೆ ಬದ್ದರಾಗಿರಿ. ಆರೋಗ್ಯದಲ್ಲಿ ಚೇತರಿಕೆ ಇರಲಿದೆ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ಮಕರ
ಮಾತುಕತೆಯಿಂದ ಕುಟುಂಬದಲ್ಲಿ ನೆಮ್ಮದಿ ನೆಲೆಸುತ್ತದೆ. ಉದೋಗದಲ್ಲಿ ಆತಂಕದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಸಹನೆ ಮತ್ತು ಬುದ್ದಿವಂತಿಕೆಯಿಂದ ಸಮಸ್ಯೆಯಿಂದ ಹೊರಬರಬಹುದು. ವಿದ್ಯಾರ್ಥಿಗಳು ನಿಧಾನಗತಿಯಲ್ಲಿ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕಾರ್ಮಿಕ ವಲಯದವರು ತಮ್ಮ ಕಾರ್ಯ ದಕ್ಷತೆಗೆ ವಿಶೇಷವಾದ ಶ್ಲಾಘನೆಯನ್ನು ಪಡೆಯಲಿದ್ದಾರೆ. ಬೃಹತ್ ಯಂತ್ರಗಳ ದುರಸ್ತಿ ಮಾಡುವ ಸೇವಾವೃತ್ತಿ ಲಾಭದಾಯಕ. ಅನಿವಾರ್ಯವಾಗಿ ವೃತ್ತಿ ಬದಲಾವಣೆ ಮಾಡುವಿರಿ. ಸಂತಾನ ಲಾಭವಿದೆ. ನಿಮ್ಮ ಮಕ್ಕಳಿಗೆ ಹಣಕಾಸಿನ ಕಂಪನಿಯಲ್ಲಿ ಉದ್ಯೋಗ ದೊರೆಯುತ್ತದೆ. ಭೂ ಲಾಭವಿದೆ. ಪ್ರಯಾಣದಿಂದ ಲಾಭವಿದೆ.
ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಬೂದು ಬಣ್ಣ
ಕುಂಭ
ಕುಟುಂಬದ ಹಣದ ವಿವಾದ ಪರಿಹಾರವಾಗಿ ಸಂತಸ ತುಂಬಿರುತ್ತದೆ. ಉದ್ಯೋಗದಲ್ಲಿ ಯಾವುದೇ ಕೆಲಸ ಕಾರ್ಯಗಳು ಸಂಪೂರ್ಣತೆ ಪಡೆಯುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ಹಿನ್ನೆಡೆ ಇರುತ್ತದೆ. ವಿದ್ಯಾರ್ಥಿಗಳು ಸಮಸ್ಯೆಗಳನ್ನು ಎದುರಿಸಿ ಎಲ್ಲರ ಗಮನ ಗಳಿಸುವಿರಿ. ಮಹಿಳಾ ಉದ್ಯೋಗಿಗಳಿಗೆ ವಿಶೇಷವಾದ ಸ್ಥಾನ ಮತ್ತು ವರಮಾನ ಇರಲಿದೆ. ಕಾರ್ಮಿಕ ವಲಯದವರ ಕಾರ್ಯ ದಕ್ಷತೆಗೆ ವಿಶೇಷವಾದ ಶ್ಲಾಘನೆ ದೊರೆಯುತ್ತದೆ. ಸೇವಾಧಾರಿತ ಉದ್ಯೋಗವು ಲಾಭದಾಯಕ. ಅನಿವಾರ್ಯವಾಗಿ ವೃತ್ತಿ ಬದಲಾವಣೆ ಮಾಡುವಿರಿ. ಸಂತಾನ ಲಾಭವಿದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಅರೆತಲೆಶೂಲೆ ನಿಮ್ಮನ್ನು ಭಾದಿಸಬಹುದು. ಅನಿರೀಕ್ಷಿತ ಧನಲಾಭವಿದೆ.
ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಕಂದು ಬಣ್ಣ
ಮೀನ
ಅತಿಯಾದ ನಿಧಾನತೆ ಕುಟುಂಬವನ್ನು ಅಂಧಕಾರಕ್ಕೆ ನೂಕಬಹುದು. ಸಮಯಕ್ಕೆ ತಕ್ಕಂತಹ ನಿರ್ಧಾರವನ್ನು ತೆಗೆದುಕೊಳ್ಳಲು ವಿಫಲರಾಗುವಿರಿ. ಆದರೆ ನಿಮ್ಮ ಮಕ್ಕಳ ಸಹಾಯ ಸದಾ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ದೊಡ್ಡ ವಿಪತ್ತಿನಿಂದ ದೂರವಾಗುವಿರಿ. ಕುಟುಂಬದ ಒಟ್ಟಾರೆ ಆದಾಯವು ಹೆಚ್ಚಲಿದೆ. ನಿಮ್ಮ ಮಾತಿನ ದಾಟಿ ನಿಮ್ಮ ಭವಿಷ್ಯವನ್ನು ನಿರ್ಧರಿಸುತ್ತದೆ. ಅವಿವಾಹಿತರಿಗೆ ಸಂಬಂಧದಲ್ಲಿ ವಿವಾಹವಾಗುತ್ತದೆ. ಹೊಗಳಿಕೆಗೆ ಮರುಳಾಗಿ ಮೋಸ ಹೋಗದಿರಿ. ವೃತ್ತಿಜೀವನದಲ್ಲಿ ಉತ್ತಮ ಬದಲಾವಣೆಗಳು ಉಂಟಾಗುತ್ತವೆ. ಹೊಸದಾದ ವ್ಯಾಪಾರವನ್ನು ಆರಂಭಿಸದಿರಿ. ಮಹಿಳೆಯರಿಗೆ ಶುಭವಿದೆ . ಸೋದರರಿಗೆ ಸಹಾಯ ಮಾಡುವ ಅವಕಾಶ ದೊರೆಯಲಿದೆ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
-----------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ